ಶಿಕ್ಷಣ
Ambika-ಶ್ರೀ ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಅಂಬಿಕಾ ಸಂಸ್ಥೆಗಳಿಗೆ ಭೇಟಿ; ರಜತ ಮಹೋತ್ಸವ ಸಮಾರೋಪ ಹಾಗೂ ನೂತನ ಆಪ್ ಲೋಕಾರ್ಪಣೆ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಇದೀಗ ಇಇಪ್ಪತ್ತೈದು ವರ್ಷಗಳು ತುಂಬಿವೆ. ಎರಡೂವರೆ ದಶಕಗಳ ಹಿಂದೆ ‘ಅಂಬಿಕಾ ವಿದ್ಯಾಲಯ’ ಎಂಬ ಅಭಿದಾನದೊಂದಿಗೆ ಕೋಚಿಂಗ್ ಸೆಂಟರ್ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಅಡಿಯಿರಿಸಿದ್ದ ‘ಅಂಬಿಕಾ’ ಇದೀಗ ತನ್ನ ಸಾರ್ಥಕ ಇಪ್ಪತ್ತೈದು ವರ್ಷಗಳ ಶಿಕ್ಷಣ ಯಾನವನ್ನು ಪೂರೈಸಿದೆ.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಇದೀಗ ಇಇಪ್ಪತ್ತೈದು ವರ್ಷಗಳು ತುಂಬಿವೆ. ಎರಡೂವರೆ ದಶಕಗಳ ಹಿಂದೆ ‘ಅಂಬಿಕಾ ವಿದ್ಯಾಲಯ’ ಎಂಬ ಅಭಿದಾನದೊಂದಿಗೆ ಕೋಚಿಂಗ್ ಸೆಂಟರ್ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಅಡಿಯಿರಿಸಿದ್ದ ‘ಅಂಬಿಕಾ’ ಇದೀಗ ತನ್ನ ಸಾರ್ಥಕ ಇಪ್ಪತ್ತೈದು ವರ್ಷಗಳ ಶಿಕ್ಷಣ ಯಾನವನ್ನು ಪೂರೈಸಿದೆ.

ಪುತ್ತೂರು ಹಾಗೂ ಹತ್ತೂರಿಗರ ವಿಶ್ವಾಸಕ್ಕೆ ಪಾತ್ರವಾಗಿ ಹಲವು ಮೊದಲುಗಳಿಗೆ ಭಾಷ್ಯ ಬರೆದಿದೆ. ಉಚಿತ ಶಿಕ್ಷಣದ ಕಲ್ಪನೆ, ವಾರ್ಷಕವಾಗಿ ಒಂದು ಕೋಟಿಗೂ ಮೀರಿದ ವಿದ್ಯಾರ್ಥಿವೇತನ, ಧರ್ಮ ಶಿಕ್ಷಣ, ದೇಶಭಕ್ತಿ ಆಧಾರದಲ್ಲಿ ವ್ಯಕ್ತಿತ್ವ ನಿರ್ಮಾಣ, ಸರ್ಕಾರಿ ಶಾಲೆಗಳಲ್ಲಿ ಓದಿ ಅತ್ಯುತ್ತಮ ಅಂಕ ಗಳಿಸಿರುವ ಹತ್ತು ಮಂದಿ ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಅತ್ಯುತ್ಕೃಷ್ಟ ಫಲಿತಾಂಶಗಳು… ಹೀಗೆ ಹತ್ತು ಹಲವು ವಿಚಾರಗಳಲ್ಲಿ ಅಂಬಿಕಾ ಮೊದಲಿಗವೆನಿಸಿದೆ.

ದಕ್ಷಿಣ ಭಾರತದ ಮೊದಲ ಅಮರ್ ಜವಾನ್ ಜ್ಯೋತಿ ಸ್ಥಾಪನೆ, ಮಂಗಲ್ ಪಾಂಡೆ ಚೌಕ ನಿರ್ಮಾಣವೇ ಮೊದಲಾದ ರಾಷ್ಟç ಸಮರ್ಪಿತ ಕಾರ್ಯವನ್ನು ಅಂಬಿಕಾ ನೆರವೇರಿಸಿ ದಾಖಲೆ ಬರೆದಿದೆ. ಕಾರ್ಗಿಲ್ ಯುದ್ಧದಲ್ಲಿ ಭಾಗಿಗಳಾಗಿ ಭಾರತೀಯ ಮಿಲಿಟರಿ ಒದಗಿಸಿಕೊಡುವ ಅತ್ಯುನ್ನತ ಪುರಸ್ಕಾರ ಪರಮವೀರ ಚಕ್ರ ಪ್ರಶಸ್ತಿಯನ್ನು ಜೀವಿತವಾಗಿಯೇ ಪಡೆದ ಇಬ್ಬರು ಮಹಾಯೋಧರಾದ ಕ್ಯಾಪ್ಟನ್ ಯೋಗೇಂದ್ರ ಸಿಂಗ್ ಯಾದವ್ ಹಾಗೂ ಕ್ಯಾಪ್ಟನ್ ಸಂಜಯ್ ಕುಮಾರ್ ಈರ್ವರನ್ನೂ ಪುತ್ತೂರಿಗೆ ಕರೆಸಿದ, ಸಾರ್ವಜನಿಕವಾಗಿ ಅಭಿನಂದಿಸಿ ಸನ್ಮಾನಿಸಿದ ಕೀರ್ತಿಯೂ ಅಂಬಿಕಾಕ್ಕೆ ಸಲ್ಲುತ್ತದೆ. ಭಾರತೀಯ ಸೈನ್ಯದಲ್ಲಿ ಕಾರ್ಯನಿರ್ವಹಿಸಿದ ವೀರ ಸೈನಿಕರ ಮಕ್ಕಳಿಗೆ ವಿಶೇಷ ಶುಲ್ಕ ರಿಯಾಯಿತಿ, ಭಯೋತ್ಪಾದನೆಯ ಬಲಿಪಶುಗಳಾದ ಕಾಶ್ಮೀರ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣ, ಪೆಹಲ್ಗಾಂ ದಾಳಿಯಿಂದ ಜೀವ ಕಳೆದುಕೊಂಡವರ ಮಕ್ಕಳಿಗೆ ಉಚಿತ ಶಿಕ್ಷಣ ಹೀಗೆ ನೊಂದವರ ಬದುಕಿನಲ್ಲಿ ಭರವಸೆಯ ಬೆಳಕನ್ನು ಮೂಡಿಸವ ಧನ್ಯತಾ ಕಾರ್ಯವನ್ನು ಅಂಬಿಕಾ ನಡೆಸಿಕೊಡುತ್ತಿದೆ.
ಧಾರ್ಮಿಕ ಚಿಂತನೆ, ಶೈಕ್ಷಣಿಕ ಸಾಧನೆ ಮತ್ತು ರಾಷ್ಟçಭಕ್ತಿ ಉದ್ದೀಪನಗೊಳಿಸುವ ಸಮಗ್ರ ಶಿಕ್ಷಣವನ್ನು ಜಾರಿಗೊಳಿಸಿರುವ ಅಂಬಿಕಾ ಶಿಕ್ಷಣ ಸಂಸ್ಥೆಗಳು ಇದೀಗ ಇಪ್ಪತ್ತೈದು ವರ್ಷಗಳನ್ನು ಪೂರೈಸಿದ ಸಂಭ್ರಮದಲ್ಲಿವೆ.
ಆ ಪ್ರಯುಕ್ತ ವರ್ಷಪೂರ್ತಿ ನಾನಾ ಬಗೆಯ ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪದ್ಮಭೂಷಣ ಡಾ.ಉನ್ನಿಕೃಷ್ಣನ್ ಹಾಗೂ ಅವರ ಪುತ್ರಿ ಉತ್ತರಾ ಉನ್ನಿಕೃಷ್ಣನ್ ಅವರಿಂದ ಸಂಗೀತ ಕಾರ್ಯಕ್ರಮ, ಪರಮವೀರಚಕ್ರ ಭೂಷಿತ ಕ್ಯಾಪ್ಟನ್ ಸಂಜಯ್ ಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಹೀಗೆ ಹತ್ತು ಹಲವು ದಾಖಲಾರ್ಹ ಕಾರ್ಯಕ್ರಮಗಳು ಜರಗಿವೆ. ಈ ಎಲ್ಲಾ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಮೇ 7ರಂದು ಬಪ್ಪಳಿಗೆಯ ಅಂಬಿಕಾ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿದೆ.

ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಭೇಟಿ:
ಶೃಂಗೇರಿ ಕ್ಷೇತ್ರಕ್ಕೂ ಅಂಬಿಕಾ ವಿದ್ಯಾಸಂಸ್ಥೆಗಳಿಗೂ ಅವಿನಾಭಾವ ಸಂಬಂಧ. ಶೃಂಗೇರಿ ಉಭಯ ಜಗದ್ಗುರುಗಳ ಕೃಪಾಶೀರ್ವಾದ ಅಂಬಿಕಾ ಸಂಸ್ಥೆಗಳ ಬೆಳವಣಿಗೆಯ ಹಿಂದಿರುವ ಮಹಾನ್ ಶಕ್ತಿ. ಅಂಬಿಕಾ ವಿದ್ಯಾಲಯದ ನಾಮಫಲಕವನ್ನು ಜಗದ್ಗುರುಗಳಾದ ಶ್ರೀ ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರು 2014ರಲ್ಲಿ ಅನಾವರಣಗೊಳಿಸಿ ಹರಸಿದ್ದರು. ತದನಂತರ ೨೦೧೬ರಲ್ಲಿ ಮಹಾಸನ್ನಿಧಾನಂಗಳವರು ತಮ್ಮ ಉತ್ತರಾಧಿಕಾರಿ ಶಿಷ್ಯರಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಜತೆಗೂಡಿ ಬಪ್ಪಳಿಗೆಗೆ ಆಗಮಿಸಿ ವಸತಿಯುತ ಅಂಬಿಕಾ ಪದವಿಪೂರ್ವ ವಿದ್ಯಾಲಯವನ್ನು ಲೋಕಾರ್ಪಣೆಗೊಳಿಸಿದ್ದರು. ಇದಲ್ಲದೆ 2021ರಲ್ಲಿ ಅಂಬಿಕಾ ವಿದ್ಯಾಲಯಕ್ಕೆ ಸಿಬಿಎಸ್‌ಇ ಮಾನ್ಯತೆ ದೊರಕಿದಾಗ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಶೃಂಗೇರಿಯಲ್ಲಿ ‘ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ’ ಎಂಬ ನಾಮಫಲಕವನ್ನು ಅನಾವರಣಗೊಳಿಸುವ ಮೂಲಕ ಪುತ್ತೂರಿನ ಮೊತ್ತಮೊದಲ ಸಿಬಿಎಸ್‌ಇ ಸಂಸ್ಥೆ ಲೋಕಾರ್ಪಣೆಗೊಂಡಿತು.
ತನ್ಮಧ್ಯೆ 2019ರಲ್ಲಿ ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಅಂಬಿಕಾ ಮಹಾವಿದ್ಯಾಲಯವನ್ನು ಬಪ್ಪಳಿಗೆಯಲ್ಲಿ ಲೋಕಕ್ಕೆ ಸಮರ್ಪಿಸಿದ್ದರು. 2024ರಲ್ಲಿ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆ ತನ್ನ ದಶಮಾನೋತ್ಸವ ಕಾರ್ಯಕ್ರಮ ಆಚರಿಸಿದಾಗ ಸಮಾರೋಪ ಸಮಾರಂಭಕ್ಕೆ ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಆಗಮಿಸಿ ಆಶೀರ್ವಚನ ನೀಡಿದ್ದರು. ಹೀಗೆ ಶೃಂಗೇರಿ ಜಗದ್ಗುರುಗಳ ಪ್ರೇರಣೆ, ಆಶೀರ್ವಾದ, ಮಾರ್ಗದರ್ಶನದ ನೆಲೆಯಲ್ಲಿಯೇ ಅಂಬಿಕಾ ಸಂಸ್ಥೆಗಳು ಬೆಳೆದುಬರುತ್ತಿವೆ. ಇದೀಗ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ರಜತ ಮಹೋತ್ಸವದ ಸಮಾರೋಪಕ್ಕೆ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಆಗಮಿಸುತ್ತಿರುವುದು ಸುಕೃತಪುಣ್ಯದಂತೆನಿಸಿದೆ. ಮೇ 7ರಂದು ಶ್ರೀ ಶಂಕರ ಸಭಾಭವನದ ಶ್ರೀ ಲಲಿತಾಂಬಿಕಾ ವೇದಿಕೆಯಲ್ಲಿ ಸಮಾರಂಭ ನಡೆಯಲಿದ್ದು ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಆಶೀರ್ವಚನ ನೀಡಲಿದ್ದಾರೆ.
ಮೇ 6ರಂದು ಶ್ರೀ ಗುರುಗಳ ಆಗಮನ, ಶ್ರೀ ಚಂದ್ರಮೌಳೀಶ್ವರ ಪೂಜೆ:
6.5.2026ರಂದು ಸಂಜೆ ಶ್ರೀ ಗುರುಗಳು ಆಗಮಿಸಲಿದ್ದು, ಅಂಬಿಕಾ ಪರಿವಾರದ ವತಿಯಿಂದ ಪೂರ್ಣಕುಂಭ ಸ್ವಾಗತ, ಧೂಳೀ ಪಾದಪೂಜೆ ನಡೆಯಲಿದೆ. ತದನಂತರ ರಾತ್ರಿ ಸುಮಾರು 8ಗಂಟೆಯಿಂದ ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರಿಂದ ಶ್ರೀ ಶಂಕರ ಸಭಾಭವನದಲ್ಲಿ ಶ್ರೀ ಚಂದ್ರಮೌಳೀಶ್ವರ ಪೂಜೆ ನಡೆಯಲಿದೆ.

ಮೇ 7 : ಮೇ 7ರಂದು ಬೆಳಗ್ಗೆ 9 ಗಂಟೆಗೆ ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಅಂಬಿಕಾ ಸಂಸ್ಥೆಗಳ ರಜತ ಮಹೋತ್ಸವ ಸಮಾರೋಪಕ್ಕೆ ಸಾನ್ನಿಧ್ಯ ಒದಗಿಸಿಕೊಡಲಿದ್ದಾರೆ. ಈ ಸಂದರ್ಭದಲ್ಲಿ ಅಂಬಿಕಾ ಶಿಕ್ಷಣ ಸಂಸ್ಥೆಗಳ ವತಿಯಿಂದ ಗುರುವಂದನೆ ನಡೆಯಲಿದೆ. ನಂತರ ಜಗದ್ಗುರುಗಳಿಂದ ಆಶೀರ್ವಚನ ನಡೆಯಲಿದೆ.
ನೂತನ ಆಪ್ ಅನಾವರಣ:
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ರಜತ ಮಹೋತ್ಸವದ ಸವಿನೆನಪಿಗಾಗಿ ವಿನೂತನ ಮೊಬೈಲ್ ಆಪ್ ಒಂದನ್ನು ಸಮಾಜಕ್ಕೆ ಸಮರ್ಪಿಸಲಾಗುತ್ತಿದೆ. ಮಹಾನಗರಗಳಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಓಲಾ, ಉಬರ್ ಮೊದಲಾದ ಬಾಡಿಗೆ ವಾಹನ ಸಂಬಂಧಿ ವ್ಯವಸ್ಥೆಯ ಮಾದರಿಯಲ್ಲಿ ಪುತ್ತೂರಿನ ಜನರಿಗೆ ಬಾಡಿಗೆ ಅಟೋ ರಿಕ್ಷಾಗಳನ್ನು ನಿಗದಿಪಡಿಸುವುದಕ್ಕೆ ಅನುವು ಮಾಡಿಕೊಡುವಂತಹ ಆಪ್ ಅನ್ನು ಅಂಬಿಕಾದ ವತಿಯಿಂದ ರೂಪಿಸಲಾಗಿದೆ. ‘ಹಿಂದೂ ಸಂಪರ್ಕ ಸಾರಿಗೆ’ ಎಂಬ ಹೆಸರಿನಲ್ಲಿ ಈ ಆಪ್ ಅನ್ನು ರೂಪಿಸಲಾಗಿದ್ದು, ಪುತ್ತೂರಿಗರಿಗೆ ಅಟೋ ರಿಕ್ಷಾಗಳನ್ನು ಬಾಡಿಗೆಗೆ ಪಡೆಯುವುದಕ್ಕೆ ಇದು ಅವಕಾಶ ಮಾಡಿಕೊಡಲಿದೆ. ಶೃಂಗೇರಿ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತಿ ಸನ್ನಿಧಾನಂಗಳವರು ಈ ಆಪ್ ಅನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಈ ಆಪ್ ಮಹಾನಗರಗಳಲ್ಲಿ ಬಳಕೆಯಲ್ಲಿರುವ ವಾಹನ ಸಂಬಂಧಿ ಆಪ್‌ಗಳಂತೆ ಲಾಭಾಪೇಕ್ಷೆ ಅಥವ ಉದ್ಯಮದೃಷ್ಟಿ ಹೊಂದಿರದೆ ಕೇವಲ ಸೇವಾದೃಷ್ಟಿಯೊಂದಿಗೆ ಅಂಬಿಕಾದ ವತಿಯಿಂದ ರೂಪಿಸಲ್ಪಟ್ಟು ಸಮಾಜಕ್ಕೆ ಸಮರ್ಪಣೆಗೊಳ್ಳುತ್ತಿದೆ. ಈ ಆಪ್ ನಿಂದ ಯಾವುದೇ ಆರ್ಥಿಕ ಲಾಭವನ್ನು ಅಂಬಿಕಾ ಪಡೆದುಕೊಳ್ಳುವುದಿಲ್ಲ ಎಂಬುದು ಗಮನಾರ್ಹ. ಆಟೋ ಚಾಲಕರು ಹಾಗೂ ಪ್ರಯಾಣಿಕರು ಈ ಆಪ್ ಅನ್ನು ಡೌನ್‌ಲೋಡ್ ಮಾಡುವ ಮುಖಾಂತರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.
ಸಮಾಜಸೇವೆ: ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಬೆಳ್ಳಿಹಬ್ಬದ ಪ್ರಯುಕ್ತ ಸಮಾಜಮುಖಿ ಚಿಂತನೆಯನ್ನು ಅಂಬಿಕಾ ಜಾರಿಗೊಳಿಸಿದೆ. ಬಪ್ಪಳಿಗೆಯಲ್ಲಿನ ಮಾರಿಯಮ್ಮ ಗುಡಿಗೆ ಅಂಬಿಕಾದ ವತಿಯಿಂದ ಮೂರು ಲಕ್ಷ ರೂಪಾಯಿ ವೆಚ್ಚದಲ್ಲಿ ಶೀಟ್ ಅಳವಡಿಕೆ ಮಾಡಿಕೊಡಲಾಗಿದೆ.
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್‌ನ ಸಹಜ ಸಮಾಧಿ ಧ್ಯಾನ ಶಿಬಿರ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಅಷ್ಟಾಂಗ ಯೋಗದ ಪ್ರಕಾರ ಧ್ಯಾನದ ಅತ್ಯಂತ ಆಳವಾದ ಸ್ಥಿತಿಯಾದ ಸಮಾಧಿ ಸ್ಥಿತಿಯನ್ನು ಅನಾಯಾಸವಾಗಿ ಸರಳವಾಗಿ ನಿತ್ಯವೂ ಅನುಭವಿಸಲು ಸಹಕಾರಿಯಾದ ಈ ಯೋಗ ಶಿಬಿರವನ್ನು ಆರ್ಟ್ ಆಫ್ ಲಿವಿಂಗ್‌ನ ಅಂತರಾಷ್ಟ್ರೀಯ ಶಿಕ್ಷಕ ಯಾದವ ಜೀ ನಡೆಸಿಕೊಟ್ಟರು. ಶಿಬಿರದಲ್ಲಿ ೮೮ ಮಂದಿ ಭಾಗವಹಿಸಿ ಧ್ಯಾನ ಮಾಡುವ ಕ್ರಮವನ್ನು ಕಲಿತುಕೊಂಡರು.
ಸಹಾಯಕ ಶಿಕ್ಷಕರಾಗಿ ಮಂಗಳೂರಿನ ರಜನಿ ರೈ ಸಹಕರಿಸಿದರು. ಸಹಜ ಸಮಾಧಿ ಧ್ಯಾನವನ್ನು ಕಲಿಸುವುದಕ್ಕಾಗಿ ತರಬೇತಿಯನ್ನು ಪಡೆಯುತ್ತಿರುವ ಶರಾವತಿ ರವಿ ನಾರಾಯಣ, ಆರ್ಟ್ ಆಫ್ ಲಿವಿಂಗ್ ಪುತ್ತೂರಿನ ಮುಖ್ಯಸ್ಥರಾದ ಕುಮಾರ ಸುಬ್ರಹ್ಮಣ್ಯ ಭಟ್, ಸತ್ಯವತಿ ಕೆ ಎಸ್, ಸುಧಾ ಹೆಬ್ಬಾರ್, ಭಾರತಿ ಜಯರಾಮ್ ಹಾಗೂ ಸಂಸ್ಥೆಯ ಎಲ್ಲಾ ಸ್ವಯಂಸೇವಕರು ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದರು.
ಸಮಾರೋಪ ಸಮಾರಂಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಭಾಗವಹಿಸಿ, ಪ್ರೇರಣೆ ನೀಡಿದರು.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲಾದ ಒಂದು ವಾರದ ಕನ್ನಡ ಕಾರ್ಯಕ್ರಮಗಳ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೃಷಿಕ ಹಾಗೂ ಅಂಕಣಕಾರ ಮಹೇಶ್ ಪುಚ್ಚಪ್ಪಾಡಿ ಮಾತಾಡಿದರು.
ಪುತ್ತೂರು: ಇಂದಿನ ಕಾಲಘಟ್ಟದಲ್ಲಿ ಇಂಗ್ಲಿಷ್ ಭಾಷೆಯ ಅನಿವಾರ್ಯತೆ ಹೆಚ್ಚಾಗುತ್ತಿದೆ. ಇಂಗ್ಲಿಷ್ ಕೌಶಲ ಎಷ್ಟಿದ್ದರೂ ಕಡಿಮೆಯೇ ಎನ್ನುವ ಸ್ಪರ್ಧಾತ್ಮಕ ಜಗತ್ತು ನಮ್ಮ ಮುಂದಿರುವ ಇಂತಹ ಸಂದರ್ಭದಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಯೊಂದರಲ್ಲಿ ಕನ್ನಡ ಸಂಘ ಇರುವುದು ಆಶಾದಾಯಕ. ಇದು ಕೇವಲ ಭಾಷಾ ಚಟುವಟಿಕೆಗಳಿಗೆ ಸೀಮಿತವಾಗದೆ ಹೊಸ ಸಾಧ್ಯತೆಗಳ ವೇದಿಕೆಯಾಗಲಿ ಎಂದು ಕೃಷಿಕ ಹಾಗೂ ಅಂಕಣಕಾರ ಮಹೇಶ್ ಪುಚ್ಚಪ್ಪಾಡಿ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲಾದ ಒಂದು ವಾರದ ಕನ್ನಡ ಕಾರ್ಯಕ್ರಮಗಳ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು.

ಕನ್ನಡ ನಮ್ಮ ಬೇರು, ತಂತ್ರಜ್ಞಾನ ನಮ್ಮ ರೆಕ್ಕೆ, ಜಗತ್ತಿನ ಯಾವುದೇ ತಂತ್ರಜ್ಞಾನವನ್ನು ಕಲಿಯಬಹುದು. ಆದರೆ ನಮ್ಮ ಬೇರುಗಳನ್ನು ಮರೆಯಬಾರದು. ಜಾಗತಿಕವಾಗಿ ಬೆಳೆಯಲು ಇಂಗ್ಲಿಷ್ ಬೇಕಾದರೆ ನಮ್ಮ ನೆಲದೊಂದಿಗೆ ಬೆಸೆಯಲು ಕನ್ನಡ ಬೇಕು ಎಂದರು. ಕೈಯಲ್ಲಿ ಮೊಬೈಲಿದೆ, ತಲೆಯಲ್ಲಿ ತಂತ್ರಜ್ಞಾನವಿದೆ, ಮುಂದೆ ವಿಶಾಲ ಜಗತ್ತಿದೆ ಈ ಮೂರರ ನಡುವೆ ಕನ್ನಡವನ್ನು ಕಳೆದುಕೊಳ್ಳಬೇಡಿ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಮನೋಜ್ ಕುಮಾರ್ ಮಾತನಾಡಿ ಪ್ರತಿಯೊಬ್ಬನಿಗೂ ಮಾತೃ ಭಾಷೆಯ ಮೇಲೆ ಅಪಾರ ಅಭಿಮಾನವಿರಬೇಕು. ನಾವು ಎಲ್ಲಿ ಹೋದರು, ಎಷ್ಟೇ ದೊಡ್ಡ ಹುದ್ದೆಯನ್ನು ಅಲಂಕರಿಸಿದರೂ ನಮ್ಮತನವನ್ನು ಎಂದಿಗೂ ಕಳೆದುಕೊಳ್ಳಬಾರದು ಎಂದರು. ದೇಶ-ಭಾಷೆ, ನಾಡು-ನುಡಿ, ನೆಲ-ಜಲದ ವಿಷಯದಲ್ಲಿ ಎಲ್ಲರೂ ಒಂದಾಗಿ ಅದರ ಸಾರ್ವಭೌಮತೆಯನ್ನು ಎತ್ತಿಹಿಡಿಯಬೇಕು ಎಂದು ಹೇಳಿದರು.
ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ನಡೆಸಲಾದ ವಾಗ್-ವೈಖರಿ, ಸಮ್‌ವಾದ, ಜಸ್ಟ್ಮಾತು, ಮೇಧಮಂಥನ, ಪಿಕ್ಸೆಲ್‌ಪುಟ, ಭಾವಕುಂಚ ಮತ್ತು ಅನ್ವೇಷಣಾ ಹೀಗೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಲಹರಿ ಕನ್ನಡ ಸಂಘದ ಸಂಯೋಜಕ ಪ್ರೊ.ನವೀನ್.ಸಿ ಮತ್ತು ವಿದ್ಯಾರ್ಥಿ ಸಂಯೋಜಕ ಆದಿತ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕನ್ನಡ ಗೀತೆಗಳ ಗಾಯನದಿಂದ ಕಾರ್ಯಕ್ರಮ ಪ್ರಾರಂಭವಾಯಿತು. ಪ್ರೊ.ನವೀನ್.ಸಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಆದಿತ್ಯ ವಂದಿಸಿದರು. ಅನಿತಾ ಕಾರ್ಯಕ್ರಮ ನಿರ್ವಹಿಸಿದರು.
ಶಿಕ್ಷಣ
Sahyadri-ಸಹ್ಯಾದ್ರಿಯಲ್ಲಿ ವಿಟಿಯು ಕನ್ಸೋರ್ಟಿಯಂ ಇ-ಸಂಪನ್ಮೂಲಗಳ ಪ್ರಾದೇಶಿಕ ತರಬೇತಿ ಕಾರ್ಯಕ್ರಮ
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್‌ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್‌ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.

ವಿಟಿಯು ಕನ್ಸೋರ್ಟಿಯಂ ಮೂಲಕ ಲಭ್ಯವಿರುವ ಡಿಜಿಟಲ್ ಶೈಕ್ಷಣಿಕ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯನ್ನು ಉತ್ತೇಜಿಸಲು ಮತ್ತು ಜಾಗೃತಿಯನ್ನು ಹೆಚ್ಚಿಸಲು ಕರ್ನಾಟಕದಾದ್ಯಂತ ಎಂಜಿನಿಯರಿಂಗ್ ಸಂಸ್ಥೆಗಳ ಗ್ರಂಥಪಾಲಕರು, ಅಧ್ಯಾಪಕರು ಮತ್ತು ಶೈಕ್ಷಣಿಕ ವೃತ್ತಿಪರರನ್ನು ಪ್ರಾದೇಶಿಕ ಮಟ್ಟದ ಕಾರ್ಯಕ್ರಮವು ಒಟ್ಟುಗೂಡಿಸಿತು.
ಉದ್ಘಾಟನಾ ಸಮಾರಂಭವು ಪ್ರಥಮ ವರ್ಷದ ವಿದ್ಯಾರ್ಥಿನಿಯರಾದ ಕುಮಾರಿ ಪೂರ್ವಿ ಶೆಟ್ಟಿ ಪಿ. ಜಿ. ಮತ್ತು ಕುಮಾರಿ ಗೌತಮಿ ಆರ್. ಅವರು ನಡೆಸಿಕೊಟ್ಟ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಪ್ರಾಂಶುಪಾಲರಾದ ಡಾ. ಎಸ್. ಎಸ್. ಇಂಜಗನೇರಿ ಅವರು ಸ್ವಾಗತ ಭಾಷಣ ಮಾಡಿದರು.
ನಂತರ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್‌ಸಿಇಎಂ (SCEM) ನ ಸಹಾಯಕ ಗ್ರಂಥಪಾಲಕರಾದ ಡಾ. ಶ್ವೇತಾ ಕುಮಾರಿ ಕೆ. ಅವರು ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಮಂಗಳೂರಿನ ವಿಟಿಯು (VTU) ವಿಸ್ತರಣಾ ಕೇಂದ್ರದ ವಿಶೇಷ ಅಧಿಕಾರಿ ಡಾ. ದಾಮೋದರ ನಾರಲ್ ಅವರು ಕಾರ್ಯಕ್ರಮದ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.
ಎಸ್‌ಸಿಇಎಂನ ಸಹ ಪ್ರಾಧ್ಯಾಪಕರಾದ ಡಾ. ಚಂದನಾ ಬಿ. ಆರ್. ಅವರು ಮುಖ್ಯ ಅತಿಥಿಗಳಾದ ಎನ್‌ಐಟಿಕೆ (NITK) ಸುರತ್ಕಲ್‌ನ ಗ್ರಂಥಪಾಲಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರನ್ನು ಪರಿಚಯಿಸಿದರು; ಬಳಿಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಿದರು. ಎಸ್‌ಸಿಇಎಂನ ಆಡಳಿತಾಧಿಕಾರಿ ಹಾಗೂ ಟ್ರಸ್ಟಿ ಶ್ರೀ ಕೃಷ್ಣ ಹೆಗಡೆ ಅವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಗ್ರಂಥಪಾಲಕರು ಹಾಗೂ ಕಾರ್ಯಕ್ರಮ ಸಂಯೋಜಕರಾದ ಡಾ. ಭಾರತಿ ಕೆ. ಅವರು ವಂದನಾರ್ಪಣೆ ಸಲ್ಲಿಸಿದರು. ತಾಂತ್ರಿಕ ಅವಧಿಗಳಲ್ಲಿ IEEE, PAT ಟೆಕ್ನಾಲಜಿ, GATEtutor, ProQuest, Elsevier ScienceDirect, Taylor & Francis, Emerald Publishing, Cambridge University Press, Pearson, DrillBit ಮತ್ತು Quiklrn ಸೇರಿದಂತೆ ಪ್ರಮುಖ ಶೈಕ್ಷಣಿಕ ಪ್ರಕಾಶಕರು ಮತ್ತು ಡಿಜಿಟಲ್ ಸಂಪನ್ಮೂಲ ಪೂರೈಕೆದಾರರ ಪ್ರತಿನಿಧಿಗಳಿಂದ ಪ್ರಸ್ತುತಿಗಳು ಮತ್ತು ಪ್ರದರ್ಶನಗಳು ನಡೆದವು. ಅವಧಿಗಳಲ್ಲಿ ಎಲ್ಸೆವಿಯರ್ ಅವರ ಸ್ಕೋಪಸ್ ಡೇಟಾಬೇಸ್ ಕುರಿತು ಪ್ರಸ್ತುತಿ ಮತ್ತು MAP ಸಿಸ್ಟಮ್ಸ್ ಅವರ MAP My Access System ನ ಅವಲೋಕನವೂ ಸೇರಿತ್ತು.

ಸಂಪನ್ಮೂಲ ವ್ಯಕ್ತಿಗಳು ವಿದ್ವತ್ಪೂರ್ಣ ಜರ್ನಲ್‌ಗಳು, ಇ-ಪುಸ್ತಕಗಳು, ಸಂಶೋಧನಾ ಡೇಟಾಬೇಸ್‌ಗಳು, ಪರೀಕ್ಷಾ ತಯಾರಿ ಸಂಪನ್ಮೂಲಗಳು, ಕೃತಿಚೌರ್ಯ ಪತ್ತೆ ಪರಿಕರಗಳು ಮತ್ತು ಡಿಜಿಟಲ್ ಕಲಿಕಾ ವೇದಿಕೆಗಳನ್ನು ಪ್ರವೇಶಿಸುವ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ಒದಗಿಸಿದರು. ಬೋಧನೆ, ಕಲಿಕೆ ಮತ್ತು ಸಂಶೋಧನೆಯಲ್ಲಿ ಈ ಸಂಪನ್ಮೂಲಗಳ ವೈಶಿಷ್ಟ್ಯಗಳು, ಹುಡುಕಾಟ ಸೌಲಭ್ಯಗಳು ಮತ್ತು ಪ್ರಾಯೋಗಿಕ ಅನ್ವಯಿಕೆಗಳನ್ನು ಅರ್ಥಮಾಡಿಕೊಳ್ಳಲು ಭಾಗವಹಿಸುವವರಿಗೆ ಸಂವಾದಾತ್ಮಕ ಅವಧಿಗಳು ಸಹಾಯ ಮಾಡಿದವು.
ಈ ಕಾರ್ಯಕ್ರಮದಲ್ಲಿ ವಿವಿಧ ಎಂಜಿನಿಯರಿಂಗ್ ಸಂಸ್ಥೆಗಳನ್ನು ಪ್ರತಿನಿಧಿಸುವ ಗ್ರಂಥಪಾಲಕರು ಮತ್ತು ಅಧ್ಯಾಪಕರು ಉತ್ಸಾಹದಿಂದ ಭಾಗವಹಿಸಿದ್ದರು. ಇದು ಜ್ಞಾನ ಹಂಚಿಕೆ, ವೃತ್ತಿಪರ ಸಂವಹನ ಮತ್ತು ಡಿಜಿಟಲ್ ಸಂಪನ್ಮೂಲಗಳೊಂದಿಗೆ ಶೈಕ್ಷಣಿಕ ಸಮುದಾಯದ ತೊಡಗಿಸಿಕೊಳ್ಳುವಿಕೆಯನ್ನು ಬಲಪಡಿಸಲು ಪರಿಣಾಮಕಾರಿ ವೇದಿಕೆಯಾಗಿ ಕಾರ್ಯನಿರ್ವಹಿಸಿತು.
ಈ ವಿಟಿಯು ಒಕ್ಕೂಟದ ಪ್ರಾದೇಶಿಕ ತರಬೇತಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ, ಸಹ್ಯಾದ್ರಿ ಕಾಲೇಜು ಡಿಜಿಟಲ್ ಸಾಕ್ಷರತೆಯನ್ನು ಉತ್ತೇಜಿಸುವುದು, ಸಂಶೋಧನಾ ಸಾಮರ್ಥ್ಯಗಳನ್ನು ಬಲಪಡಿಸುವುದು ಮತ್ತು ಶೈಕ್ಷಣಿಕ ಇ-ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ
ಗುಣಮಟ್ಟದ ಉನ್ನತ ಶಿಕ್ಷಣವನ್ನು ಬೆಂಬಲಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿತು.
ಈ ಕಾರ್ಯಕ್ರಮವನ್ನು ಸಹ್ಯಾದ್ರಿ ಕಾಲೇಜಿನ ಕೇಂದ್ರ ಗ್ರಂಥಾಲಯದ ಗ್ರಂಥಪಾಲಕಿ ಡಾ. ಭಾರತಿ ಕೆ. ಸಂಯೋಜಿಸಿದರು.
-
ಸ್ಥಳೀಯ24 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಶಿಕ್ಷಣ17 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು17 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್23 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಬಿಗ್ ನ್ಯೂಸ್19 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು18 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ17 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ16 hours agoVivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ















