Connect with us

ಶಿಕ್ಷಣ

Ambika-ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ರಜತ ಮಹೋತ್ಸವ; ಸರ್ಕಾರಿ ಶಾಲೆಗಳ ಹತ್ತು ಮಂದಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Published

on



Ad Widget

Ad Widget

Ad Widget

Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ರಜತ ಮಹೋತ್ಸವದ ಸವಿನೆನಪಿಗಾಗಿ ಪುತ್ತೂರು ತಾಲೂಕಿನ ಸರ್ಕಾರಿ ಶಾಲೆಗಳ ಆರ್ಥಿಕ ಸವಾಲುಗಳಿರುವ ಪ್ರತಿಭಾನ್ವಿತ ಆಯ್ದ ಹತ್ತು ಮಂದಿ ವಿದ್ಯಾರ್ಥಿಗಳಿಗೆ ಉಚಿತ ಪಿಯು ಶಿಕ್ಷಣವನ್ನು ಒದಗಿಸಿಕೊಡಲಾಗುತ್ತಿದೆ. ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ಆಯ್ಕೆಯಾದ ಹತ್ತು ಮಂದಿಗೆ ಉಚಿತ ಶಿಕ್ಷಣವನ್ನು ಘೋಷಿಸಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕ ಮಾತ್ರವಲ್ಲದೆ ಸಿಇಟಿ, ನೀಟ್, ಜೆಇಇ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಉಚಿತ ತರಬೇತಿ ದೊರೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ರಜತ ಮಹೋತ್ಸವದ ಸವಿನೆನಪಿಗಾಗಿ ಪುತ್ತೂರು ತಾಲೂಕಿನ ಸರ್ಕಾರಿ ಶಾಲೆಗಳ ಆರ್ಥಿಕ ಸವಾಲುಗಳಿರುವ ಪ್ರತಿಭಾನ್ವಿತ ಆಯ್ದ ಹತ್ತು ಮಂದಿ ವಿದ್ಯಾರ್ಥಿಗಳಿಗೆ ಉಚಿತ ಪಿಯು ಶಿಕ್ಷಣವನ್ನು ಒದಗಿಸಿಕೊಡಲಾಗುತ್ತಿದೆ. ಅದರನ್ವಯ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಇತ್ತೀಚೆಗೆ ಪ್ರವೇಶ ಪರೀಕ್ಷೆಯನ್ನು ಏರ್ಪಡಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ಆಯ್ಕೆಯಾದ ಹತ್ತು ಮಂದಿಗೆ ಉಚಿತ ಶಿಕ್ಷಣವನ್ನು ಘೋಷಿಸಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕ ಮಾತ್ರವಲ್ಲದೆ ಸಿಇಟಿ, ನೀಟ್, ಜೆಇಇ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಉಚಿತ ತರಬೇತಿ ದೊರೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಸವಣೂರಿನ ಶೇಖರ ಕೆ ಮತ್ತು ಶಾರದ ದಂಪತಿಯ ಪುತ್ರ ಪುನೀತ್ ಕೆ, ಪುಂಚಪ್ಪಾಡಿಯ ರಾಧಾಕೃಷ್ಣ ಮತ್ತು ಕುಸುಮ ಕೆ ಬಿ ದಂಪತಿಯ ಪುತ್ರ ಯತೀಶ್ ಪಿ, ಸವಣೂರಿನ ರಾಮ ಮತ್ತು ಗೀತಾ ದಂಪತಿಯ ಪುತ್ರ ಮನೀಶ್, ಚಿಕ್ಕಮುಡ್ನೂರಿನ ವಿಶ್ವನಾಥ ರೈ ಮತ್ತು ಸತ್ಯವತಿ ವಿ ರೈ ದಂಪತಿಯ ಪುತ್ರಿ ಶ್ರಾವಣ್ಯ ರೈ ಎನ್, ಪಟ್ಟೆಯ ಶ್ರೀನಿವಾಸ ಬಿ ಮತ್ತು ಪದ್ಮಾವತಿ ಎಚ್ ದಂಪತಿಯ ಪುತ್ರಿ ತೀಕ್ಷಾ ಎಸ್.ಪಿ, ಇರ್ದೆಯ ಉದಯ ಡಿ ಮತ್ತು ಪ್ರವೀಣ ಕುಮಾರಿ ದಂಪತಿಯ ಪುತ್ರಿ ಸ್ವಾತಿ ಡಿ, ಬೆಟ್ಟಂಪಾಡಿಯ ಶೀನಪ್ಪ ಗೌಡ ಮತ್ತು ಯಶೋಧ ಬಿ ದಂಪತಿಯ ಪುತ್ರಿ ಧನ್ವಿತಾ, ಸೂತ್ರಬೆಟ್ಟುವಿನ ಮಂಜ ಶೆಟ್ಟಿ ಬಿ ಜಿ ಮತ್ತು ಮಾಲ ಎಚ್ ದಂಪತಿಯ ಪುತ್ರಿ ಭಾನುಪ್ರಿಯ ಎಮ್, ಪುಂಚಪ್ಪಾಡಿಯ ಮೋನಪ್ಪ ಗೌಡ ಮತ್ತು ಭವಾನಿ ದಂಪತಿಯ ಪುತ್ರ ಜಸ್ವಿತ್ ಎಮ್ ಟಿ ಹಾಗೂ ಕಬಕದ ಪರಮೇಶ್ವರ ಗೌಡ ಮತ್ತು ಬೇಬಿ ಕುಮಾರಿ ದಂಪತಿಯ ಪುತ್ರಿ ಶಿಲ್ಪ ವಿಧಾತ್ರಿ ನಂದೇರಾ ಆಯ್ಕೆಯಾದ ವಿದ್ಯಾರ್ಥಿಗಳು.

Ad Widget

Ad Widget <> Ad Widget

ಪುತ್ತೂರಿನಲ್ಲಿ ಉಚಿತ ಶಿಕ್ಷಣದ ಕಲ್ಪನೆ ಜಾರಿಗೆ ತಂದ ಮೊದಲ ಸಂಸ್ಥೆ:



Ad Widget

ಇಂದು ಹಲವು ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣದ ಕಲ್ಪನೆ ಜಾರಿಯಲ್ಲಿದೆ. ಆದರೆ ಪುತ್ತೂರಿನಲ್ಲಿ ಮೊದಲ ಬಾರಿಗೆ ಈ ಕಲ್ಪನೆಯನ್ನು ಸಾಕಾರಗೊಳಿಸಿದ ಕೀರ್ತಿ ಅಂಬಿಕಾ ಶಿಕ್ಷಣ ಸಂಸ್ಥೆಗೆ ಸಲ್ಲುತ್ತದೆ. ೨೦೧೦ರಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯ ಆರಂಭಗೊಂಡಾಗ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡುವ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಶಿಕ್ಷಣ ಕ್ಷೇತ್ರದಲ್ಲೇ ಅದೊಂದು ವಿನೂತನ ಹಾಗೂ ವಿದ್ಯಾರ್ಥಿಸ್ನೇಹಿ ಯೋಜನೆಯೆನಿಸಿತ್ತು. ತದನಂತರ ಹಲವು ಸಂಸ್ಥೆಗಳಲ್ಲಿ ಅಂತಹ ಯೋಜನೆ ಜಾರಿಗೊಂಡು ಇಂದು ಇಡಿಯ ವಿದ್ಯಾರ್ಥಿ ಸಮುದಾಯಕ್ಕೇ ಪ್ರಯೋಜನಕಾರಿಯಾಗಿ ಪರಿಣಮಿಸಿರುವುದರ ಹಿಂದೆ ಅಂಬಿಕಾದ ದೂರದೃಷ್ಟಿಯನ್ನು ಹಲವು ವಿದ್ಯಾರ್ಥಿ ಹೆತ್ತವರು ಸ್ಮರಿಸುತ್ತಿದ್ದಾರೆ. ಇದೀಗ ಸರ್ಕಾರಿ ಶಾಲಾ ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ ಘೋಷಣೆಯ ಮೂಲಕ ಅಂಬಿಕಾ ಮತ್ತೊಂದು ಹೊಸತನದ ಹಾದಿಗೆ ಅಡಿಯಿಟ್ಟಿದೆ.

Ad Widget

Ad Widget

ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಈಗಾಗಲೇ ಒಂದು ಕೋಟಿಗೂ ಮೀರಿ ವಿದ್ಯಾರ್ಥಿ ವೇತನ ಒದಗಿಸಿಕೊಡಲಾಗುತ್ತಿದೆ. ಇದೀಗ ರಜತ ಮಹೋತ್ಸವದ ಸವಿನೆನಪಿಗಾಗಿ ಪ್ರತಿಭಾನ್ವಿತ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ಒದಗಿಸಿಕೊಡಲಾಗುತ್ತಿದೆ. ಅರ್ಹರಿಗೆ ಸಹಕಾರಿಯೆನಿಸುವ ಯೋಜನೆಗಳನ್ನು ಜಾರಿಗೆ ತರುವುದರಲ್ಲಿ ಆತ್ಮತೃಪ್ತಿಯಿದೆ.

  • -ಸುಬ್ರಮಣ್ಯ ನಟ್ಟೋಜ, ಅಧ್ಯಕ್ಷರು, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು
Ad Widget
Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.

Ad Widget

Ad Widget <> Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



Ad Widget
Ad Widget
Continue Reading

ಶಿಕ್ಷಣ

Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ

Published

on



Ad Widget

Ad Widget

Ad Widget

Ad Widget

ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.

Ad Widget

Ad Widget <> Ad Widget

ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.



Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

Continue Reading

ಶಿಕ್ಷಣ

Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!

Published

on



Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.

Ad Widget

Ad Widget

Ad Widget alt="Ad Widget"/>

Ad Widget

ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

Ad Widget

Ad Widget <> Ad Widget



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading