ಪುತ್ತೂರು
ತಿರುಮಲ ಹೋಂಡಾಕ್ಕೆ 10 ನೇ ವರ್ಷದ ಸಂಭ್ರಮ : ಆಕ್ಟಿವಾ ಮತ್ತು ಶೈನ್ ಗೆ ರೈತರಿಗೆ ವಿಶೇಷ ಸಬ್ಸಿಡಿ
ಪುತ್ತೂರು : ಪುತ್ತೂರಿನ ಹೋಂಡಾ ದ್ವಿಚಕ್ರ ಮಾರಾಟ ಶೋರೂಮ್ ತಿರುಮಲ ಹೋಂಡಾಕ್ಕೆ 10 ವರ್ಷ ಸಂಭ್ರಮಾಚರಣೆ ಪ್ರಯುಕ್ತ ರೈತರಿಗೆ ವಿಶೇಷ ಸಬ್ಸಿಡಿ ಸಿಗಲಿದೆ.
ಹೊಸ ಶೋರೂಮ್ ಬೊಳುವಾರಿನಲ್ಲಿ ಪ್ರಾರಂಭವಾಗಿ 10ನೇ ವರ್ಷ ತುಂಬಿರುವ ಪ್ರಯುಕ್ತ ಆಕ್ಟೀವಾ ಮತ್ತು ಶೈನ್ ದ್ವಿಚಕ್ರ ವಾಹನಗಳಿಗೆ ರೂ.3000 ಸಬ್ಸಿಡಿ ಇರಲಿದೆ.
ಜೊತೆಗೆ 0 ಡೌನ್ ಪೇಮೆಂಟ್ 1% ಬಡ್ಡಿಯಲ್ಲಿ ಲೋನ್ ವ್ಯವಸ್ಥೆಯೂ ಇರಲಿದೆ. 10 ವರ್ಷ ವಾರಂಟಿ ವ್ಯವಸ್ಥೆಯೂ ಇರಲಿದೆ.
ಕೆಲವೇ ದಿನಗಳಿರುವ ಈ ವಿಶೇಷ ಡಿಸ್ಕೌಂಟ್ ಪುತ್ತೂರು, ಕಡಬ, ಸುಳ್ಯ, ಉಪ್ಪಿನಂಗಡಿ, ನೆಲ್ಯಾಡಿ ಮತ್ತು ಬೆಳ್ಳಾರೆ ಯ ಶೋ ರೂಮ್ ಗಳಲ್ಲೂ ಲಭ್ಯವಿರಲಿದೆ.
ಸಂಪರ್ಕಿಸಿ: 9606590399
ಶಿಕ್ಷಣ
Bappalige-ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ನಾಳೆ (ಅ.16) ಸಾರ್ವಜನಿಕ ಅಕ್ಷರಾಭ್ಯಾಸ ಕಾರ್ಯಕ್ರಮ
ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಪುತ್ತೂರು: ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಆ ಪ್ರಯುಕ್ತ ಸಾರ್ವಜನಿಕರಿಗೆ ತಮ್ಮ ಮಕ್ಕಳ ಅಕ್ಷರಾಭ್ಯಾಸಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಅಕ್ಷರಾಭ್ಯಾಸ ಕಾರ್ಯಕ್ರಮವು ಬಪ್ಪಳಿಗೆಯಲ್ಲಿ, ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಉದ್ಘಾಟಿಸಿದ ಶ್ರೀ ಶಂಕರ ಸಭಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಆಸಕ್ತರು ಪಾರಂಪರಿಕ ಉಡುಗೆಗಳೊಂದಿಗೆ ತಮ್ಮ ಮಕ್ಕಳನ್ನು ಕರೆತಂದು ಅಕ್ಷರಾಭ್ಯಾಸ ನಡೆಸಬಹುದಾಗಿ ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮಗಳು
Piligobbu-ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ನ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಅಪರಾಧ
Puttur-ಪುತ್ತೂರಿನಲ್ಲಿ ಅಕ್ರಮ ಲಾಟರಿ ಮಾರಾಟ: ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು
ಪುತ್ತೂರಿನಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳಿಗೆ ಪುತ್ತೂರು ನಗರ ಪೊಲೀಸರು ತೆರಳಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
ಪುತ್ತೂರು: ನಗರದಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳಿಗೆ ಪುತ್ತೂರು ನಗರ ಪೊಲೀಸರು ತೆರಳಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
2026ರ ಅಕ್ಟೋಬರ್ 14ರಂದು ಸಂಜೆ ಪುತ್ತೂರು ಕಸಬ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಅಂಗಡಿಯೊಂದರಲ್ಲಿ ಕೇರಳ ರಾಜ್ಯದ ಲಾಟರಿಯನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕ ವಾಸು ನಾಯ್ಕ್ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಅಂಗಡಿ ಮಾಲೀಕ, ಪುತ್ತೂರು ಕಸಬ ನಿವಾಸಿ ಶ್ರೀನಿವಾಸ ಪೈ (33) ಎಂಬವರು ಮಾರಾಟಕ್ಕಾಗಿ ಇಟ್ಟಿದ್ದ ಲಾಟರಿ ಟಿಕೆಟ್ಗಳನ್ನು ವಶಪಡಿಸಿಕೊಳ್ಳಲಾಯಿತು. ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನು ತಂದು ಹೆಚ್ಚಿನ ಬೆಲೆಗೆ ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 124/2026ರ ಅಡಿಯಲ್ಲಿ ಲಾಟರಿ ನಿಷೇಧ ಕಾಯ್ದೆ 1998ರ ಕಲಂ 7(iii)ರಂತೆ ಪ್ರಕರಣ ದಾಖಲಿಸಲಾಗಿದೆ.
ಇದೇ ದಿನ ಪುತ್ತೂರು ಕಸಬ ಗ್ರಾಮದ ಲಿನೆಟ್ ಜಂಕ್ಷನ್ ಬಳಿಯ ಪಾನ್ ಸ್ಟಾಲ್ ಒಂದರಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿರುವ ಬಗ್ಗೆಯೂ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಸಹಾಯಕ ಪೊಲೀಸ್ ಉಪನಿರೀಕ್ಷಕ ಗಂಗಾಧರ ಎ.ಬಿ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ವೇಳೆ ಅಂಗಡಿ ಮಾಲೀಕ, ಪುತ್ತೂರು ಪಡ್ನೂರು ಗ್ರಾಮದ ನಿವಾಸಿ ಲಕ್ಷ್ಮಣ (42) ಎಂಬವರ ಬಳಿ ಮಾರಾಟಕ್ಕಾಗಿ ಇಟ್ಟಿದ್ದ ಲಾಟರಿ ಟಿಕೆಟ್ಗಳನ್ನು ವಶಪಡಿಸಿಕೊಳ್ಳಲಾಯಿತು. ಕೇರಳದಿಂದ ಲಾಟರಿ ಟಿಕೆಟ್ಗಳನ್ನು ತಂದು ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 125/2026ರ ಅಡಿಯಲ್ಲಿ ಲಾಟರಿ ನಿಷೇಧ ಕಾಯ್ದೆ 1998ರ ಕಲಂ 7(iii)ರಂತೆ ಮತ್ತೊಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
-
ಸ್ಥಳೀಯ10 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಪ್ರಕರಣ: ರವಿ ಪೂಜಾರಿ ಬಂಧನ, ಇಬ್ಬರು ಶಂಕಿತರ ವಿಚಾರಣೆ
-
ಅಪರಾಧ8 hours agoB.R. Shetty-ಬ್ಯಾಂಕ್ ಆಫ್ ಬರೋಡಾ ವಿರುದ್ಧ ಯುಎಇ ಎಕ್ಸ್ಚೇಂಜ್ ಸಂಸ್ಥೆಗಳ ಸ್ಥಾಪಕ ಬಿ.ಆರ್. ಶೆಟ್ಟಿ ಕಾನೂನು ಸಮರ; ₹1.25 ಲಕ್ಷ ಕೋಟಿ ಪರಿಹಾರ ಬೇಡಿಕೆ
-
ಬಿಗ್ ನ್ಯೂಸ್10 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು: ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ಎ10 ವಿನಯ್
-
ಅಂತರ ರಾಜ್ಯ10 hours agoMurder case-ಮೀರತ್ ಬ್ಲೂ ಡ್ರಮ್ ಕೊಲೆ ಪ್ರಕರಣ: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ಗೆ ಗಲ್ಲು ಶಿಕ್ಷೆ..!
-
ಅಪರಾಧ4 hours agoPuttur-ಪುತ್ತೂರಿನಲ್ಲಿ ಅಕ್ರಮ ಲಾಟರಿ ಮಾರಾಟ: ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು
-
ರಾಜಕೀಯ3 hours agoH.D. Kumaraswamy-ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ : ಬಾಂಬ್ ಸಿಡಿಸಿದ ಎಚ್.ಡಿ. ಕುಮಾರಸ್ವಾಮಿ – ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಷಡ್ಯಂತ್ರದಲ್ಲಿ ಕೃಪಾ ಆಳ್ವ..! ಗಂಭೀರ ಆರೋಪ
-
ಮಂಗಳೂರು4 hours agoSudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!
-
ರಾಜಕೀಯ8 hours agoAmal Ramachandra-ಒಳ್ಳೆಯ ರೀತಿಯಲ್ಲಿ ಬೆಳೆವಿಮೆ ಬಂದರೆ ಮೋದಿಯಿಂದಾಗಿ ಎಂದು ಬೊಬ್ಬೆ ಹಾಕುತ್ತಿದ್ದ ಬಿಜೆಪಿ ಈಗ ಕಾಂಗ್ರೆಸ್ ನ್ನು ದೂರುತ್ತಿದೆ..! ಟರ್ಮ್ ಶೀಟ್ ಬದಲಾವಣೆ ಮಾಡಿದ್ದು ಬಿಜೆಪಿ ಈ ಬಗ್ಗೆ ದಾಖಲೆಯಿದೆ; ಅಶೋಕ್ ರೈ ಹುಟ್ಟಿಸಿದ ಲಿಸ್ಟ್ ಕೊಡ್ತೇನೆ 8 ವರ್ಷಗಳಲ್ಲಿ ಬೆಳ್ತಂಗಡಿಯಲ್ಲಿ ಪೂಂಜಾ ಹುಟ್ಟಿಸಿದ್ದೇನೂ..? ಪುಡಾ ಅಧ್ಯಕ್ಷ ಅಮಳ ರಾಮಚಂದ್ರ




















