ರಾಜಕೀಯ
Kishore Kumar Puttur-56,432 ಹುದ್ದೆಗಳ ನೇಮಕಾತಿಗೆ ಕೂಡಲೇ ಚಾಲನೆ ನೀಡಿ: ಮುಖ್ಯ ಕಾರ್ಯದರ್ಶಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ
ರಾಜ್ಯ ಸರ್ಕಾರವು 2026-27ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಸುಮಾರು 56,432 ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ವಿಳಂಬ ಮಾಡದೆ ತಕ್ಷಣವೇ ಆರಂಭಿಸಬೇಕು ಎಂದು ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಅವರು ಒತ್ತಾಯಿಸಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರವು 2026-27ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಸುಮಾರು 56,432 ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ವಿಳಂಬ ಮಾಡದೆ ತಕ್ಷಣವೇ ಆರಂಭಿಸಬೇಕು ಎಂದು ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಬುಧವಾರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾದ ಶಾಸಕರು, ನೇಮಕಾತಿ ಪ್ರಕ್ರಿಯೆ ಮತ್ತು ಮಂಗಳೂರಿನಲ್ಲಿ ಕೆಪಿಎಸ್‌ಸಿ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಸಂಬಂಧಿಸಿದಂತೆ ಸವಿಸ್ತಾರವಾದ ಮನವಿ ಸಲ್ಲಿಸಿದರು.
ನೇಮಕಾತಿ ಪ್ರಕ್ರಿಯೆಗೆ ಆಗ್ರಹ:
ರಾಜ್ಯದ 43 ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ ಇರುವುದು ಶಾಸಕರು ಈ ಹಿಂದೆ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಯಿಂದ ತಿಳಿದುಬಂದಿತ್ತು. ಇದರಲ್ಲಿ 56,432 ಹುದ್ದೆಗಳನ್ನು ಪ್ರಸ್ತುತ ವರ್ಷವೇ ಭರ್ತಿ ಮಾಡುವುದಾಗಿ ಸರ್ಕಾರ ಬಜೆಟ್‌ನಲ್ಲಿ ಭರವಸೆ ನೀಡಿತ್ತು. ಆದರೆ, ಇದುವರೆಗೆ ಯಾವುದೇ ನೇಮಕಾತಿ ಅಧಿಸೂಚನೆ ಪ್ರಕಟವಾಗದಿರುವುದು ನಿರುದ್ಯೋಗಿ ಯುವಜನರಲ್ಲಿ ಆತಂಕ ಮೂಡಿಸಿದೆ. ಈ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮತ್ತು ಕಾಲಮಿತಿಯೊಳಗೆ ಪೂರ್ಣಗೊಳಿಸುವುದರಿಂದ ಆಡಳಿತ ವ್ಯವಸ್ಥೆಯ ಕಾರ್ಯಕ್ಷಮತೆ ಹೆಚ್ಚಲಿದೆ ಎಂದು ಕಿಶೋರ್ ಕುಮಾರ್ ವಿವರಿಸಿದರು.
ಮಂಗಳೂರಿನಲ್ಲಿ KPSC ಕಚೇರಿ ಸ್ಥಾಪನೆ:
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸಾವಿರಾರು ಯುವಜನರು ಸರ್ಕಾರಿ ಉದ್ಯೋಗದ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿದ್ದಾರೆ. ಕೆಪಿಎಸ್‌ಸಿಯ ಎಲ್ಲಾ ಪ್ರಮುಖ ಕಾರ್ಯಗಳು ಸದ್ಯ ಬೆಂಗಳೂರು ಕೇಂದ್ರಿತವಾಗಿರುವುದರಿಂದ ಕರಾವಳಿ ಭಾಗದ ಅಭ್ಯರ್ಥಿಗಳು ಪದೇ ಪದೇ ಬೆಂಗಳೂರಿಗೆ ಪ್ರಯಾಣಿಸುವುದು ಕಷ್ಟಕರವಾಗಿದೆ. ಈ ಸಮಸ್ಯೆಗೆ ಪರಿಹಾರವಾಗಿ ಮಂಗಳೂರಿನಲ್ಲಿ ಲೋಕಸೇವಾ ಆಯೋಗದ (KPSC) ಪ್ರಾದೇಶಿಕ ಕಚೇರಿಯನ್ನು ಸ್ಥಾಪಿಸಬೇಕು ಎಂದು ಅವರು ಮನವಿಯಲ್ಲಿ ಒತ್ತಿ ಹೇಳಿದ್ದಾರೆ.
ಈ ಎರಡೂ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಕರಾವಳಿ ಯುವಜನರ ಹಿತದೃಷ್ಟಿಯಿಂದ ಮತ್ತು ಆಡಳಿತದ ಹಿತದೃಷ್ಟಿಯಿಂದ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಮನವಿ ಮಾಡಿದ್ದಾರೆ.
ಹಿನ್ನೆಲೆ:
ಡಿಸೆಂಬರ್ 2025ರಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಕಿಶೋರ್ ಕುಮಾರ್ ಪುತ್ತೂರು ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಸರ್ಕಾರ ನೀಡಿದ ಉತ್ತರದಲ್ಲಿ 2.84 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಬಜೆಟ್ ಘೋಷಣೆಯನ್ನು ಕೂಡಲೇ ಜಾರಿಗೆ ತರುವಂತೆ ಅವರು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.
ಸ್ಥಳೀಯ
Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ
ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.
ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.
ರಾಜಕೀಯ
U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್
ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಬಿಚ್ಚಿಟ್ಟಿದ್ದಾರೆ
ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.
ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ
ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548
ಅಂತರ ರಾಜ್ಯ
Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್
ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.
ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.
ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.
ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.
ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.
ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.
ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.
ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.
-
Uncategorized7 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized6 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ
-
ದಕ್ಷಿಣ ಕನ್ನಡ29 minutes ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು


















