Connect with us

ಸುಳ್ಯ

Sullia-ಕೇಂದ್ರ ಸರ್ಕಾರದಿಂದ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಕ್ರಮ; ವೈಜ್ಞಾನಿಕ ಪ್ರಾತ್ಯಕ್ಷಿಕೆ ನಡೆಸುತ್ತಿರುವ ತೋಟಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಂಸದ ಕ್ಯಾ. ಚೌಟ

Published

on

Ad Widget

Ad Widget

Ad Widget

Ad Widget

ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ​ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ (CPCRI) ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದ ಗುತ್ತಿಗಾರಿನಲ್ಲಿ ಅಳವಡಿಸಿರುವ ವಿಶೇಷ ಪ್ರಾತಕ್ಷಿಕೆ ಕುರಿತಂತೆ ಇಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಅಡಿಕೆ ಬೆಳೆಗಾರರ ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಸುಳ್ಯ: ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ​ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ (CPCRI) ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದ ಗುತ್ತಿಗಾರಿನಲ್ಲಿ ಅಳವಡಿಸಿರುವ ವಿಶೇಷ ಪ್ರಾತಕ್ಷಿಕೆ ಕುರಿತಂತೆ ಇಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಅಡಿಕೆ ಬೆಳೆಗಾರರ ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ಬಾಧಿಸಿರುವ ಎಲೆ ಚುಕ್ಕೆ ರೋಗವನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಕ್ಯಾ. ಚೌಟ ಅವರು ಶಾಶ್ವತ ಹಾಗೂ ವೈಜ್ಞಾನಿಕವಾದ ಪರಿಹಾರ ಮಾರ್ಗಗಳನ್ನು ಅಳವಡಿಸುವುದಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದಾರೆ. ಇದರ ಭಾಗವಾಗಿ ಚನಿಲದಲ್ಲಿರುವ ಸುಬ್ರಹ್ಮಣ್ಯ ಪ್ರಸಾದ್‌ ಹಾಗೂ ಸುತ್ತಲಿನ ಅಡಿಕೆ ಬೆಳೆಗಾರರ ತೋಟಕ್ಕೆ ಸಿಪಿಸಿಆರ್‌ಐ ಕಾಸರಗೋಡು ನಿರ್ದೇಶಕರಾದ ಡಾ. ಬಾಲಚಂದ್ರ ಹೆಬ್ಬಾರ್ , ಕ್ಯಾಂಪ್ಕೋ ಅಧ್ಯಕ್ಷರಾದ ಸತೀಶ್‌ಚಂದ್ರ, ಹಾಗೂ ಕೃಷಿ ವಿಜ್ಞಾನಿಗಳ ಜತೆ ಭೇಟಿ ನೀಡಿದ ಸಂಸದರು, ಅಲ್ಲಿ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಅಳವಡಿಸಿರುವ ಪೋಷಕಾಂಶ ಮತ್ತು ವೈಜ್ಞಾನಿಕ ವಿಧಾನ ಆಧಾರಿತ ಪ್ರಾತ್ಯಕ್ಷಿಕೆಗಳ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು.

Ad Widget

Ad Widget <> Ad Widget

ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರನ್ನು ಈ ಎಲೆಚುಕ್ಕಿ ರೋಗದಿಂದ ರಕ್ಷಿಸುವುದಕ್ಕೆ ಕ್ಯಾ. ಚೌಟ ಅವರು ವೈಜ್ಞಾನಿಕ ಪರಿಹಾರೋಪಾಯಗಳ ಕಡೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಅದರಂತೆ ಸುಳ್ಯದ ಗುತ್ತಿಗಾರು ಗ್ರಾಮದಲ್ಲಿ ಸುಬ್ರಹ್ಮಣ್ಯ ಪ್ರಸಾದ್‌ ಅವರ ಒಂದೂವರೆ ಎಕರೆ ಸೇರಿದಂತೆ ಸುತ್ತಲಿನ ಅಡಿಕೆ ಕೃಷಿಕರ ಒಟ್ಟು 6 ಎಕರೆಯಲ್ಲಿ ಪ್ರಾಯೋಗಿಕವಾಗಿ ಎಲೆಚುಕ್ಕಿ ರೋಗ ತಡೆಯಲು ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ(CPCRI)ಯ ವಿಟ್ಲ ಪ್ರಾಂತೀಯ ಕ್ಷೇತ್ರದ ಮಾರ್ಗದರ್ಶನದಲ್ಲಿ ಪೋಷಕಾಂಶ ಮತ್ತು ವೈಜ್ಞಾನಿಕ ವಿಧಾನಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಕಳೆದ ಜೂನ್‌ನಿಂದ ಇವರೆಲ್ಲರ ತೋಟದಲ್ಲಿ ವೈಜ್ಞಾನಿಕ ಕ್ರಮಗಳನ್ನು ಕೈಗೊಂಡು ಅಡಿಕೆ ಬೆಳೆಗೆ ಬಾಧಿಸುವ ಎಲೆಚುಕ್ಕಿ ರೋಗದ ಬಗ್ಗೆ ಕಾಲ-ಕಾಲಕ್ಕೆ ಹೆಚ್ಚಿನ ನಿಗಾ, ಅಗತ್ಯ ಮಾಹಿತಿ ಸಂಗ್ರಹಿಸಿ ಪ್ರಾತ್ಯಕ್ಷೆಗಳ ಮೂಲಕ ಪೂರಕ ಅಧ್ಯಯನ ನಡೆಸಲಾಗುತ್ತಿದೆ. ಜತೆಗೆ, ಕೃಷಿಕರಿಗೂ ಈ ಎಲೆಚುಕ್ಕಿ ರೋಗ ತಡೆಯಲು ಅಡಿಕೆ ತೋಟದಲ್ಲಿ ಏನೆಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂಬ ಬಗ್ಗೆ ಕಾಲ-ಕಾಲಕ್ಕೆ ಕೃಷಿ ವಿಜ್ಞಾನಿಗಳು ಭೇಟಿ ನೀಡಿ ಮಾರ್ಗದರ್ಶನ ನೀಡುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಪೂರಕವಾಗಿ ಗುತ್ತಿಗಾರಿನ ಅಡಿಕೆ ಬೆಳೆಗಾರರ ತೋಟದಲ್ಲಿ ವೈಜ್ಞಾನಿಕ ಅಧ್ಯಯನದ ಪ್ರಗತಿ ಯಾವ ರೀತಿ ಸಾಗುತ್ತಿದೆ; ಅಲ್ಲಿ ರೈತರಿಗೆ ಯಾವೆಲ್ಲ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವುದಕ್ಕೆ ಮಾಹಿತಿ-ಮಾರ್ಗದರ್ಶನ ನೀಡಲಾಗುತ್ತಿದೆ ಎಂಬುದರ ಬಗ್ಗೆ ಪರಿಶೀಲಿಸುವುದಕ್ಕೆ ಸಂಸದ ಕ್ಯಾ. ಚೌಟ ಅವರು ಇಂದು ಸುಬ್ರಹ್ಮಣ್ಯ ಪ್ರಸಾದ್‌ ಅವರ ಅಡಿಕೆ ತೋಟಕ್ಕೆ ಭೇಟಿ ನೀಡಿ ಅಲ್ಲಿನ ಎಲೆಚುಕ್ಕಿ ರೋಗ ನಿಯಂತ್ರಣ ಪ್ರಾತ್ಯಕ್ಷಿಕೆ ಬಗ್ಗೆ ಪರಿಶೀಲಿಸಿದ್ದಾರೆ. ಜತೆಗೆ ಈ ಸಂಶೋಧನೆ ಪ್ರಗತಿ ಬಗ್ಗೆಯೂ ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್, ಇಂಡಿಯನ್‌ ಕೌನ್ಸಿಲ್‌ ಆಫ್‌ ಅಗ್ರಿಕಲ್ಚರ್‌ ರಿಸರ್ಚ್‌ ಸಂಸ್ಥೆಗಳ ಕೃಷಿ ವಿಜ್ಞಾನಿಗಳು, ಪರಿಣತರು ಹಾಗೂ ರೈತರೊಂದಿಗೂ ಸಮಾಲೋಚನೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.

Ad Widget

Ad Widget

ಈ ಸಂದರ್ಭದಲ್ಲಿ ಸಿಪಿಸಿಆರ್‌ಐ ವಿಟ್ಲದ ರಾಜೇಶ್, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಮುಖಂಡರಾದ ವೆಂಕಟ್ ದಂಬೆಕೋಡಿ, ಕೇಶವ ಭಟ್ ಮುಳಿಯ, ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಮೊಗ್ರ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು, ಕೃಷಿ ವಿಜ್ಞಾನಿಗಳು, ಅಡಿಕೆ ಬೆಳೆಗಾರರು ಮತ್ತು ಸ್ಥಳೀಯರು ಜೊತೆಗಿದ್ದರು.

ಎಲೆಚುಕ್ಕಿ ರೋಗ ವ್ಯಾಪಕತೆ ಪತ್ತೆಗೆ ಅಟೋಮ್ಯಾಟಿಕ್‌ ವೆದರ್‌ ಸ್ಟೇಷನ್‌ :

ಎಲೆ ಚುಕ್ಕಿ ರೋಗವು ಸಾಮಾನ್ಯವಾಗಿ ಮಳೆ ಜಾಸ್ತಿಯಾಗಿ ಅದರ ತೇವಾಂಶದಿಂದ ಗಾಳಿ ಮೂಲಕ ಅಡಿಕೆ ಮರಗಳಿಗೆ ವೇಗವಾಗಿ ಹರಡುತ್ತದೆ. ಮಳೆ ಜಾಸ್ತಿ ಸೇರಿದಂತೆ ಹವಾಮಾನ ಬದಲಾವಣೆ ಕೂಡ ಎಲೆಚುಕ್ಕಿ ರೋಗ ವ್ಯಾಪಕಕ್ಕೆ ಒಂದು ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಸುಬ್ರಹ್ಮಣ್ಯ ಪ್ರಸಾದ್‌ ಅವರ ಅಡಿಕೆ ತೋಟದಲ್ಲಿ ಅಧ್ಯಯನದ ದೃಷ್ಟಿಯಿಂದ ಅಟೋಮ್ಯೆಟಿಕ್‌ ವೆದರ್‌ ಸ್ಟೇಷನ್‌ ಕೂಡ ಅಳವಡಿಸಲಾಗಿದೆ. ಇದರಿಂದ ಎಷ್ಟು ಪ್ರಯಾಣದ ಮಳೆಯಾಗಿದೆ, ತೇವಾಂಶ, ತಾಪಮಾನ ಸೇರಿದಂತೆ ಹವಾಮಾನ ಬದಲಾವಣೆಯಿಂದ ಈ ಎಲೆಚುಕ್ಕಿ ರೋಗ ಯಾವ ರೀತಿ ಹರಡುತ್ತದೆ ಎಂಬುದರ ಅಧ್ಯಯನ ಕೂಡ ಇದರಿಂದ ಸಾಧ್ಯವಾಗಲಿದೆ.

Ad Widget
Click to comment

Leave a Reply

ಸುಳ್ಯ

Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಸುಳ್ಯ

Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ

Published

on

Ad Widget

Ad Widget

Ad Widget

Ad Widget

ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

Ad Widget

Ad Widget

Ad Widget

Ad Widget

ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.

Ad Widget

Ad Widget alt="Ad Widget"/>

Ad Widget

ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.

Ad Widget

Ad Widget <> Ad Widget

ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.

Continue Reading

ಸುಳ್ಯ

Areca nut-ಅಡಿಕೆ ರೇಟ್‌ ಜಂಪ್‌ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ

Published

on

Ad Widget

Ad Widget

Ad Widget

Ad Widget

ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.

Ad Widget

Ad Widget

Ad Widget

Ad Widget

ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.

Ad Widget

Ad Widget alt="Ad Widget"/>

Ad Widget

ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.

Ad Widget

Ad Widget <> Ad Widget

ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.

ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.

Ad Widget

Ad Widget

ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.

ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!