ಸ್ಥಳೀಯ
Raichur-ರಾಯಚೂರು: ಚಿಕಿತ್ಸೆಗೆ ಬಂದಿದ್ದ ಮಹಿಳೆಗೆ ಕಿರುಕುಳ; ಅಸಭ್ಯ ವರ್ತನೆ ತೋರಿದ ಆಸ್ಪತ್ರೆ ಸಿಬ್ಬಂದಿಗೆ ಚಪ್ಪಲಿ ಸೇವೆ ಮಾಡಿದ ಸಂತ್ರಸ್ತೆಯ ಅಕ್ಕ..!
ರಾಯಚೂರು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯೊಬ್ಬರ ಜೊತೆ ಅತ್ಯಂತ ಅಸಭ್ಯವಾಗಿ ವರ್ತಿಸಿದ ಆಸ್ಪತ್ರೆ ಸಿಬ್ಬಂದಿಗೆ ಸಂತ್ರಸ್ತೆಯ ಕುಟುಂಬಸ್ಥರು ಸಾರ್ವಜನಿಕವಾಗಿ ಥಳಿಸಿದ ಘಟನೆ ನಡೆದಿದೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಆರೋಪಿ ಮೆಹಬೂಬ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ರಾಯಚೂರು: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯೊಬ್ಬರ ಜೊತೆ ಅತ್ಯಂತ ಅಸಭ್ಯವಾಗಿ ವರ್ತಿಸಿದ ಆಸ್ಪತ್ರೆ ಸಿಬ್ಬಂದಿಗೆ ಸಂತ್ರಸ್ತೆಯ ಕುಟುಂಬಸ್ಥರು ಸಾರ್ವಜನಿಕವಾಗಿ ಥಳಿಸಿದ ಘಟನೆ ನಡೆದಿದೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಆರೋಪಿ ಮೆಹಬೂಬ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ಏನು?
ಸಂತ್ರಸ್ತ ಮಹಿಳೆಯು ತೀವ್ರವಾದ ‘ಡಿವಿಟಿ’ (DVT) ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ರಾಯಚೂರಿನ ಸುರಕ್ಷಾ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಆಸ್ಪತ್ರೆಯ ಸಿಬ್ಬಂದಿ ಮೆಹಬೂಬ್ ಎಂಬಾತ, ಮಹಿಳೆಯ ಬಳಿ ಬಂದು ಅಸಭ್ಯವಾಗಿ ಮಾತನಾಡಿದ್ದಾನೆ. “ನಿಮ್ಮ ಕಾಲುಗಳು ಎಷ್ಟು ಸುಂದರ ಮತ್ತು ಮೃದುವಾಗಿವೆ, ಗಂಡನ ಜೊತೆ ಆಪ್ತವಾಗಲು ಅನಿಸುವುದಿಲ್ಲವೇ?” ಎಂದು ಕೇಳುತ್ತಾ ಆಕೆಯ ಕಾಲನ್ನು ಮುಟ್ಟಿ ಕಿರುಕುಳ ನೀಡಿದ್ದಾನೆ ಎಂದು ಸಂತ್ರಸ್ತೆ ಸೋಶಿಯಲ್ ಮೀಡಿಯಾ ಪೋಸ್ಟ್‌ನಲ್ಲಿ ವಿವರಿಸಿದ್ದಾರೆ.
ಧರ್ಮದೇಟು ನೀಡಲು ಕಾರಣವೇನು?
ಈ ವಿಷಯ ತಿಳಿದ ಆಸ್ಪತ್ರೆ ಆಡಳಿತ ಮಂಡಳಿ ಮೆಹಬೂಬ್‌ನನ್ನು ತಕ್ಷಣ ಕೆಲಸದಿಂದ ತೆಗೆದುಹಾಕಿತ್ತು. ಆದರೆ, ಸಂತ್ರಸ್ತೆಯ ಅಕ್ಕ ಆತನಿಗೆ ಫೋನ್ ಮಾಡಿ ಎಚ್ಚರಿಕೆ ನೀಡಿದಾಗ, ಆತ “ನಾನು ಯಾರಿಗೂ ಹೆದರುವುದಿಲ್ಲ, ನೀವು ಏನು ಬೇಕಾದರೂ ಮಾಡಿಕೊಳ್ಳಿ” ಎಂದು ಉದ್ಧಟತನದ ಉತ್ತರ ನೀಡಿದ್ದಾನೆ. ಇದರಿಂದ ಆಕ್ರೋಶಗೊಂಡ ಸಂತ್ರಸ್ತೆಯ ಕುಟುಂಬಸ್ಥರು ಆತನನ್ನು ರಸ್ತೆಯಲ್ಲಿ ತಡೆದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಸಹಾಯಕ್ಕೆ ಬಾರದ ನಾಯಕರು:
“ನಾನು ನ್ಯಾಯಕ್ಕಾಗಿ ಬಜರಂಗದಳ, ಬಿಜೆಪಿ ನಾಯಕರು ಸೇರಿದಂತೆ ಹಲವರಿಗೆ ಕರೆ ಮಾಡಿದೆ, ಆದರೆ ನಮಗೆ ಸಹಾಯ ಮಾಡಲು ಯಾರೂ ಬರಲಿಲ್ಲ. ಆತನ ಉದ್ಧಟತನ ಹೆಚ್ಚಾದ ಕಾರಣ ನಾವೇ ಈ ಕ್ರಮ ಕೈಗೊಳ್ಳಬೇಕಾಯಿತು” ಎಂದು ಸಂತ್ರಸ್ತೆ ಪೋಸ್ಟ್‌ನಲ್ಲಿ ಅಳಲು ತೋಡಿಕೊಂಡಿದ್ದಾರೆ.
ಘಟನೆ ಉಲ್ಬಣಗೊಳ್ಳುತ್ತಿದ್ದಂತೆ ಎಚ್ಚೆತ್ತ ಸದರ ಬಜಾರ್ ಪೊಲೀಸರು ಆರೋಪಿ ಮೆಹಬೂಬ್‌ನನ್ನು ಬಂಧಿಸಿ ದಂಡಾಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ. ಸಂತ್ರಸ್ತೆಯು ಈವರೆಗೆ ಅಧಿಕೃತವಾಗಿ ದೂರು ನೀಡದ ಕಾರಣ, ಘಟನೆ ನಡೆದ ಆಸ್ಪತ್ರೆಯವರೇ ದೂರು ನೀಡುವಂತೆ ಪೊಲೀಸರು ಸೂಚಿಸಿದ್ದಾರೆ.
ಧೈರ್ಯವಾಗಿ ತಮ್ಮ ಮೇಲಾದ ದೌರ್ಜನ್ಯದ ಬಗ್ಗೆ ಧ್ವನಿ ಎತ್ತಿದ ಸಂತ್ರಸ್ತೆಯ ನಡೆಗೆ ನೆಟ್ಟಿಗರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದ್ದು, ಕಾಮುಕನಿಗೆ ಕಠಿಣ ಶಿಕ್ಷೆಯಾಗಲಿ ಎಂದು ಒತ್ತಾಯಿಸುತ್ತಿದ್ದಾರೆ.
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆಯಲ್ಲಿ ಯೋಧ ಗೌರವ ಕಾರ್ಯಕ್ರಮ; ಸೈನಿಕರ ಪ್ರಾಣರಕ್ಷಣೆಗೆ ಆಧುನಿಕ ತಂತ್ರಜ್ಞಾನಗಳಿವೆ – ಸುಂದರ ಪೂಜಾರಿ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಅವರು ಮಾತನಾಡಿದರು.
ಪುತ್ತೂರು: ಈಗಿನ ದಿನಮಾನಗಳಲ್ಲಿ ಸೈನ್ಯದ ಎಲ್ಲಾ ವಿಭಾಗಗಳಲ್ಲೂ ಸೈನಿಕರ ಪ್ರಾಣಕ್ಕೆ ಅಪಾಯವಾಗದಂತೆ ತಡೆಯಲು ತಂತ್ರಜ್ಞಾನ ಸಹಾಯಕವಾಗಿದೆ. ಸೈನಿಕರ ಪ್ರಾಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣದಿಂದ ಕರ್ತವ್ಯದ ಸಮಯದಲ್ಲಿ ಸೈನಿಕರು ಎಲ್ಲಿದ್ದರೂ ಮಿಲಿಟರಿ ವ್ಯವಸ್ಥೆಗೆ ಸೂಚನೆ ಸಿಗುವ ತಂತ್ರಜ್ಞಾನವಿದೆ ಎಂದು ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ಜುಲೈ 31ರಂದು ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ದೇಶಸೇವೆ ಮಾಡಲು ಸೈನ್ಯಕ್ಕೆ ಸೇರುವುದು ಒಂದು ಉತ್ತಮ ಸಾಧ್ಯತೆ. ಹಾಗೆಂದು ಸೈನ್ಯಕ್ಕೆ ಸೈನಿಕರಾಗಿಯೇ ಸೇರಬೇಕೆಂದಿಲ್ಲ. ವೈದ್ಯರಾಗಿಯೂ, ಅಭಿಯಂತರರಾಗಿಯೂ, ತಂತ್ರಜ್ಞರಾಗಿಯೂ ಕೂಡ ಸೇವೆಯನ್ನು ಸಲ್ಲಿಸಲು ಅವಕಾಶಗಳಿವೆ ಎಂದರಲ್ಲದೆ ತಮ್ಮ ದೀರ್ಘಕಾಲದ ಅನುಭವದ ಸಾರವನ್ನು ವಿದ್ಯಾಥಿಗಳೊಂದಿಗೆ ಹಂಚಿಕೊಂಡರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಸೈನಿಕರು ಕೇವಲ ಯುದ್ಧದ ಸಂದರ್ಭದಲ್ಲಿ ಮಾತ್ರವಲ್ಲದೆ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ. ತಮ್ಮ ಕುಟುಂಬವನ್ನು ಬಿಟ್ಟು ಸಮಾಜದ ವಿವಿಧ ಕುಟುಂಬಗಳ ರಕ್ಷಣೆಗಾಗಿ ತಮ್ಮನ್ನು ಮುಡಿಪಾಗಿಟ್ಟುಕೊಳ್ಳುತ್ತಾರೆ. ಹಾಗಾಗಿ ನಾವು ಎಲ್ಲೇ ಹೋಗಲಿ, ಎಷ್ಟೇ ದೂರ ಪ್ರಯಾಣಿಸಲಿ ನಮ್ಮ ಹೆಮ್ಮೆಯ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದ್ದರಿಂದ ಅಂಬಿಕಾ ವಿದ್ಯಾಸಂಸ್ಥೆಯು ಕೇವಲ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಿಲ್ಲ. ನಮ್ಮ ದೇಶದ ಸೈನಿಕರನ್ನೂ ಒಡಗೂಡಿ ಅಂಬಿಕಾ ಪರಿವಾರವೆನಿಸಿಕೊಂಡಿದೆ ಎಂದು ನುಡಿದರು.
ಸುಂದರ ಪೂಜಾರಿ ದಂಪತಿಯನ್ನು ಅಂಬಿಕಾ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಮಾತಾಡಿದರು.

ಪುತ್ತೂರು: ಲೈಂಗಿಕ ಕಿರುಕುಳ ಎನ್ನುವುದು ಕೇವಲ ದೈಹಿಕ ಸ್ಪರ್ಶಕ್ಕೆ ಸೀಮಿತವಾಗಿಲ್ಲ ಬದಲಾಗಿ ಆಶ್ಲೀಲ ಸಂದೇಶಗಳನ್ನು ಕಳುಹಿಸುವುದು, ಮಾತುಗಳನ್ನಾಡುವುದು ಅಥವಾ ಅಂತಹ ಯಾವುದೇ ರೀತಿಯ ವರ್ತನೆಗಳೂ ಕೂಡಾ ಇದರಲ್ಲಿ ಸೇರಿವೆ ಎಂದು ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು.
ಇಂದಿನ ಪೀಳಿಗೆ, ಅವರ ಪೋಷಕರು, ಶಿಕ್ಷಕರ ನಡುವಿನ ವ್ಯತ್ಯಾಸ ಮತ್ತು ಜವಾಬ್ಧಾರಿಗಳ ಬಗ್ಗೆ ವಾಸ್ತವಿಕ ಉದಾಹರಣೆಗಳನ್ನು ಉಲ್ಲೇಖಿಸಿದ ಅವರು ಯುವಜನತೆ ಪಾಲಿಸಬೇಕಾದ ಮತ್ತು ಪಾಲಿಸಬಾರದ ವಿಷಯಗಳ ಬಗ್ಗೆ ತಿಳಿಸಿದರು. ಒಬ್ಬರ ಸಾಮರ್ಥ್ಯವನ್ನು, ದೇಹದ ಆಕಾರವನ್ನು ಟೀಕಿಸುವುದು ಕೂಡಾ ಅಪರಾಧ. ಅಂತಹ ಸಂದರ್ಭದಲ್ಲಿ ಅದನ್ನು ಎದುರಿಸುವ, ಪ್ರತಿಕ್ರಿಯಿಸುವ ಬಗೆ ಮತ್ತು ದೂರು ಸಲ್ಲಿಸಬೇಕಾದ ಪ್ರಾಧಿಕಾರಗಳ ಬಗ್ಗೆ ತಿಳಿಸಿದರು. ನೀವು ಕೋಪಗೊಂಡಿದ್ದರೆ, ಅತಿಯಾದ ಉತ್ಸಾಹದಲ್ಲಿದ್ದರೆ ಅಥವಾ ಒತ್ತಡದಲ್ಲಿದ್ದರೆ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು 10 ನಿಮಿಷಗಳ ಕಾಲ ಮುಂದೂಡಿ. ಸಾಧ್ಯವಾದರೆ ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಮೊದಲು ಒಂದು ರಾತ್ರಿ ಚೆನ್ನಾಗಿ ಯೋಚಿಸಿ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಕ್ಷ.ಎಸ್.ಆರ್ ಮಾತನಾಡಿ ಮೊದಲು ಆಲಿಸಿ ನಂತರ ಮಾತನಾಡಿ, ಕೆಲವೊಮ್ಮೆ ಅಲ್ಲಿ ಉಪಸ್ಥಿತರಿದ್ದು ಮೌನವಾಗಿ ಆಲಿಸುವುದರಿಂದ ಜೀವನದಲ್ಲಿ ಹೆಚ್ಚಿನ ಪ್ರಯೋಜನಗಳಾಗುತ್ತದೆ ಎಂದರು. ಒಬ್ಬ ಉತ್ತಮ ಇಂಜಿನಿಯರ್ ಆಗುವ ಜತೆಯಲ್ಲಿ ದೇಶದ ಪ್ರಜ್ಞಾವಂತ ಪ್ರಜೆಯಾಗಿ ಎಂದು ನುಡಿದರು.
ಕಾಲೇಜು ಆಂತರಿಕ ದೂರು ಸಮಿತಿಯ ಅಧ್ಯಕ್ಷೆ ಡಾ.ಜೋತಿಮಣಿ.ಕೆ, ಡಾಟಾಸೈನ್ಸ್ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ಗೆ ಆಯ್ಕೆ
ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.
ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.
ಗುಜರಾತ್‌ನಲ್ಲಿ ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್ ನಡೆಯುತ್ತಿದ್ದು, ಈ ಕ್ಯಾಂಪ್‌ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ನವೆಂಬರ್ ೧ರಂದು ನಡೆಯುವ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗಣ್ಯ ವ್ಯಕ್ತಿಯಾಗಿ ಆಗಮಿಸಲಿದ್ದಾರೆ.
ಇವರಿಗೆ ಎನ್.ಸಿ.ಸಿ ಘಟಕದ ಮುಖ್ಯಸ್ಥ ಲೆ. ಭಾಮಿ ಅತುಲ್ ಶೆಣೈ ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಎನ್.ಸಿ.ಸಿ ಘಟಕ, ಐಕ್ಯೂಎಸಿ ಘಟಕ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿ ವೃಂದ ಶುಭಾಶಯಗಳನ್ನು ಕೋರುತ್ತಾರೆ.
-
ಮಂಗಳೂರು16 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized14 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ21 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಮಂಗಳೂರು23 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
Uncategorized11 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
ಸ್ಥಳೀಯ21 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಉದ್ಯೋಗ17 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ15 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!


















