ಸ್ಥಳೀಯ
Heatstroke-ಸುಡುತ್ತಿದೆ ಬಿಸಿಲು, ಹೆಚ್ಚುತ್ತಿದೆ ಶಾಖಾಘಾತದ ಭೀತಿ: ನಿಮ್ಮ ಪ್ರಾಣ ರಕ್ಷಿಸಿಕೊಳ್ಳಲು ಇಲ್ಲಿವೆ ತಜ್ಞರ ಸಲಹೆಗಳು..!
ಇತ್ತೀಚಿನ ದಿನಗಳಲ್ಲಿ ಬಿಸಿಲಿನ ಆರ್ಭಟ ಜೋರಾಗಿದೆ. ವಾತಾವರಣದ ಉಷ್ಣತೆ 42 ಡಿಗ್ರಿ ಸೆಲ್ಸಿಯಸ್ಗಿಂತಲೂ ಹೆಚ್ಚಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ದೇಹವು ವಿಪರೀತ ಶಾಖಕ್ಕೆ ತುತ್ತಾಗಿ ‘ಶಾಖಾಘಾತ’ ಅಥವಾ ‘ಹೀಟ್ ಸ್ಟ್ರೋಕ್’ ಉಂಟಾಗುವ ಸಾಧ್ಯತೆ ದಟ್ಟವಾಗಿರುತ್ತದೆ. ದೇಹವು ತನ್ನೊಳಗಿನ ಉಷ್ಣತೆಯನ್ನು ಸಮತೋಲನದಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗದಿದ್ದಾಗ ಈ ಪರಿಸ್ಥಿತಿ ನಿರ್ಮಾಣವಾಗುತ್ತದೆ.
ಇತ್ತೀಚಿನ ದಿನಗಳಲ್ಲಿ ಬಿಸಿಲಿನ ಆರ್ಭಟ ಜೋರಾಗಿದೆ. ವಾತಾವರಣದ ಉಷ್ಣತೆ 42 ಡಿಗ್ರಿ ಸೆಲ್ಸಿಯಸ್ಗಿಂತಲೂ ಹೆಚ್ಚಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ದೇಹವು ವಿಪರೀತ ಶಾಖಕ್ಕೆ ತುತ್ತಾಗಿ ‘ಶಾಖಾಘಾತ’ ಅಥವಾ ‘ಹೀಟ್ ಸ್ಟ್ರೋಕ್’ ಉಂಟಾಗುವ ಸಾಧ್ಯತೆ ದಟ್ಟವಾಗಿರುತ್ತದೆ. ದೇಹವು ತನ್ನೊಳಗಿನ ಉಷ್ಣತೆಯನ್ನು ಸಮತೋಲನದಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗದಿದ್ದಾಗ ಈ ಪರಿಸ್ಥಿತಿ ನಿರ್ಮಾಣವಾಗುತ್ತದೆ.
ಶಾಖಾಘಾತದ ಪ್ರಮುಖ ಲಕ್ಷಣಗಳು:
ವಿಪರೀತ ಸುಸ್ತು, ತಲೆನೋವು, ತಲೆಸುತ್ತು ಮತ್ತು ವಾಂತಿ ಬಂದಂತಾಗುವುದು.
ದೇಹದ ಉಷ್ಣತೆ ಹಠಾತ್ ಏರಿಕೆ (106 ಡಿಗ್ರಿ ಫ್ಯಾರನ್ಹೀಟ್ ವರೆಗೆ).
ಚರ್ಮ ಕೆಂಪಾಗುವುದು, ಬಿಸಿಯಾಗುವುದು ಆದರೆ ಬೆವರುವಿಕೆ ನಿಂತುಹೋಗುವುದು.
ನಾಡಿ ಬಡಿತ ಮತ್ತು ಉಸಿರಾಟದ ವೇಗ ಹೆಚ್ಚಾಗುವುದು.
ಗೊಂದಲ, ಭ್ರಮೆ ಅಥವಾ ವಿಚಿತ್ರ ವರ್ತನೆ ಕಂಡುಬರುವುದು.
ಸಕಾಲಕ್ಕೆ ಚಿಕಿತ್ಸೆ ಸಿಗದಿದ್ದರೆ ವ್ಯಕ್ತಿ ಕೋಮಾಕ್ಕೆ ಜಾರುವ ಅಪಾಯವಿರುತ್ತದೆ.
ಯಾರಿಗೆ ಅಪಾಯ ಹೆಚ್ಚು?
ಮಕ್ಕಳು ಮತ್ತು ವೃದ್ಧರು: ಇವರಲ್ಲಿ ದೇಹದ ತಾಪಮಾನ ನಿಯಂತ್ರಿಸುವ ಶಕ್ತಿ ಕಡಿಮೆ ಇರುತ್ತದೆ.
ಕಾಯಿಲೆ ಇರುವವರು: ಹೃದಯ, ಶ್ವಾಸಕೋಶ ಅಥವಾ ಮೂತ್ರಪಿಂಡದ ಸಮಸ್ಯೆ ಇರುವವರು.
ಕ್ರೀಡಾಪಟುಗಳು: ಬಿಸಿಲಿನಲ್ಲಿ ದೈಹಿಕ ಶ್ರಮದ ಆಟ ಆಡುವವರು.
ಹೊರಾಂಗಣ ಕಾರ್ಮಿಕರು: ನೇರ ಸೂರ್ಯನ ಶಾಖದಲ್ಲಿ ಕೆಲಸ ಮಾಡುವವರು.
ತುರ್ತು ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ:
ವ್ಯಕ್ತಿಯನ್ನು ತಕ್ಷಣ ನೆರಳಿನ ಪ್ರದೇಶಕ್ಕೆ ಅಥವಾ ತಂಪಾದ ಜಾಗಕ್ಕೆ ಕರೆದೊಯ್ಯಿರಿ.
ಬಟ್ಟೆಗಳನ್ನು ಸಡಿಲಗೊಳಿಸಿ, ಮೈಮೇಲೆ ತಣ್ಣೀರು ಚಿಮುಕಿಸಿ ಅಥವಾ ಫ್ಯಾನ್ ಗಾಳಿ ಹಾಕಿ.
ತೊಡೆಸಂಧಿ ಮತ್ತು ಕಂಕುಳಿನ ಭಾಗದಲ್ಲಿ ಐಸ್ ಪ್ಯಾಕ್ ಇರಿಸಿ.
ವ್ಯಕ್ತಿ ಪ್ರಜ್ಞೆಯಲ್ಲಿದ್ದರೆ ಎಳನೀರು, ನೀರು ಅಥವಾ ನಿಂಬೆ ಹಣ್ಣಿನ ರಸ ನೀಡಿ. (ಪೆಪ್ಸಿ, ಕೋಕ್ ಅಥವಾ ಆಲ್ಕೋಹಾಲ್ ನೀಡಬೇಡಿ).
ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ.
ತಡೆಗಟ್ಟುವುದು ಹೇಗೆ? (ಮುನ್ನೆಚ್ಚರಿಕೆಗಳು):
ಜಲಸಂಚಯನ (Hydration): ದಿನಕ್ಕೆ ಕನಿಷ್ಠ 3 ರಿಂದ 4 ಲೀಟರ್ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ, ಹಣ್ಣಿನ ರಸಗಳಿಗೆ ಆದ್ಯತೆ ನೀಡಿ.
ಸರಿಯಾದ ಬಟ್ಟೆ: ತೆಳುವಾದ, ಸಡಿಲವಾದ ಬಿಳಿ ಅಥವಾ ತಿಳಿ ಬಣ್ಣದ ಹತ್ತಿ ಬಟ್ಟೆ ಧರಿಸಿ. ಗಾಢ ಬಣ್ಣದ ಅಥವಾ ಕಪ್ಪು ಬಟ್ಟೆಗಳನ್ನು ತಪ್ಪಿಸಿ.
ಬಿಸಿಲ ಸಮಯ: ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅತಿಯಾದ ಬಿಸಿಲಿರುವಾಗ ಶ್ರಮದಾಯಕ ಕೆಲಸಗಳನ್ನು ಮಾಡಬೇಡಿ.
ಆಹಾರ ಕ್ರಮ: ಅತಿಯಾದ ಸಕ್ಕರೆಯುಕ್ತ ಪಾನೀಯ, ಕೆಫಿನ್ (ಕಾಫಿ/ಟೀ) ಮತ್ತು ಆಲ್ಕೋಹಾಲ್ ಸೇವನೆಯನ್ನು ಕಡಿಮೆ ಮಾಡಿ. ಹಣ್ಣು ಮತ್ತು ಗಂಜಿಯಂತಹ ಲಘು ಆಹಾರ ಸೇವಿಸಿ.
ನೆನಪಿಡಿ: ಶಾಖಾಘಾತವು ಪ್ರಾಣಾಪಾಯ ತರಬಲ್ಲ ವೈದ್ಯಕೀಯ ತುರ್ತು ಪರಿಸ್ಥಿತಿಯಾಗಿದೆ. ಬಿಸಿಲಿನ ಬಗ್ಗೆ ನಿರ್ಲಕ್ಷ್ಯ ಬೇಡ, ಮುನ್ನೆಚ್ಚರಿಕೆಯೇ ಸುರಕ್ಷತೆಗೆ ಮೊದಲ ಹೆಜ್ಜೆ.
(Source : ONLINE)
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಕ್ಷಣ
RTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ರಾಜಕೀಯ19 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ20 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಪರಾಧ24 hours agoMadikeri-ಗಾಂಜಾ ಸೇವಿಸಿದವನಿಗೆ ವಿಭಿನ್ನ ಶಿಕ್ಷೆ: ದಿನವಿಡೀ ಟ್ರಾಫಿಕ್ ಕರ್ತವ್ಯ ನಿರ್ವಹಿಸಿದ ಆರೋಪಿ
-
ಅಂತರ ರಾಜ್ಯ20 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಅಂತರ ರಾಜ್ಯ24 hours agoBird flu alert-ಕೇರಳದಲ್ಲಿ ಹಕ್ಕಿಜ್ವರ ಆತಂಕ: 26 ಸಾವಿರ ಕೋಳಿ, ಬಾತುಕೋಳಿ ಸೇರಿ ಪಕ್ಷಿಗಳ ಹತ್ಯೆಗೆ ನಿರ್ಧಾರ..!
-
ಬಿಗ್ ನ್ಯೂಸ್3 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕ್ರೀಡೆ24 hours agoIPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
-
ಕಾರ್ಯಕ್ರಮಗಳು20 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026















