​ಉಚಿತ ಪರೀಕ್ಷೆಗಳ ವಿವರ:ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಚೇತನ್ ಪ್ರಕಾಶ್ ಕಜೆ ಅವರು ಮಾಹಿತಿ ನೀಡಿದ್ದು, ಶಿಬಿರದಲ್ಲಿ ಪಾಲ್ಗೊಳ್ಳುವ […]" /> ​ಉಚಿತ ಪರೀಕ್ಷೆಗಳ ವಿವರ:ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಚೇತನ್ ಪ್ರಕಾಶ್ ಕಜೆ ಅವರು ಮಾಹಿತಿ ನೀಡಿದ್ದು, ಶಿಬಿರದಲ್ಲಿ ಪಾಲ್ಗೊಳ್ಳುವ […]"> ಬೆಳ್ಳಾರೆಯಲ್ಲಿ ಇಂದು ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ವತಿಯಿಂದ 'ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ' : ಒಂದೇ ರಕ್ತ ಪರೀಕ್ಷೆಯಲ್ಲಿ 300ಕ್ಕೂ ಮಿಕ್ಕ 'ಅಲರ್ಜಿ ಪತ್ತೆ'..! ಈ ಪರೀಕ್ಷೆಗಳಿಗೆಲ್ಲ ವಿಶೇಷ ರಿಯಾಯಿತಿ - Nikhara News | Kannada News Website
Connect with us

ಸುಳ್ಯ

ಬೆಳ್ಳಾರೆಯಲ್ಲಿ ಇಂದು ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ವತಿಯಿಂದ ‘ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ’ : ಒಂದೇ ರಕ್ತ ಪರೀಕ್ಷೆಯಲ್ಲಿ 300ಕ್ಕೂ ಮಿಕ್ಕ ‘ಅಲರ್ಜಿ ಪತ್ತೆ’..! ಈ ಪರೀಕ್ಷೆಗಳಿಗೆಲ್ಲ ವಿಶೇಷ ರಿಯಾಯಿತಿ

Published

on

Ad Widget

Ad Widget

Ad Widget

Ad Widget

​ಬೆಳ್ಳಾರೆ: ಗುಣಮಟ್ಟದ ವೈದ್ಯಕೀಯ ಸೇವೆಗೆ ಹೆಸರಾಗಿರುವ ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ (ಸೂಪರ್ ಸ್ಪೆಷಾಲಿಟಿ ಡಯಾಗ್ನೋಸ್ಟಿಕ್ ಸೆಂಟರ್), ತನ್ನ ಬೆಳ್ಳಾರೆ ಶಾಖೆಯಲ್ಲಿ ಏಪ್ರಿಲ್ 11ರ ಶನಿವಾರದಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದೆ.

Ad Widget

Ad Widget

Ad Widget

Ad Widget

2004ರಿಂದ ಸುದೀರ್ಘ ಸೇವಾ ಅನುಭವ ಹೊಂದಿರುವ ಈ ಸಂಸ್ಥೆಯು ಸಾರ್ವಜನಿಕರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಈ ವಿಶೇಷ ಅವಕಾಶವನ್ನು ಕಲ್ಪಿಸಿದೆ.

Ad Widget

Ad Widget alt="Ad Widget"/>

Ad Widget

​ಉಚಿತ ಪರೀಕ್ಷೆಗಳ ವಿವರ:
ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಚೇತನ್ ಪ್ರಕಾಶ್ ಕಜೆ ಅವರು ಮಾಹಿತಿ ನೀಡಿದ್ದು, ಶಿಬಿರದಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರಿಗೆ ಥೈರಾಯ್ಡ್ (TSH), ರಕ್ತದೊತ್ತಡ (BP) ಮತ್ತು ಮಧುಮೇಹ (ಸಕ್ಕರೆ) ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಲಾಗುವುದು.

Ad Widget

Ad Widget <> Ad Widget

ಇದರೊಂದಿಗೆ ನಡೆಸಲಾಗುವ ಇತರೆಲ್ಲಾ ರಕ್ತ ಪರೀಕ್ಷಾ ಪ್ಯಾಕೇಜ್‌ಗಳ ಮೇಲೆ ಶೇ. 10ರಿಂದ ಶೇ. 20ರವರೆಗೆ ವಿಶೇಷ ರಿಯಾಯಿತಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

​ಅಲರ್ಜಿ ಪರೀಕ್ಷೆಗೆ ವಿಶೇಷ ಕೊಡುಗೆ:
ದೀರ್ಘಕಾಲದ ಅಲರ್ಜಿ ಸಮಸ್ಯೆಯಿಂದ ಬಳಲುತ್ತಿರುವವರಿಗಾಗಿ ಸಂಸ್ಥೆಯು ಅತ್ಯಾಧುನಿಕ ‘ಅಲರ್ಜಿ ಪ್ಯಾನಲ್’ ಪರಿಚಯಿಸಿದೆ. ಒಂದೇ ರಕ್ತ ಪರೀಕ್ಷೆಯ ಮೂಲಕ ಸುಮಾರು 300ಕ್ಕೂ ಹೆಚ್ಚು ವಿಧದ ಅಲರ್ಜಿ ಅಂಶಗಳನ್ನು ಪತ್ತೆಹಚ್ಚಬಹುದಾಗಿದ್ದು, ಈ ಪರೀಕ್ಷೆಗೆ ಪರಿಚಯಾತ್ಮಕ ಕೊಡುಗೆಯಾಗಿ 18,000 ರೂಪಾಯಿಗಳ ಬದಲಿಗೆ ಕೇವಲ 15,000 ರೂಪಾಯಿ ನಿಗದಿಪಡಿಸಲಾಗಿದೆ.

Ad Widget

Ad Widget

ಈ ಸೌಲಭ್ಯವು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಜನರಿಗೆ ಲಭ್ಯವಾಗಲಿದೆ.

​ಆಧುನಿಕ ತಂತ್ರಜ್ಞಾನದ ಸೇವೆ:
ಬೆಂಗಳೂರು, ಮುಂಬೈ ಅಂತಹ ಮಹಾನಗರಗಳಲ್ಲಿ ಲಭ್ಯವಿರುವ ಸಂಪೂರ್ಣ ಸ್ವಯಂಚಾಲಿತ ತಂತ್ರಜ್ಞಾನವನ್ನು ಪುತ್ತೂರು ಭಾಗದ ಜನರಿಗೆ ಪರಿಚಯಿಸಿದ ಕೀರ್ತಿ ಧನ್ವಂತರಿ ಸಂಸ್ಥೆಗೆ ಸಲ್ಲುತ್ತದೆ.

ಸುಮಾರು 50 ವರ್ಷಗಳಿಗೂ ಮಿಕ್ಕಿದ ಸಂಯೋಜಿತ ಅನುಭವ ಹೊಂದಿರುವ ತಜ್ಞ ಸಿಬ್ಬಂದಿಗಳು ಇಲ್ಲಿ ಸೇವೆ ಸಲ್ಲಿಸುತ್ತಿದ್ದು, ನಿಖರವಾದ ವರದಿಗಳಿಗೆ ಸಂಸ್ಥೆ ಹೆಸರುವಾಸಿಯಾಗಿದೆ.

​ಸಾರ್ವಜನಿಕರ ಗಮನಕ್ಕೆ:
ಬೆಳ್ಳಾರೆಯ ಮುಖ್ಯರಸ್ತೆಯಲ್ಲಿರುವ ಅಮ್ಮು ರೈ ಕಾಂಪ್ಲೆಕ್ಸ್‌ನಲ್ಲಿ ಈ ಶಿಬಿರವು ಬೆಳಿಗ್ಗೆ 7.00 ಗಂಟೆಯಿಂದ ಸಂಜೆ 7.00 ಗಂಟೆಯವರೆಗೆ ನಡೆಯಲಿದೆ. ಮುಂಗಡ ಅಪಾಯಿಂಟ್ಮೆಂಟ್ ಅಥವಾ ಮನೆಯಿಂದಲೇ ರಕ್ತದ ಮಾದರಿ ಸಂಗ್ರಹಣೆ (Home Sample Collection) ಸೌಲಭ್ಯಕ್ಕಾಗಿ ಸಾರ್ವಜನಿಕರು ಮೊಬೈಲ್ ಸಂಖ್ಯೆ 9187405075 ಅನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಪುತ್ತೂರು ದರ್ಬೆಯಲ್ಲಿರುವ ಮುಖ್ಯ ಕಚೇರಿಯನ್ನು (ದೂರವಾಣಿ: 8971877075) ಸಂಪರ್ಕಿಸಲು ಪ್ರಕಟಣೆ ಕೋರಿದೆ.

Ad Widget
Click to comment

Leave a Reply

ಸುಳ್ಯ

Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಸುಳ್ಯ

Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ

Published

on

Ad Widget

Ad Widget

Ad Widget

Ad Widget

ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

Ad Widget

Ad Widget

Ad Widget

Ad Widget

ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.

Ad Widget

Ad Widget alt="Ad Widget"/>

Ad Widget

ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.

Ad Widget

Ad Widget <> Ad Widget

ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.

Continue Reading

ಸುಳ್ಯ

Areca nut-ಅಡಿಕೆ ರೇಟ್‌ ಜಂಪ್‌ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ

Published

on

Ad Widget

Ad Widget

Ad Widget

Ad Widget

ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.

Ad Widget

Ad Widget

Ad Widget

Ad Widget

ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.

Ad Widget

Ad Widget alt="Ad Widget"/>

Ad Widget

ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.

Ad Widget

Ad Widget <> Ad Widget

ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.

ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.

Ad Widget

Ad Widget

ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.

ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!