ಪುತ್ತೂರು
G.L. Acharya Jewellers-ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ”
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು. ಹಾಸನ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ಮಾತ್ರ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ತಾ.11.04.2026ರಿಂದ 20.04.2026ರವರೆಗೆ ಆಯೋಜಿಸಲಾಗಿದೆ.
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು. ಹಾಸನ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ಮಾತ್ರ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ತಾ.11.04.2026ರಿಂದ 20.04.2026ರವರೆಗೆ ಆಯೋಜಿಸಲಾಗಿದೆ.
ಗ್ರಾಹಕರಿಗೆ ಚಿನ್ನಾಭರಣಗಳ VA ಶುಲ್ಕದ ಮೇಲೆ ಪ್ರತಿ ಗ್ರಾಂಗೆ ರೂ.500/-ರವರೆಗೆ ರಿಯಾಯಿತಿ ನೀಡಲಾಗುವುದು ಅದೇ ರೀತಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್ ಗೆ ರೂ.7000/-ರವರೆಗೆ ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6000/- ರಿಯಾಯಿತಿ ನೀಡಲಾಗುವುದು. ಅಲ್ಲದೆ 916 ಚಿನ್ನಾಭರಣಕ್ಕಿಂತ 2400/- ರೂಪಾಯಿ ಅಂದಾಜು ಕಡಿಮೆ ಬೆಲೆಯಲ್ಲಿ 18ಕ್ಯಾರೆಟ್ ಹಾಲ್‌ಮಾರ್ಕ್ ಚಿನ್ನಾಭರಣಗಳು ದೊರೆಯುತ್ತದೆ. ಇದು ದಿನನಿತ್ಯದ ಬಳಕೆಗೆ ಸೂಕ್ತವಾಗಿರುತ್ತದೆ. ಹೊಸ ಚಿನ್ನ ಖರೀದಿ ಮಾಡುವವರಿಗೆ ಹೊಸ ಪರಿಯಾಯವಾಗಿರುತ್ತದೆ. ಆಭರಣ ಚಿನ್ನದ ಬೆಲೆ ಪ್ರತೀ ಗ್ರಾಂಗೆ 17,000/-ಕ್ಕೆ ಏರಿದ್ದು, ಈಗ ಚಿನ್ನದ ದರದಲ್ಲಿ ಇಳಿಕೆಯಾಗಿರುವುದರಿಂದ ಗ್ರಾಹಕರಿಗೆ ಚಿನ್ನ ಖರೀದಿಸಲು ಇದು ಒಂದು ಸುವರ್ಣಾವಕಾಶವಾಗಿದೆ.
ವಿವಿಧ ಬಗೆಯ ಚಿನ್ನಾಭರಣಗಳ ಅಮೋಘ ಸಂಗ್ರಹವಿದ್ದು, ಸಾಂಪ್ರದಾಯಿಕ ಹಾಗೂ ಆಧುನಿಕ ವಿನ್ಯಾಸಗಳ ಚಿನ್ನಾಭರಣಗಳು, ಬೆಳ್ಳಿ ಮತ್ತು ವಜ್ರಾಭರಣಗಳ ವೈವಿಧ್ಯಮಯ ಸಂಗ್ರಹ ಲಭ್ಯವಿದ್ದು, ಎಲ್ಲಾ ವಯೋಮಾನದ ಗ್ರಾಹಕರ ಅಗತ್ಯಗಳಿಗೆ ತಕ್ಕಂತೆ ವಿನ್ಯಾಸಗೊಳಿಸಲಾಗಿದೆ. ಸಮಾಜದ ಎಲ್ಲಾ ವರ್ಗದ ಜನರ ಅಭಿರುಚಿಗೆ ತಕ್ಕಂತೆ ಚಿನ್ನ,ಬೆಳ್ಳಿ ಮತ್ತು ವಜ್ರಾಭರಣಗಳ ವಿನೂತನ ಕಲೆಕ್ಷನ್‌ಗಳು ಇಲ್ಲಿ ಲಭ್ಯವಿದೆ. ಮಕ್ಕಳ, ಮಹಿಳೆಯರ ಹಾಗೂ ಪುರುಷರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ ಚಿನ್ನ ಹಾಗೂ ವಜ್ರಾಭರಣಗಳ ಸಂಗ್ರಹವಿದ್ದು ಗ್ರಾಹಕರಿಗೆ ಆಹ್ಲಾದಕರ ಖರೀದಿಯ ವಾತಾವರಣ ಕಲ್ಪಿಸಲಾಗಿದೆ.
ವಿಶ್ವಾಸ, ಪರಿಶುದ್ಧತೆ, ಪರಂಪರೆ, ನವನವೀನ ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸದಾ ಸಂಸ್ಥೆ ಬದ್ದವಾಗಿದ್ದು, ಪರಿಪೂರ್ಣತೆ ಮತ್ತು ಅಸಾಧಾರಣ ಕರಕುಶಲತೆಯ ನೈಪುಣ್ಯತೆಯಿಂದ ಹೊರಹೊಮ್ಮಿರುವ ಈ ವಿಶಿಷ್ಟ ಸಂಗ್ರಹ ಎಲ್ಲರ ಕಣ್ಮನ ಸೆಳೆಯುತ್ತದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಈ ಯೋಜನೆಯಡಿ ಗ್ರಾಹಕರು ಮುಂಗಡವಾಗಿ ತಮ್ಮ ನೆಚ್ಚಿನ ಚಿನ್ನಾಭರಣವನ್ನು ಆಯ್ಕೆಮಾಡಿ ಅದರ ಕನಿಷ್ಠ 50% ಪಾವತಿಸಿ ಬುಕ್ಕಿಂಗ್ ದರ ಅಥವಾ ಕೊಂಡು ಹೋಗುವ ದಿನದ ದರದಲ್ಲಿ ಯಾವುದು ಕಡಿಮೆಯೋ ಅದರ ಆಧಾರದ ಮೇಲೆ ಆಭರಣಗಳನ್ನು ಖರೀದಿಸುವ ಅವಕಾಶವನ್ನು ಪಡೆಯುತ್ತಾರೆ..ಈ ವರ್ಷ ಚಿನ್ನದ ಬೆಲೆ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಗ್ರಾಹಕರು ಮುಂಗಡ ಬುಕ್ಕಿಂಗ್ ಮಾಡುವ ಮೂಲಕ ಚಿನ್ನದ ಬೆಲೆ ಏರಿಳಿತದ ಆತಂಕದಿಂದ ದೂರವಾಗಬಹುದು ಅಲ್ಲದೆ ಹಬ್ಬದ ದಿನದ ರಷ್ ತಪ್ಪಿಸಲು ಹಾಗೂ ಉತ್ತಮ ದರದಲ್ಲಿ ಖರೀದಿ ಮಾಡಲು ಇದು ಒಂದು ಸುವರ್ಣಾವಕಾಶವಾಗಿದೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್‌ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್‌ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.
-
ಬಿಗ್ ನ್ಯೂಸ್15 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್7 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ13 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು15 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized14 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್15 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ13 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್14 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















