ನಿಧನ ವಾರ್ತೆ
Hulikal Ghat-ಹುಲಿಕಲ್ ಘಾಟಿಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರ ಸಾವು
ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿಯಲ್ಲಿ (ಬಾಳೆಬರೆ ಘಾಟ್) ಗುರುವಾರ ಸಂಜೆ ನಡೆದ ಭೀಕರ ಅವಘಡದಲ್ಲಿ ಮಣ್ಣು ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇತರ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿಯಲ್ಲಿ (ಬಾಳೆಬರೆ ಘಾಟ್) ಗುರುವಾರ ಸಂಜೆ ನಡೆದ ಭೀಕರ ಅವಘಡದಲ್ಲಿ ಮಣ್ಣು ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇತರ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ವಿವರ:
ರಾಜ್ಯ ಹೆದ್ದಾರಿ 52ರಲ್ಲಿರುವ ಹುಲಿಕಲ್ ಘಾಟಿಯ ಹೇರ್ಪಿನ್ ತಿರುವಿನಲ್ಲಿ ಈ ಹಿಂದೆ ಭೂಕುಸಿತ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಲ್ಲಿ ಬೃಹತ್ ಶಾಶ್ವತ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಗುರುವಾರ ಸಂಜೆ ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದ ವೇಳೆ ಇದ್ದಕ್ಕಿದ್ದಂತೆ ಮಣ್ಣಿನ ರಾಶಿ ಕುಸಿದು ಬಿದ್ದಿದೆ. ಇದರ ಪರಿಣಾಮವಾಗಿ ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ.
ಮೃತರ ಗುರುತು:
ಮೃತರನ್ನು ಹೊಸನಗರ ತಾಲ್ಲೂಕಿನ ನಗರ ಸಮೀಪದ ಚಕ್ಕಾರು ಗ್ರಾಮದ ರಾಘು, ಹಾವೇರಿ ಜಿಲ್ಲೆಯ ನೆಲಗಲ್ಲು ಗ್ರಾಮದ ಶಬೀರ್ ಮತ್ತು ರಾಜು ಎಂದು ಗುರುತಿಸಲಾಗಿದೆ. ಗಾಯಗೊಂಡ ನಾಲ್ವರು ಕಾರ್ಮಿಕರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ರಕ್ಷಣಾ ಕಾರ್ಯಾಚರಣೆ:
ಘಟನೆ ಸಂಭವಿಸಿದ ತಕ್ಷಣ ನಗರ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಮಣ್ಣಿನಡಿ ಸಿಲುಕಿರುವವರನ್ನು ಹೊರತೆಗೆಯಲು ಕಾರ್ಯಾಚರಣೆ ಮುಂದುವರಿದಿದೆ. ಮೃತದೇಹಗಳನ್ನು ಹೊರತೆಗೆಯಲು ನೆರವಾಗಲು ಮಂಗಳೂರಿನಿಂದ ರಾಜ್ಯ ವಿಪತ್ತು ಸ್ಪಂದನಾ ಪಡೆ (SDRF) ತಂಡ ಸ್ಥಳಕ್ಕೆ ಆಗಮಿಸುತ್ತಿದೆ.
ಈ ಘಟನೆಯಿಂದಾಗಿ ಹುಲಿಕಲ್ ಘಾಟಿ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾಮಗಾರಿ ವೇಳೆ ಸುರಕ್ಷತಾ ಕ್ರಮಗಳ ಬಗ್ಗೆ ಪ್ರಶ್ನೆಗಳು ಎದ್ದಿವೆ.
ನಿಧನ ವಾರ್ತೆ
Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!
ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್ನ ಫುಟ್ಬೋರ್ಡ್ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.
ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.
ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.
ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Puttur-ಪುತ್ತೂರು: ಬೈಕ್ ಡಿಕ್ಕಿಯಾಗಿ ಹರಿಪ್ರಸಾದ್ ಹೋಟೆಲ್ ಸಪ್ಲೈಯರ್ ಸಾವು
ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಇವರು ಪುತ್ತೂರಿನ ಹರಿಪ್ರಸಾದ್ ಹೋಟೆಲ್ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದರು.
ನ.16ರಂದು ರಾತ್ರಿ ಹೋಟೆಲ್ ಕೆಲಸ ಮುಗಿಸಿ ಹೊರಬಂದ ಚಂದ್ರಶೇಖರ ಅವರು ಹೋಟೆಲ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
-
ಬಿಗ್ ನ್ಯೂಸ್16 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್8 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ13 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು16 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized15 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್16 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ14 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್15 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















