ಕರಾವಳಿಯಲ್ಲಿ ಬಿಸಿಗಾಳಿಯ ತಲ್ಲಣ:ದಕ್ಷಿಣ ಕನ್ನಡ, […]" /> ಕರಾವಳಿಯಲ್ಲಿ ಬಿಸಿಗಾಳಿಯ ತಲ್ಲಣ:ದಕ್ಷಿಣ ಕನ್ನಡ, […]"> Coastal region-ಕರಾವಳಿಯಲ್ಲಿ ಇನ್ನೆರಡು ದಿನ ಬಿಸಿಗಾಳಿ ಬೀಸುವ ಮುನ್ಸೂಚನೆ : ಬಿಸಿಲಿನ ಝಳದಿಂದ ತಪ್ಪಿಸಿಕೊಳ್ಳಲು ಇಲ್ಲಿದೆ ವೈದ್ಯರ ಸಲಹೆಗಳು - Nikhara News | Kannada News Website
Connect with us

ಬಿಗ್ ನ್ಯೂಸ್

Coastal region-ಕರಾವಳಿಯಲ್ಲಿ ಇನ್ನೆರಡು ದಿನ ಬಿಸಿಗಾಳಿ ಬೀಸುವ ಮುನ್ಸೂಚನೆ : ಬಿಸಿಲಿನ ಝಳದಿಂದ ತಪ್ಪಿಸಿಕೊಳ್ಳಲು ಇಲ್ಲಿದೆ ವೈದ್ಯರ ಸಲಹೆಗಳು

Published

on

Ad Widget

Ad Widget

Ad Widget

Ad Widget

ರಾಜ್ಯದಲ್ಲಿ ಹವಾಮಾನದ ವಿಚಿತ್ರ ಆಟ ಶುರುವಾಗಿದೆ. ಒಂದು ಕಡೆ ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿಯ ಆರ್ಭಟ ಜೋರಾಗಿದ್ದರೆ, ಇನ್ನೊಂದೆಡೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ ಹವಾಮಾನದ ವಿಚಿತ್ರ ಆಟ ಶುರುವಾಗಿದೆ. ಒಂದು ಕಡೆ ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿಯ ಆರ್ಭಟ ಜೋರಾಗಿದ್ದರೆ, ಇನ್ನೊಂದೆಡೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Ad Widget

Ad Widget alt="Ad Widget"/>

Ad Widget

ಕರಾವಳಿಯಲ್ಲಿ ಬಿಸಿಗಾಳಿಯ ತಲ್ಲಣ:
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಡುವ ಬಿಸಿಲು ಮತ್ತು ಉಷ್ಣ ಗಾಳಿಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕರಾವಳಿ ಭಾಗದಲ್ಲಿ ತಾಪಮಾನವು ವಾಡಿಕೆಗಿಂತ 2.2 ಡಿಗ್ರಿಯಷ್ಟು ಹೆಚ್ಚಳವಾಗಿದ್ದು, ತೇವಾಂಶಭರಿತ ಗಾಳಿಯಿಂದಾಗಿ ಸೆಖೆ ಮತ್ತು ಉಸಿರುಕಟ್ಟುವ ವಾತಾವರಣ ನಿರ್ಮಾಣವಾಗಿದೆ. ಇದರಿಂದಾಗಿ ಕಾರ್ಮಿಕರು ಹಾಗೂ ಹೊರಾಂಗಣ ಕೆಲಸ ಮಾಡುವವರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.

Ad Widget

Ad Widget <> Ad Widget

ಎಲ್ಲೆಲ್ಲಿ ಮಳೆಯಾಗಲಿದೆ?
ಬಿಸಿಲಿನ ನಡುವೆಯೇ ಕೆಲವು ಜಿಲ್ಲೆಗಳಿಗೆ ಮಳೆಯ ಸಮಾಧಾನ ಸಿಗಲಿದೆ.
ಉತ್ತರ ಒಳನಾಡು: ಬೆಳಗಾವಿ, ಬಾಗಲಕೋಟೆ, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡು: ಮಲೆನಾಡು ಭಾಗದ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಿಡಿಲು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.

45 ಡಿಗ್ರಿಗೆ ಏರಲಿದೆಯೇ ತಾಪಮಾನ?
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಎರಡು ದಿನ ತಾಪಮಾನ ಭಾರಿ ಏರಿಕೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್‌ ತಲುಪುವ ಭೀತಿ ಇದೆ. ಏಪ್ರಿಲ್‌ನಿಂದ ಜೂನ್‌ವರೆಗೆ ವಾಡಿಕೆಗಿಂತ ಹೆಚ್ಚಿನ ತಾಪಮಾನ ಇರಲಿದ್ದು, ಮುನ್ನೆಚ್ಚರಿಕೆ ವಹಿಸುವುದು ಅನಿವಾರ್ಯವಾಗಿದೆ.

Ad Widget

Ad Widget

ವೈದ್ಯರ ಪ್ರಮುಖ ಸಲಹೆಗಳು:
ಹೆಚ್ಚುತ್ತಿರುವ ಉಷ್ಣಾಘಾತದಿಂದ (Heatstroke) ತಪ್ಪಿಸಿಕೊಳ್ಳಲು ವೈದ್ಯರು ಈ ಕೆಳಗಿನ ಸೂಚನೆಗಳನ್ನು ನೀಡಿದ್ದಾರೆ:
ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಅನಗತ್ಯವಾಗಿ ಬಿಸಿಲಿಗೆ ಹೋಗಬೇಡಿ.
ದೇಹದಲ್ಲಿ ನೀರಿನಂಶ ಕಾಪಾಡಿಕೊಳ್ಳಲು ಸತತವಾಗಿ ನೀರು, ಮಜ್ಜಿಗೆ, ಎಳನೀರು ಸೇವಿಸಿ.
ವಿಶೇಷವಾಗಿ ಮಕ್ಕಳು ಮತ್ತು ವೃದ್ಧರ ಬಗ್ಗೆ ಹೆಚ್ಚಿನ ನಿಗಾ ವಹಿಸಿ.

ಮುನ್ಸೂಚನೆ:
ಮಳೆಯ ಮುನ್ಸೂಚನೆ ಇದ್ದರೂ, ಕರಾವಳಿ ಮತ್ತು ರಾಜ್ಯದ ಇತರೆಡೆ ಬಿಸಿ ಮತ್ತು ಆದ್ರ್ರ ವಾತಾವರಣ (Humid Weather) ಮುಂದುವರಿಯಲಿದೆ. ಇದರಿಂದಾಗಿ ದೈನಂದಿನ ಚಟುವಟಿಕೆಗಳಿಗೆ ಅಡಚಣೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಸಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!