ಶಿಕ್ಷಣ
Purvi Bharadwaj-ಬಾಲವಿಕಾಸದ ಪೂರ್ವಿ ಎ. ಭಾರದ್ವಾಜ್ ಗೆ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಅಭಿನಂದನೆ
ಪೆರಾಜೆ – 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 620 ಅಂಕಗಳನ್ನು ಗಳಿಸಿ, ಬಂಟ್ವಾಳ ತಾಲೂಕಿಗೆ ಪ್ರಥಮ ಸ್ಥಾನಿಯಾದ ಹಾಗೂ ರಾಜ್ಯಕ್ಕೆ ಆರನೇ ರ್‍ಯಾಂಕ್ ಪಡೆದ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪೂರ್ವಿ ಎ ಭಾರದ್ವಾಜ್ ನ್ನು ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮಾಲತಿ ಕೆ, ಏಪ್ರಿಲ್ 28 ರಂದು ಶಾಲೆಗೆ ಭೇಟಿ ನೀಡಿ ಅಭಿನಂದಿಸಿದರು.
ವಿಟ್ಲ : ಪೆರಾಜೆ – 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 620 ಅಂಕಗಳನ್ನು ಗಳಿಸಿ, ಬಂಟ್ವಾಳ ತಾಲೂಕಿಗೆ ಪ್ರಥಮ ಸ್ಥಾನಿಯಾದ ಹಾಗೂ ರಾಜ್ಯಕ್ಕೆ ಆರನೇ ರ್‍ಯಾಂಕ್ ಪಡೆದ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪೂರ್ವಿ ಎ ಭಾರದ್ವಾಜ್ ನ್ನು ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮಾಲತಿ ಕೆ, ಏಪ್ರಿಲ್ 28 ರಂದು ಶಾಲೆಗೆ ಭೇಟಿ ನೀಡಿ ಅಭಿನಂದಿಸಿದರು.
ಪರೀಕ್ಷೆ ಬರೆದ 79 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಗೊಳ್ಳಲು ಹಾಗೂ ಬಂಟ್ವಾಳ ತಾಲೂಕಿನಲ್ಲಿ ಸಂಸ್ಥೆ ಮುಂಚೂಣಿಯಲ್ಲಿರಲು ಶ್ರಮಿಸಿದ ಶಾಲೆಯ ಶಿಕ್ಷಕ ವೃಂದವನ್ನು ಹಾಗೂ ಶಾಲಾ ಆಡಳಿತ ಮಂಡಳಿಯ ಕಾರ್ಯ ವೈಖರಿಯನ್ನು ಇವರು ಈ ಸಂದರ್ಭದಲ್ಲಿ ಶ್ಲಾಘಿಸಿದರು.
ಈ ಅಭಿನಂದನಾ ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕರಾದ ರಮಾನಂದ, ಶ್ರೀಮತಿ ಸುಧಾ, ಶ್ರೀಮತಿ ಪ್ರತಿಮಾ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ ಜೆ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಪ್ರಿಯಾ ಡಿ, ಸಾಧಕ ವಿದ್ಯಾರ್ಥಿನಿಯ ಪೋಷಕರಾದ ಅಮಿತ್ ಕುಮಾರ್ ಬಿ. ಜೆ ಮತ್ತು ಶ್ರೀಮತಿ ಶಿಲ್ಪಾ ಸಿ ಹಾಗೂ ಶಾಲೆಯ ಶಿಕ್ಷಕ- ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ನಿಧನ ವಾರ್ತೆ8 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು7 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ8 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ8 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ8 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಮಂಗಳೂರು4 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ9 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?
-
Uncategorized10 hours agoCJP protest-ಇಂದು CJP ಪ್ರತಿಭಟನೆ : ದೆಹಲಿಗೆ ಬರಬೇಕಾಗಿದ್ದ 250 ರೈಲು ರದ್ದು, ಹಲವು ರೈಲಿನ ವೇಳಾಪಟ್ಟಿ ಬದಲಾವಣೆ : ಮೆಟ್ರೋ ಸಂಚಾರ ಸ್ಥಗಿತ – ಇಂಟರ್ ನೆಟ್ ಬಂದ್..! ‘ಹೆದರಿದ್ರಾ ಮೋದಿಜೀ..?’ ಎಂದ CJP




















