ನಿಧನ ವಾರ್ತೆ
Sheikh Yousuf Afridi-ಪಾಕಿಸ್ತಾನದಲ್ಲಿ ಲಷ್ಕರ್ ಉಗ್ರ ಶೇಖ್ ಯೂಸುಫ್ ಅಫ್ರಿದಿ ಹತ್ಯೆ..!
ಪಾಕಿಸ್ತಾನದ ಖೈಬರ್ ಪುಖ್ತುನ್ಖ್ವಾ ಪ್ರಾಂತ್ಯದಲ್ಲಿ ಲಷ್ಕರ್-ಎ-ತೈಬಾ (LeT) ಭಯೋತ್ಪಾದಕ ಸಂಘಟನೆಯ ಪ್ರಮುಖ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿಯನ್ನು ಅನಾಮಧೇಯ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ.
ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪುಖ್ತುನ್ಖ್ವಾ ಪ್ರಾಂತ್ಯದಲ್ಲಿ ಲಷ್ಕರ್-ಎ-ತೈಬಾ (LeT) ಭಯೋತ್ಪಾದಕ ಸಂಘಟನೆಯ ಪ್ರಮುಖ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿಯನ್ನು ಅನಾಮಧೇಯ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ.
ಘಟನೆಯ ವಿವರ:
ಲಷ್ಕರ್ ಮುಖ್ಯಸ್ಥ ಹಾಗೂ ಮುಂಬೈ ದಾಳಿಯ ಸಂಚುಕೋರ ಹಫೀಜ್ ಸಯೀದ್‌ನ ಅತ್ಯಂತ ಆಪ್ತ ಸಹಚರನಾಗಿದ್ದ ಅಫ್ರಿದಿ ಮೇಲೆ ದುಷ್ಕರ್ಮಿಗಳು ಹತ್ತಾರು ಸುತ್ತು ಗುಂಡಿನ ಮಳೆಗರೆದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅಫ್ರಿದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಈತ ಖೈಬರ್ ಪಖ್ತುನ್ಖ್ವಾ ಭಾಗದಲ್ಲಿ ಲಷ್ಕರ್ ಸಂಘಟನೆಯ ಕಾರ್ಯಾಚರಣೆಗಳ ಪ್ರಮುಖ ಕೊಂಡಿಯಾಗಿದ್ದ ಎನ್ನಲಾಗಿದ್ದು, ಇದೊಂದು ಉದ್ದೇಶಿತ ಹತ್ಯೆ (Targeted Killing) ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಮುಂದುವರಿದ ಉಗ್ರರ ಹತ್ಯೆ ಸರಣಿ:
ಇತ್ತೀಚಿನ ತಿಂಗಳುಗಳಲ್ಲಿ ಪಾಕಿಸ್ತಾನದ ಮಣ್ಣಿನಲ್ಲಿ ಹತರಾಗುತ್ತಿರುವ ಹೈ ಪ್ರೊಫೈಲ್ ಉಗ್ರರ ಪಟ್ಟಿಗೆ ಈಗ ಅಫ್ರಿದಿ ಕೂಡ ಸೇರ್ಪಡೆಯಾಗಿದ್ದಾನೆ.
ಕಳೆದ ತಿಂಗಳು ಲಷ್ಕರ್ ಸ್ಥಾಪಕ ಸದಸ್ಯ ಅಮೀರ್ ಹಮ್ಮಾ ಮೇಲೆ ಲಾಹೋರ್‌ನಲ್ಲಿ ದಾಳಿ ನಡೆದಿತ್ತು.
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ನ ಸಹೋದರ ಮುಹಮ್ಮದ್ ತಾಹಿರ್ ಅನ್ವರ್ ನಿಗೂಢವಾಗಿ ಸಾವನ್ನಪ್ಪಿದ್ದನು.
ಕಳೆದ ವರ್ಷ ಜಮ್ಮು-ಕಾಶ್ಮೀರದ ರಿಯಾಸಿ ದಾಳಿಯ ಮಾಸ್ಟರ್‌ಮೈಂಡ್ ಅಬು ಕತಾಲ್ ಅಲಿಯಾಸ್ ಕತಾಲ್ ಸಿಂಧಿಯನ್ನು ಜೆಲಂನಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು.
ಉಗ್ರ ಸಂಘಟನೆಗಳಲ್ಲಿ ಭೀತಿ:
ಪಾಕಿಸ್ತಾನದಲ್ಲಿ 2023ರಿಂದಲೇ ಇಂತಹ ‘ಅಜ್ಞಾತ ಹತ್ಯೆ’ಗಳ ಸರಣಿ ಮುಂದುವರಿಯುತ್ತಿದ್ದು, ಭಯೋತ್ಪಾದಕರಲ್ಲಿ ನಡುಕ ಹುಟ್ಟಿಸಿದೆ. ಕೇವಲ 2026ರ ಮೊದಲ ಕೆಲವು ತಿಂಗಳುಗಳಲ್ಲೇ ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ನಂತಹ ಸಂಘಟನೆಗಳಿಗೆ ಸೇರಿದ ಸುಮಾರು 30ಕ್ಕೂ ಹೆಚ್ಚು ಉಗ್ರರನ್ನು ಲಾಹೋರ್ ಮತ್ತು ಕರಾಚಿಯಂತಹ ನಗರಗಳಲ್ಲಿ ಹೊಡೆದುರುಳಿಸಲಾಗಿದೆ. ಇದು ಪಾಕಿಸ್ತಾನದಲ್ಲಿ ಅಡಗಿರುವ ಭಯೋತ್ಪಾದಕರಿಗೆ ಈಗ ಸುರಕ್ಷಿತ ತಾಣವಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದಂತಿದೆ.
ನಿಧನ ವಾರ್ತೆ
Kadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಕಡಬ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ.
ಹೆದ್ದಾರಿಯಲ್ಲಿ ಕಾರೊಂದು ಸಂಚರಿಸುತ್ತಿದ್ದ ವೇಳೆ ಏಕಾಏಕಿ ಅಡ್ಡ ಬಂದ ಕಡವೆಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಈ ಭಾಗದಲ್ಲಿ ಕಾಡುಪ್ರಾಣಿಗಳ ಸಂಚಾರ ಸಾಮಾನ್ಯವಾಗಿರುವ ಹಿನ್ನೆಲೆಯಲ್ಲಿ ಘಟನೆ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ರಾತ್ರಿ ಹಾಗೂ ಮುಂಜಾನೆ ವೇಳೆ ಕಾಡುಪ್ರಾಣಿಗಳು ಹೆದ್ದಾರಿಗೆ ಬರುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಅಗತ್ಯವಿದೆ.
ಈ ಹಿಂದೆಯೂ ಇದೇ ಪರಿಸರದಲ್ಲಿ ಕಾಡುಪ್ರಾಣಿಗಳಿಂದ ವಾಹನ ಸವಾರರಿಗೆ ಅಪಾಯ ಉಂಟಾದ ಘಟನೆಗಳು ನಡೆದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಾಡುಪ್ರಾಣಿಗಳ ಸಂಚಾರವಿರುವ ಪ್ರದೇಶಗಳಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದರ ಜತೆಗೆ, ರಸ್ತೆ ಬದಿಯ ಪೊದೆಗಳನ್ನು ತೆರವುಗೊಳಿಸಿ ವಾಹನ ಸವಾರರಿಗೆ ದೂರದಿಂದಲೇ ಪ್ರಾಣಿಗಳು ಕಾಣುವಂತೆ ಮಾಡುವ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾಡುಪ್ರಾಣಿಗಳು ಹೆದ್ದಾರಿಗೆ ಬರುವುದರಿಂದ ಉಂಟಾಗುವ ಅಪಘಾತಗಳನ್ನು ತಡೆಯಲು ಕ್ರಮ ವಹಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.
ನಿಧನ ವಾರ್ತೆ
Kasaragod-ಕಾಸರಗೋಡು: ಬೈಕ್-ಕಾರು ಮುಖಾಮುಖಿ ಡಿಕ್ಕಿ; ಸವಾರ ಸಾವು, ಪತ್ನಿ ಗಂಭೀರ
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ.
ಕಾಸರಗೋಡು: ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರ ಪತ್ನಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಮುಹಮ್ಮದ್ ಅಶ್ರಫ್ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಮುಖಾಮುಖಿಯಾಗಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಅಶ್ರಫ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನಿಧನ ವಾರ್ತೆ
Mangalore-ಮಂಗಳೂರು: ನ್ಯಾಯಾಧೀಶರ ಕಾರು, ಗೂಡ್ಸ್ ಆಟೋ, ಬೈಕ್ ನಡುವೆ ಸರಣಿ ಅಪಘಾತ; ಗೂಡ್ಸ್ ಆಟೋ ಚಾಲಕ ಮೃತ್ಯು
ಮಂಗಳೂರು ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ಮಂಗಳೂರು: ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ.
ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿನಯ್ ಡಿ. ಅವರು ಕಾರಿನಲ್ಲಿ (ಕೆಎ-05-ಎನ್‌ಕೆ-2504) ಬೆಳಗ್ಗೆ ನ್ಯಾಯಾಲಯದತ್ತ ತೆರಳುತ್ತಿದ್ದರು. ಕರಂಗಲ್ಪಾಡಿಯ ರಾಧಾ ಮೆಡಿಕಲ್ಸ್ ಎದುರಿನ ತಿರುವಿನಲ್ಲಿ ಸಾಗುತ್ತಿದ್ದಾಗ, ಗೂಡ್ಸ್ ಆಟೋ ರಿಕ್ಷಾ (ಕೆಎ-19-ಎಡಿ-4395) ನಿಯಂತ್ರಣ ತಪ್ಪಿ ನ್ಯಾಯಾಧೀಶರ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಬಳಿಕ ಗೂಡ್ಸ್ ಆಟೋ ರಿಕ್ಷಾ ಅದೇ ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ (ಕೆಎ-19-ಎಚ್‌ವೈ-1664)ಕ್ಕೂ ಢಿಕ್ಕಿ ಹೊಡೆದು ಮಗುಚಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಚಂದ್ರ ಕೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಗೂಡ್ಸ್ ಆಟೋ ರಿಕ್ಷಾ ಢಿಕ್ಕಿಯಿಂದ ದ್ವಿಚಕ್ರ ವಾಹನ ಸವಾರ ಪ್ಲೆವಿಯನ್ ಮೆರ್ವಿನ್ ಅವರಿಗೂ ಗಾಯಗಳಾಗಿವೆ. ಅಪಘಾತದಲ್ಲಿ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನ ಜಖಂಗೊಂಡಿವೆ.
ಅಪಘಾತದಲ್ಲಿ ನ್ಯಾಯಾಧೀಶ ವಿನಯ್ ಡಿ. ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ನ್ಯಾಯಾಧೀಶ ವಿನಯ್ ಡಿ. ಅವರು ನೀಡಿದ ದೂರಿನ ಆಧಾರದ ಮೇಲೆ ಕದ್ರಿ ಟ್ರಾಫಿಕ್ ಈಸ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
-
ಪುತ್ತೂರು22 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್24 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಅಪರಾಧ23 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
Uncategorized3 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized2 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ


















