ಉಡುಪಿ
Soumya Shetty-ಬೆಳ್ತಂಗಡಿ: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ
ಬೆಳ್ತಂಗಡಿಯ ಉದ್ಯಮಿ, ಮೂಲತಃ ನೆಲ್ಯಾಡಿಯವರಾದ ಸುದೀಪ್ ರೈ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಅವರ ಪತ್ನಿ ಸೌಮ್ಯ ಶೆಟ್ಟಿಗೆ ಉಡುಪಿ ಸೆಷನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
ಉಡುಪಿ/ಬೆಳ್ತಂಗಡಿ: ಬೆಳ್ತಂಗಡಿಯ ಉದ್ಯಮಿ, ಮೂಲತಃ ನೆಲ್ಯಾಡಿಯವರಾದ ಸುದೀಪ್ ರೈ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಅವರ ಪತ್ನಿ ಸೌಮ್ಯ ಶೆಟ್ಟಿಗೆ ಉಡುಪಿ ಸೆಷನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
ಕಳೆದ ಮಾರ್ಚ್ 22ರಂದು ಸುದೀಪ್ ರೈ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಾವಿಗೆ ಸುದೀಪ್ ಅವರ ಪತ್ನಿ ಸೌಮ್ಯ ಶೆಟ್ಟಿಯೇ ನೇರ ಕಾರಣ ಎಂದು ಸುದೀಪ್ ಅವರ ತಂದೆ ದಾಮೋದರ್ ರೈ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರಿನನ್ವಯ ತನಿಖೆ ನಡೆಸಿದ್ದ ಪೊಲೀಸರು, ಏಪ್ರಿಲ್ 11ರಂದು ಕಲಾವಿದೆಯೂ ಆಗಿರುವ ಸೌಮ್ಯ ಶೆಟ್ಟಿಯನ್ನು ಉಡುಪಿಯಲ್ಲಿ ಬಂಧಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಗೆ ಜಾಮೀನು ನೀಡುವಂತೆ ಕೋರಿ ಸೌಮ್ಯ ಶೆಟ್ಟಿ ಉಡುಪಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಬುಧವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿದೆ.
ಅಪರಾಧ
Mangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಉಡುಪಿ: ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
2011ರ ಡಿಸೆಂಬರ್ 3ರಂದು ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜಾರು ಗ್ರಾಮದ ಉಡುಪಿ ಜಿಲ್ಲಾ ಕಾರಾಗೃಹದ ಮೊದಲ ಬ್ಯಾರಕ್ ಎದುರಿನ ವರಾಂಡದಲ್ಲಿ ಘಟನೆ ನಡೆದಿತ್ತು. ಜೈಲ್ ವಾರ್ಡನ್ ಅವರು ಪ್ರಭಾರ ವಹಿಸಿಕೊಳ್ಳುವ ಸಲುವಾಗಿ ಬಂಧಿಗಳ ಲೆಕ್ಕ ತೆಗೆದುಕೊಳ್ಳಲು ತಮ್ಮ ತಮ್ಮ ಬ್ಯಾರಕ್‌ಗಳಿಗೆ ತೆರಳುವಂತೆ ಸೂಚಿಸಿದ್ದರು. ಈ ವೇಳೆ ಅಡುಗೆ ಕೋಣೆಯ ಎದುರುಗಡೆ ಇದ್ದ ವಿಚಾರಣಾ ಬಂಧಿ ಸಫಾನ್ ಹುಸೈನ್ ಅಲಿಯಾಸ್ ರಜಾಕ್ ಎಂಬಾತ ಜೈಲ್ ವಾರ್ಡನ್ ಅವರನ್ನು ಉದ್ದೇಶಿಸಿ ಅವಾಚ್ಯವಾಗಿ ನಿಂದಿಸಿ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ್ದ.
ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು 2012ರ ಜನವರಿ 10ರಂದು ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ನ್ಯಾಯಾಲಯ ಆರೋಪಿಗೆ 2013ರ ಮೇ 29ರಂದು ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣೆಗೆ ಹಾಜರಾಗದೆ ಆರೋಪಿ ತಲೆಮರೆಸಿಕೊಂಡಿದ್ದರಿಂದ ಪ್ರಕರಣವು 2022ರ ಜೂನ್ 24ರಂದು ಎಲ್‌ಪಿಸಿ ನಂ.02/2022ರಂತೆ ದಾಖಲಾಗಿತ್ತು.
ತಲೆಮರೆಸಿಕೊಂಡಿದ್ದ ಸಫಾನ್ ಹುಸೈನ್‌ನನ್ನು 2026ರ ಏಪ್ರಿಲ್ 23ರಂದು ಬಾಡಿ ವಾರಂಟ್ ಮೂಲಕ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಆರೋಪಿಗೆ 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40,000 ದಂಡ ವಿಧಿಸಿ ತೀರ್ಪು ನೀಡಿದೆ
ಉಡುಪಿ
Malpe-ಮಲ್ಪೆ: ದಸರಾ ರಜೆಗೂ ಮುನ್ನವೇ ಬೀಚ್‌ನಲ್ಲಿ ಪ್ರವಾಸಿಗರ ಮಹಾಪೂರ : ಕಿಮೀ ಉದ್ದ ಟ್ರಾಫಿಕ್ ಜಾಮ್ – ಪಾರ್ಕಿಂಗ್ ಗಿಲ್ಲ ಸ್ಥಳ..!
ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಮಲ್ಪೆ: ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಬಿಸಿಲಿನ ತೀವ್ರತೆ ಹೆಚ್ಚಿದ್ದರೂ ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಭಾಗಗಳಿಂದ ಕುಟುಂಬ ಸಮೇತರಾಗಿ ಪ್ರವಾಸಿಗರು ಮಲ್ಪೆಗೆ ಆಗಮಿಸುತ್ತಿದ್ದಾರೆ. ಬೀಚ್‌ನ ಮುಖ್ಯ ಭಾಗದಿಂದ ಸೀವಾಕ್‌ವರೆಗೂ ಕಡಲತೀರದಲ್ಲಿ ಜನಜಂಗುಳಿ ಕಂಡುಬರುತ್ತಿದೆ.
ಶುಕ್ರವಾರ ಬೆಳಗ್ಗೆಯಿಂದಲೇ ಮಲ್ಪೆಯತ್ತ ಪ್ರವಾಸಿಗರ ಆಗಮನ ಹೆಚ್ಚಾಗಿದ್ದು, ಅಪರಾಹ್ನದ ವೇಳೆಗೆ ವಾಹನ ನಿಲುಗಡೆಗೂ ಜಾಗವಿಲ್ಲದಷ್ಟು ಒತ್ತಡ ನಿರ್ಮಾಣವಾಗಿತ್ತು. ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳನ್ನು ನಿಲ್ಲಿಸಿದ್ದರಿಂದ ಸುಗಮ ಸಂಚಾರಕ್ಕೂ ಅಡ್ಡಿಯಾಯಿತು.
ಬೀಚ್‌ಗೆ ಆಗಮಿಸಿದ ಪ್ರವಾಸಿಗರು ಬನಾನಾ ರೈಡ್, ಸ್ಪೀಡ್ ಬೋಟ್ ಸೇರಿದಂತೆ ವಿವಿಧ ಜಲಸಾಹಸ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪ್ರಸಿದ್ಧ ಸೈಂಟ್ ಮೇರಿಸ್ ದ್ವೀಪಕ್ಕೂ ದೋಣಿ ಮೂಲಕ ತೆರಳುವ ಪ್ರವಾಸಿಗರ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿದೆ.
ಆದಿ ಉಡುಪಿ-ಮಲ್ಪೆ ರಸ್ತೆಯಲ್ಲಿ ಸಂಚಾರ ಸಂಕಷ್ಟ
ಪ್ರವಾಸಿಗರ ವಾಹನಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಮಲ್ಪೆಗೆ ಸಂಪರ್ಕ ಕಲ್ಪಿಸುವ ಹಲವು ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಆದಿಉಡುಪಿಯಿಂದ ಮಲ್ಪೆ ಬೀಚ್‌ವರೆಗಿನ ರಸ್ತೆಯಲ್ಲಿ ಶುಕ್ರವಾರ ಸಂಜೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಶನಿವಾರ ಕಲ್ಮಾಡಿ ಭಾಗದಲ್ಲೂ ಇದೇ ಪರಿಸ್ಥಿತಿ ಕಂಡುಬಂತು.
ಮಲ್ಪೆ ಭಾಗದ ಕಿರಿದಾದ ರಸ್ತೆಯಲ್ಲಿ ಮೀನುಗಾರಿಕೆಗೆ ಸಂಬಂಧಿಸಿದ ಮಂಜುಗಡ್ಡೆ ಹಾಗೂ ಮೀನಿನ ಲಾರಿಗಳ ಸಂಚಾರವೂ ಹೆಚ್ಚಿದ್ದು, ಪ್ರವಾಸಿಗರ ವಾಹನಗಳ ಒತ್ತಡದೊಂದಿಗೆ ಸಂಚಾರ ಮತ್ತಷ್ಟು ನಿಧಾನಗೊಂಡಿದೆ. ಇದರ ಜೊತೆಗೆ ಕಲ್ಮಾಡಿ ಸೇತುವೆ ಬಳಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಯೂ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ದಸರಾ ರಜೆಯಲ್ಲಿ ಮತ್ತಷ್ಟು ಪ್ರವಾಸಿಗರ ನಿರೀಕ್ಷೆ
ಶಾಲಾ-ಕಾಲೇಜುಗಳ ಪರೀಕ್ಷೆಗಳು ಮುಗಿದಿದ್ದು, ಅ.11ರಿಂದ ದಸರಾ ರಜೆ ಆರಂಭವಾಗಲಿದೆ. ಹೀಗಾಗಿ ರಜೆ ಅವಧಿಯಲ್ಲಿ ಮಲ್ಪೆ ಬೀಚ್‌ಗೆ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ.
ಪಾರ್ಕಿಂಗ್, ಸ್ವಚ್ಛತೆ, ಸುರಕ್ಷತೆಗೆ ಆದ್ಯತೆ ಅಗತ್ಯ
ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ವಾಹನ ಪಾರ್ಕಿಂಗ್ ಸ್ಥಳ ಸಾಕಾಗುತ್ತಿಲ್ಲ. ಕೆಲವರು ಪಾದಚಾರಿ ಮಾರ್ಗದಲ್ಲೇ ವಾಹನಗಳನ್ನು ನಿಲ್ಲಿಸುತ್ತಿದ್ದು, ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಾಂಡುರಂಗ ಮಲ್ಪೆ ಹೇಳಿದ್ದಾರೆ.
ಬೀಚ್ ಸುತ್ತಮುತ್ತ ಸ್ವಚ್ಛತೆ ಹಾಗೂ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಬೀಚ್ ಪ್ರದೇಶದಲ್ಲಿ ಕಸದ ರಾಶಿ ಕಂಡುಬರುತ್ತಿದ್ದು, ಇದು ಪ್ರವಾಸಿಗರಿಗೆ ಅಸಹ್ಯ ಉಂಟುಮಾಡುತ್ತಿದೆ. ಎಲ್ಲೆಂದರಲ್ಲಿ ಕಸ ಎಸೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಉಡುಪಿ
Manipal-ಮಣಿಪಾಲ: ಕೆಎಂಸಿ ಆಸ್ಪತೆಯ 4ನೇ ಮಹಡಿಯಿಂದ ಬಿದ್ದ ವ್ಯಕ್ತಿಗೆ ಗಂಭೀರ ಗಾಯ
ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಉಡುಪಿ, ಸೆ.30: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಪತ್ನಿಯೊಂದಿಗೆ ನಡೆದ ಜಗಳದ ಬಳಿಕ ಕೆಲವು ದಿನಗಳ ಹಿಂದೆ ರಾಜೇಶ್ ವಿಷ ಸೇವಿಸಿದ್ದರು ಎನ್ನಲಾಗಿದ್ದು, ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಡಿಸ್‌ಚಾರ್ಜ್‌ಗೆ ಸಿದ್ಧತೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.
ಬುಧವಾರ ಆಸ್ಪತ್ರೆ ಸಿಬ್ಬಂದಿಯೊಂದಿಗೆ ವಾಕಿಂಗ್‌ಗೆ ತೆರಳುವುದಾಗಿ ಹೇಳಿ ಕೊಠಡಿಯಿಂದ ರಾಜೇಶ್ ಹೊರಬಂದಿದ್ದರು. ಬಳಿಕ ಕಿಟಕಿಯ ಬಳಿ ತೆರಳಿ ಗ್ರಿಲ್ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಜಾಲರಿಯನ್ನು ಹರಿದು ಕೆಳಗೆ ಇಳಿಯುತ್ತಿದ್ದಾಗ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
-
ಅಪರಾಧ24 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಬಿಗ್ ನ್ಯೂಸ್18 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ನಿಧನ ವಾರ್ತೆ23 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಶಿಕ್ಷಣ22 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ23 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ನಿಧನ ವಾರ್ತೆ22 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
ರಾಜಕೀಯ24 hours agoDK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ
-
ಬಿಗ್ ನ್ಯೂಸ್23 hours agoPuttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ


















