ರಾಜಕೀಯ
Kuriya-ಕುರಿಯ ರೂ. 37.65ಕೋಟಿ ವೆಚ್ಚದ ಶ್ರಮಿಕ ವಸತಿ ಶಾಲೆಗೆ ಶಿಲಾನ್ಯಾಸ
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯಿಂದ ಕುರಿಯದಲ್ಲಿ ರೂ. 37.65 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಶ್ರಮಿಕ ವಸತಿ ಶಾಲಾ ಕಟ್ಟಡಕ್ಕೆ ಎ.20ರಂದು ಶಿಲಾನ್ಯಾಸ ನೆರವೇರಿಸಿ ಶಾಸಕ ಅಶೋಕ್ ಕುಮಾರ್ ರೈ ಅವರು ಮಾತನಾಡಿದರು.
ಪುತ್ತೂರು: ರಾಜ್ಯದ ಪ್ರತಿ ಜಿಲ್ಲೆಗಳಿಗೂಂದು ಶ್ರಮಿಕ ಶಾಲೆ ಮಂಜೂರು ಮಾಡುತ್ತಿದೆ. ಮೂಡಬಿದರೆಯವರು ಬಹಳಷ್ಟು ಪ್ರಯತ್ನಪಟ್ಟಿದ್ದರು. ಆದರೆ ಪುತ್ತೂರಿನಲ್ಲಿ ಎಲ್ಲರ ಸಹಕಾರದೊಂದಿಗೆ ಶೀಘ್ರದಲ್ಲಿ ಜಾಗ ಮಂಜೂರುಗೊಳಿಸಿರುವುದರಿಂದ ಪುತ್ತೂರಿಗೆ ಶ್ರಮಿಕ ವಸತಿ ಶಾಲೆ ಮಂಜೂರಾಗಿದೆ. ಜಿಲ್ಲಾ ಕೇಂದ್ರದಲ್ಲಿ ಮಾತ್ರವೇ ಮಂಜೂರುಗೊಳಿಸಲು ಅವಕಾಶವಿದ್ದು ರಾಜ್ಯದಲ್ಲಿ ತಾಲೂಕು ಕೇಂದ್ರಕ್ಕೆ ಮಂಜೂರಾಗಿರುವುದು ಪುತ್ತೂರಿಗೆ ಮಾತ್ರ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯಿಂದ ಕುರಿಯದಲ್ಲಿ ರೂ. 37.65 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಶ್ರಮಿಕ ವಸತಿ ಶಾಲಾ ಕಟ್ಟಡಕ್ಕೆ ಎ.20ರಂದು ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಬಡ ಕಾರ್ಮಿಕರ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆತು ಅವರೂ ಸಮಾಜದಲ್ಲಿ ಮುಂದುವರಿಯಬೇಕು ಎಂಬ ಉದ್ದೇಶದಿಂದ ಕಾರ್ಮಿಕರ ಶ್ರಮಿಕ ವಸತಿ ಶಾಲೆ ಮಂಜೂರುಗೊಳಿಸಲಾಗಿದೆ. ಈ ಶಾಲೆಯಲ್ಲಿ ಕಾರ್ಮಿಕರ ಗುರುತಿನ ಚೀಟಿ ಹೊಂದಿರುವ ಕಾರ್ಮಿಕರ ಮಕ್ಕಳಿಗೆ ಮಾತ್ರವೇ ಪ್ರವೇಶಕ್ಕೆ ಅವಕಾಶವಿದೆ. ಹೀಗಾಗಿ ಕಾರ್ಮಿಕರಾಗಿರುವವರು ಕಾರ್ಮಿಕರ ಗುರುತಿನ ಚೀಟಿ ಮಾಡಿಸಿಕೊಳ್ಳಬೇಕು. ಬಹುತೇಕವಾಗಿ 6-12 ತರಗತಿ ತನಕದ ಶಾಲೆಗಳು ಗರೀಷ್ಠ 10 ಸಾವಿರ ಚದರ ಅಡಿ ವಿಸ್ತೀರ್ಣದಲ್ಲಿ ಮಾತ್ರ ಇರುತ್ತದೆ. ಆದರೆ ಶ್ರಮಿಕ ಶಾಲೆ 71 ಸಾವಿರ ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಳ್ಳಿದೆ. ಶ್ರಮಿಕ ಶಾಲಾ ಸೌಲಭ್ಯದ ಕುರಿತು ಕಾರ್ಮಿಕರಿಗೆ ಮಾಹಿತಿ ನೀಡಿ ಮಕ್ಕಳನ್ನು ಶ್ರಮಿಕ ಶಾಲೆಗೆ ದಾಖಲಾತಿ ಮಾಡಿಸುವಂತೆ ಮಾಡಬೇಕು ಎಂದು ಹೇಳಿದರು.
ಹಿಂದಿನವರಂತೆ ತೆಂಗಿನಕಾಯಿ ಒಡೆಯವುದು ಮಾತ್ರವಲ್ಲ:
ಬಜತ್ತೂರಿನ ವಸತಿ ನಿಲಯಕ್ಕೂ ಟೆಂಡರ್ ಆಗಿದೆ. ಜೊತೆಗೆ ರೂ.10ಕೋಟಿಯ ಮುಂಡೂರಿನ ತಾಲೂಕು ಕ್ರೀಡಾಂಗಣ, ರೂ.85.50ಕೋಟಿಯ ಆರ್‌ಟಿಓ ಟ್ರಾಕ್‌ಗಳಿಗೂ ಮುಂದಿನ ಎರಡು ತಿಂಗಳಲ್ಲಿ ಶಿಲಾನ್ಯಾಸ ನೆರವೇರಿಸಿ ಮುಂದಿನ ಎರಡು ವರ್ಷದಲ್ಲಿ ಉದ್ಘಾಟನೆಗೊಳ್ಳಲಿದೆ. ನಾವು ಹಿಂದಿನವರಂತೆ ತೆಂಗಿನಕಾಯಿ ಒಡೆಯುವುದು ಮಾತ್ರವಲ್ಲ. ನಾವು ತೆಂಗಿನಕಾಯಿ ಒಡೆದು ಉದ್ಘಾಟನೆ ಮಾಡಿ ಲೋಕಾರ್ಪಣೆ ಮಾಡುವ ಮೂಲಕ ಜನರ ವಿಶ್ವಾಸ ಗಳಿಸಲಿದ್ದೇವೆ ಎಂದು ಶಾಸಕರು ಹೇಳಿದರು.
ಗ್ರಾ.ಪಂ ಸದಸ್ಯರಿಗೆ ಪರಿಚಯವೇ ಇಲ್ಲದ ರಸ್ತೆಗಳು ಶಾಸಕರಿಂದ ಅಭಿವೃದ್ಧಿ-ಎಂ.ಎಸ್ ಮಹಮ್ಮದ್:
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್ ಮಾತನಾಡಿ, ಪ್ರಥಮ ಬಾರಿಗೆ ಆಯ್ಕೆಯಾಗಿರುವ ಬಹುತೇಕ ಶಾಸಕರುಗಳು ವಿಧಾನ ಸೌಧ, ವಿಕಾಸ ಸೌಧದಲ್ಲಿರುವ ಎಲ್ಲಾ ಕೊಠಡಿಗಳಿಗೆ ಹೋಗಿರಲಿಕ್ಕಿಲ್ಲ. ಆದರೆ ನಮ್ಮ ಶಾಸಕರು ಯಾವ ಇಲಾಖೆ ಎಲ್ಲಿದೆ. ಯಾವ ಇಲಾಖೆಯಿಂದ ಎಷ್ಟು ಅನುದಾನ ಪಡೆಯಬಹುದು ಎಂಬುದನ್ನು ತಿಳಿದು ಹೋರಾಟ ಮಾಡಿ ಅನುದಾನ ತಂದು ಅಭಿವೃದ್ಧಿ ಮಾಡುತ್ತಿದ್ದಾರೆ. ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ಅನುದಾನ ನೀಡುವ ಮೂಲಕ ಗ್ರಾ.ಪಂ ಸದಸ್ಯರಿಗೇ ಪರಿಚಯ ಇಲ್ಲದ ರಸ್ತೆಗಳು ಅಭಿವೃದ್ಧಿಯಾಗುತ್ತಿದೆ. ಶಾಸಕರ ಇಚ್ಚಾಶಕ್ತಿಯ ಫಲವಾಗಿ ಪುತ್ತೂರಿಗೆ ಶ್ರಮಿಕ ಶಾಲೆ ಮಂಜೂರುಗೊಂಡಿದ್ದು ಕಷ್ಟದಲ್ಲಿರುವ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಲು ಸಹಕಾರಿಯಾಗಲಿದೆ ಎಂದರು.
ರೂ.2,೮೦೦ಕೋಟಿ ಅನುದಾನ ತಂದಿರುವ ರಾಜ್ಯದ ಏಕೈಕ ಶಾಸಕ-ಕೃಷ್ಣಪ್ರಸಾದ್ ಆಳ್ವ:
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಮಾತನಾಡಿ, ಶಾಸಕರಾಗಿ ಅಶೋಕ್ ಕುಮಾರ್ ರೈಯವರು ಮಾಡಿದ ಅಭಿವೃದ್ದಿ ಕೆಲಸಗಳು ರಾಜ್ಯವೇ ಬೆರಗಾಗಿದೆ. 224 ಕ್ಷೇತ್ರಗಳು 2 ವರ್ಷದಲ್ಲಿ 2,800ಕೋಟಿ ರೂಪಾಯಿ ತಂದಿರುವ ರಾಜ್ಯದ ಏಕೈಕ ಶಾಸಕರಾಗಿದ್ದಾರೆ. ಅವರ ವಿಶೇಷ ಮುತುವರ್ಜಿಯಲ್ಲಿ ಶ್ರಮಿಕ ಶಾಲೆ ಮಂಜೂರಾಗಿದೆ. ಇಂತಹ ಶಾಸಕರನ್ನು ಪಡೆದಿರುವ ನಾವು ಭಾಗ್ಯವಂತರು. ಪಾದರಸದಂತೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ. ಅಶೋಕ್ ಕುಮಾರ್ ರೈಯವರು ಮುಂದಿನ ಬಾರಿ ಸಚಿವರಾಗಿ ಬರಬೇಕು ಎಂದರು.
ಶ್ರಮಿಕ ಶಾಲೆಯು ಪುತ್ತೂರಿನ ಅಭಿವೃದ್ಧಿ ಇನ್ನೊಂದು ಮುಕುಟ-ಡಾ.ರಾಜಾರಾಮ ಕೆ.ಬಿ.:
ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ. ಮಾತನಾಡಿ, ಪುತ್ತೂರು ಅಭಿವೃದ್ಧಿ ಪರತವದಲ್ಲಿ ಮುನ್ನಡೆಯುತ್ತಿದೆ. ಶಾಸಕರ ಅಭಿವೃದ್ಧಿ ಕಾರ್ಯಗಳಿಂದ ಪುತ್ತೂರು ರಾಜ್ಯದಲ್ಲಿ ಗುರುತಿಸಲ್ಪಡುವ ಕ್ಷೇತ್ರವಾಗಿದರ. ಕಾರ್ಮಿಕರ ಮಕ್ಕಳಿಗಾಗಿರುವ ಶ್ರಮಿಕ ಶಾಲೆಯು ಪುತ್ತೂರಿನ ಅಭಿವೃದ್ಧಿ ಇನ್ನೊಂದು ಮುಕುಟವಾಗಿದೆ. ಇದು ಬಡ ವಿದ್ಯಾರ್ಥಿಗಳಿಗೆ ಆಸರೆ ಅಗಲಿದೆ ಎಂದರು.
ಕುರಿಯ ಗ್ರಾಮವನ್ನು ಗುರುತಿಸುವಂತೆ ಮಾಡಿದ್ದಾರೆ-ಶಿವರಾಮ ಆಳ್ವ:
ಉದ್ಯಮಿ ಶಿವರಾಮ ಆಳ್ವ ಬಳ್ಳಮಜಲು ಮಾತನಾಡಿ, ಸರಕಾರಿ ಮೆಡಿಕಲ್ ಕಾಲೇಜು ಮಂಜೂರುಗೊಳಿಸಿ ಪುತ್ತೂರನ್ನು ರಾಜ್ಯದಲ್ಲಿ ಗುರುತಿಸುವಂತೆ ಮಾಡಿದ ಶಾಸಕ ಅಶೋಕ್ ಕುಮಾರ್ ರೈಯವರು ಕಾರ್ಮಿಕ ಇಲಾಖೆಯ ಶ್ರಮಿಕ ಶಾಲೆಯನ್ನು ಮಂಜೂರುಗೊಳಿಸುವ ಮೂಲಕ ತಾಲೂಕಿನಲ್ಲಿಯೇ ಕುರಿಯ ಗ್ರಾಮವನ್ನು ಗುರುತಿಸುವಂತೆ ಮಾಡಿದ್ದಾರೆ. ಕುರಿಯದಲ್ಲಿ ರಸ್ತೆ, ನೀರು ಸೇರಿದಂತೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುವಂತೆ ವಿನಂತಿಸಿದರು.
ಜಿಲ್ಲೆಗೆ ಎರಡನೇ ಬೆಂಚ್‌ಮಾರ್ಕ್ ತಂದವರು ಅಶೋಕ್ ರೈ-ಉಮಾನಾಥ ಶೆಟ್ಟಿ:
ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ ಮಾತನಾಡಿ, ವೀರಪ್ಪ ಮೊಯಿಲಿ ಅವರು ಸಿಇಟಿ ಜಾರಿಗೆ ತಂದು ಜನ ಸಾಮಾನ್ಯರಿಗೂ ಮೆಡಿಕಲ್, ಇಂಜಿನಿಯರಿಂಗ್ ಪದವಿ ಪಡೆಯಲು ಅನುಕೂಲ ಕಲ್ಪಿಸಿರುವಂತೆ ಶಾಸಕ ಅಶೋಕ್ ಕುಮಾರ್ ರೈಯವರು ಮೆಡಿಕಲ್ ಕಾಲೇಜು ಮಂಜೂರುಗೊಳಿಸುವ ಮೂಲಕ ಜಿಲ್ಲೆಯ ಎರಡನೇ ಬೆಂಚ್ ಮಾರ್ಕ್ ಮಾಡಿದ್ದಾರೆ. ಶಾಸಕರಾಗುವ ಮೊದಲೇ ಕಾರ್ಮಿಕರ ಮೇಲೆ ಕಾಲಜಿಯಿದ್ದ ಶಾಸಕರು, ಈಗ ಕಾರ್ಮಿಕರ ಮಕ್ಕಳಿಗಾಗಿರುವ ಶ್ರಮಿಕ ಶಾಲೆ ಮಂಜೂರುಗೊಳಿಸುವ ಮೂಲಕ ಕಾರ್ಮಿಕರ ಮಕ್ಕಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಿದ್ದಾರೆ. ಇಂದು ಕಾರ್ಮಿಕರ ಮುಂದಿನ ಪೀಳಿಗೆಗೆ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಿದರು.
ನಗರ ಯೋಜನಾ ಪ್ರಾಧೀಕಾರದ ಅಧ್ಯಕ್ಷ ಅಮಳ ರಾಮಚಂದ್ರ, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಟಿ ತೌಸೀಫ್, ಕುರಿಯ ವಲಯ ಕಾಂಗ್ರೆಸ್ ಅಧ್ಯಕ್ಷ ಸನತ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆರ್ಯಾಪು ಗ್ರಾ.ಪಂ ಮಾಜಿ ಸದಸ್ಯ ನೇಮಾಕ್ಷ ಸುವರ್ಣ ಸ್ವಾಗತಿಸಿ, ವಂದಿಸಿದರು. ಪಕ್ಷದ ಪ್ರಮುಖರಾದ ರಮೇಶ್ ರೈ ಡಿಂಬ್ರಿ, ಫಾರೂಕ್ ಬಾಯಬೆ, ಪೂರ್ಣೇಶ್ ಭಂಡಾರಿ, ಯಾಕೂಬ್ ಯಾನೆ ಸುಲೈಮಾನ್, ವಿಶ್ವಜಿತ್ ಅಮ್ಮುಂಜ, ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಸತೀಶ್ ರೈ ನಿಡ್ಪಳ್ಳಿ, ಸದಾಶಿವ ರೈ ಗುಮ್ಮಟೆಗದ್ದೆ, ಗಿರೀಶ್ ರೈ ಮೂಲೆ, ಗೋಪಾಲಕೃಷ್ಣ ಗೌಡ, ಜಯಪ್ರಕಾಶ್ ರೈ, ಸೂಫಿ ಮೊದಲಾದವರು ಅತಿಥಿಗಳಿಗೆ ಹೂ ನೀಡಿ ಸ್ವಾಗತಿಸಿದರು.
ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಜಿ.ಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಸುರೇಂದ್ರ ರೈ, ಜಿಲ್ಲಾ ಕಾರ್ಮಿಕ ಅಧಿಕಾರಿ ವಿಲ್ಮಾ, ಪುತ್ತೂರಿನ ಹಿರಿಯ ಕಾರ್ಮಿಕ ನಿರೀಕ್ಷಕ ಗಣಪತಿ ಹೆಗ್ಡೆ, ಕರ್ನಾಟಕ ರಾಜ್ಯ ಕಾರ್ಮಿಕ ಮಂಡಳಿಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಿದ್ದಪ್ಪ, ಗುತ್ತಿಗೆದಾರ ಶ್ರೀನಿವಾಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
18 ತಿಂಗಳಲ್ಲಿ ಲೋಕಾರ್ಪಣೆ
ರೂ. 37.65 ಕೋಟಿ ಶ್ರಮಿಕ ಶಾಲೆಗೆ ಶಿಲಾನ್ಯಾಸಗೊಂಡಿದೆ. ಈ ಶಾಲಾ ಕಟ್ಟಡವು ಮುಂದಿನ 18 ತಿಂಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ. ಚುನಾವಣೆಗೆ ಮೊದಲು ಮಕ್ಕಳು ದಾಖಲಾತಿ ನಡೆಯಲಿದೆ. ಶ್ರಮಿಕ ಶಾಲೆಯಲ್ಲಿ ಎಲ್ಲಾ ವಿಷಯವಾರು ಶಿಕ್ಷಕರಿರುತ್ತಾರೆ. ಎಲ್ಲಾ ಶಿಕ್ಷಕರು ವಸತಿಯಲ್ಲಿರಲಿದ್ದಾರೆ. ಬಾಲಕ-ಬಾಲಕಿಯ ವಸತಿ ನಿಲಯ, ಶಿಕ್ಷಕರ ವಸತಿ ನಿಲಯ ಸೇರಿದಂತೆ ಒಟ್ಟು ಎಳೂವರೆ ಎಕರೆಯಲ್ಲಿ ನೂತನ ಶಾಲಾ ಕಟ್ಟಡ ನಿರ್ಮಾಣಗೊಳ್ಳಲಿದೆ.
-ಅಶೋಕ್ ಕುಮಾರ್ ರೈ,ಶಾಸಕರು ಪುತ್ತೂರು
ರಾಜಕೀಯ
BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.
ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.
ಮಂಗಳೂರು
Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ
ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.
“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:
ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.
ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.
ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರಮತ್ತು ಪ್ರವಾಸೋದ್ಯಮ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್‌ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್‌ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.
-
ಶಿಕ್ಷಣ17 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಅಪರಾಧ10 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಚಿನ್ನ-ಬೆಳ್ಳಿ ದರ15 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ರಾಜಕೀಯ10 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಸಿನೆಮಾ15 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಸ್ಥಳೀಯ16 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ16 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಅಪರಾಧ16 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ















