ಬಿಗ್ ನ್ಯೂಸ್
Ashok Rai-28 ಕಿಮೀ ಸಂಚಾರ ಇನ್ನು ಒಂದೂವರೆ ಕಿ ಮೀ ಮಾತ್ರ: ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ
ಮಾಣಿಲ ಗ್ರಾಮದ ಕಾಮಜಾಲು- ಪೂವನಡ್ಕದಲ್ಲಿರುವ ಸಿರಿಯ ನದಿಗೆ ಸೇತುವೆ ನಿರ್ಮಾಣ ಆಗಬೇಕೆಂಬುದು ಈ ಭಾಗದ ಹಾಗೂ ಕೇರಳಕ್ಕೆ ಸೇರಿದ ಗ್ರಾಮಸ್ಥರ ಬಹುಕಾಲದ ಕನಸಾಗಿತ್ತು, ಈ ಕನಸನ್ನು ನನಸು ಮಾಡುವುದಾಗಿ ಅನೇಕ ಜನಪ್ರತಿನಿಧಿಗಳು ಭರವಸೆ ನೀಡಿದ್ದರು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಶೋಕ್ ರೈ ಕೂಡಾ ಸೇತುವೆ ನಿರ್ಮಾಣದ ಭರವಸೆ ನೀಡಿದ್ದರು. ಅಶೋಕ್ ರೈ ಮಾತುಕೊಟ್ಟು 2 ವರ್ಷದಲ್ಲೇ ಅದನ್ನು ಪೂರ್ಣಗೊಳಿಸಿದ್ದಾರೆ. ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಅನುದಾನ ಮಂಜೂರಾಗಿದೆ.
ಪುತ್ತೂರು: ಮಾಣಿಲ ಗ್ರಾಮದ ಕಾಮಜಾಲು- ಪೂವನಡ್ಕದಲ್ಲಿರುವ ಸಿರಿಯ ನದಿಗೆ ಸೇತುವೆ ನಿರ್ಮಾಣ ಆಗಬೇಕೆಂಬುದು ಈ ಭಾಗದ ಹಾಗೂ ಕೇರಳಕ್ಕೆ ಸೇರಿದ ಗ್ರಾಮಸ್ಥರ ಬಹುಕಾಲದ ಕನಸಾಗಿತ್ತು, ಈ ಕನಸನ್ನು ನನಸು ಮಾಡುವುದಾಗಿ ಅನೇಕ ಜನಪ್ರತಿನಿಧಿಗಳು ಭರವಸೆ ನೀಡಿದ್ದರು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಶೋಕ್ ರೈ ಕೂಡಾ ಸೇತುವೆ ನಿರ್ಮಾಣದ ಭರವಸೆ ನೀಡಿದ್ದರು. ಅಶೋಕ್ ರೈ ಮಾತುಕೊಟ್ಟು 2 ವರ್ಷದಲ್ಲೇ ಅದನ್ನು ಪೂರ್ಣಗೊಳಿಸಿದ್ದಾರೆ. ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಅನುದಾನ ಮಂಜೂರಾಗಿದೆ.
ಸಂಪರ್ಕ ಸೇತುವೆಯಾಗಲಿದೆ
ಸಿರಿಯ ನದಿ ಕೇರಳ ಹಾಗೂ ಕರ್ನಾಟಕದ ಸಂಪರ್ಕ ಸೇತುವಾಗಲಿದೆ. ಕರ್ನಾಟಕಕ್ಕೆ ಸೇರಿದ ಮಾಣಿಲ, ವಿಟ್ಲ ಭಾಗದ ಜನರು ನದಿಯ ಆಚೆ ದಡದಲ್ಲಿರುವ ಗ್ರಾಮಕ್ಕೆ ಭೇಟಿಯಾಗಬೇಕಾದಲ್ಲಿ ೨೮ ಕಿ ಮೀ ಕ್ರಯಿಸಬೇಕಿತ್ತು. ಮಾಣಿಲದಿಂದ ಕಾಸರಗೋಡು ಜಿಲ್ಲೆಯ ಪೆರ್ಲಕ್ಕೆ ಅತೀ ಹತ್ತಿರವಿದೆ ಆದರೆ ದಾರಿ ಮಾತ್ರ ದೂರವಾಗಿತ್ತು. ಇಲ್ಲಿನ ನದಿಗೆ ಸೇತುವೆ ನಿರ್ಮಾಣ ಮಾಡಿ ಎಂದು ಎರಡೂ ರಾಜ್ಯದ ಜನತೆ ಯಾರಿಗೆಲ್ಲಾ ಮನವಿ ಕೊಡಬೇಕೋ ಅವರನ್ನೆಲ್ಲಾ ಹುಡುಕಿ ಮನವಿಯನ್ನು ನೀಡಿ ಸೇತುವೆಯ ನಿರ್ಮಾಣಕ್ಕೆ ಸಹಕರಿಸಿ ಎಂದು ಕಳೆದ 30 ವರ್ಷಗಳಿಂದ ಮನವಿ ಮಾಡುತ್ತಲೇ ಇದ್ದಾರೆ. ಈ ವರ್ಷ ಆಗಬಹುದು , ಮುಂದಿನ ವರ್ಷ ಆಗಬಹುದು, ಅವರು ಖಂಡಿತಾ ಮಾಡಿಯೇ ಮಾಡುತ್ತಾರೆ ಎಂದು ನಂಬಿದ್ದ ಜನತೆಗೆ ತಮ್ಮ ಬೇಡಿಕೆ ಈಡೇರಿಸಲು ಸಾಧ್ಯವೇ ಆಗಿರಲಿಲ್ಲ. ಇಲ್ಲಿ ಸೇತುವೆ ನಿರ್ಮಾಣಕ್ಕೆ ಇಚ್ಚಾಶಕ್ತಿಯ ಕೊರತೆಯೇ ಎದ್ದು ಕಾಣುತ್ತಿತ್ತು.
ಗೆದ್ದರೆ ಖಂಡಿತಾ ಬೇಡಿಕೆ ಈಡೇರಿಸುವೆ ಎಂದಿದ್ದ ಅಶೋಕ್ ರೈ
ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಮಾಣಿಲ ಗ್ರಾಮಕ್ಕೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಅಶೋಕ್ ರೈ ಅವರಲ್ಲಿ ಈ ಗ್ರಾಮಸ್ಥರು ಸೇತುವೆಯ ಬೇಡಿಕೆ ಇಟ್ಟಿದ್ದರು. ನನ್ನನ್ನು ಗೆಲ್ಲಿಸಿ ನಾನು ಗೆದ್ದರೆ ಖಂಡಿತವಾಗಿಯೂ ನಿಮ್ಮ ಬೇಡಿಕೆಯನ್ನು ಈಡೇರಿಸುವೆ ಎಂದು ಚುನಾವಣಾ ಸಂದರ್ಭದಲ್ಲಿ ಮಾತುಕೊಟ್ಟಿದ್ದರು. ಮನವಿ ನೀಡಿ , ಭರವಸೆ ನಂಬಿ ಸೋತು ಹೋಗಿದ್ದ ಮಾಣಿಲ ಗ್ರಾಮಸ್ಥರ ಭರವಸೆ ಪಟ್ಟಿಗೆ ಅಶೋಕ್ ರೈ ಭರವಸೆಯೂ ಸೇರಿತ್ತು.
ಅಶೋಕ್ ರೈ ಅವರು ಚುನಾವಣೆಯಲ್ಲಿ ಗೆದ್ದ ಕೆಲವೇ ತಿಂಗಳಲ್ಲಿ ಸಿರಿಯ ನದಿಗೆ ಸೇತುವೆ ನಿರ್ಮಾಣ ಮಾಡುವ ಬಗ್ಗೆ ಹಾಗೂ ಇದರ ಸಾಧಕ ಬಾಧಕಗಳ ಬಗ್ಗೆ ಸರ್ವೆಯನ್ನು ಮಾಡಿಸಿದ್ದರು. ಸೇತುವೆ ನಿರ್ಮಾಣ ಖಂಡಿತಾ ಮಾಡುತ್ತೇನೆ ಎಂದು ಶಾಸಕರಾದ ಬಳಿಕ ಮತ್ತೆ ಭರವಸೆ ನೀಡಿದ್ದರು. ಶಾಸಕರಾಗಿ ಎರಡು ವರ್ಷ ಕಳೆದ ಸಂದರ್ಭದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಸರಕಾರದ ಮೇಲೆ ಒತ್ತಡ ಹಾಕಿ ೨೦ ಕೋಟಿ ಮಂಜೂರು ಮಾಡಿಸಿದ್ದಾರೆ.
ಸಚಿವರನ್ನು ಕರೆದುಕೊಂಡು ಬಂದಿದ್ದ ಅಶೋಕ್ ರೈ
ಕಳೆದ ಮಾ. 28 ರಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರನ್ನು ಮಾಣಿಲಕ್ಕೆ ಕರೆದುಕೊಂಡು ಬಂದಿದ್ದ ಶಾಸಕ ಅಶೋಕ್ ರೈ, ಸೇತುವೆ ನಿರ್ಮಾಣವಾಗಬೇಕಿದ್ದ ಜಾಗವನ್ನು ಪರಿಶೀಲನೆ ಮಾಡಿಸಿದ್ದರು. ಸ್ಥಳ ವೀಕ್ಷಣೆ ಮಾಡಿದ ಸಚಿವರು ಇಲ್ಲಿ ಸೇತುವೆಯ ಅಗತ್ಯವಿದೆ, ಕೇರಳ ಸರಕಾರ ಇಲ್ಲಿ ಸೇತುವೆ ನಿರ್ಮಾಣ ಮಾಡುವುದಿಲ್ಲ, ಕರ್ನಾಟಕ ಸರಕಾರವೇ ಇಲ್ಲಿ ಸೇತುವೆ ನಿರ್ಮಾಣ ಮಾಡಬೇಕಿದೆ, ನದಿ ಕರ್ನಾಟಕ ಜಾಗದಲ್ಲಿ ಇರುವ ಕಾರಣ ನಾವೇ ಏನಾದರೂ ಮಾಡಬೇಕು ಎಂದು ತಿಳಿಸಿದ್ದ ಸಚಿವರು ಈ ಬಗ್ಗೆ ಸರ್ವೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆಯನ್ನು ನೀಡಿದ್ದರು. ಮಾ. 28 ರಂದು ಭೇಟಿ ನೀಡಿ ಮಾತುಕೊಟ್ಟಿದ್ದ ಸಚಿವರು ಎಪ್ರಿಲ್ ೨೯ ಕ್ಕೆ ೨೦ ಕೋಟಿ ಅನುದಾನಕ್ಕೆ ಒಪ್ಪಿಗೆ ನೀಡಿ ಅನುದಾನ ಮಂಜೂರುಗೊಳಿಸಿದ್ದಾರೆ.
80 ಮೀಟರ್ ಉದ್ದ 10 ಮೀಟರ್ ಅಗಲದ ಸೇತುವೆ
ಸಿರಿಯ ನದಿಗೆ ಸುಮಾರು ೮೦ ಮೀಟರ್ ಉದ್ದದ ಸೇತುವೆ ನಿರ್ಮಾಣವಾಗಲಿದ್ದು ಇದು ೧೦ ಮೀಟರ್ ಅಗಲವನ್ನು ಹೊಂದಿರುತ್ತದೆ. ಕರ್ನಾಟಕ ಗಡಿಯ ಮೂಲಕ ಸೇತುವೆಯ ಸಂಪರ್ಕಕ್ಕೆ ೧.೫ ಕಿ ಮೀ ರಸ್ತೆಯ ನಿರ್ಮಾಣವಾದರೆ ಕೇರಳ ಸಂಪರ್ಕಕ್ಕೆ ಒಂದು ಕಿ ಮೀ ರಸ್ತೆ ನಿರ್ಮಾಣವೂ ಆಗಬೇಕಿದೆ. ಮಳೆಗಾಲದಲ್ಲಿ ನದಿ ತುಂಬಿ ಹರಿಯುವ ಕಾರಣ ಸೇತುವೆ ಎತ್ತರದಿಂದ ನಿರ್ಮಾಣವಾಗಲಿದೆ.
ಪ್ರಕೃತಿ ರಮಣೀಯ ಸ್ಥಳ
ಸಿರಿಯ ನದಿ ಪ್ರಕೃತಿ ರಮಣೀಯ ಸ್ಥಳವಾಗಿದೆ. ಸುತ್ತಲೂ ಕಾಡಿನಿಂದ ಕೂಡಿದ ಈ ಸ್ಥಳದಲ್ಲಿ ಸೇತುವೆಯ ನಿರ್ಮಾಣವಾಗಿ ಕರ್ನಾಟಕ ಕೇರಳ ಸಂಪರ್ಕ ಸೇತುವಾದಲ್ಲಿ ಈ ಪ್ರದೇಶದಲ್ಲಿ ಪ್ರವಾಸಿತಾಣವನ್ನಾಗಿಯೂ ರೂಪಿಸಬಹುದಾಗಿದೆ ಎಂಬ ಲೆಕ್ಕಾಚಾರವೂ ಈ ಹಿಂದೆ ನಡೆದಿತ್ತು. ಪ್ರಸ್ತುತ ಕಾಸರಗೋಡು ಜಿಲ್ಲೆಯ ಪೆರ್ಲದಿಂದ ಮಾಣಿಲಕ್ಕೆ ಬರಬೇಕಾದಲ್ಲಿ 28 ಕಿ ಮೀ ಕ್ರಯಿಸಬೇಕು ಸೇತುವೆ ನಿರ್ಮಾಣವಾದಲ್ಲಿ ಕೇವಲ ಒಂದೂವರೆ ಏಳೆಂಟು ಕಿ ಮೀ ಸಾಗಿದರೆ ಮಾಣಿಲವನ್ನು ಸಂಪರ್ಕ ಮಾಡಬಹುದಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಈ ಪ್ರದೇಶ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ದಿಯಾಗುವುದರಲ್ಲಿ ಸಂಶಯವೇ ಇಲ್ಲ.
ಇನ್ನೂ ಆರು ಕೋಟಿಯ ಪ್ರಸ್ತಾವನೆ: ಅಶೋಕ್ ರೈ
ಮಾಣಿಲದಲ್ಲಿ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರಕಾರ ೨೦ ಕೋಟಿ ಅನುದಾನ ಮಂಜೂರು ಮಾಡಿದೆ, ಇದು ಬಹುಕಾಲದ ಬೇಡಿಕೆಯಾಗಿದ್ದು ಈ ಬಾರಿ ಈಡೇರಿದೆ, ಕಳೆದ ವಿಧಾನಸಭಾ ಚುನಾವಣೆಯ ವೇಳೆ ಗ್ರಾಮಸ್ಥರಿಗೆ ಸೇತುವೆ ನಿರ್ಮಾಣದ ಮಾತುಕೊಟ್ಟಿದ್ದೆ ಅದನ್ನು ಈಡೇರಿಸಿದ ತೃಪ್ತಿ ನನಗಿದೆ. ಈ ಸೇತುವೆ ನಿರ್ಮಾಣವಾದಲ್ಲಿ ಕರ್ನಾಟಕ ಮತ್ತು ಕೇರಳಕ್ಕೆ ಸಂಪರ್ಕ ಕೊಂಡಿಯಾಗಿ ಕೆಲಸ ಮಾಡುವುದರ ಜೊತೆ ಎರಡೂ ಭಾಗದ ಗ್ರಾಮದ ಅಭಿವೃದ್ದಿಗೂ ಕಾರಣವಾಗಲಿದೆ. ಸೇತುವೆಯ ಸಂಪರ್ಕ ಮಾಡುವ ಎರಡೂ ಭಾಗದಲ್ಲಿ ಉತ್ತಮ ರಸ್ತೆಯ ನಿರ್ಮಾಣವಾಗಬೇಕಿದೆ ಇದಕ್ಕೆ ಹೆಚ್ಚುವರಿ 6 ಕೋಟಿ ಅನುದಾನದ ಪ್ರಸ್ತಾವನೆಯನ್ನು ಸಲ್ಲಿಸಿದ್ದೇನೆ ಇದು ಶೀಘ್ರವೇ ಮಂಜೂರಾತಿಯ ನಿರೀಕ್ಷೆ ಇದೆ. ಹೊಸ ಸೇತುವೆಯ ಕಾರಣಕ್ಕೆ ಮಾಣಿಲ ಸೇರಿದಂತೆ ವಿಟ್ಲ ಭಾಗದ ಬಹುತೇಕ ಗ್ರಾಮಗಳ ಅಭಿವೃದ್ದಿಗೂ ಇದು ಕಾರಣವಾಗಲಿದೆ. ಅಭಿವೃದ್ದಿಯೇ ನಮ್ಮ ಮೂಲಮಂತ್ರ ಇದಕ್ಕೆ ಸೇತುವೆಯೊಂದು ಸೇತುವಾಗಲಿದೆ.
- -ಅಶೋಕ್ ರೈ, ಶಾಸಕರು ಪುತ್ತೂರು
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
ಬಿಗ್ ನ್ಯೂಸ್
ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ
ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.
ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.
ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.
-
ಅಪರಾಧ24 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಬಿಗ್ ನ್ಯೂಸ್18 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ನಿಧನ ವಾರ್ತೆ23 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಶಿಕ್ಷಣ22 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ23 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ನಿಧನ ವಾರ್ತೆ22 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
ರಾಜಕೀಯ23 hours agoDK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ
-
ಬಿಗ್ ನ್ಯೂಸ್23 hours agoPuttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ


















