ನಿಧನ ವಾರ್ತೆ
Mithun Poojari-ಬಂಟ್ವಾಳ: ಹವ್ಯಾಸಿ ರಂಗಭೂಮಿ ಕಲಾವಿದ ಮಿಥುನ್ ಪೂಜಾರಿ ಆತ್ಮಹತ್ಯೆ
ಮಂಚಿ ಎಂಬಲ್ಲಿ ಹವ್ಯಾಸಿ ರಂಗಭೂಮಿ ಕಲಾವಿದರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ಸಂಭವಿಸಿದೆ. ಉಳ್ಳಾಲ ತಾಲೂಕಿನ ಇರಾ ಗ್ರಾಮದ ಪಾತ್ರಾಡಿ ನಿವಾಸಿ ಮಿಥುನ್ ಪೂಜಾರಿ (40) ಮೃತಪಟ್ಟವರು.
ಬಂಟ್ವಾಳ: ಮಂಚಿ ಎಂಬಲ್ಲಿ ಹವ್ಯಾಸಿ ರಂಗಭೂಮಿ ಕಲಾವಿದರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ಸಂಭವಿಸಿದೆ.
ಉಳ್ಳಾಲ ತಾಲೂಕಿನ ಇರಾ ಗ್ರಾಮದ ಪಾತ್ರಾಡಿ ನಿವಾಸಿ ಮಿಥುನ್ ಪೂಜಾರಿ (40) ಮೃತಪಟ್ಟವರು.
ಘಟನೆಯ ವಿವರ:
ವೃತ್ತಿಯಲ್ಲಿ ಮೇಸ್ತ್ರಿಯಾಗಿದ್ದ ಮಿಥುನ್ ಪೂಜಾರಿ ಅವರು ರಂಗಭೂಮಿ ಚಟುವಟಿಕೆಗಳಲ್ಲಿ ಬಹಳ ಸಕ್ರಿಯರಾಗಿದ್ದರು. ಇತ್ತೀಚೆಗಷ್ಟೇ ಇರಾ ಗ್ರಾಮದಲ್ಲಿ ಹೊಸ ಮನೆ ನಿರ್ಮಿಸಿದ್ದ ಅವರು ಅಲ್ಲಿಗೆ ವಾಸ್ತವ್ಯ ಬದಲಿಸಿದ್ದರು. ಆದರೆ, ಮಂಚಿ ಸಮೀಪವಿದ್ದ ತಮ್ಮ ಹಳೆಯ ಮನೆಯ ತೋಟಕ್ಕೆ ನೀರುಣಿಸುವ ಕೆಲಸಕ್ಕಾಗಿ ಅವರು ಆಗಾಗ ಭೇಟಿ ನೀಡುತ್ತಿದ್ದರು.
ಅದರಂತೆ ಸೋಮವಾರ ಬೆಳಿಗ್ಗೆ ಮನೆಯಿಂದ ಹೊರಟಿದ್ದ ಮಿಥುನ್, ಸಂಜೆಯಾದರೂ ವಾಪಸ್ ಬಂದಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಮತ್ತು ಸ್ಥಳೀಯರು ಹಳೆಯ ಮನೆಗೆ ತೆರಳಿ ಪರಿಶೀಲಿಸಿದಾಗ, ಅವರು ಅಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ನಿಧನ ವಾರ್ತೆ
Kadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಕಡಬ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ.
ಹೆದ್ದಾರಿಯಲ್ಲಿ ಕಾರೊಂದು ಸಂಚರಿಸುತ್ತಿದ್ದ ವೇಳೆ ಏಕಾಏಕಿ ಅಡ್ಡ ಬಂದ ಕಡವೆಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಈ ಭಾಗದಲ್ಲಿ ಕಾಡುಪ್ರಾಣಿಗಳ ಸಂಚಾರ ಸಾಮಾನ್ಯವಾಗಿರುವ ಹಿನ್ನೆಲೆಯಲ್ಲಿ ಘಟನೆ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ರಾತ್ರಿ ಹಾಗೂ ಮುಂಜಾನೆ ವೇಳೆ ಕಾಡುಪ್ರಾಣಿಗಳು ಹೆದ್ದಾರಿಗೆ ಬರುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಅಗತ್ಯವಿದೆ.
ಈ ಹಿಂದೆಯೂ ಇದೇ ಪರಿಸರದಲ್ಲಿ ಕಾಡುಪ್ರಾಣಿಗಳಿಂದ ವಾಹನ ಸವಾರರಿಗೆ ಅಪಾಯ ಉಂಟಾದ ಘಟನೆಗಳು ನಡೆದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಾಡುಪ್ರಾಣಿಗಳ ಸಂಚಾರವಿರುವ ಪ್ರದೇಶಗಳಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದರ ಜತೆಗೆ, ರಸ್ತೆ ಬದಿಯ ಪೊದೆಗಳನ್ನು ತೆರವುಗೊಳಿಸಿ ವಾಹನ ಸವಾರರಿಗೆ ದೂರದಿಂದಲೇ ಪ್ರಾಣಿಗಳು ಕಾಣುವಂತೆ ಮಾಡುವ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾಡುಪ್ರಾಣಿಗಳು ಹೆದ್ದಾರಿಗೆ ಬರುವುದರಿಂದ ಉಂಟಾಗುವ ಅಪಘಾತಗಳನ್ನು ತಡೆಯಲು ಕ್ರಮ ವಹಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.
ನಿಧನ ವಾರ್ತೆ
Kasaragod-ಕಾಸರಗೋಡು: ಬೈಕ್-ಕಾರು ಮುಖಾಮುಖಿ ಡಿಕ್ಕಿ; ಸವಾರ ಸಾವು, ಪತ್ನಿ ಗಂಭೀರ
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ.
ಕಾಸರಗೋಡು: ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರ ಪತ್ನಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಮುಹಮ್ಮದ್ ಅಶ್ರಫ್ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಮುಖಾಮುಖಿಯಾಗಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಅಶ್ರಫ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನಿಧನ ವಾರ್ತೆ
Mangalore-ಮಂಗಳೂರು: ನ್ಯಾಯಾಧೀಶರ ಕಾರು, ಗೂಡ್ಸ್ ಆಟೋ, ಬೈಕ್ ನಡುವೆ ಸರಣಿ ಅಪಘಾತ; ಗೂಡ್ಸ್ ಆಟೋ ಚಾಲಕ ಮೃತ್ಯು
ಮಂಗಳೂರು ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ಮಂಗಳೂರು: ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ.
ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿನಯ್ ಡಿ. ಅವರು ಕಾರಿನಲ್ಲಿ (ಕೆಎ-05-ಎನ್‌ಕೆ-2504) ಬೆಳಗ್ಗೆ ನ್ಯಾಯಾಲಯದತ್ತ ತೆರಳುತ್ತಿದ್ದರು. ಕರಂಗಲ್ಪಾಡಿಯ ರಾಧಾ ಮೆಡಿಕಲ್ಸ್ ಎದುರಿನ ತಿರುವಿನಲ್ಲಿ ಸಾಗುತ್ತಿದ್ದಾಗ, ಗೂಡ್ಸ್ ಆಟೋ ರಿಕ್ಷಾ (ಕೆಎ-19-ಎಡಿ-4395) ನಿಯಂತ್ರಣ ತಪ್ಪಿ ನ್ಯಾಯಾಧೀಶರ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಬಳಿಕ ಗೂಡ್ಸ್ ಆಟೋ ರಿಕ್ಷಾ ಅದೇ ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ (ಕೆಎ-19-ಎಚ್‌ವೈ-1664)ಕ್ಕೂ ಢಿಕ್ಕಿ ಹೊಡೆದು ಮಗುಚಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಚಂದ್ರ ಕೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಗೂಡ್ಸ್ ಆಟೋ ರಿಕ್ಷಾ ಢಿಕ್ಕಿಯಿಂದ ದ್ವಿಚಕ್ರ ವಾಹನ ಸವಾರ ಪ್ಲೆವಿಯನ್ ಮೆರ್ವಿನ್ ಅವರಿಗೂ ಗಾಯಗಳಾಗಿವೆ. ಅಪಘಾತದಲ್ಲಿ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನ ಜಖಂಗೊಂಡಿವೆ.
ಅಪಘಾತದಲ್ಲಿ ನ್ಯಾಯಾಧೀಶ ವಿನಯ್ ಡಿ. ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ನ್ಯಾಯಾಧೀಶ ವಿನಯ್ ಡಿ. ಅವರು ನೀಡಿದ ದೂರಿನ ಆಧಾರದ ಮೇಲೆ ಕದ್ರಿ ಟ್ರಾಫಿಕ್ ಈಸ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
-
ನಿಧನ ವಾರ್ತೆ23 hours agoKadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
-
ಬಿಗ್ ನ್ಯೂಸ್18 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಪುತ್ತೂರು15 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಮಂಗಳೂರು18 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
Uncategorized23 hours agoಅ.6: ಮಂಗಳೂರಿನ ಪುರಭವನದಲ್ಲಿ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ
-
ಅಂತರ ರಾಜ್ಯ21 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್17 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ರಾಜ್ಯ20 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!


















