Connect with us

ಶಿಕ್ಷಣ

Narendra-ಗುಣಾತ್ಮಕ ಮತ್ತು ಮೌಲ್ಯಯುತ ಶಿಕ್ಷಣಕ್ಕೆ ಹೆಸರುವಾಸಿ ನರೇಂದ್ರ ಪದವಿ ಪೂರ್ವ ಕಾಲೇಜು

Published

on



Ad Widget

Ad Widget

Ad Widget

Ad Widget

ಶಿಕ್ಷಣದ ಮೂಲಕ ಸಾಮಾಜಿಕ ಬದಲಾವಣೆಯ ಮಹತ್ತರ ಉದ್ದೇಶವನ್ನಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿರುವ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ,ಗುಣಮಟ್ಟದ ಶಿಕ್ಷಣದ ಪ್ರಸರಣಕ್ಕಾಗಿ ಸುಮಾರು 80ಕ್ಕೂ ಹೆಚ್ಚು ಶಿಕ್ಷಣ ಕೇಂದ್ರಗಳನ್ನು ತೆರೆದಿದೆ.ಶಿಕ್ಷಣಕ್ಕೊಂದು ಹೊಸ ಭಾಷ್ಯವನ್ನು ನೀಡುವ ಹಿನ್ನೆಲೆಯಲ್ಲಿ ಈ ಎಲ್ಲಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದೆ.ವಿವೇಕಾನಂದ ವಿದ್ಯಾವರ್ಧಕ ಸಂಘ ರೂಪಿಸಿದ ಅಂತಹ ಉತ್ಕೃಷ್ಟ ತಾಣಗಳಲ್ಲಿ ಪುತ್ತೂರಿನ ತೆಂಕಿಲದಲ್ಲಿರುವ ನರೇಂದ್ರ ಪ.ಪೂ.ಕಾಲೇಜು ಕೂಡ ಒಂದು.

Ad Widget

Ad Widget

Ad Widget

Ad Widget

ಶಿಕ್ಷಣದ ಮೂಲಕ ಸಾಮಾಜಿಕ ಬದಲಾವಣೆಯ ಮಹತ್ತರ ಉದ್ದೇಶವನ್ನಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿರುವ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ,ಗುಣಮಟ್ಟದ ಶಿಕ್ಷಣದ ಪ್ರಸರಣಕ್ಕಾಗಿ ಸುಮಾರು 80ಕ್ಕೂ ಹೆಚ್ಚು ಶಿಕ್ಷಣ ಕೇಂದ್ರಗಳನ್ನು ತೆರೆದಿದೆ.ಶಿಕ್ಷಣಕ್ಕೊಂದು ಹೊಸ ಭಾಷ್ಯವನ್ನು ನೀಡುವ ಹಿನ್ನೆಲೆಯಲ್ಲಿ ಈ ಎಲ್ಲಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದೆ.ವಿವೇಕಾನಂದ ವಿದ್ಯಾವರ್ಧಕ ಸಂಘ ರೂಪಿಸಿದ ಅಂತಹ ಉತ್ಕೃಷ್ಟ ತಾಣಗಳಲ್ಲಿ ಪುತ್ತೂರಿನ ತೆಂಕಿಲದಲ್ಲಿರುವ ನರೇಂದ್ರ ಪ.ಪೂ.ಕಾಲೇಜು ಕೂಡ ಒಂದು.

Ad Widget

Ad Widget

Ad Widget alt="Ad Widget"/>

Ad Widget

ಸ್ಥಳೀಯ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಗುಣಮಟ್ಟದ ಪದವಿ ಪೂರ್ವ ಶಿಕ್ಷಣವನ್ನು ನೀಡುವ ಸದುದ್ದೇಶದಿಂದ 2017ರಲ್ಲಿ ತೆಂಕಿಲದ ವಿವೇಕನಗರದಲ್ಲಿ ಸ್ಥಾಪನೆಗೊಂಡ ಈ ಸಂಸ್ಥೆ ,ಎಪ್ರಿಲ್ 6ರ 2019ರಂದು ಲೋಕಾರ್ಪಣೆಗೊಂಡು, ಎಲ್ಲಾಆಧುನಿಕ ಸೌಕರ್ಯಗಳನ್ನು ಹೊಂದಿರುವ ಸುಸಜ್ಜಿತ ನೂತನಕಟ್ಟಡದಲ್ಲಿ ಶೈಕ್ಷಣಿಕ ತರಗತಿಗಳನ್ನು ನಡೆಸುತ್ತಿದೆ.ಪ್ರಶಾಂತ ಮತ್ತು ಕಲಿಕೆಗೆ ಪೂರಕ ವಾತಾವರಣದಲ್ಲಿ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಅನುಭವಿ ಶಿಕ್ಷಕರ ತಂಡ ಮಾತ್ರವಲ್ಲದೇ ಸುಸಜ್ಜಿತ ಗ್ರಂಥಾಲಯ ಮತ್ತು ಎಲ್ಲಾ ಉಪಕರಣಗಳನ್ನೊಳಗೊಂಡ ಪ್ರಯೋಗಾಲಯವನ್ನು ಹೊಂದಿದೆ.ಸಮರ್ಥ ಆಡಳಿತ ಮಂಡಳಿ ಎಲ್ಲಾ ಶೈಕ್ಷಣಿಕ ಕರ‍್ಯಕ್ರವiಗಳಿಗೆ ಅತ್ಯುತ್ತಮ ಮಾರ್ಗದರ್ಶನವನ್ನು ನೀಡುತ್ತಿದೆ.

Ad Widget

Ad Widget <> Ad Widget

ಶಿಕ್ಷಣದ ಮೂಲಕ ವಿದ್ಯಾರ್ಥಿಯ ಬೌಧ್ಧಿಕ,ಸಾಮಾಜಿಕ,ಭೌತಿಕ,ಆರ್ಥಿಕ,ಧಾರ್ಮಿಕ,ಸಾಂಸ್ಕೃತಿಕ,ನೈತಿಕ,ಆಧ್ಯಾತ್ಮಿಕ ಮೌಲ್ಯಗಳಿಂದ ಪ್ರಬಲವಾಗಿರುವ ಬುದ್ಧಿಶಕ್ತಿಯನ್ನು ಉತ್ತೇಜಿಸಿ ಸದೃಢರನ್ನಾಗಿ ಬೆಳೆಸುವ ಉದ್ದೇಶವನ್ನು ಹೊಂದಿದೆ.



Ad Widget

ವಿವಿಧ ಸಾಮಾಜಿಕ ಸ್ತರದಿಂದ ಬರುವ ಪ್ರತಿಯೊಬ್ಬ ವಿದ್ಯಾರ್ಥಿಗೆ ಸಂಸ್ಕಾರ ನೀಡಿ,ಮಾನವೀಯ ಮೌಲ್ಯಗಳನ್ನು ಧಾರೆಎರೆದು ಸಾಂಘಿಕ ಬದುಕಿನಅರಿವು ಮೂಡಿಸಿ ಪ್ರಜ್ಞಾವಂತ ನಾಗರಿಕರನ್ನಾಗಿರೂಪಿಸುವ ಮಹತ್ವದ ಹೊಣೆಗಾರಿಕೆಯನ್ನು ಹೊತ್ತಿರುವ ಈ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಯಆಂತರ್ಯದಲ್ಲಿ ಹುದುಗಿರುವ ಅನೇಕ ತೆರನಾದ ಪ್ರತಿಭೆಗಳಿಗೆ ವಿವಿಧ ರೂಪದಲ್ಲಿ ಅವಕಾಶವನ್ನು ನೀಡಲಾಗಿದೆ.

Ad Widget

Ad Widget

ವಿಜ್ಞಾನ ವಿಭಾಗದಲ್ಲಿ
• ಪಿಸಿಎಂಬಿ/PCMB (ಭೌತಶಾಸ್ತ್ರ,ರಸಾಯನಶಾಸ್ತ್ರ,ಗಣಿತ,ಜೀವಶಾಸ್ತ್ರ)
• ಪಿಸಿಎಂಸಿ/PCMC (ಭೌತಶಾಸ್ತ್ರ,ರಸಾಯನಶಾಸ್ತ್ರ,ಗಣಿತ,ಗಣಕವಿಜ್ಞಾನ)

ವಾಣಿಜ್ಯ ವಿಭಾಗದಲ್ಲಿ
• ಎಸ್‌ಇಬಿಎ/SEBA (ಸಂಖ್ಯಾಶಾಸ್ತ್ರ,ಅರ್ಥಶಾಸ್ತ್ರ,ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ)
• ಬಿಇಬಿಎ/BEBA(ಮೂಲಗಣಿತ,ಅರ್ಥಶಾಸ್ತ್ರ,ವ್ಯವಹಾರ ಅಧ್ಯಯನ,ಲೆಕ್ಕಶಾಸ್ತ್ರ)

ಎಂಬ ಸಂಯೋಜನೆಗಳನ್ನು ಹೊಂದಿದೆ.ಇಂಗ್ಲಿಷ್ ಭಾಷೆಜೊತೆಗೆ ಇನ್ನುಳಿದಂತೆ ಕನ್ನಡ,ಹಿಂದಿ,ಸಂಸ್ಕೃತ ಭಾಷೆಯನ್ನು ಆರಿಸಿಕೊಳ್ಳಬಹುದಾಗಿದೆ.

ಅತ್ಯುತ್ತಮ ಫಲಿತಾಂಶ:
2025-26 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿಕಾಲೇಜಿಗೆ ಶೇ.97 ಫಲಿತಾಂಶವನ್ನು ಪಡೆದಿದೆ. 39 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ದ್ವಿತೀಯ ವಾಣಿಜ್ಯ ವಿಭಾಗದ ಹರ್ಷಿತಾ ಕೆ. 593 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ 7ನೇ ಸ್ಥಾನವನ್ನು ಮತ್ತು ದ್ವಿತೀಯ ವಿಜ್ಞಾನ ವಿಭಾಗದ ನಂದನ 590ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ 9ನೇ ಸ್ಥಾನವನ್ನು ಪಡೆದಿರುತ್ತಾರೆ. ಈ ಅತ್ಯುತ್ತಮ ಫಲಿತಾಂಶವು ಕಾಲೇಜಿನ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸುವಂತೆ ಮಾಡಿದೆ.

ಕೋಚಿಂಗ್ ಮತ್ತು ಶುಲ್ಕ ವಿನಾಯಿತಿ:ವಾರಾಂತ್ಯದಲ್ಲಿ ಜೆಇಇ ,ನೀಟ್,ಸಿಇಟಿ,ಸಿಪಿಟಿ ತರಗತಿಗಳನ್ನು ನೀಡುವ ಮುಖಾಂತರ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆಗಳನ್ನು ಮತ್ತು ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳನ್ನು ಅಣಿಗೊಳಿಸಲಾಗುತ್ತಿದೆ.ಜೊತೆಗೆಎಸೆಸೆಲ್ಸಿಯಲ್ಲಿ ಶೇ.98ಕ್ಕಿಂತ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡುತ್ತಿದೆ.

“ ವ್ಯವಹಾರ “ – ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ‍್ಯಕ್ರಮ:
“ ವ್ಯವಹಾರ “ ಎಂಬ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ‍್ಯಕ್ರಮದ ಮೂಲಕ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸಲು ಅವಕಾಶಗಳನ್ನು ನೀಡಲಾಗುತ್ತಿದೆ.ಈ ತರಬೇತಿಯಲ್ಲಿ ವಿವಿಧತಜ್ಞರಿಂದ ವಿಶೇಷ ಉಪನ್ಯಾಸಗಳು,ಸ್ಟೆಪೆಂಡ್ ಜೊತೆಗೆ ಇಂಟರ್ನ್ಶಿಪ್ , ವ್ಯಾಪಾರ ಮೇಳಗಳಲ್ಲಿ ಭಾಗವಹಿಸುವ ಅವಕಾಶ, ಸೇಲ್ಸ್, ಅಕೌಂಟಿAಗ್, ಮಾರ್ಕೆಟಿಂಗ್ ಮುಂತಾದ ವ್ಯಾಪಾರ ಆವರಣಗಳ ಭೇಟಿ, ಸಾಫ್ಟ್ ಸ್ಕಿಲ್ ತರಬೇತಿ ಮತ್ತು ಇನ್ನಿತರ ಕೌಶಲ್ಯಾಧಾರಿತ ತರಬೇತಿಗಳ ಮೂಲಕ ವಾಣಿಜ್ಯಕ್ಷೇತ್ರದ ಉದ್ಯಮಜ್ಞಾನವನ್ನು ನೀಡಲಾಗುತ್ತಿದೆ.

ಸಂಸ್ಕಾರಯುತ ಶಿಕ್ಷಣ ಮತ್ತು ವಿದ್ಯಾರ್ಥಿಯ ಸರ್ವಾಂಗೀಣ ಬೆಳವಣಿಗೆಗೆ ಪೂರಕ ವ್ಯವಸ್ಥೆ:
ವಿದ್ಯಾರ್ಥಿಗಳಿಗಾಗಿ ಸೂರ್ಯ ನಮಸ್ಕಾರ, ಧ್ಯಾನ, ಪ್ರಾಣಾಯಾಮ,ಭವದ್ಗೀತಾ ಪಠಣ,ವಿಷ್ಣು ಸಹಸ್ರನಾಮ ಪಠಣ, ಸಾಫ್ಟ್ ಸ್ಕಿಲ್ ,ಸ್ಪೋಕನ್‌ಇಂಗ್ಲಿಷ್ ತರಗತಿಗಳನ್ನು ನಡೆಸುವುದರ ಜೊತೆಗೆ ವಿದ್ಯಾರ್ಥಿ ಸಮುದಾಯದಲ್ಲಿ ಓರಣದ ನಡೆತೆ,ಸುಹವ್ಯಾಸ,ಸದಭಿರುಚಿಗಳ ಬೆಳವಣಿಗೆಗೆ ಮಾರ್ಗದರ್ಶನ ನೀಡಲಾಗುತ್ತಿದೆ.

ಯೋಗ ,ಧ್ಯಾನತರಗತಿಯು ವಿದ್ಯಾರ್ಥಿಯ ನೆನಪಿನ ಶಕ್ತಿ ಹಾಗೂ ಓದಿನಲ್ಲಿ ಏಕಾಗ್ರತೆಯನ್ನು ಹೆಚ್ಚಿಸುವಂತೆ ಮಾಡಲು ಸಹಕಾರಿಯಾಗಿದೆ.ವಿದ್ಯಾರ್ಥಿಗಳಿಗೆ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿಯನ್ನು ನೀಡಲಾಗುತ್ತಿದೆ.ಅಗತ್ಯವಿರುವ ವಿದ್ಯಾರ್ಥಿಗಳಿಗಾಗಿ ಬಸ್ ವ್ಯವಸ್ಥೆ, ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಕಾಲೇಜಿನಲ್ಲಿ ನೀಡಲಾಗುತ್ತಿದೆ.

ವಿದ್ಯಾರ್ಥಿಗಳ ಸದೃಢ ಭವಿಷ್ಯದ ನಿರ್ಮಾಣಕ್ಕಾಗಿ Digital Class
ಪ್ರಥಮ ಮತ್ತು ದ್ವಿತೀಯವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್‌ತರಬೇತಿಯಾದ ಐಟಿ(Information Technology)) ಕೋರ್ಸ್ಗಳನ್ನು ನಡೆಸುತ್ತಿದ್ದು , ಉನ್ನತ ಶಿಕ್ಷಣಕ್ಕೆ ಅಗತ್ಯವಾದ ವಿಚಾರಗಳ , ಪರಿಕಲ್ಪನೆಗಳ ಬಗ್ಗೆ ಅರಿವು ಮೂಡಿಸಲಿರುವ ಒಂದು ವೇದಿಕೆಯಾಗಿದೆ.ಈ ತರಗತಿಗಳಲ್ಲಿಸ್ಪರ್ಧಾತ್ಮಕ ಜಗತ್ತಿಗೆ ತೆರೆದುಕೊಂಡಿರುವ ಶಿಕ್ಷಣ ವ್ಯವಸ್ಥೆಗೆ ಅಗತ್ಯವಾದ ತಂತ್ರಜ್ಞಾನಗಳ ಬಗ್ಗೆ,ಜೊತೆಗೆ ಕಂಪ್ಯೂಟರ್ ಬೇಸಿಕ್ ಕೋರ್ಸ್ಗೆ ಪೂರಕವಾದ ವಿಚಾರಗಳ ಪ್ರಾಯೋಗಿಕ ಶಿಕ್ಷಣವನ್ನು ನೀಡುತ್ತಿರುವ ಪುತ್ತೂರಿನ ಏಕೈಕ ಶಿಕ್ಷಣ ಸಂಸ್ಥೆ ನರೇಂದ್ರ ಪ.ಪೂ. ಕಾಲೇಜು.

ಎಲ್ಲಾ ರೀತಿಯ ವೈಶಿಷ್ಟ್ಯತೆಗಳನ್ನು ಹೊಂದಿರುವ ಆಧುನಿಕ ಹಾಗೂ ಸಾಂಪ್ರದಾಯಿಕ ಶೈಕ್ಷಣಿಕ ಮೌಲ್ಯಗಳನ್ನು ಸಮರ್ಪಕ ಪ್ರಮಾಣದಲ್ಲಿ ಅನುಷ್ಠಾನಗೊಳಿಸುತ್ತಿದೆ ನರೇಂದ್ರ ಪ.ಪೂ. ಕಾಲೇಜು.
ವ್ಯವಸ್ಥೆ ,ಸೌಲಭ್ಯ ಮತ್ತು ಶಿಕ್ಷಣದ ಗುಣಮಟ್ಟದಲ್ಲಿ ಈ ಸಂಸ್ಥೆಯು ಅತ್ಯಲ್ಪಅವಧಿಯಲ್ಲಿಯೇ ಪ್ರತಿಷ್ಠಿತ ಸಂಸ್ಥೆಗಳ ಸಾಲಿಗೆ ಸೇರ್ಪಡೆಗೊಂಡಿದೆ.

ದಾಖಲಾತಿ ಆರಂಭ : ಈಗಾಗಲೇ ಪ್ರಥಮ ಪಿಯುಸಿಗೆ ದಾಖಲಾತಿ ಆರಂಭಗೊಂಡಿದ್ದು, ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ವೆಬ್‌ಸೈಟ್ http://www.narendrapu.vivekanandaedu.org ಅಥವಾ ಮೊಬೈಲ್ ಸಂಖ್ಯೆ: 9481917888,08251-298555ನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Ad Widget
Click to comment

Leave a Reply

ಶಿಕ್ಷಣ

Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.

Ad Widget

Ad Widget <> Ad Widget

ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.



Ad Widget

ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.

Ad Widget

Ad Widget

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು,ಅ.1: ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಸರ್ಟಿಫಿಕೇಟ್ ಮಾತ್ರವಲ್ಲ, ಉಜ್ವಲ ಭವಿಷ್ಯ, ಒಳ್ಳೆಯ ವೇತನ ಹಾಗೂ ಹೆಸರು ಇತ್ಯಾದಿಗಳೆಲ್ಲವೂ ಲಭಿಸಲಿದೆ. ಇಂದಿನ ಕಾಲದಲ್ಲಿ ಕಲಿಕೆಗೆ ಬೇಕಾದ ಅನೇಕ ಸಂಪನ್ಮೂಲಗಳು ಲಭ್ಯವಿರುವಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪೂರ್ವಸಿದ್ಧತೆ ಎಂಬುದು ನಾವು ಉತ್ತೀರ್ಣರಾಗಲು ಅತ್ಯಗತ್ಯ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಸಕ್ರಿಯರಾಗಿ ಅಧ್ಯಯನ ನಡೆಸಿ ಎಲ್ಲಾ ರೀತಿಯಿಂದಲೂ ಸಿದ್ಧರಾಗಿ ಪರೀಕ್ಷೆಯನ್ನು ಜಯಿಸಬೇಕು ಎಂದು ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ತಿಳಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ ಅಧ್ಯಾಪಕ ವೃತ್ತಿಯನ್ನು ಬಯಸಿ ಹೋಗುವವರಿಗೆ, ಸಂಶೋಧನಾ ಕ್ಷೇತ್ರವನ್ನು ಆರಿಸುವವರಿಗೆ ನೆಟ್ ಹಾಗೂ ಕೆ-ಸೆಟ್ ಪರೀಕ್ಷೆಗಳನ್ನು ಪೂರ್ಣಗೊಳಿಸುವುದು ಅಗತ್ಯ. ಪರೀಕ್ಷೆಗೆ ಸಿದ್ಧರಾಗಲು ನಿರಂತರವಾಗಿ ಓದಿನಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಇವುಗಳ ಪಠ್ಯಕ್ರಮಗಳನ್ನು ಅಭ್ಯಾಸಿಸಿ ಪರಿಣತರಿಂದ ಮಾರ್ಗದರ್ಶನವನ್ನು ಪಡೆದು ಯಶಸ್ಸು ಗಳಿಸಬೇಕಿದೆ ಎಂದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ.ಬಿ ಸ್ವಾಗತಿಸಿ ಪ್ರಥಮ ಎಂಕಾಂ ವಿದ್ಯಾರ್ಥಿ ಧನರಾಜ್ ವಂದಿಸಿದರು. ಪ್ರಥಮ ಎಂಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಯು.ಕೆ ನಿರೂಪಿಸಿದರು.



Ad Widget
Ad Widget
Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಯಿದೆ ದೇವುಸ್ ಚರ್ಚ್ ಸಹಾಯಕ ಧರ್ಮಗುರು
ಫಾ. ಮರ್ವಿನ್ ಲೋಬೊ ಮಾತನಾಡಿ, ಗಾಂಧೀಜಿಯವರ ಜೀವನ ನಮಗೆ ದಾರಿದೀಪವಾಗಿದ್ದು, ಪ್ರತಿಯೊಬ್ಬರು ಅವರು ತೋರಿಸಿಕೊಟ್ಟ ಹಾದಿಯಲ್ಲಿ ಮುನ್ನಡೆಯಬೇಕು.

Ad Widget

Ad Widget <> Ad Widget

ಮುಖ್ಯವಾಗಿ ಸತ್ಯ ಮತ್ತು ಅಹಿಂಸೆ ಗಾಂಧೀಜಿಯವರು ತೋರಿಸಿದ ಎರಡು ಮಾರ್ಗಗಳು. ಇಂದು ಅಹಿಂಸೆ ಕೇವಲ ಭೌತಿಕವಾಗಿ ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಗಳಲ್ಲಿ ಕೂಡ ಪಾಲನೆಯನ್ನು ಮಾಡಬೇಕಾಗಿದೆ. ಗಾಂಧೀಜಿಯ ಮರಣದ 78 ವರ್ಷಗಳ ನಂತರವೂ ಗಾಂಧೀಜಿಯವರ ಜೀವನ ಅತ್ಯಂತ ಪ್ರಸ್ತುತವಾಗಿದೆ ಎಂದು ತಿಳಿಸಿದರು.



Ad Widget

ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಮಹಾತ್ಮಾ ಗಾಂದೀಜಿಯವರ ಸರಳ ಜೀವನ ನಮಗೆ ಪಾಠವಾಗಬೇಕು. ಅವರಿಗೆ ಅತ್ಯಂತ ವಿಲಾಸಿ ಜೀವನವನ್ನು ನಡೆಸುವ ಅವಕಾಶ ಇದ್ದರೂ, ಕೂಡ ಭಾರತೀಯರಿಗಾಗಿ ಅವರು ಸರಳ ಮತ್ತು ನ್ಯಾಯ ಸಮ್ಮತ ಜೀವನವನ್ನು ಆಯ್ಕೆ ಮಾಡಿಕೊಂಡರು.

Ad Widget

Ad Widget

ಸತ್ಯದೊಂದಿಗಿನ ನನ್ನ ಪ್ರಯೋಗಗಳು ಎನ್ನುವ ಪುಸ್ತಕದಲ್ಲಿ ಅವರು ಅವರ ಜೀವನದಲ್ಲಿ ನಡೆದಂತಹ ಘಟನೆಗಳನ್ನು ವಿವರಿಸಿದ್ದು, ಇಂದಿನ ಯುವಕರು ಕಡ್ಡಾಯವಾಗಿ ಈ ಪುಸ್ತಕವನ್ನು ಓದಬೇಕೆಂದು ತಿಳಿಸಿದರು.

ಉಪನ್ಯಾಸಕರಾದ ಭರತ್ ಕುಮಾರ್ ಗಾಂಧೀಜಿಯವರ ತತ್ವ, ಸಿದ್ಧಾಂತಗಳ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ಯಶವಂತ್ ಎಂ ಡಿ ಹಾಗೂ ಗೋವಿಂದ್ ಪ್ರಕಾಶ್ ಸಿ. ಏಚ್ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾಲೇಜಿನ ಬೋಧಕ/ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕರಾದ ಸುಮಾ ಡಿ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading