ಕಾರ್ಯಕ್ರಮಗಳು
Hanumagiri-ಭಕ್ತಿ ಸಾಗರವನ್ನು ಉಕ್ಕಿ ಹರಿಸಿದ, ರಾಜ್ಯದ ಗಮನ ಸೆಳೆದ ಹನುಮಗಿರಿಯ ಶ್ರೀ ಕೋದಂಡರಾಮ ಹಾಗೂ ಪಂಚಮುಖಿ ಶ್ರೀ ಆಂಜನೇಯ ಸ್ವಾಮಿ ಕ್ಷೇತ್ರದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
ಕರಾವಳಿಯ ಪುಣ್ಯಭೂಮಿಯಲ್ಲಿ ಭಕ್ತಿ ಸಾಗರವನ್ನು ಉಕ್ಕಿ ಹರಿಸಿದ, ರಾಜ್ಯದ ಗಮನ ಸೆಳೆದ ಹನುಮಗಿರಿಯ ಶ್ರೀ ಕೋದಂಡರಾಮ ಹಾಗೂ ಪಂಚಮುಖಿ ಶ್ರೀ ಆಂಜನೇಯ ಸ್ವಾಮಿ ಕ್ಷೇತ್ರದ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಅತ್ಯಂತ ವೈಭವದಿಂದ ಸಂಪನ್ನಗೊಂಡಿತು. ಏಪ್ರಿಲ್ 9ರಿಂದ ಆರಂಭಗೊಂಡು, ಏಪ್ರಿಲ್ 12ರಂದು ಭಕ್ತಿ-ಸಂಸ್ಕೃತಿಗಳ ರಸದೌತಣದೊಂದಿಗೆ ಈ ನಾಲ್ಕು ದಿನಗಳ ಮಹೋತ್ಸವವು ಪೂರ್ಣಗೊಂಡಿತು.
ಪುತ್ತೂರು: ಕರಾವಳಿಯ ಪುಣ್ಯಭೂಮಿಯಲ್ಲಿ ಭಕ್ತಿ ಸಾಗರವನ್ನು ಉಕ್ಕಿ ಹರಿಸಿದ, ರಾಜ್ಯದ ಗಮನ ಸೆಳೆದ ಹನುಮಗಿರಿಯ ಶ್ರೀ ಕೋದಂಡರಾಮ ಹಾಗೂ ಪಂಚಮುಖಿ ಶ್ರೀ ಆಂಜನೇಯ ಸ್ವಾಮಿ ಕ್ಷೇತ್ರದ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಅತ್ಯಂತ ವೈಭವದಿಂದ ಸಂಪನ್ನಗೊಂಡಿತು. ಏಪ್ರಿಲ್ 9ರಿಂದ ಆರಂಭಗೊಂಡು, ಏಪ್ರಿಲ್ 12ರಂದು ಭಕ್ತಿ-ಸಂಸ್ಕೃತಿಗಳ ರಸದೌತಣದೊಂದಿಗೆ ಈ ನಾಲ್ಕು ದಿನಗಳ ಮಹೋತ್ಸವವು ಪೂರ್ಣಗೊಂಡಿತು.

ಕೊನೆಯ ದಿನವಾದ ಏಪ್ರಿಲ್ 12ರ ಶುಕ್ರವಾರ ಬೆಳಿಗ್ಗೆ ಶುಭ ವೃಷಭ ಲಗ್ನವಾದ ಬೆಳಿಗ್ಗೆ 8.20ರಿಂದ 10.20ರ ಸುಮುಹೂರ್ತದಲ್ಲಿ ಶ್ರೀ ಕೋದಂಡರಾಮ, ಪಂಚಮುಖಿ ಆಂಜನೇಯ ದೇವರು ಹಾಗೂ ಪರಿವಾರ ದೇವತೆಗಳ ಪ್ರತಿಷ್ಠಾಪನೆ ಶಾಸ್ತ್ರೋಕ್ತವಾಗಿ ನೆರವೇರಿತು. ಅನಂತರ ನಡೆದ ಬ್ರಹ್ಮಕಲಶಾಭಿಷೇಕ, ಪ್ರತಿಷ್ಠಾ ಬಲಿ ಮತ್ತು ಮಹಾಪೂಜೆಗಳು ಭಕ್ತರ ಮನದಲ್ಲಿ ದೈವಿಕ ಭಾವವನ್ನು ತುಂಬಿದವು.

ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿ ಮತ್ತು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಸಮಸ್ತ ಧಾರ್ಮಿಕ ವಿಧಿವಿಧಾನಗಳು ಪರಿಪೂರ್ಣವಾಗಿ ಸಂಪನ್ನಗೊಂಡವು. ಸಂಜೆ ರಂಗಪೂಜೆ, ಉತ್ಸವ ಬಲಿ, ದರ್ಶನ ಬಲಿ ಹಾಗೂ ಭಕ್ತರ ಬಟ್ಟಲು ಕಾಣಿಕೆ ಸೇವೆಗಳು ನಡೆದವು.
ಪರಮಪೂಜ್ಯರ ದಿವ್ಯ ಸಾನಿಧ್ಯ:
ಈ ಮಹೋನ್ನತ ಕಾರ್ಯಕ್ರಮಕ್ಕೆ ಕಂಚಿ ಕಾಮಕೋಟಿ ಪೀಠದ ಜಗದ್ಗುರು ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಹಾಗೂ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಗಳ ದಿವ್ಯ ಉಪಸ್ಥಿತಿ ಮತ್ತಷ್ಟು ಮೆರುಗು ನೀಡಿತ್ತು.
ಭಕ್ತ ಸಾಗರವೇ ಹರಿದುಬಂದಿತು:
ಬ್ರಹ್ಮಕಲಶೋತ್ಸವದ ಅಂತಿಮ ದಿನವಾದ ಶುಕ್ರವಾರ ಹನುಮಗಿರಿ ಕ್ಷೇತ್ರವು ಭಕ್ತ ಸಾಗರದಿಂದ ತುಂಬಿ ತುಳುಕಿತ್ತು. ರಾಜ್ಯದ ಮೂಲೆಮೂಲೆಗಳಿಂದ ಆಗಮಿಸಿದ ಸಾವಿರಾರು ಭಕ್ತಾದಿಗಳು ದೇವರ ದರ್ಶನ ಪಡೆದು ಪುನೀತರಾದರು. ಭಕ್ತರಿಗಾಗಿ ಬೆಳಿಗ್ಗೆ ಉಪಹಾರ ಮತ್ತು ಮಧ್ಯಾಹ್ನ ಭವ್ಯ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಅತ್ಯಂತ ಶ್ರದ್ಧೆಯಿಂದ ಮಾಡಲಾಗಿತ್ತು.

ಸಾಂಸ್ಕೃತಿಕ ವೈಭವದ ರಸದೌತಣ:
ಕ್ಷೇತ್ರದ ‘ಲವ’ ಮತ್ತು ‘ಕುಶ’ ಎಂಬ ಎರಡು ಸುಂದರ ವೇದಿಕೆಗಳಲ್ಲಿ ಹಗಲು-ರಾತ್ರಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದ ಪ್ರೇಕ್ಷಕರ ಮನಸೂರೆಗೊಂಡವು.
• ‘ಲವ’ ವೇದಿಕೆಯಲ್ಲಿ: ಸ್ಥಳೀಯ ಶಾಲಾ ಮಕ್ಕಳ ನೃತ್ಯ ವೈಭವ, ಶಾಸ್ತ್ರೀಯ ಭರತನಾಟ್ಯ, ಯಕ್ಷಗಾನಾರ್ಚನೆ ಹಾಗೂ ಗಾನಾರ್ಚನೆಗಳು ಸಭಿಕರನ್ನು ಮಂತ್ರಮುಗ್ಧಗೊಳಿಸಿದವು. ವಿಶೇಷವಾಗಿ, ಡಾ. ಮೋಹನ್ ಆಳ್ವ ಅವರ ನೇತೃತ್ವದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 350 ವಿದ್ಯಾರ್ಥಿಗಳಿಂದ ಪ್ರದರ್ಶನಗೊಂಡ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ವು ಜನರ ವಿಶೇಷ ಮೆಚ್ಚುಗೆಗೆ ಪಾತ್ರವಾಗಿ, ಕಲಾ ಜಗತ್ತಿನ ಕಣ್ಮನ ಸೆಳೆಯಿತು.
• ‘ಕುಶ’ ವೇದಿಕೆಯಲ್ಲಿ: ಯಕ್ಷಗಾನ ತಾಳಮದ್ದಳೆ ‘ಜಾಬಾಲಿ ನಂದಿನಿ’, ಭಕ್ತಿಗಾನ ರಸಮಂಜರಿ, ದೇಶಭಕ್ತಿ ನೃತ್ಯ ಹಾಗೂ ಮನೋಹರ ನೃತ್ಯ ರೂಪಕಗಳು ಪ್ರದರ್ಶನಗೊಂಡವು. ಕರ್ನೂರು ಶಾಲಾ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ‘ವಿಷ್ಣುದರ್ಶನ’ ನೃತ್ಯ ರೂಪಕವು ಭಕ್ತರ ಗಮನ ಸೆಳೆದು, ಚಿಕ್ಕ ಮಕ್ಕಳಲ್ಲೂ ಭಕ್ತಿಭಾವವನ್ನು ಉದ್ದೀಪಿಸಿತು.
ಒಟ್ಟಾರೆಯಾಗಿ, ಹನುಮಗಿರಿಯ ಈ ಬ್ರಹ್ಮಕಲಶೋತ್ಸವವು ಭಕ್ತಿ, ಶ್ರದ್ಧೆ, ಸಂಸ್ಕೃತಿ ಮತ್ತು ಕಲೆಯ ಅದ್ಭುತ ಸಮಾಗಮವಾಗಿ ಮೂಡಿಬಂದು, ಎಲ್ಲರ ಮನದಲ್ಲಿ ಅಚ್ಚಳಿಯದ ನೆನಪಾಗಿ ಉಳಿಯಿತು.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಸ್ಥಳೀಯ
Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.
ಸ್ಥಳೀಯ
Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ
ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.
ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.
ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.
ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.
ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.
ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.
ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.
ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.
ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.
ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ
ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.
-
Uncategorized22 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್16 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು19 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ನಿಧನ ವಾರ್ತೆ20 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
Uncategorized20 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ21 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ20 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್21 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















