ನಿಧನ ವಾರ್ತೆ
Suicide-ಅಕ್ಕನ ಮಗನ ಜೊತೆ ಪತ್ನಿ ಪರಾರಿ: ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಕೊಂಡ ನೊಂದ ತಂದೆ
ಕೌಟುಂಬಿಕ ಕಲಹ ಹಾಗೂ ಪತ್ನಿಯ ವಿಶ್ವಾಸದ್ರೋಹದಿಂದ ಮನನೊಂದ ತಂದೆಯೊಬ್ಬರು ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಕೊಲೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ಕುಣಿಗಲ್: ಕೌಟುಂಬಿಕ ಕಲಹ ಹಾಗೂ ಪತ್ನಿಯ ವಿಶ್ವಾಸದ್ರೋಹದಿಂದ ಮನನೊಂದ ತಂದೆಯೊಬ್ಬರು ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಕೊಲೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ಆಲ್ಕೆರೆ ಗ್ರಾಮದ ಮಲ್ಲೇಶ್ವರ ಸ್ವಾಮಿ ದೇವಾಲಯದ ಅರ್ಚಕರಾಗಿದ್ದ ಶಿವಣ್ಣ (40) ಮೃತಪಟ್ಟ ದುರ್ದೈವಿ. ಸಾವಿಗೂ ಮುನ್ನ ಇವರು ತಮ್ಮ ಇಬ್ಬರು ಮಕ್ಕಳಾದ ಜೀವನ್ (10) ಮತ್ತು ಪ್ರಾಣೇಶ್ (6) ಅವರನ್ನು ಸಾಯಿಸಿ, ನಂತರ ತಾವೂ ನೇಣಿಗೆ ಶರಣಾಗಿದ್ದಾರೆ. ಶನಿವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಮಕ್ಕಳಿಬ್ಬರ ಮೃತದೇಹಗಳು ಮಂಚದ ಮೇಲೆ ಮಲಗಿದ್ದ ಸ್ಥಿತಿಯಲ್ಲೇ ಪತ್ತೆಯಾಗಿವೆ.
ದುರಂತಕ್ಕೆ ಕಾರಣವಾದ ಹಿನ್ನೆಲೆ:
ಶಿವಣ್ಣ ಅವರು ತಮ್ಮ ಅಕ್ಕನ ಮಗ ಹೇಮಂತ್ ಎಂಬಾತನನ್ನು ಮಗನಂತೆ ಸಾಕಿ ಸಲಹಿದ್ದರು. ಆದರೆ, ವಾರದ ಹಿಂದೆ ಶಿವಣ್ಣನ ಪತ್ನಿ ಕಾವ್ಯಾ, ಇದೇ ಹೇಮಂತ್ ಜೊತೆಗೆ ಪರಾರಿಯಾಗಿದ್ದರು. ಈ ವಿಚಾರವಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಗ್ರಾಮಸ್ಥರ ಮಧ್ಯಸ್ಥಿಕೆಯಲ್ಲಿ ನಡೆದ ಸಂಧಾನದ ನಂತರ ಕಾವ್ಯಾ ವಾಪಸ್ ಗ್ರಾಮಕ್ಕೆ ಬಂದಿದ್ದರು.
ಆದರೆ, ಮನೆಗೆ ಮರಳಿದ್ದ ಕಾವ್ಯಾ ತನ್ನ ಬುದ್ಧಿ ಬದಲಿಸಿರಲಿಲ್ಲ. ಪತಿ ಶಿವಣ್ಣ ಮನೆಯಲ್ಲಿ ಇಲ್ಲದ ಸಮಯ ಸಾಧಿಸಿ, ಮನೆಯಲ್ಲಿದ್ದ ನಗದು ಮತ್ತು ಚಿನ್ನಾಭರಣಗಳನ್ನು ದೋಚಿಕೊಂಡು ಮತ್ತೆ ಹೇಮಂತ್ ಜೊತೆ ಪರಾರಿಯಾಗಿದ್ದರು. ಪತ್ನಿಯ ಈ ನಡವಳಿಕೆಯಿಂದ ತೀವ್ರವಾಗಿ ಅವಮಾನಕ್ಕೊಳಗಾದ ಮತ್ತು ಮನನೊಂದ ಶಿವಣ್ಣ, ಜೀವನದಲ್ಲಿ ಜಿಗುಪ್ಸೆಗೊಂಡು ಮಕ್ಕಳಿಗೆ ವಿಷವಿಕ್ಕಿ ಅಥವಾ ಉಸಿರುಗಟ್ಟಿಸಿ ಸಾಯಿಸಿ, ತಾವು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ನಿಧನ ವಾರ್ತೆ
Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!
ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್ನ ಫುಟ್ಬೋರ್ಡ್ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.
ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.
ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.
ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Puttur-ಪುತ್ತೂರು: ಬೈಕ್ ಡಿಕ್ಕಿಯಾಗಿ ಹರಿಪ್ರಸಾದ್ ಹೋಟೆಲ್ ಸಪ್ಲೈಯರ್ ಸಾವು
ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಇವರು ಪುತ್ತೂರಿನ ಹರಿಪ್ರಸಾದ್ ಹೋಟೆಲ್ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದರು.
ನ.16ರಂದು ರಾತ್ರಿ ಹೋಟೆಲ್ ಕೆಲಸ ಮುಗಿಸಿ ಹೊರಬಂದ ಚಂದ್ರಶೇಖರ ಅವರು ಹೋಟೆಲ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
-
ಬಿಗ್ ನ್ಯೂಸ್17 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್9 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ14 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು17 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized16 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್17 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ15 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್16 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















