ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವ; ಕಾಲೇಜು ಜೀವನ ನಮ್ಮ ಬದುಕಿನ ಅವಿಸ್ಮರಣೀಯ ಘಟ್ಟ- ಹರೀಶ್ ಪೂಂಜ
ವಿವೇಕಾನಂದ ಕಲಾ ವಿಜ್ಞಾನ ವಾಣಿಜ್ಯ ಮಹಾವಿದ್ಯಾಲಯ ಸ್ವಾಯತ್ತ ಪುತ್ತೂರು ಇಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಮಾತನಾಡಿದರು.
ಪುತ್ತೂರು: ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಅಡಗಿದೆ. ನಾವು ಸಮಾಜಕ್ಕೆ ಹಾಗೂ ದೇಶಕ್ಕೆ ನಮ್ಮಿಂದಾದ ಕೊಡುಗೆಯನ್ನು ನೀಡಬೇಕು. ಸಮಾಜದಲ್ಲಿ ವ್ಯಕ್ತಿ ಹೇಗಿರುತ್ತಾನೆ ಎಂಬುದರ ಮೇಲೆ ಆತನ ವ್ಯಕ್ತಿತ್ವ ನಿರ್ಮಾಣವಾಗುತ್ತದೆ. ನಾವು ಜೀವನದಲ್ಲಿ ಮುನ್ನಡೆ ಸಾಧಿಸಿ ನಮ್ಮೊಂದಿಗೆ ಇರುವವರನ್ನೂ ಕೂಡಿಕೊಂಡು ಬೆಳೆಯಬೇಕು. ನಾವು ಇಂದು ಸಮಾಜದಲ್ಲಿ ಸಾಧಕರು ಎಂದು ಹೆಸರಿಸುವ ಎಲ್ಲರೂ ಕಷ್ಟ, ಸವಾಲುಗಳನ್ನು ಎದುರಿಸಿ ಮುಂದೆ ಬಂದವರಾಗಿರುತ್ತಾರೆ. ಅವರ ಜೀವನದಿಂದ ವಿದ್ಯಾರ್ಥಿಗಳು ಪ್ರೇರಣೆ ಪಡೆಯಬೇಕು ಎಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನುಡಿದರು.

ಇವರು ವಿವೇಕಾನಂದ ಕಲಾ ವಿಜ್ಞಾನ ವಾಣಿಜ್ಯ ಮಹಾವಿದ್ಯಾಲಯ ಸ್ವಾಯತ್ತ ಪುತ್ತೂರು ಇಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಡಾ. ಗಣೇಶ ಸಂಜೀವ ಮಾತನಾಡಿ, ವಿದ್ಯಾರ್ಥಿಗಳು ಅವರ ಕನಸುಗಳನ್ನು ನನಸು ಮಾಡುವುದನ್ನು ಮಾತ್ರ ಯೋಚಿಸದೇ ಹೆತ್ತವರ ಆಶಯಗಳನ್ನೂ ತಿಳಿದು ಪೂರೈಸಬೇಕು. ಪೋಷಕರು ತ್ಯಾಗ ಮಾಡಿ ಪರಿಶ್ರಮಪಟ್ಟು ಮಕ್ಕಳನ್ನು ಬೆಳೆಸುತ್ತಾರೆ. ಪ್ರಮಾಣಪತ್ರ ಸಿಕ್ಕ ಮಾತ್ರಕ್ಕೆ ಸುಶಿಕ್ಷಿತ ಎಂದಲ್ಲ, ಇತರರಿಗೆ ಗೌರವ ನೀಡಿ ವಿನಮ್ರವಾಗಿ ನಡೆದುಕೊಳ್ಳುವುದೂ ಅತ್ಯಗತ್ಯ. ಶಿಕ್ಷಕರ ಹಾಗೂ ಹೆತ್ತವರ ಕೊಡುಗೆಯನ್ನೂ ಸ್ಮರಿಸಿಕೊಳ್ಳಬೇಕು ಎಂದರು.
ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಾರ್ಷಿಕೋತ್ಸವ ಎಂದರೆ ಸಂಭ್ರಮದ ಕ್ಷಣ.ಇದು ವಿದ್ಯಾರ್ಥಿಗಳ ಪ್ರತಿಭೆಗೆ ಅವಕಾಶ ನೀಡುವ ವೇದಿಕೆಯಾಗಿದೆ. ನಾವು ಮಾಡುವ ಕೆಲಸ ಸಮಾಜಕ್ಕೆ, ದೇಶಕ್ಕೆ ಒಳ್ಳೆಯದನ್ನು ಮಾಡುತ್ತದೆಯೇ ಎಂದು ಚಿಂತಿಸಿ ಕಾರ್ಯಪ್ರವೃತ್ತರಾಗುವುದು ಮುಖ್ಯ. ಹಾಗೆ ಚಿಂತಿಸಿದರೆ ನಮ್ಮ ಬದುಕು ಸಾರ್ಥಕ ಎಂದರು.
ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ.ಎನ್ ಹಾಗೂ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಮಾತನಾಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಡಾ. ಗಣೇಶ್ ಸಂಜೀವ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ದತ್ತಿನಿಧಿ ಬಹುಮಾನಗಳನ್ನು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡಲಾಯಿತು. ಶೈಕ್ಷಣಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಸಕ್ರಿಯವಾಗಿರುವ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ರಾಯಭಾರಿ ಎನ್ನುವ ಪುರಸ್ಕಾರವನ್ನು ನೀಡಲಾಯಿತು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಾಧಕ ಅಧ್ಯಾಪಕರನ್ನೂ ಈ ಸಂದರ್ಭದಲ್ಲಿ ಗೌರವಿಸಲಾಯಿತು. ವೇದಿಕೆಯಲ್ಲಿ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು
ನಂತರ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಸ್ವಾಗತಿಸಿ ಕನ್ನಡ ವಿಭಾಗದ ಮುಖ್ಯಸ್ಥ ಹಾಗೂ ಆಡಳಿತ ವಿಭಾಗದ ವಿಶೇಷಾಧಿಕಾರಿ ಡಾ. ಮನಮೋಹನ.ಎಂ ವಂದಿಸಿದರು. ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ವಿಜಯ ಸರಸ್ವತಿ ಸಹಕರಿಸಿದರು.
ಕನ್ನಡ ವಿಭಾಗದ ಉಪನ್ಯಾಸಕ ಮಧು ಕುಮಾರ್ ಕಾರ‍್ಯಕ್ರಮವನ್ನು ನಿರೂಪಿಸಿದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಶಾಲಾ ರಕ್ಷಕ-ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ಸಭೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ರಕ್ಷಕ- ಶಿಕ್ಷಕ ಸಂಘದ ಪದಾಧಿಕಾರಿಗಳಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಹತ್ತನೆಯ ತರಗತಿಯ ವಿದ್ಯಾರ್ಥಿಯ ಪೋಷಕರದ ಪ್ರತಿಭಾರವರು ಆಯ್ಕೆಯಾದರು.
ಉಪಾಧ್ಯಕ್ಷರುಗಳಾಗಿ ಚೇತನ, ರವೀಂದ್ರ, ವಿದ್ಯಾ ಅವರುಗಳು ಆಯ್ಕೆಯಾದರು.
2025-2026 ನೇ ಸಾಲಿನ ಅಧ್ಯಕ್ಷರಾದ ಭಾಸ್ಕರ ಬಲ್ಯಾಯ ಅವರು ನಿಯೋಜಿತ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಸಮರ್ಪಿಸಿ ಸಂಸ್ಥೆಯ ಶ್ರೇಯಾಭಿವೃದ್ಧಿಗೆ ಭರವಸೆಯ ಮಾತುಗಳನ್ನಾಡಿದರು.
ಸಭೆಯಲ್ಲಿ ಕಾರ್ಯಕಾರಿಣಿ ಸಮಿತಿಯ ಪ್ರತಿನಿಧಿಗಳು ಹಾಗೂ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
-
Uncategorized20 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್14 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು18 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized19 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ18 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ19 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ18 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್19 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















