ಕಾರ್ಯಕ್ರಮಗಳು
Hanumagiri-ಹನುಮಗಿರಿ ಬ್ರಹ್ಮಕಲಶೋತ್ಸವ: ಮುಖ್ಯ ಗೋಪುರ ಹಾಗೂ ಉದ್ಯಾನವನ ಉದ್ಘಾಟಿಸಿದ ರಾಜ್ಯಪಾಲ ಗೆಹಲೋತ್..!
“ಹನುಮಂತನ ಸೇವೆ, ಕರ್ತವ್ಯ ಮತ್ತು ಸಮರ್ಪಣಾ ಮನೋಭಾವವು ಜೀವನದ ನಿಜವಾದ ಮಾರ್ಗವಾಗಿದ್ದು, ಕಷ್ಟಕಾಲದಲ್ಲಿ ನಮಗೆಲ್ಲರಿಗೂ ಪ್ರೇರಣೆಯಾಗಿದೆ. ಶ್ರೀರಾಮನಂತೆ ಕಠಿಣ ಸಂದರ್ಭದಲ್ಲೂ ಸತ್ಯ, ಧರ್ಮ ಮತ್ತು ಮರ್ಯಾದೆಯನ್ನು ಪಾಲಿಸುವುದು ಇಂದಿನ ಅಗತ್ಯವಾಗಿದೆ,” ಎಂದು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ತಿಳಿಸಿದರು.
ಪುತ್ತೂರು: “ಹನುಮಂತನ ಸೇವೆ, ಕರ್ತವ್ಯ ಮತ್ತು ಸಮರ್ಪಣಾ ಮನೋಭಾವವು ಜೀವನದ ನಿಜವಾದ ಮಾರ್ಗವಾಗಿದ್ದು, ಕಷ್ಟಕಾಲದಲ್ಲಿ ನಮಗೆಲ್ಲರಿಗೂ ಪ್ರೇರಣೆಯಾಗಿದೆ. ಶ್ರೀರಾಮನಂತೆ ಕಠಿಣ ಸಂದರ್ಭದಲ್ಲೂ ಸತ್ಯ, ಧರ್ಮ ಮತ್ತು ಮರ್ಯಾದೆಯನ್ನು ಪಾಲಿಸುವುದು ಇಂದಿನ ಅಗತ್ಯವಾಗಿದೆ,” ಎಂದು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ತಿಳಿಸಿದರು.
ಪುತ್ತೂರಿನ ಹನುಮಗಿರಿ ಶ್ರೀ ಕೋದಂಡರಾಮ ಪಂಚಮುಖಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ, ಶುಕ್ರವಾರ ಕ್ಷೇತ್ರದ ನೂತನ ಮುಖ್ಯ ಗೋಪುರ ಹಾಗೂ ನವೀಕೃತ ಉದ್ಯಾನವನವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಸಮಾಜಕ್ಕೆ ನೈತಿಕ ಮೌಲ್ಯಗಳ ಸಂದೇಶ:
ಹನುಮಗಿರಿ ಕ್ಷೇತ್ರವು ಕೇವಲ ಆಧ್ಯಾತ್ಮಿಕ ಕೇಂದ್ರವಲ್ಲ, ಇದು ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರೇರಣೆಯ ಕೇಂದ್ರವೂ ಆಗಿದೆ ಎಂದ ರಾಜ್ಯಪಾಲರು, ನಮ್ಮ ಸಂಸ್ಕೃತಿಯು ವಿಶ್ವಭ್ರಾತೃತ್ವ, ವಿಶ್ವಕಲ್ಯಾಣ ಮತ್ತು ಸಮಾನತೆಯ ಸಂದೇಶವನ್ನು ಸಾರುತ್ತಿದೆ. ಸಮಾಜವನ್ನು ಬಲಪಡಿಸಲು ಎಲ್ಲರೂ ಸಂಘಟಿತರಾಗಬೇಕು ಎಂದು ಕರೆ ನೀಡಿದರು.
ದೈವ ಭಕ್ತಿ – ದೇಶ ಭಕ್ತಿಯ ಸಂಗಮ:
ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿದ್ದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳು ಮಾತನಾಡಿ, “ದೈವ ಭಕ್ತಿ ಮತ್ತು ದೇಶ ಭಕ್ತಿ ಎರಡನ್ನೂ ಪ್ರತ್ಯಕ್ಷವಾಗಿ ಕಾಣಬಹುದಾದ ಅದ್ಭುತ ಕ್ಷೇತ್ರ ಹನುಮಗಿರಿ. ಇಲ್ಲಿ ಸಂಘದ ಪ್ರೇರಣೆಯೂ ಇದೆ, ಸಂತರ ಆಶೀರ್ವಾದವೂ ಇದೆ. ಉತ್ತಮ ಸಮಾಜ ನಿರ್ಮಾಣಕ್ಕೆ ಈ ಬ್ರಹ್ಮಕಲಶೋತ್ಸವ ಪೂರಕವಾಗಿದೆ,” ಎಂದು ಹರಸಿದರು.
ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಸ್ವಾಗತಿಸಿದರು. ವೇದಿಕೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉಪಸ್ಥಿತರಿದ್ದರು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ರಾಜ್ಯಪಾಲರನ್ನು ಗೌರವಿಸಿದರು.
ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ನ ಅಚ್ಚುತ ಮೂಡೆತ್ತಾಯ ವಂದಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ಆಧ್ಯಾತ್ಮಿಕ ಮತ್ತು ರಾಷ್ಟ್ರೀಯತೆಯ ಚಿಂತನೆಗಳೊಂದಿಗೆ ನಡೆದ ಈ ಸಮಾರಂಭ ಭಕ್ತಾದಿಗಳ ಗಮನ ಸೆಳೆಯಿತು.
ಕಾರ್ಯಕ್ರಮಗಳು
Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ
ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮಗಳು
Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.
ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.
ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು
-
ಮಂಗಳೂರು23 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ22 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ದಕ್ಷಿಣ ಕನ್ನಡ17 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಕಾರ್ಯಕ್ರಮಗಳು23 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
Uncategorized24 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
-
ಶಿಕ್ಷಣ22 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
ಶಿಕ್ಷಣ24 hours agoPhilomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
-
ಮಂಗಳೂರು17 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















