ಶಿಕ್ಷಣ
Narendra-ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ನರೇಂದ್ರ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಹರ್ಷಿತಾ ಕೆ. ರಾಜ್ಯಕ್ಕೆ 7ನೇ ಸ್ಥಾನ ,ವಿಜ್ಞಾನ ವಿಭಾಗದ ನಂದನ ರಾಜ್ಯಕ್ಕೆ 9ನೇ ಸ್ಥಾನ
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ತೆಂಕಿಲ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದ ಹರ್ಷಿತಾ ಕೆ. 593(98.83%)ಅಂಕಗಳನ್ನು ಗಳಿಸಿ ರಾಜ್ಯದಲ್ಲಿ 7ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
2026 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ತೆಂಕಿಲ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದ ಹರ್ಷಿತಾ ಕೆ. 593(98.83%)ಅಂಕಗಳನ್ನು ಗಳಿಸಿ ರಾಜ್ಯದಲ್ಲಿ 7ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಹರ್ಷಿತಾ ಕೆ. ಇವರು ಲೆಕ್ಕಶಾಸ್ತ್ರ-100, ಅರ್ಥಶಾಸ್ತ್ರ-100, ಕನ್ನಡ-98, ಮೂಲಗಣಿತ-100,ವ್ಯವಹಾರ ಅಧ್ಯಯನ-99, ಇಂಗ್ಲಿಷ್-96 ಅಂಕಗಳೊಂದಿಗೆ ಅತ್ಯುತ್ತಮ ಸಾಧನೆಯನ್ನು ಮಾಡಿರುವುದರ ಜೊತೆಗೆ ರಾಜ್ಯಕ್ಕೆ ಏಳನೇ ಸ್ಥಾನವನ್ನು ಪಡೆದಿರುತ್ತಾರೆ. ಈಕೆ ಪುತ್ತೂರಿನ ಕಲ್ಲಾರೆ ನಿವಾಸಿಗಳಾದ ಕೆ. ರಾಮಚಂದ್ರ ನಾಯ್ಕ್ ಮತ್ತು ಶ್ರೀಮತಿ ವೇದಾವತಿ ಕೆ. ದಂಪತಿಗಳ ಪುತ್ರಿ.
ವಿಜ್ಞಾನ ವಿಭಾಗದಲ್ಲಿ ನಂದನ 590(98.3%) ಇವರು ಭೌತಶಾಸ್ತ್ರ-97, ರಸಾಯನಶಾಸ್ತ್ರ-98, ಗಣಿತ-99, ಗಣಕ ವಿಜ್ಞಾನ -100,ಸಂಸ್ಕೃತ-100, ಇಂಗ್ಲಿಷ್-96 ಅಂಕಗಳನ್ನು ಗಳಿಸಿ ರಾಜ್ಯದಲ್ಲಿ 9ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈಕೆ ಪುತ್ತೂರಿನ ಕೆದಿಲ ಗ್ರಾಮದ ನಿವಾಸಿಗಳಾದ ಸತ್ಯನಾರಾಯಣ ಬಿ. ಮತ್ತು ಶ್ರೀಮತಿ ವಿನಯ ದಂಪತಿಗಳ ಪುತ್ರಿ.
ಇವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು .ಈ ಸಮಾರಂಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯ,ಸಂಚಾಲಕರಾದ ಸಂತೋಷ ಬಿ.,ಕೋಶಾಧಿಕಾರಿಗಳಾದ ಸಂಪತ್ ಕುಮಾರ್, ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ,ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳನ್ನು ಅಭಿನಂದಿಸಿ ಅವರ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದರು.
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು.
ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು.
ಸದಸ್ಯರಾಗಿ: ಶ್ರೀಮತಿ ತ್ರಿವೇಣಿ ಪೆರ್ವೋಡಿ , ಶಮಂತ ಕೃಷ್ಣ ಕೆ ಉರಿಮಜಲು, ಕೇಶವ ಅಮೈ , ರವಿರಾಜ ಶೆಟ್ಟಿ, ಬಿ ರೋಹಿತ್ ಕುಮಾರ್, ಶ್ರೀಮತಿ ಮೋಹಿನಿ ದಿವಾಕರ ಜವಾಬ್ದಾರಿ ವಹಿಸಿಕೊಂಡರು.
ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕೃಷ್ಣಕುಮಾರ್ ಶೆಟ್ಟಿ, ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ., ಜತೆ ಕಾರ್ಯದರ್ಶಿ ಭರತ್ ಪೈ, ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಪ್ರಸಾದ್, ಹಿಂದಿನ ಆಡಳಿತ ಮಂಡಳಿಯ ಸಂಚಾಲಕರು, ಸದಸ್ಯರು, ಪ್ರಾಂಶುಪಾಲರು ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.
ಶಿಕ್ಷಣ
RTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
ಶಿಕ್ಷಣ
Vivekananda-ಸೂಕ್ಷ್ಮಾಣು ನಿರೋಧಕತೆ ವಿರುದ್ಧ ಜಾಗೃತಿ ಮೂಡಿಸಿದ ವಿವೇಕಾನಂದ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳು; ಜಾಗೃತಿ ಜಾಥಾ ಹಾಗೂ ಬೀದಿ ನಾಟಕದ ಮೂಲಕ ಪ್ರತಿಜೀವಕಗಳ ಜವಾಬ್ದಾರಿಯುತ ಬಳಕೆಯ ಸಂದೇಶ
ಪುತ್ತೂರಿನ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ನಿರ್ದೇಶನದಂತೆ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ (National Pharmacy Week) ಆಚರಣೆಯ ಅಂಗವಾಗಿ ಸೂಕ್ಷ್ಮಾಣು ನಿರೋಧಕತೆ (Antimicrobial Resistance) ವಿಷಯದ ಕುರಿತು ಜಾಗೃತಿ ಜಾಥಾ ಹಾಗೂ ಬೀದಿ ನಾಟಕವನ್ನು ಪುತ್ತೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಆಯೋಜಿಸಲಾಯಿತು.
ಪುತ್ತೂರು, ನ. 18: ಪ್ರತಿಜೀವಕಗಳ (Antibiotics) ಅನಗತ್ಯ ಹಾಗೂ ಅತಿಯಾದ ಬಳಕೆಯಿಂದ ಸೂಕ್ಷ್ಮಾಣುಗಳು ಔಷಧಿಗಳಿಗೆ ಪ್ರತಿರೋಧ ಬೆಳೆಸಿಕೊಳ್ಳುವ ಅಪಾಯವಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ನಿರ್ದೇಶನದಂತೆ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ (National Pharmacy Week) ಆಚರಣೆಯ ಅಂಗವಾಗಿ ಸೂಕ್ಷ್ಮಾಣು ನಿರೋಧಕತೆ (Antimicrobial Resistance) ವಿಷಯದ ಕುರಿತು ಜಾಗೃತಿ ಜಾಥಾ ಹಾಗೂ ಬೀದಿ ನಾಟಕವನ್ನು ಆಯೋಜಿಸಲಾಯಿತು.

ಪುತ್ತೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಪುಷ್ಪ ನೀಡಿ ಸ್ವಾಗತಿಸಲಾಯಿತು. ಬಳಿಕ ಜಾಗೃತ ಕಾರ್ಯಕ್ರಮದ ಬ್ಯಾನರ್ ಅನಾವರಣಗೊಳಿಸಲಾಯಿತು. ವಿದ್ಯಾರ್ಥಿಗಳಿಂದ ಸೂಕ್ಷ್ಮಾಣು ನಿರೋಧಕತೆಯ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು. ನಂತರ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಅವರು ಜಾಗೃತಿ ಕರಪತ್ರವನ್ನು ಅನಾವರಣಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಆರಂಭಗೊಂಡ ಜಾಗೃತಿ ಜಾಥಾವು ಪುತ್ತೂರಿನ ಮುಖ್ಯ ರಸ್ತೆಯ ಮೂಲಕ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಸಾಗಿತು. ಜಾಥಾದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಜಾಗೃತಿ ಸಂದೇಶಗಳು ಹಾಗೂ ಕರಪತ್ರಗಳನ್ನು ವಿತರಿಸುವ ಮೂಲಕ ಸಾರ್ವಜನಿಕರಲ್ಲಿ ಪ್ರತಿಜೀವಕಗಳ ಸರಿಯಾದ ಬಳಕೆ, ವೈದ್ಯರ ಸಲಹೆಯಿಲ್ಲದೆ ಪ್ರತಿಜೀವಕಗಳನ್ನು ಸೇವಿಸದಿರುವುದು ಮತ್ತು ಔಷಧಿಗಳ ಪೂರ್ಣ ಅವಧಿಯ ಸೇವನೆಯ ಮಹತ್ವದ ಕುರಿತು ಅರಿವು ಮೂಡಿಸಿದರು.

ಕಾರ್ಯಕ್ರಮದ ಕೊನೆಯ ಭಾಗದ ಬೀದಿ ನಾಟಕವನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಪಂಜಿಗುಡ್ಡೆ ಈಶ್ವರ ಭಟ್ ಉಪಸ್ಥಿತರಿದ್ದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉದ್ಘಾಟನಾ ಹಾಗೂ ಮುಖ್ಯ ಅತಿಥಿಯಾಗಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಅತಿಥಿಗಳಾಗಿ ಪುತ್ತೂರು ಕೆಮಿಸ್ಟ್ ಆ್ಯಂಡ್ ಡ್ರಗ್ಗಿಸ್ಟ್ ಅಸೋಸಿಯೇಷನ್ ಅಧ್ಯಕ್ಷ ವಾಸುದೇವ ಭಟ್, ಕೆಎಸ್ಆರ್ಟಿಸಿ ಪುತ್ತೂರು ಡಿಪೋ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಕಾಶ್ ಎಂ. ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿವಿಜಯನಾರಾಯಣ ಕೆ. ಎಂ. ಉಪಸ್ಥಿತರಿದ್ದರು.

ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಗೋವಿಂದ ಪ್ರಕಾಶ್ ಸಾಯ, ಸದಸ್ಯರಾದ ರಾಮದಾಸ ಶೆಣೈ, ಡಾ. ಸಿ ಎಸ್ ಶಾಸ್ತ್ರೀ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ಗುರುರಾಜ ಎಂ. ಪಿ., ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
-
ಬಿಗ್ ನ್ಯೂಸ್17 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ22 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
Uncategorized24 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್24 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
-
ರಾಜಕೀಯ23 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಆರೋಗ್ಯ19 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಸುಳ್ಯ23 hours agoSullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
-
ಕಾರ್ಯಕ್ರಮಗಳು24 hours agoPuttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ















