Connect with us

ಅಂತರ ರಾಜ್ಯ

Aam Aadmi Party-ಆಮ್ ಆದ್ಮಿ ಪಕ್ಷಕ್ಕೆ ಬಾರೀ ಆಘಾತ: ರಾಘವ್ ಚಡ್ಡಾ ನೇತೃತ್ವದ 7 ಸಂಸದರ ತಂಡ ಬಿಜೆಪಿಗೆ ಸೇರ್ಪಡೆ..!

Published

on



Ad Widget

Ad Widget

Ad Widget

Ad Widget

ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಭಾವಿ ನಾಯಕ ಹಾಗೂ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು ತಮ್ಮ ಸಹೋದ್ಯೋಗಿಗಳೊಂದಿಗೆ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಬೆಳವಣಿಗೆಯು ಎಎಪಿ ಸಂಚಾಲಕ ಅರವಿಂದ್ ಕೇಜ್ರವಾಲ್ ಅವರಿಗೆ ಚೇತರಿಸಿಕೊಳ್ಳಲಾಗದ ದೊಡ್ಡ ಹೊಡೆತ ನೀಡಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಭಾವಿ ನಾಯಕ ಹಾಗೂ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು ತಮ್ಮ ಸಹೋದ್ಯೋಗಿಗಳೊಂದಿಗೆ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಬೆಳವಣಿಗೆಯು ಎಎಪಿ ಸಂಚಾಲಕ ಅರವಿಂದ್ ಕೇಜ್ರವಾಲ್ ಅವರಿಗೆ ಚೇತರಿಸಿಕೊಳ್ಳಲಾಗದ ದೊಡ್ಡ ಹೊಡೆತ ನೀಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಸಂಘಟಿತವಾಗಿ ಬಿಜೆಪಿ ಸೇರಿದ ಸಂಸದರು:
ಇತ್ತೀಚೆಗಷ್ಟೇ ರಾಜ್ಯಸಭೆಯ ಉಪನಾಯಕ ಸ್ಥಾನದಿಂದ ವಜಾಗೊಂಡಿದ್ದ ರಾಘವ್ ಚಡ್ಡಾ ಅವರೊಂದಿಗೆ ಸಂಸದರಾದ ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಶುಕ್ರವಾರ ಅಧಿಕೃತವಾಗಿ ಬಿಜೆಪಿ ಸೇರಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಡ್ಡಾ, “ರಾಜ್ಯಸಭೆಯಲ್ಲಿ ಎಎಪಿಗೆ ಸೇರಿದ ಮೂರನೇ ಎರಡರಷ್ಟು (2/3) ಸಂಸದರು ನಾವು ಒಂದಾಗಿದ್ದೇವೆ. ಸಂವಿಧಾನದ ನಿಬಂಧನೆಗಳ ಅನ್ವಯ ನಾವು ಬಿಜೆಪಿಯೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದ್ದೇವೆ,” ಎಂದು ಘೋಷಿಸಿದರು.

Ad Widget

Ad Widget <> Ad Widget

ಬಾಕಿ ಉಳಿದ ಸಂಸದರೂ ಬಿಜೆಪಿ ಹಾದಿಯಲ್ಲಿ?
ರಾಘವ್ ಚಡ್ಡಾ ಅವರ ಪ್ರಕಾರ, ಕೇವಲ ಮೂವರು ಮಾತ್ರವಲ್ಲದೆ ಹರ್ಭಜನ್ ಸಿಂಗ್, ಸ್ವಾತಿ ಮಲಿವಾಲ್, ರಾಜಿಂದರ್ ಗುಪ್ತಾ ಮತ್ತು ವಿಕ್ರಮ್‌ಜಿತ್ ಸಿಂಗ್ ಸಾಹ್ನಿ ಕೂಡ ಎಎಪಿ ತೊರೆದು ಬಿಜೆಪಿ ಸೇರಲಿದ್ದಾರೆ. “ರಾಜ್ಯಸಭೆಯಲ್ಲಿರುವ ಎಎಪಿಯ 10 ಸಂಸದರಲ್ಲಿ ಬಹುಪಾಲು ಮಂದಿ ಈ ನಿರ್ಧಾರಕ್ಕೆ ಸಹಿ ಹಾಕಿದ್ದು, ಈಗಾಗಲೇ ರಾಜ್ಯಸಭಾ ಅಧ್ಯಕ್ಷರಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಲಾಗಿದೆ,” ಎಂದು ಅವರು ಮಾಹಿತಿ ನೀಡಿದರು.



Ad Widget

ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ:
ತಮ್ಮ ರಾಜೀನಾಮೆಗೆ ಕಾರಣ ತಿಳಿಸಿದ ಚಡ್ಡಾ, “ನನ್ನ ಯೌವನದ 15 ವರ್ಷಗಳನ್ನು ನೀಡಿ, ರಕ್ತ ಮತ್ತು ಬೆವರಿನಿಂದ ಪೋಷಿಸಿದ ಆಮ್ ಆದ್ಮಿ ಪಕ್ಷ ಇಂದು ತನ್ನ ಮೂಲ ತತ್ವ ಮತ್ತು ಮೌಲ್ಯಗಳಿಂದ ವಿಮುಖವಾಗಿದೆ. ದೇಶದ ಹಿತಾಸಕ್ತಿಗಿಂತ ವೈಯಕ್ತಿಕ ಲಾಭಕ್ಕೇ ಇಲ್ಲಿ ಆದ್ಯತೆ ನೀಡಲಾಗುತ್ತಿದೆ. ಕಳೆದ ಕೆಲವು ವರ್ಷಗಳಿಂದ ‘ತಪ್ಪು ಪಕ್ಷದಲ್ಲಿರುವ ಸರಿಯಾದ ವ್ಯಕ್ತಿ’ ನಾನು ಎಂಬ ಅರಿವು ನನಗಾಯಿತು. ಹಾಗಾಗಿ ಇಂದು ಪಕ್ಷದಿಂದ ದೂರ ಸರಿದು ಜನಸಾಮಾನ್ಯರ ಪರವಾಗಿ ಕೆಲಸ ಮಾಡಲು ನಿರ್ಧರಿಸಿದ್ದೇನೆ,” ಎಂದು ಮಾರ್ಮಿಕವಾಗಿ ಹೇಳಿದರು.

Ad Widget

Ad Widget

ಎಎಪಿಗೆ ಬಾರೀ ಹಿನ್ನಡೆ:
ವೃತ್ತಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ರಾಘವ್ ಚಡ್ಡಾ ಹಾಗೂ ಪಕ್ಷದ ಕಾರ್ಯತಂತ್ರ ನಿರೂಪಕ ಸಂದೀಪ್ ಪಾಠಕ್ ಅವರ ನಿರ್ಗಮನವು ಪಂಜಾಬ್ ಮತ್ತು ದೆಹಲಿಯಲ್ಲಿ ಎಎಪಿಯ ಸಂಘಟನೆಯ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ರಾಜ್ಯಸಭೆಯಲ್ಲಿ ಎಎಪಿ ಸಂಖ್ಯಾಬಲ ಕುಸಿಯುವುದು ಮಾತ್ರವಲ್ಲದೆ, ತಾಂತ್ರಿಕವಾಗಿ ಪಕ್ಷದ ವಿಲೀನ ಪ್ರಕ್ರಿಯೆಯು ಕೇಜ್ರವಾಲ್ ಪಡೆಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

Ad Widget

ಅಂತರ ರಾಜ್ಯ

Blackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್..!

Published

on



Ad Widget

Ad Widget

Ad Widget

Ad Widget

ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ, ದೂರು ನೀಡಿದ್ದ ಮಹಿಳೆಯನ್ನೇ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಮುಂಬೈ: ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ, ದೂರು ನೀಡಿದ್ದ ಮಹಿಳೆಯನ್ನೇ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸೆ.24ರಂದು ಮಾನ್ಸಿ ಎಂಬ ಮಹಿಳೆ ತನ್ನ ಮಗುವಿನೊಂದಿಗೆ ಇಬ್ಬರು ಪುರುಷರ ಜತೆ ಬೊರಿವಲಿಯ ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಮೈಸೂರು ಮಸಾಲೆ ದೋಸೆ ಆರ್ಡರ್ ಮಾಡಿದ್ದರು. ದೋಸೆ ತಿನ್ನುವ ಸಂದರ್ಭದಲ್ಲಿ ಅದರೊಳಗೆ ಸತ್ತ ಸಣ್ಣ ಇಲಿ ಪತ್ತೆಯಾಗಿದೆ ಎಂದು ಅವರು ಆರೋಪಿಸಿದ್ದರು.

Ad Widget

Ad Widget <> Ad Widget

ಮಾನ್ಸಿ ಅವರ ಹೇಳಿಕೆಯಂತೆ, ಅವರ ಸಹೋದರ ದೋಸೆಯ ಕೆಲವು ಭಾಗಗಳನ್ನು ಸೇವಿಸಿದ ಬಳಿಕ ಅದರೊಳಗೆ ಸತ್ತ ಇಲಿ ಇರುವುದನ್ನು ಗಮನಿಸಿದ್ದರು. ಇದರಿಂದ ಆಘಾತಗೊಂಡ ಅವರು ವಾಂತಿ ಮಾಡಿಕೊಂಡಿದ್ದರು. ಬಳಿಕ ಮಾನ್ಸಿ ಬೊರಿವಲಿ ಪೊಲೀಸ್ ಠಾಣೆಗೆ ಕರೆ ಮಾಡಿ ಘಟನೆ ಕುರಿತು ದೂರು ನೀಡಿದ್ದರು.



Ad Widget

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಆಹಾರ ಮತ್ತು ಔಷಧ ಆಡಳಿತ (FDA) ಇಲಾಖೆ ಸೆ.28ರಂದು ಹೋಟೆಲ್‌ನ ಪರವಾನಗಿಯನ್ನು ಅಮಾನತುಗೊಳಿಸಿತ್ತು. ಇದರಿಂದ ಹೋಟೆಲ್ ಮುಚ್ಚುವ ಪರಿಸ್ಥಿತಿ ಎದುರಾಗಿತ್ತು.

Ad Widget

Ad Widget

₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್
ವಿಡಿಯೋ ವೈರಲ್ ಆದ ಬಳಿಕ ಹೋಟೆಲ್ ಮಾಲೀಕರಿಗೆ ಬೆದರಿಕೆ ಕರೆಗಳು ಬರಲಾರಂಭಿಸಿದ್ದವು. ವಿಡಿಯೋವನ್ನು ಮತ್ತಷ್ಟು ವೈರಲ್ ಮಾಡುವುದಾಗಿ ಹಾಗೂ ಸಂಬಂಧಿಕರಿಗೆ ಕಳುಹಿಸುವುದಾಗಿ ಬೆದರಿಸಿ ₹25 ಲಕ್ಷ ನೀಡುವಂತೆ ಒತ್ತಾಯಿಸಲಾಗಿತ್ತು ಎನ್ನಲಾಗಿದೆ.

ನಿರಂತರ ಬೆದರಿಕೆ ಮತ್ತು ಮಾನಸಿಕ ಕಿರುಕುಳದಿಂದಾಗಿ ಹೋಟೆಲ್ ಮಾಲೀಕರು ₹6 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದರು. ಅದರಂತೆ ₹1 ಲಕ್ಷವನ್ನು ಮುಂಗಡವಾಗಿ ನಗದು ರೂಪದಲ್ಲಿ ನೀಡಿದ್ದರು.

ಹಣ ಪಡೆಯುವ ವೇಳೆ ರೆಡ್‌ಹ್ಯಾಂಡ್ ಆಗಿ ಬಂಧನ
ಸೆ.29ರಂದು ಹೋಟೆಲ್ ಮಾಲೀಕರು ಬೊರಿವಲಿ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಪೊಲೀಸರು ಬಲೆ ಬೀಸಿ, ಮತ್ತಷ್ಟು ಹಣ ಪಡೆಯಲು ಮಹಿಳೆಯನ್ನು ಕರೆಸಿಕೊಂಡಿದ್ದರು. ಹಣ ಸ್ವೀಕರಿಸುತ್ತಿದ್ದ ವೇಳೆ ಪೊಲೀಸರು ಆಕೆಯನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ತನಿಖೆ ವೇಳೆ ಬಂಧಿತ ಮಹಿಳೆ ಬೇರೆ ಯಾರೂ ಅಲ್ಲ, ದೋಸೆಯಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂದು ದೂರು ನೀಡಿದ್ದ ಮಾನ್ಸಿ ಅಮಿತ್ ಎಂಬುದು ಬೆಳಕಿಗೆ ಬಂದಿದೆ. ಅವರು ಬೊರಿವಲಿಯ ಗೋರೆಗಾಂವ್ ಪ್ರದೇಶದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದು, ಬ್ಲ್ಯಾಕ್‌ಮೇಲ್‌ನಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಅಂತರ ರಾಜ್ಯ

Premananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ

Published

on



Ad Widget

Ad Widget

Ad Widget

Ad Widget

ಪ್ರೇಮಾನಂದ ಮಹಾರಾಜರ ಆಶ್ರಮದಲ್ಲಿ ಶಿಷ್ಯ ರಸಿಕ್ ದುಲಾರಿ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಪ್ರಕರಣದ ತನಿಖೆಯನ್ನು ಮಥುರಾ ಪೊಲೀಸರು ಚುರುಕುಗೊಳಿಸಿದ್ದಾರೆ. ಸೆ.25ರಂದು ನಡೆದ ಈ ಘಟನೆ ಆರಂಭದಲ್ಲಿ ಆತ್ಮಹತ್ಯೆ ಎಂದು ಪೊಲೀಸರು ಪರಿಗಣಿಸಿದ್ದರು. ಆದರೆ, ಸಿಸಿಟಿವಿ ದೃಶ್ಯಗಳು ಹಾಗೂ ತನಿಖೆಯಲ್ಲಿ ಸಿಕ್ಕಿರುವ ಕೆಲವು ಮಾಹಿತಿಗಳಿಂದ ಪ್ರಕರಣವು ಅನೂಹ್ಯ ತಿರುವು ಪಡೆದಿದೆ.

Ad Widget

Ad Widget

Ad Widget

Ad Widget

ಮಥುರಾ: ಪ್ರೇಮಾನಂದ ಮಹಾರಾಜರ ಆಶ್ರಮದಲ್ಲಿ ಶಿಷ್ಯ ರಸಿಕ್ ದುಲಾರಿ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಪ್ರಕರಣದ ತನಿಖೆಯನ್ನು ಮಥುರಾ ಪೊಲೀಸರು ಚುರುಕುಗೊಳಿಸಿದ್ದಾರೆ. ಸೆ.25ರಂದು ನಡೆದ ಈ ಘಟನೆ ಆರಂಭದಲ್ಲಿ ಆತ್ಮಹತ್ಯೆ ಎಂದು ಪೊಲೀಸರು ಪರಿಗಣಿಸಿದ್ದರು. ಆದರೆ, ಸಿಸಿಟಿವಿ ದೃಶ್ಯಗಳು ಹಾಗೂ ತನಿಖೆಯಲ್ಲಿ ಸಿಕ್ಕಿರುವ ಕೆಲವು ಮಾಹಿತಿಗಳಿಂದ ಪ್ರಕರಣವು ಅನೂಹ್ಯ ತಿರುವು ಪಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 85 ಮಂದಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ರಸಿಕ್ ಅವರ ಕುಟುಂಬಸ್ಥರು, ಸ್ನೇಹಿತರು ಹಾಗೂ ಹಳೆಯ ಪರಿಚಯಸ್ಥರಿಂದಲೂ ಮಾಹಿತಿ ಪಡೆಯಲಾಗುತ್ತಿದೆ. ಆಶ್ರಮಕ್ಕೆ ಸೇರುವ ಮುನ್ನ ಅವರ ಜೀವನ ಹೇಗಿತ್ತು, ಬಳಿಕ ಅವರ ನಡೆ-ನುಡಿಯಲ್ಲಿ ಯಾವುದೇ ಬದಲಾವಣೆಯಾಗಿತ್ತೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Ad Widget

Ad Widget <> Ad Widget

ಆಶ್ರಮಕ್ಕೆ ಸೇರುವವರ ವೈಯಕ್ತಿಕ ಮೊಬೈಲ್‌ಗಳನ್ನು ಪಡೆದುಕೊಂಡು, ಬದಲಿಗೆ ಆಶ್ರಮದ ವ್ಯವಸ್ಥೆಯಲ್ಲಿರುವ ಮೊಬೈಲ್ ಮತ್ತು ಸಿಮ್ ನೀಡಲಾಗುತ್ತಿತ್ತು ಎನ್ನಲಾಗಿದೆ. ಹೀಗೆ ಮೊಬೈಲ್ ಬದಲಾಯಿಸುವ ಅಗತ್ಯ ಏನಿತ್ತು, ಆ ಮೊಬೈಲ್‌ಗಳ ಬಳಕೆಯ ಮೇಲೆ ಯಾರಾದರೂ ನಿಗಾ ಇಡುತ್ತಿದ್ದರೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.



Ad Widget

ಆಶ್ರಮದಲ್ಲಿದ್ದವರು ಕುಟುಂಬದವರು ಹಾಗೂ ಸ್ನೇಹಿತರನ್ನು ಎಷ್ಟು ಬಾರಿ ಸಂಪರ್ಕಿಸುತ್ತಿದ್ದರು ಎಂಬುದನ್ನೂ ತನಿಖೆ ನಡೆಸಲಾಗುತ್ತಿದೆ. ರಸಿಕ್ ಅವರ ಹಳೆಯ ಮೊಬೈಲ್, ಹೊಸ ಸಿಮ್, ಕರೆಗಳ ವಿವರ ಹಾಗೂ ಸಂದೇಶಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Ad Widget

Ad Widget

ಸಾವಿಗೂ ಮುನ್ನ ಏನಾಗಿತ್ತು?

ರಸಿಕ್ ಕೊಠಡಿಯಿಂದ ಹೊರಬಂದಾಗಲೇ ಅವರ ಬಟ್ಟೆಯಲ್ಲಿ ರಕ್ತದ ಕಲೆಗಳು ಕಾಣಿಸಿಕೊಂಡಿದ್ದವು ಎಂದು ಸಿಸಿಟಿವಿ ದೃಶ್ಯಗಳಿಂದ ತಿಳಿದುಬಂದಿದೆ ಎನ್ನಲಾಗಿದೆ. ನಂತರ ಅವರು ನಾಲ್ಕನೇ ಮಹಡಿಯ ಮೇಲ್ಛಾವಣಿಗೆ ತೆರಳಿದ್ದಾರೆ. ಅಲ್ಲಿ ಕೆಲಕಾಲ ಕುಳಿತುಕೊಂಡು, ಬಳಿಕ ಮಲಗಿದ್ದರು. ನಂತರ ಎದ್ದು ನಿಂತ ಕೆಲವೇ ಕ್ಷಣಗಳಲ್ಲಿ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ.

ರಸಿಕ್ ಅವರ ದೇಹದಲ್ಲಿ, ವಿಶೇಷವಾಗಿ ತೊಡೆಸಂಧಿ ಭಾಗದಲ್ಲಿ ಗಂಭೀರ ಗಾಯವಾಗಿರುವುದು ತನಿಖೆಯಲ್ಲಿ ಗಮನಕ್ಕೆ ಬಂದಿದೆ. ಈ ಗಾಯ ಹೇಗೆ ಉಂಟಾಯಿತು ಎಂಬುದನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಯಾವುದೇ ಮಾನಸಿಕ ಒತ್ತಡ ಅಥವಾ ಖಿನ್ನತೆಯಿಂದ ಬಳಲುತ್ತಿದ್ದರೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಈ ಕುರಿತು ಅವರು ಕುಟುಂಬದವರು ಅಥವಾ ಸ್ನೇಹಿತರ ಬಳಿ ಏನಾದರೂ ಹೇಳಿಕೊಂಡಿದ್ದರೇ ಎಂಬುದನ್ನು ಪೊಲೀಸರು ತಿಳಿದುಕೊಳ್ಳುತ್ತಿದ್ದಾರೆ.

ಇದಲ್ಲದೆ, ಸಾವಿಗೂ ಮುನ್ನ ಅವರು ಮದ್ಯ, ಮಾದಕ ವಸ್ತು ಅಥವಾ ಇತರ ಯಾವುದೇ ಮನಸ್ಸಿನ ಮೇಲೆ ಪರಿಣಾಮ ಬೀರುವ ವಸ್ತು ಸೇವಿಸಿದ್ದರೇ ಎಂಬುದನ್ನು ತಿಳಿಯಲು ಅವರ ರಕ್ತದ ಮಾದರಿಯನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಸಿಸಿಟಿವಿ ದೃಶ್ಯಗಳು, ಮೊಬೈಲ್ ದಾಖಲೆ, ವೈದ್ಯಕೀಯ ವರದಿ ಹಾಗೂ ವಿಚಾರಣೆ ವೇಳೆ ಸಿಕ್ಕ ಮಾಹಿತಿಗಳನ್ನು ಆಧರಿಸಿ ರಸಿಕ್ ಅವರ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪೊಲೀಸರು ಪತ್ತೆಹಚ್ಚಲು ಮುಂದಾಗಿದ್ದಾರೆ.

Ad Widget
Continue Reading

ಅಂತರ ರಾಜ್ಯ

Jnanesh kumar-ವಿಪಕ್ಷಗಳ ರಾಜೀನಾಮೆ ಒತ್ತಾಯದ ನಡುವೆ ಜ್ಞಾನೇಶ್ ಕುಮಾರ್ ಛತ್ತೀಸ್‌ಗಢ ಭೇಟಿ ಮುಂದೂಡಿಕೆ

Published

on



Ad Widget

Ad Widget

Ad Widget

Ad Widget

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅಕ್ಟೋಬರ್ 7 ಮತ್ತು 8ರಂದು ಜ್ಞಾನೇಶ್ ಕುಮಾರ್ ಅವರು ಛತ್ತೀಸ್‌ಗಢಕ್ಕೆ ಭೇಟಿ ನೀಡಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಈ ಭೇಟಿಯನ್ನು ಮುಂದೂಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget

Ad Widget <> Ad Widget

ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಂಡನೆ ನಿರ್ಣಯ ಮಂಡಿಸುವ ಸಾಧ್ಯತೆ ಇದೆ ಎಂಬ ವದಂತಿಗಳು ಹರಿದಾಡುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ.



Ad Widget

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳ ಆಕ್ರೋಶ
ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹಾಗೂ ಅರ್ಜಿ ನಮೂನೆ-6ರಲ್ಲಿನ ಮಾರ್ಪಾಡು ಸೇರಿದಂತೆ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗ ಟೀಕೆಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿವೆ.

Ad Widget

Ad Widget

ದೇವಾಲಯ, ಜಲಪಾತಗಳಿಗೆ ಭೇಟಿ ನೀಡಬೇಕಿತ್ತು
ಎರಡು ದಿನಗಳ ಛತ್ತೀಸ್‌ಗಢ ಪ್ರವಾಸದ ವೇಳೆ ಜ್ಞಾನೇಶ್ ಕುಮಾರ್ ಅವರು ದಾಂತೇವಾಡದಲ್ಲಿರುವ ದಾಂತೇಶ್ವರಿ ದೇವಾಲಯ, ಬಸ್ತಾರ್‌ನ ಚಿತ್ರಕೋಟೆ ಜಲಪಾತ ಹಾಗೂ ಕಬೀರ್ ಧಾಮ್ ಜಿಲ್ಲೆಯ ಭೋರಂಡಿಯೊ ದೇವಾಲಯಕ್ಕೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು.

ಈ ಭೇಟಿಯ ಹಿನ್ನೆಲೆಯಲ್ಲಿ ಛತ್ತೀಸ್‌ಗಢ ಸರ್ಕಾರವು ಜ್ಞಾನೇಶ್ ಕುಮಾರ್ ಅವರಿಗೆ ರಾಜ್ಯ ಅತಿಥಿಯ ಗೌರವ ನೀಡಲು ನಿರ್ಧರಿಸಿತ್ತು. ಅವರನ್ನು ಸ್ವಾಗತಿಸುವುದು ಹಾಗೂ ಭದ್ರತಾ ವ್ಯವಸ್ಥೆ ಕೈಗೊಳ್ಳಲು ರಾಯ್‌ಪುರ ಜಿಲ್ಲಾಡಳಿತ, ಪೊಲೀಸರು ಮತ್ತು ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣ ಪ್ರಾಧಿಕಾರಗಳು ಸಿದ್ಧತೆ ಆರಂಭಿಸಿದ್ದವು. ಇದೀಗ ಭೇಟಿಯನ್ನು ಮುಂದೂಡಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading