ಸ್ಥಳೀಯ
Dharmasthala-ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ವೈಭವ: 106 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು.
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು.
ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬದವರು ವರನಿಗೆ ಧೋತಿ, ಶಾಲು ಹಾಗೂ ವಧುವಿಗೆ ಸೀರೆ, ಮೂಗುತಿ ಮತ್ತು ರವಿಕೆ ಕಣ ವಿತರಿಸಿದರು.
ಸಂಜೆ ೫.೦೦ ಗಂಟೆಗೆ ವಧೂ-ವರರನ್ನು ಭವ್ಯ ಮೆರವಣಿಗೆಯಲ್ಲಿ ದೇವಸ್ಥಾನದ ಬಳಿಯಿಂದ ಅಮೃತವರ್ಷಿಣಿ ಸಭಾಭವನಕ್ಕೆ ಕರೆದುಕೊಂಡು ಹೋಗಲಾಯಿತು.

ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಗಣ್ಯ ಅತಿಥಿಗಳು ಮಂಗಳಸೂತ್ರ ವಿತರಿಸಿದರು. ಗಂಟೆ 6.40 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ವೇದಘೋಷ, ಮಂಗಳವಾದ್ಯ, ಹಾರ ವಿನಿಮಯ, ಮಂತ್ರಾಕ್ಷತೆಯೊಂದಿಗೆ ವಧುವಿಗೆ ಮಂಗಳಸೂತ್ರ ಧಾರಣೆ ಮಾಡಲಾಯಿತು.
ಸುಶ್ರಾವ್ಯ ಶೋಭಾನೆ ಹಾಡಗಳೊಂದಿಗೆ ವಧೂ-ವರರಿಗೆ ಆರತಿ ಹಾಗೂ ಮಂಗಲದ್ರವ್ಯಗಳನ್ನು ವಿತರಣೆ ಮಾಡಲಾಯಿತು.
ದಾಂಪತ್ಯ ದೀಕ್ಷೆಯ ಬಳಿಕ ನೂತನ ದಂಪತಿಗಳಿಗೆ ಧರ್ಮಸ್ಥಳದ ವತಿಯಿಂದ ಉಡುಗೊರೆ ನೀಡಿ ಶುಭ ಹಾರೈಸಲಾಯಿತು.
ಬಳಿಕ ನೂತನ ದಂಪತಿಗಳು ದೇವರ ದರ್ಶನ ಮಾಡಿ, ಅನ್ನಪೂರ್ಣ ಭೋಜನಾಲಯದಲ್ಲಿ ಮದುವೆ ಊಟ ಮಾಡಿ ಊರಿಗೆ ಪ್ರಯಾಣಿಸಿದರು.

ಸಭಾ ಕಾರ್ಯಕ್ರಮ :
ಸಮಾರಂಭದ ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ನೂತನ ದಂಪತಿಗಳು ಪರಸ್ಪರ ನಂಬಿಕೆ, ಪ್ರೀತಿ-ವಿಶ್ವಾಸದೊಂದಿಗೆ ಹೊಂದಾಣಿಕೆಯಿಂದ ಸಾರ್ಥಕ ಜೀವನ ನಡೆಸಬೇಕು ಎಂದು ಸಲಹೆ ನೀಡಿ ಆಶೀರ್ವದಿಸಿದರು.
ಧರ್ಮಸ್ಥಳದಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹ ಯೋಜನೆಯನ್ನು ಸರ್ಕಾರ ಹಾಗೂ ಇತರ ಮಠ-ಮಂದಿರಗಳು ಮಾದರಿಯಾಗಿ ಸ್ವೀಕರಿಸಿ ಅನುಸರಿಸುತ್ತಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. ಬೇರೆ ಕಡೆಗಳಲ್ಲಿ ನಡೆಸುವ ಉಚಿತ ಸಾಮೂಹಿಕ ವಿವಾಹ ಸಮಾರಂಭಕ್ಕೆ ಇನ್ನು ಮುಂದೆ ಧರ್ಮಸ್ಥಳದಿಂದ ಮಂಗಳಸೂತ್ರ ಕೊಡಲಾಗುವುದಿಲ್ಲ ಎಂದು ಹೆಗ್ಗಡೆಯವರು ಪ್ರಕಟಿಸಿದರು. ಏಕೆಂದರೆ, ಹೀಗೆ ಕೊಟ್ಟರೆ ಬೇರೆ ಕಡೆಗಳಲ್ಲಿಯೂ ಧರ್ಮಸ್ಥಳದ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸುತ್ತಾರೆ ಎಂಬ ತಪ್ಪು ಕಲ್ಪನೆ ಜನರಲ್ಲಿ ಮೂಡಿಬರುತ್ತದೆ. ಧರ್ಮಸ್ಥಳದಿಂದ ತಾಳಿ ಕೊಡುತ್ತಾರೆ ಎಂದಾಗ ಜನರು ಕ್ಷೇತ್ರಕ್ಕೆ ಬರುವ ಬದಲು ಅಲ್ಲೇ ಮದುವೆಯಾಗಲು ನಿರ್ಧರಿಸುತ್ತಾರೆ.
ಮದುವೆ ಬದುಕಿನ ಬದಲಾವಣೆಯ ಪರ್ವ : ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಶುಭಾಶಂಸನೆ ಮಾಡಿ, ಮದುವೆ ಎಂಬುದು ಪ್ರತಿಯೊಬ್ಬರ ಬದುಕಿನಲ್ಲಿ ಬದಲಾವಣೆಯ ಪರ್ವವಾಗಿದ್ದು ಧರ್ಮಸ್ಥಳದಿಂದ ನಡೆಸುವ ಬಹುಮುಖಿ ಸಮಾಜ ಸೇವಾ ಕಾರ್ಯಗಳಲ್ಲಿ ಉಚಿತ ಸಾಮೂಹಿಕ ವಿವಾಹ ಅತ್ಯಂತ ಪವಿತ್ರ ಹಾಗೂ ಪುಣ್ಯದಾಯಕ ಸೇವೆಯಾಗಿದೆ. ಸರ್ಕಾರ ಹಾಗೂ ಅನೇಕ ಮಠ-ಮಂದಿರಗಳು ಕೂಡಾ ಧರ್ಮಸ್ಥಳದ ಮಾದರಿ ಅನುಸರಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ಶಾಸಕ ಹರೀಶ್ ಪೂಂಜ ಮಾತನಾಡಿ, ಪೂಜ್ಯ ಹೆಗ್ಗಡೆ ದಂಪತಿಯ ಸಾರ್ಥಕ ಬದುಕೇ ಎಲ್ಲರಿಗೂ ಪ್ರೇರಕ ಶಕ್ತಿ ಹಾಗೂ ಮಾರ್ಗದರ್ಶಿಯಾಗಿದೆ ಎಂದು ಹೇಳಿ ನೂತನ ದಂಪತಿಗಳಿಗೆ ಶುಭ ಹಾರೈಸಿದರು.
ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.
ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಶರ್ಮಿಳಾ ವೇದಿಕೆಯಲ್ಲಿ ಇದ್ದರು.
ಬೆಂಗಳೂರಿನಲ್ಲಿರುವ ಕ್ಷೇಮವನದ ಸಿ.ಇ.ಒ. ಶ್ರದ್ಧಾಅಮಿತ್ ಸ್ವಾಗತಿಸಿದರು. ಪೂಜ್ಯ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಧನ್ಯವಾದವಿತ್ತರು.
ಸಂಪತ್ ಕುಮಾರ್ ರೈ ಮತ್ತು ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.
ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕೆ. ವಿ. ನಿಖಿಲ್ ಕುಮಾರ್, ನಿಹಾಲ್ ಸಿ. ರೈ. ದ್ವಿತೀಯ ಪಿಯುಸಿ ಅಭಿಲಾಷ್, ವಿಕ್ರಮ್ ಎ. ಜಿ ಹಾಗೂ ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿ ಆತ್ಮಿಕಾ, ಎಚ್. ಮನ್ಮಿತಾ, ಶರಣ್ಯಾ ಎಚ್. ಎನ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗು ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಸ್ಥಳೀಯ
Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.
ಸ್ಥಳೀಯ
Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.
ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.
ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
-
ದಕ್ಷಿಣ ಕನ್ನಡ23 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ22 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ನಿಧನ ವಾರ್ತೆ21 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಬಿಗ್ ನ್ಯೂಸ್17 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಶಿಕ್ಷಣ20 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ21 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ನಿಧನ ವಾರ್ತೆ21 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
ಬಿಗ್ ನ್ಯೂಸ್22 hours agoPuttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ


















