Connect with us

ಬಿಗ್ ನ್ಯೂಸ್

HUBBALLI:-ಹುಬ್ಬಳ್ಳಿ: ಜೆಸಿಬಿ ರಿಪೇರಿ ಮಾಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ದೇಹದಿಂದ ಬೇರ್ಪಟ್ಟು ಕಾರಿನ ಇಂಜಿನ್‌ನಲ್ಲಿ ಸಿಲುಕಿದ ಜೆಸಿಬಿ ಚಾಲಕನ ರುಂಡ..!

Published

on

Ad Widget

Ad Widget

Ad Widget

Ad Widget

ಹುಬ್ಬಳ್ಳಿ ಜಿಲ್ಲೆಯ ಕುಂದಗೋಳ ರಸ್ತೆಯ ಶೆರೆವಾಡ ಗ್ರಾಮದ ಬಳಿ ಎದೆನಡುಗಿಸುವಂತಹ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಜೆಸಿಬಿ ಯಂತ್ರವನ್ನು ದುರಸ್ತಿ ಮಾಡುತ್ತಿದ್ದ ವ್ಯಕ್ತಿಗೆ ಅತಿ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ, ವ್ಯಕ್ತಿಯ ರುಂಡವು ದೇಹದಿಂದ ಬೇರ್ಪಟ್ಟು ಕಾರಿನ ಇಂಜಿನ್ ಒಳಗೆ ಸಿಲುಕಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಶೆರೆವಾಡ ಗ್ರಾಮದ ನಿವಾಸಿ ಸದಾನಂದ ಕಟೇಗಾರ (32) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಹುಬ್ಬಳ್ಳಿ: ಜಿಲ್ಲೆಯ ಕುಂದಗೋಳ ರಸ್ತೆಯ ಶೆರೆವಾಡ ಗ್ರಾಮದ ಬಳಿ ಎದೆನಡುಗಿಸುವಂತಹ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಜೆಸಿಬಿ ಯಂತ್ರವನ್ನು ದುರಸ್ತಿ ಮಾಡುತ್ತಿದ್ದ ವ್ಯಕ್ತಿಗೆ ಅತಿ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ, ವ್ಯಕ್ತಿಯ ರುಂಡವು ದೇಹದಿಂದ ಬೇರ್ಪಟ್ಟು ಕಾರಿನ ಇಂಜಿನ್ ಒಳಗೆ ಸಿಲುಕಿಕೊಂಡಿರುವ ದಾರುಣ ಘಟನೆ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ವ್ಯಕ್ತಿಯನ್ನು ಶೆರೆವಾಡ ಗ್ರಾಮದ ನಿವಾಸಿ ಸದಾನಂದ ಕಟೇಗಾರ (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಘಟನೆಯ ವಿವರ:
ತಾಂತ್ರಿಕ ದೋಷದಿಂದಾಗಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಜೆಸಿಬಿ ಯಂತ್ರವನ್ನು ಸರಿಪಡಿಸಲು ಸದಾನಂದ ಅವರು ಕೆಳಕ್ಕೆ ಬಾಗಿದ್ದರು. ಈ ಸಮಯದಲ್ಲಿ ಕುಂದಗೋಳ ಕಡೆಯಿಂದ ಅತಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಸದಾನಂದ ಅವರಿಗೆ ಡಿಕ್ಕಿ ಹೊಡೆದಿದೆ.

ಭೀಕರ ದೃಶ್ಯ ಕಂಡು ಬೆಚ್ಚಿಬಿದ್ದ ಜನರು:
ಅಪಘಾತದ ತೀವ್ರತೆ ಎಷ್ಟಿತ್ತೆಂದರೆ, ಡಿಕ್ಕಿಯ ರಭಸಕ್ಕೆ ಸದಾನಂದ ಅವರ ರುಂಡವು ಕತ್ತರಿಸಿ ದೇಹದಿಂದ ಬೇರ್ಪಟ್ಟಿದೆ. ಕತ್ತರಿಸಲ್ಪಟ್ಟ ರುಂಡವು ಕಾರಿನ ಮುಂಭಾಗದ ಬಾನೆಟ್ ಸೀಳಿಕೊಂಡು ನೇರವಾಗಿ ಇಂಜಿನ್ ಒಳಗೆ ಹೋಗಿ ಸಿಲುಕಿಕೊಂಡಿದೆ. ಅಪಘಾತದ ನಂತರ ಕಾರು ನಿಂತಾಗ ಈ ಭಯಾನಕ ದೃಶ್ಯವನ್ನು ಕಂಡ ಸ್ಥಳೀಯರು ಹೌಹಾರಿದ್ದಾರೆ.

Ad Widget

Ad Widget

ಐವರಿಗೆ ಗಾಯ:
ಅಪಘಾತಕ್ಕೀಡಾದ ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಐವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂಜಿನ್‌ನಲ್ಲಿ ಸಿಲುಕಿದ್ದ ರುಂಡವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕಾರು ಚಾಲಕನ ಅಜಾಗರೂಕತೆ ಮತ್ತು ಅತಿ ವೇಗವೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Ad Widget
Click to comment

Leave a Reply

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ

Published

on

Ad Widget

Ad Widget

Ad Widget

Ad Widget

ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget alt="Ad Widget"/>

Ad Widget

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

Ad Widget

Ad Widget <> Ad Widget

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 18 ಶಾಖೆಗಳನ್ನು ಹೊಂದಿರುವ ಈ ಸಂಘವು ಕುಂಬಾರಿಕೆ ಉದ್ಯಮದ ಉತ್ತೇಜನ ಹಾಗೂ ಗ್ರಾಮೀಣ ಕುಶಲಕರ್ಮಿಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ.

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಸಂಘವು ಕುಂಬಾರಿಕೆ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದೆ. ಇಲ್ಲಿ ಗ್ರಾಮೀಣ ಕುಂಬಾರಿಕೆಯ ಉತ್ಪಾದನೆ ಹಾಗೂ ತರಬೇತಿ ನೀಡಲಾಗುತ್ತಿದ್ದು, ಇಂತಹ ಸೌಲಭ್ಯ ಹೊಂದಿರುವ ರಾಜ್ಯದ ಏಕೈಕ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Ad Widget

Ad Widget

ಸಂಘದ ಅಧ್ಯಕ್ಷ ಭಾಸ್ಕರ್ ಪೆರುವಾಯಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜನಾರ್ದನ ಮೂಲ್ಯ ಅವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Ad Widget
Continue Reading

ಬಿಗ್ ನ್ಯೂಸ್

Adarsha-25ನೇ ವರ್ಷದ ಸಂಭ್ರಮಕ್ಕೆ ಮತ್ತೊಂದು ಗರಿ: ಸವಣೂರಿನ ಆದರ್ಶ ಸಹಕಾರ ಸಂಘಕ್ಕೆ ರಾಜ್ಯ ಸಹಕಾರ ಸಪ್ತಾಹದಲ್ಲಿ ಪ್ರಶಸ್ತಿ ಗೌರವ

Published

on

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸಹಕಾರ ಸಂಘಗಳಲ್ಲಿ ಒಂದಾಗಿರುವ ಸವಣೂರಿನ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸಹಕಾರ ಸಂಘಗಳಲ್ಲಿ ಒಂದಾಗಿರುವ ಸವಣೂರಿನ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget alt="Ad Widget"/>

Ad Widget

ರಾಜ್ಯ ಸಹಕಾರ ಸಪ್ತಾಹದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನೀಡಲಾಗುವ ಈ ಪ್ರಶಸ್ತಿಗೆ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು ಪ್ರಥಮ ಸ್ಥಾನ ಪಡೆದು ಆಯ್ಕೆಯಾಗಿದೆ.

Ad Widget

Ad Widget <> Ad Widget

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನ.20ರಂದು ನಡೆಯಲಿರುವ ರಾಜ್ಯ ಮಟ್ಟದ 73ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಪ್ರಸ್ತುತ ಸವಣೂರಿನಲ್ಲಿ ಸ್ವಂತ ನಿವೇಶನ ಹಾಗೂ ಕಟ್ಟಡದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವದ ಸಂಭ್ರಮದಲ್ಲಿದೆ. ಈ ವಿಶೇಷ ಸಂದರ್ಭದಲ್ಲಿ ಸಂಘಕ್ಕೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಂಘದ ಅಧ್ಯಕ್ಷರಾದ ‘ಸಹಕಾರ ರತ್ನ’ ಸವಣೂರು ಸೀತಾರಾಮ ರೈ ಕೆ. ತಿಳಿಸಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!