Uncategorized
ಬೆಂಗಳೂರು ಮಳೆಗೆ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ: 7 ಮಂದಿ ದುರ್ಮರಣ; ಎಂಜಿನಿಯರ್ ಅಮಾನತಿಗೆ ಸಿಎಂ ಖಡಕ್ ಆದೇಶ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸುರಿದ ವರುಣನ ಅಟ್ಟಹಾಸಕ್ಕೆ ಅಮಾಯಕ ಜೀವಗಳು ಬಲಿಯಾಗಿವೆ. ಬೌರಿಂಗ್ ಆಸ್ಪತ್ರೆ ಬಳಿ ಸಂಭವಿಸಿದ ಭೀಕರ ಗೋಡೆ ಕುಸಿತದ ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 7 ಮಂದಿ ಮೃತಪಟ್ಟಿದ್ದು, ಇಡೀ ರಾಜಧಾನಿಯನ್ನು ಈ ದುರಂತ ಬೆಚ್ಚಿಬೀಳಿಸಿದೆ. ಘಟನೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ತವ್ಯ ಲೋಪ ಎಸಗಿದ ಎಂಜಿನಿಯರ್ ಅಮಾನತಿಗೆ ಆದೇಶಿಸಿದ್ದಾರೆ.
ಘಟನೆಯ ಹಿನ್ನೆಲೆ ಏನು?
ಗುರುವಾರ ಸುರಿದ ಭಾರೀ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಆವರಣದ ಗೋಡೆ ಕುಸಿದು ಬಿದ್ದಿದೆ. ಮಳೆಯ ಆರ್ಭಟಕ್ಕೆ ಗೋಡೆ ಪಕ್ಕದಲ್ಲಿದ್ದವರು ಸಿಲುಕಿಕೊಂಡಿದ್ದು, ಸ್ಥಳದಲ್ಲೇ ಸಾವು-ನೋವು ಸಂಭವಿಸಿದೆ. ಈ ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 7 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸರ್ಕಾರಿ ವೆಚ್ಚದಲ್ಲೇ ಉಚಿತ ಚಿಕಿತ್ಸೆ ನೀಡುವಂತೆ ಸಿಎಂ ಸೂಚನೆ ನೀಡಿದ್ದಾರೆ.

ಅಧಿಕಾರಿಗಳ ವಿರುದ್ಧ ಸಿದ್ದರಾಮಯ್ಯ ಗರಂ
ದುರಂತದ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಬಿಬಿಎಂಪಿ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
”ಗೋಡೆಗೆ ಹಾನಿಯಾಗುವ ಸಾಧ್ಯತೆ ಇದೆ ಎಂದು ತಿಳಿದಿದ್ದರೂ, ಕಾಮಗಾರಿ ನಡೆಯುವಾಗ ಮಣ್ಣು ಸುರಿದಿದ್ದು ಏಕೆ? ಇದು ಹಸಿಹಸಿ ಕೊಲೆ ಅಲ್ಲವೇ?” ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಸಿಎಂ, ಕೂಡಲೇ ಸಂಬಂಧಪಟ್ಟ ಕಾರ್ಯಪಾಲಕ ಎಂಜಿನಿಯರ್ (Executive Engineer) ಅನ್ನು ಅಮಾನತು ಮಾಡುವಂತೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ
ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ತಲಾ 5 ಲಕ್ಷ ರೂಪಾಯಿಗಳ ಪರಿಹಾರ ಧನ ಘೋಷಿಸಿದೆ. ಮಳೆ ಹಾನಿ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ
.

ಪಾಲಿಕೆ ಅಧಿಕಾರಿಗಳಿಗೆ ಬಿಬಿಎಂಪಿ ಕಮಿಷನರ್ ಖಡಕ್ ವಾರ್ನಿಂಗ್!
ನಗರದಲ್ಲಿ ಮಳೆಯ ಆರ್ಭಟ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಗುಡುಗಿದ್ದಾರೆ
ರಜೆ ರದ್ದು: ನಗರದ ಎಲ್ಲಾ ಐದು ವಲಯಗಳ ಎಂಜಿನಿಯರ್‌ಗಳ ರಜೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ.
ಸ್ಥಳದಲ್ಲೇ ಇರಬೇಕು: ಮಳೆ ನಿಲ್ಲುವವರೆಗೆ ಯಾವುದೇ ಎಂಜಿನಿಯರ್ ಕೇಂದ್ರ ಸ್ಥಾನ ಬಿಟ್ಟು ಕದಲುವಂತಿಲ್ಲ.
ನಿರ್ಲಕ್ಷ್ಯಕ್ಕೆ ಶಿಕ್ಷೆ: ಇನ್ನು ಮುಂದೆ ಇಂತಹ ದುರಂತಗಳು ಮರುಕಳಿಸಿದರೆ ಆಯಾ ವಲಯದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಬೆಂಗಳೂರಿಗರ ಆಕ್ರೋಶ
ಒಂದೇ ಒಂದು ಮಳೆಗೆ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗುತ್ತಿರುವುದು ಬೆಂಗಳೂರಿಗರ ಆಕ್ರೋಶಕ್ಕೆ ಕಾರಣವಾಗಿದೆ. ರಾಜಕಾಲುವೆ ಹೂಳೆತ್ತುವಿಕೆ ಮತ್ತು ದುರ್ಬಲ ಗೋಡೆಗಳ ದುರಸ್ತಿಯಲ್ಲಿ ಪಾಲಿಕೆಯ ವಿಫಲತೆಯೇ ಈ ಸಾವಿಗೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನಷ್ಟು ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಪೋರ್ಟಲ್ ವೀಕ್ಷಿಸುತ್ತಿರಿ.
Uncategorized
Maharashtra-ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ಜಾಲ: ಗರ್ಭಿಣಿಯ ವೇಷದಲ್ಲಿ ಬಾಗಲಕೋಟೆಯ ಮಹಿಳಾ ಅಧಿಕಾರಿಗಳ ರಹಸ್ಯ ಕಾರ್ಯಾಚರಣೆ; ಇಬ್ಬರ ಬಂಧನ – ಸ್ಕ್ಯಾನಿಂಗ್ ಯಂತ್ರ ಜಪ್ತಿ
ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ನಡೆಸಿ, ಬಳಿಕ ಕರ್ನಾಟಕದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಬಾಗಲಕೋಟೆ ಜಿಲ್ಲೆಯ ಮಹಿಳಾ ಅಧಿಕಾರಿಗಳ ತಂಡ ರಹಸ್ಯ ಕಾರ್ಯಾಚರಣೆ ನಡೆಸಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಜಾಡರ ಬಬಲಾದ ಗ್ರಾಮದಲ್ಲಿ ಅ.5ರಂದು ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಭ್ರೂಣ ಲಿಂಗ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಜಪ್ತಿ ಮಾಡಲಾಗಿದೆ.
ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ನಡೆಸಿ, ಬಳಿಕ ಕರ್ನಾಟಕದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಬಾಗಲಕೋಟೆ ಜಿಲ್ಲೆಯ ಮಹಿಳಾ ಅಧಿಕಾರಿಗಳ ತಂಡ ರಹಸ್ಯ ಕಾರ್ಯಾಚರಣೆ ನಡೆಸಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಜಾಡರ ಬಬಲಾದ ಗ್ರಾಮದಲ್ಲಿ ಅ.5ರಂದು ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಭ್ರೂಣ ಲಿಂಗ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಜಪ್ತಿ ಮಾಡಲಾಗಿದೆ.
ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ್ ಗರ್ಭಿಣಿಯ ವೇಷದಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶೋಭಾ ನಾದಿನಿ ಗರ್ಭಿಣಿಯ ಸಂಬಂಧಿಯಂತೆ ಹಾಗೂ ಡಿಎಚ್‌ಒ ಡಾ. ಸುವರ್ಣ ಕುಲಕರ್ಣಿ ಗರ್ಭಿಣಿಯ ತಾಯಿಯ ವೇಷದಲ್ಲಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಮಹಾರಾಷ್ಟ್ರದಲ್ಲಿ ಲಿಂಗ ಪತ್ತೆ, ಕರ್ನಾಟಕದಲ್ಲಿ ಹತ್ಯೆ ಆರೋಪ
ಮಹಾರಾಷ್ಟ್ರದ ಜತ್ತ ತಾಲೂಕಿನ ಜಾಡರ ಬಬಲಾದ ಗ್ರಾಮದಲ್ಲಿ ಭ್ರೂಣದ ಲಿಂಗ ಪತ್ತೆ ಮಾಡಿ, ಬಳಿಕ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಅಧಿಕಾರಿಗಳಿಗೆ ಲಭಿಸಿತ್ತು. ಈ ಜಾಲದ ಕುರಿತು ತನಿಖೆ ನಡೆಸಿದಾಗ ಮಹಾಲಿಂಗಪುರದಲ್ಲಿ ಈ ಹಿಂದೆ ಭ್ರೂಣ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಕವಿತಾ ಬಾಡನವರ ಅವರ ಹೆಸರು ಕೂಡ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಮಹಿಳಾ ಅಧಿಕಾರಿಗಳ ತಂಡ ಗರ್ಭಿಣಿಯರಂತೆ ವೇಷ ಧರಿಸಿ ಕಾರ್ಯಾಚರಣೆಗೆ ಇಳಿದಿತ್ತು.
ರಹಸ್ಯ ಕಾರ್ಯಾಚರಣೆ ನಡೆದದ್ದು ಹೇಗೆ?
ಅ.5ರ ರಾತ್ರಿ ಜಾಡರ ಬಬಲಾದ ಗ್ರಾಮಕ್ಕೆ ತೆರಳಿದ ಅಧಿಕಾರಿಗಳು, ಭ್ರೂಣದ ಲಿಂಗ ಪತ್ತೆಗಾಗಿ ಮಧ್ಯವರ್ತಿ ನಿಖಿಲ್ ತೇಲಿ ಅವರನ್ನು ಸಂಪರ್ಕಿಸಿದರು. ಆತ ಅಧಿಕಾರಿಗಳನ್ನು ತೋಟದ ಮನೆಯೊಂದಕ್ಕೆ ಕರೆದೊಯ್ದಿದ್ದಾನೆ. ಬಳಿಕ ನಿಖಿಲ್‌ನ ತಾಯಿ ದಾನಕ್ಕ ತೇಲಿ ಅವರು ಸ್ಕ್ಯಾನಿಂಗ್ ಯಂತ್ರವು ಕರ್ಜಗಿ ಗ್ರಾಮದ ಕವಿತಾ ಗೋಡೆಕರ ಅವರ ಮನೆಯಲ್ಲಿದೆ ಎಂದು ತಿಳಿಸಿದ್ದಾರೆ.
ಅಧಿಕಾರಿಗಳು ಕವಿತಾ ಅವರ ಮನೆಗೆ ತೆರಳಿದಾಗ ಸ್ಕ್ಯಾನಿಂಗ್‌ಗೆ ಯಂತ್ರ ಸಿದ್ಧಪಡಿಸಲಾಗುತ್ತಿತ್ತು. ಈ ವೇಳೆ ಪೊಲೀಸರು ಆರೋಪಿಗಳನ್ನು ಹಾಗೂ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ.
ಈ ಜಾಲದ ಪ್ರಮುಖ ಆರೋಪಿ ಎಂದು ಹೇಳಲಾಗಿರುವ ನಕಲಿ ವೈದ್ಯ ಸಂಜಯ್ ವಾಘ್ಮೋಡೆ ಅವರನ್ನು ಬಂಧಿಸಲು ಅಧಿಕಾರಿಗಳು ಮುಂದಾದಾಗ, ಆತ ಸ್ಥಳದಿಂದ ಪರಾರಿಯಾಗಿದ್ದಾನೆ.
ಕಾರ್ಯಾಚರಣೆಯಲ್ಲಿ ರಬಕವಿ-ಬನಹಟ್ಟಿ ತಾಲೂಕಿನ ತಹಸೀಲ್ದಾರ್ ಗಿರೀಶ ಸ್ವಾದಿ ಹಾಗೂ ಆರೋಗ್ಯ ಇಲಾಖೆಯ ಮನು ಕೂಡ ಭಾಗವಹಿಸಿದ್ದರು.
ಇಬ್ಬರ ಬಂಧನ; ಸ್ಕ್ಯಾನಿಂಗ್ ಯಂತ್ರ ಜಪ್ತಿ
ಭ್ರೂಣ ಲಿಂಗ ಪತ್ತೆ ಆರೋಪದಡಿ ನಿಖಿಲ್ ತೇಲಿ, ದಾನಕ್ಕ ತೇಲಿ, ಕವಿತಾ ಗೋಡೆಕರ ಹಾಗೂ ನಕಲಿ ವೈದ್ಯ ಸಂಜಯ್ ವಾಘ್ಮೋಡೆ ವಿರುದ್ಧ ಮಹಾರಾಷ್ಟ್ರದ ಉಮದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಈ ಪೈಕಿ ನಿಖಿಲ್ ತೇಲಿ ಹಾಗೂ ದಾನಕ್ಕ ತೇಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಂಜಯ್ ವಾಘ್ಮೋಡೆ ಪರಾರಿಯಾಗಿದ್ದಾನೆ. ಭ್ರೂಣ ಲಿಂಗ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಪಿಸಿಪಿಎನ್‌ಡಿಟಿ ಕಾಯ್ದೆಯಡಿ ವಶಪಡಿಸಿಕೊಂಡು ಮಹಾರಾಷ್ಟ್ರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಹಿಂದಿನ ಪ್ರಕರಣದ ಬೆನ್ನಲ್ಲೇ ಮತ್ತೊಂದು ಆರೋಪ
ಮಹಾಲಿಂಗಪುರದಲ್ಲಿ 2020 ಹಾಗೂ 2024ರಲ್ಲಿ ಕವಿತಾ ಬಾಡನವರ ವಿರುದ್ಧ ಭ್ರೂಣ ಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆ ಆರೋಪ ಕೇಳಿಬಂದಿತ್ತು. ಈ ಪೈಕಿ ಗರ್ಭಪಾತದ ವೇಳೆ ಮಹಾರಾಷ್ಟ್ರ ಮೂಲದ ಗರ್ಭಿಣಿಯೊಬ್ಬರು ಮೃತಪಟ್ಟ ಪ್ರಕರಣದಲ್ಲೂ ಕವಿತಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಂಧನದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಅವರ ವಿರುದ್ಧ ಮತ್ತೆ ಇದೇ ರೀತಿಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇದೀಗ ರಹಸ್ಯ ಕಾರ್ಯಾಚರಣೆ ನಡೆಸಲಾಗಿದೆ.
ಈ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ಆರೋಗ್ಯ ಇಲಾಖೆಯ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಇತ್ತೀಚೆಗೆ ಕವಿತಾ ಅವರಿಗೆ ಪೊಲೀಸರು ನೋಟಿಸ್ ಕೂಡ ಜಾರಿ ಮಾಡಿದ್ದರು.
ಮಹಿಳಾ ಅಧಿಕಾರಿಗಳ ಸುರಕ್ಷತೆಯ ದೃಷ್ಟಿಯಿಂದ ವಿಜಯಪುರ ಹಾಗೂ ಸಾಂಗ್ಲಿ ಪೊಲೀಸರಿಗೆ ಕಾರ್ಯಾಚರಣೆಯ ಮಾಹಿತಿ ನೀಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Uncategorized
Kural Tulu Touch-ತುಳು ಭಾಷೆಗೆ ಡಿಜಿಟಲ್ ಬಲ; ಆಂಡ್ರಾಯ್ಡ್‌ಗೆ ಬಂತು ‘ಕುರಲ್ ತುಳು ಟಚ್’ ಕೀಬೋರ್ಡ್
ಕರಾವಳಿ ಕರ್ನಾಟಕದ ಹೆಮ್ಮೆಯ ತುಳು ಭಾಷೆಯನ್ನು ಡಿಜಿಟಲ್ ಜಗತ್ತಿನಲ್ಲಿ ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಇನ್ನು ಮುಂದೆ ನೇರವಾಗಿ ತುಳು ಲಿಪಿಯಲ್ಲೇ ಸಂದೇಶಗಳನ್ನು ಟೈಪ್ ಮಾಡಲು ನೆರವಾಗುವ ‘ಕುರಲ್ ತುಳು ಟಚ್’ (Kural Tulu Touch) ನೂತನ ಕೀಬೋರ್ಡ್ ಅಧಿಕೃತವಾಗಿ ಬಿಡುಗಡೆಯಾಗಿದೆ.
ಮಂಗಳೂರು, ಅ.6: ಕರಾವಳಿ ಕರ್ನಾಟಕದ ಹೆಮ್ಮೆಯ ತುಳು ಭಾಷೆಯನ್ನು ಡಿಜಿಟಲ್ ಜಗತ್ತಿನಲ್ಲಿ ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಇನ್ನು ಮುಂದೆ ನೇರವಾಗಿ ತುಳು ಲಿಪಿಯಲ್ಲೇ ಸಂದೇಶಗಳನ್ನು ಟೈಪ್ ಮಾಡಲು ನೆರವಾಗುವ ‘ಕುರಲ್ ತುಳು ಟಚ್’ (Kural Tulu Touch) ನೂತನ ಕೀಬೋರ್ಡ್ ಅಧಿಕೃತವಾಗಿ ಬಿಡುಗಡೆಯಾಗಿದೆ.
ಸಾಫ್ಟ್‌ವೇರ್ ಇಂಜಿನಿಯರ್‌ಗಳಾದ ಹರ್ಷಿತ್ ದೇವಾಡಿಗ ಹಾಗೂ ಚೈತ್ರಾ ಪೂಜಾರಿ ಅಭಿವೃದ್ಧಿಪಡಿಸಿರುವ ಈ ಕೀಬೋರ್ಡ್ ಅನ್ನು ಬೆಂಗಳೂರಿನಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಆಯೋಜಿಸಿದ್ದ ‘ತುಳುನಾಡ ಜಾನಪದ ಸಂಭ್ರಮ’ ಕಾರ್ಯಕ್ರಮದಲ್ಲಿ ಸಾರ್ವಜನಿಕ ಬಳಕೆಗೆ ಲೋಕಾರ್ಪಣೆಗೊಳಿಸಲಾಯಿತು.
ವಾಟ್ಸಾಪ್, ಸಾಮಾಜಿಕ ಜಾಲತಾಣಗಳಲ್ಲೂ ತುಳು ಲಿಪಿ
‘ಕುರಲ್ ತುಳು ಟಚ್’ ಕೀಬೋರ್ಡ್ ಸದ್ಯ ಆಂಡ್ರಾಯ್ಡ್ ಬಳಕೆದಾರರಿಗೆ ‘ಬಾರವು ಸಾರವು’ (Baravu Saravu) ಆ್ಯಪ್ ಮೂಲಕ ಲಭ್ಯವಿದೆ. ಆ್ಯಪ್‌ನಲ್ಲಿರುವ ‘New Keyboard’ ಆಯ್ಕೆಯನ್ನು ಸಕ್ರಿಯಗೊಳಿಸಿದ ಬಳಿಕ ವಾಟ್ಸಾಪ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ನೇರವಾಗಿ ತುಳು ಲಿಪಿಯಲ್ಲಿ ಸಂದೇಶಗಳನ್ನು ಟೈಪ್ ಮಾಡಬಹುದು.
ತುಳು ಕೀಬೋರ್ಡ್‌ನಿಂದ ಇತರ ಭಾಷೆಗಳ ಕೀಬೋರ್ಡ್‌ಗಳಿಗೆ ಸುಲಭವಾಗಿ ಬದಲಾಯಿಸುವ ಸೌಲಭ್ಯವೂ ಇದ್ದು, ಟೈಪ್ ಮಾಡಿದ ಪಠ್ಯವನ್ನು ಡಿಜಿಟಲ್ ಚಾಟ್‌ಗಳಲ್ಲಿ ಹಂಚಿಕೊಳ್ಳಬಹುದಾದ ಸ್ಟಿಕ್ಕರ್‌ಗಳಾಗಿ ಪರಿವರ್ತಿಸುವ ಆಯ್ಕೆಯೂ ಇದೆ.
ಅಕ್ಷರ, ಗುಣಿತಾಕ್ಷರ, ಒತ್ತಕ್ಷರಗಳಿಗೆ ಬೆಂಬಲ
ಸಾಮಾನ್ಯ ಮೊಬೈಲ್ ಕೀಬೋರ್ಡ್‌ಗಳ ಮಾದರಿಯಲ್ಲೇ ಸರಳವಾಗಿ ಬಳಸಬಹುದಾದ ವಿನ್ಯಾಸವನ್ನು ‘ಕುರಲ್ ತುಳು ಟಚ್’ ಹೊಂದಿದೆ. ತುಳು ಭಾಷೆಯ ಅಕ್ಷರಗಳು, ಸಂಖ್ಯೆಗಳು, ಗುಣಿತಾಕ್ಷರಗಳು ಹಾಗೂ ಒತ್ತಕ್ಷರಗಳನ್ನು ಇದು ಬೆಂಬಲಿಸುತ್ತದೆ. ಹೀಗಾಗಿ ತುಳು ಲಿಪಿಯಲ್ಲಿ ಪದಗಳು ಹಾಗೂ ವಿವಿಧ ಅಕ್ಷರ ಸಂಯೋಜನೆಗಳನ್ನು ನಿಖರವಾಗಿ ಟೈಪ್ ಮಾಡಲು ಸಾಧ್ಯವಾಗಲಿದೆ.
ತುಳು ಲಿಪಿಯನ್ನು ಕೇವಲ ಶೈಕ್ಷಣಿಕ ಉದ್ದೇಶಗಳು ಅಥವಾ ದಾಖಲೆಗಳಿಗೆ ಸೀಮಿತಗೊಳಿಸದೆ, ದೈನಂದಿನ ಡಿಜಿಟಲ್ ಸಂವಹನದಲ್ಲೂ ಪ್ರಾಯೋಗಿಕವಾಗಿ ಬಳಸುವಂತೆ ಮಾಡುವುದು ತಮ್ಮ ಉದ್ದೇಶ ಎಂದು ಡೆವಲಪರ್‌ಗಳು ತಿಳಿಸಿದ್ದಾರೆ.
ಆ್ಯಪ್ ಅಭಿವೃದ್ಧಿಗೆ ‘Flutter’ ಹಾಗೂ ಬ್ಯಾಕೆಂಡ್ ಬೆಂಬಲಕ್ಕೆ ‘Firebase’ ತಂತ್ರಜ್ಞಾನ ಬಳಸಲಾಗಿದ್ದು, ಕೀಬೋರ್ಡ್ ಅಭಿವೃದ್ಧಿಯನ್ನು ಕೇವಲ ಎರಡು ವಾರಗಳಲ್ಲಿ ಪೂರ್ಣಗೊಳಿಸಲಾಗಿದೆ.
ಮೂರು ವರ್ಷಗಳ ಹಿಂದಿನ ತುಳು ಕಲಿಕಾ ಆ್ಯಪ್ ನೆರವು
ಮೂರು ವರ್ಷಗಳ ಹಿಂದೆ ರೂಪಿಸಿದ್ದ ‘ತುಳು ಕಲಿಕೆ ಆ್ಯಪ್’ ಈ ಯೋಜನೆಗೆ ಬಲವಾದ ಅಡಿಪಾಯವಾಯಿತು ಎಂದು ಹರ್ಷಿತ್ ದೇವಾಡಿಗ ತಿಳಿಸಿದ್ದಾರೆ. ಸಣ್ಣ ಮೊಬೈಲ್ ಪರದೆಯಲ್ಲಿ ತುಳು ಅಕ್ಷರಗಳನ್ನು ಸುಲಭವಾಗಿ ಗುರುತಿಸಿ ಟೈಪ್ ಮಾಡಲು ಅನುಕೂಲವಾಗುವಂತೆ ತುಳು ಫಾಂಟ್ ಅನ್ನು ಕೀಬೋರ್ಡ್ ಲೇಔಟ್‌ಗೆ ನಿಖರವಾಗಿ ಮ್ಯಾಪ್ ಮಾಡುವುದು ಪ್ರಮುಖ ತಾಂತ್ರಿಕ ಸವಾಲಾಗಿತ್ತು ಎಂದು ಅವರು ವಿವರಿಸಿದ್ದಾರೆ.
ಜೈ ತುಳುನಾಡ್ ಸಂಸ್ಥಾಪಕ ಸದಸ್ಯ ಶರತ್ ಕೊಡವೂರು ಮಾತನಾಡಿ, ಕೇಂದ್ರ ಭಾರತೀಯ ಭಾಷೆಗಳ ಸಂಸ್ಥೆ (CIIL) ಮಾನ್ಯತೆ ಪಡೆದ ತುಳು ಲಿಪಿಯನ್ನು ಡಿಜಿಟಲ್ ಜಗತ್ತಿಗೆ ತರುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. ಬಳಕೆದಾರರಿಗೆ ಗೊಂದಲವಾಗದಂತೆ ಅಕ್ಷರಗಳ ಸರಿಯಾದ ಮ್ಯಾಪಿಂಗ್ ಅತ್ಯಂತ ಮುಖ್ಯವಾಗಿತ್ತು ಎಂದು ಹೇಳಿದ್ದಾರೆ.
‘ಬಾರವು ಸಾರವು’ನಲ್ಲಿ ತುಳು ಕಲಿಕೆಗೆ ಹಲವು ಸೌಲಭ್ಯ
‘ಬಾರವು ಸಾರವು’ ಆ್ಯಪ್ ಕೇವಲ ಕೀಬೋರ್ಡ್ ಒದಗಿಸುವುದಕ್ಕೆ ಸೀಮಿತವಾಗಿಲ್ಲ. ತುಳು ಕಲಿಯಲು ಆಸಕ್ತಿ ಹೊಂದಿರುವವರಿಗೆ ಸಮಗ್ರ ಕಲಿಕಾ ವೇದಿಕೆಯಾಗಿಯೂ ಇದು ಕಾರ್ಯನಿರ್ವಹಿಸುತ್ತದೆ.
ಆ್ಯಪ್‌ನಲ್ಲಿ ತುಳು ನಿಘಂಟು, ಮೂಲಭೂತ ವಾಕ್ಯಗಳು, ಆಡಿಯೋ ಆಧಾರಿತ ಕಲಿಕಾ ಸಾಮಗ್ರಿಗಳು ಹಾಗೂ ತುಳು ಸಂಸ್ಕೃತಿಯನ್ನು ಪರಿಚಯಿಸುವ ಪಾರಂಪರಿಕ ಛಾಯಾಚಿತ್ರಗಳು ಲಭ್ಯವಿವೆ. ಬಳಕೆದಾರರು ನಿಘಂಟಿಗೆ ಹೊಸ ತುಳು ಪದಗಳನ್ನು ಸೂಚಿಸುವ ಅವಕಾಶವೂ ಇದ್ದು, ಪರಿಶೀಲನೆಯ ಬಳಿಕ ಅವುಗಳನ್ನು ಸೇರಿಸಲಾಗುತ್ತದೆ.
ತುಳು ಲಿಪಿ ಕಲಿಕಾ ವಿಷಯಗಳು ಹಾಗೂ ವೀಡಿಯೊಗಳನ್ನು ಒದಗಿಸಿರುವ ಬನಶ್ರೀ ಅವಿನಾಶ್, ಪಾರಂಪರಿಕ ಲಿಪಿಯನ್ನು ಕಲಿಯಲು ಮತ್ತು ಅಭ್ಯಾಸ ಮಾಡಲು ಆಸಕ್ತಿ ಹೊಂದಿರುವವರಿಗೆ ಈ ವೇದಿಕೆ ಪ್ರಾಯೋಗಿಕ ನೆರವು ನೀಡಲಿದೆ ಎಂದು ತಿಳಿಸಿದ್ದಾರೆ.
ಯೂನಿಕೋಡ್ ಮಾನ್ಯತೆಯ ಬಳಿಕ ಮತ್ತೊಂದು ಮಹತ್ವದ ಹೆಜ್ಜೆ
ತುಳು-ತಿಗಳಾರಿ ಲಿಪಿಗೆ ಯೂನಿಕೋಡ್ ಮಾನ್ಯತೆ ದೊರೆತಿರುವುದು ಈ ತಾಂತ್ರಿಕ ಬೆಳವಣಿಗೆಗೆ ಪ್ರಮುಖ ಪ್ರೇರಣೆಯಾಗಿದೆ. 2024ರಲ್ಲಿ ಯೂನಿಕೋಡ್ ಕಾನ್ಸೋರ್ಟಿಯಂನ ‘ಯೂನಿಕೋಡ್ 16’ ಆವೃತ್ತಿಯಲ್ಲಿ 80 ತುಳು ಅಕ್ಷರಗಳನ್ನು ಸೇರ್ಪಡೆಗೊಳಿಸಲಾಗಿತ್ತು. ಇದರಿಂದ ಡಿಜಿಟಲ್ ವೇದಿಕೆಗಳಲ್ಲಿ ತುಳು ಲಿಪಿಗೆ ಬೆಂಬಲ ಕಲ್ಪಿಸಲು ಹಾಗೂ ಫಾಂಟ್ ಮತ್ತು ಕೀಬೋರ್ಡ್ ಅಭಿವೃದ್ಧಿಪಡಿಸಲು ತಾಂತ್ರಿಕ ಅಡಿಪಾಯ ಸೃಷ್ಟಿಯಾಯಿತು.
ತುಳು ವಿದ್ವಾಂಸರು ಹಾಗೂ ತುಳು ಸಾಹಿತ್ಯ ಅಕಾಡೆಮಿಯಂತಹ ಸಂಸ್ಥೆಗಳ ಹಲವು ವರ್ಷಗಳ ಪ್ರಯತ್ನದ ಫಲವಾಗಿ ಈ ತಾಂತ್ರಿಕ ಪ್ರಗತಿ ಸಾಧ್ಯವಾಗಿದೆ. ಇದೀಗ ಸ್ಮಾರ್ಟ್‌ಫೋನ್ ಬಳಕೆ ಹೆಚ್ಚಿರುವ ಯುವ ಪೀಳಿಗೆಗೆ ಕನ್ನಡ ಅಥವಾ ಇಂಗ್ಲಿಷ್ ಲಿಪಿಯ ಬದಲು ತುಳು ಭಾಷೆಯನ್ನು ಅದರ ಮೂಲ ಲಿಪಿಯಲ್ಲೇ ಡಿಜಿಟಲ್ ಸಂವಹನದಲ್ಲಿ ಬಳಸಲು ಹೊಸ ಅವಕಾಶ ದೊರೆತಂತಾಗಿದೆ.
ಸದ್ಯ ‘ಕುರಲ್ ತುಳು ಟಚ್’ ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಲಭ್ಯವಿದ್ದು, ಮುಂದಿನ ದಿನಗಳಲ್ಲಿ iOS ಬಳಕೆದಾರರಿಗೂ ಕೀಬೋರ್ಡ್ ಬಿಡುಗಡೆ ಮಾಡಲು ಡೆವಲಪರ್‌ಗಳು ಯೋಜಿಸಿದ್ದಾರೆ.
Uncategorized
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ಕೈಗೊಂಡಿದ್ದ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ, ಆಕಾಶವಾಣಿ ಭವನದ ಆವರಣದಲ್ಲಿ ಎಂಟು ತಾಸಿಗೂ ಹೆಚ್ಚು ಕಾಲ ಧರಣಿ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಸುಮಾರು 250 ಮಂದಿಯನ್ನು ದೆಹಲಿ ಪೊಲೀಸರು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದವರಲ್ಲಿ ಸುಮಾರು 50 ಸಂಸದರೂ ಸೇರಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರತಿಭಟನಾಕಾರರನ್ನು ಕಿಂಗ್ಸ್‌ವೇ ಕ್ಯಾಂಪ್‌ನಲ್ಲಿರುವ ನ್ಯೂ ಪೊಲೀಸ್ ಲೈನ್ಸ್‌ಗೆ ಕರೆದೊಯ್ಯಲಾಗಿದೆ.
ಆಕಾಶವಾಣಿ ಭವನದ ಆವರಣವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ ಪೊಲೀಸರು, ರಾಹುಲ್ ಗಾಂಧಿ ಅವರೊಂದಿಗೆ ಕೆ.ಸಿ. ವೇಣುಗೋಪಾಲ್, ಪವನ್ ಖೇರಾ, ಕೆ. ಸುರೇಶ್, ಅಮರಿಂದರ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರು ಮತ್ತು ಮುಖಂಡರನ್ನು ಬಲವಂತವಾಗಿ ಅಲ್ಲಿಂದ ತೆರವುಗೊಳಿಸಿದರು.
ಸಂಸತ್ ಭವನದ ರಸ್ತೆಯಲ್ಲಿರುವ ಆಕಾಶವಾಣಿ ಭವನದಿಂದ ಕೇವಲ 300 ಮೀಟರ್ ದೂರದಲ್ಲಿರುವ ಚುನಾವಣಾ ಆಯೋಗದ ಕಚೇರಿಯತ್ತ ವಿರೋಧ ಪಕ್ಷಗಳ ಸಂಸದರು ನಡೆಸುತ್ತಿದ್ದ ಮೆರವಣಿಗೆಯನ್ನು ಪೊಲೀಸರು ತಡೆದಿದ್ದರು.
ಇದರಿಂದಾಗಿ ರಾಹುಲ್ ಗಾಂಧಿ ಮತ್ತು ಇತರ ಮುಖಂಡರು ಆಕಾಶವಾಣಿ ಭವನದ ಆವರಣ ಪ್ರವೇಶಿಸಿ ಅಲ್ಲಿಯೇ ಧರಣಿ ಕುಳಿತಿದ್ದರು.
-
ಅಪರಾಧ24 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಬಿಗ್ ನ್ಯೂಸ್18 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ನಿಧನ ವಾರ್ತೆ23 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಶಿಕ್ಷಣ22 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ23 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ನಿಧನ ವಾರ್ತೆ22 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
ರಾಜಕೀಯ24 hours agoDK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ
-
ಬಿಗ್ ನ್ಯೂಸ್23 hours agoPuttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ


















