[…]" /> […]"> Puttur-ಪುತ್ತೂರು: ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ಪುರೋಹಿತರ ಮೇಲೆ ಹಲ್ಲೆ; ದೂರು ದಾಖಲು - Nikhara News | Kannada News Website
Connect with us

ಅಪರಾಧ

Puttur-ಪುತ್ತೂರು: ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ಪುರೋಹಿತರ ಮೇಲೆ ಹಲ್ಲೆ; ದೂರು ದಾಖಲು

Published

on

Ad Widget

Ad Widget

Ad Widget

Ad Widget

ಪೂಜಾ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಪುರೋಹಿತರೊಬ್ಬರ ಕಾರನ್ನು ತಡೆದು ಅಪರಿಚಿತ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿರುವ ಘಟನೆ ಮೇ 4ರಂದು ರಾತ್ರಿ ಕಬಕ ಗ್ರಾಮದ ವಿದ್ಯಾಪುರದಲ್ಲಿ ಸಂಭವಿಸಿದೆ. ಕಬಕ ವಿದ್ಯಾಪುರ ನಿವಾಸಿ ಬಾಲಕೃಷ್ಣ ಜೋಯಿಸ ಎಂಬವರ ಪುತ್ರ ಗಣೇಶ್ ವಿ. (39) ಹಲ್ಲೆಗೊಳಗಾದ ಪುರೋಹಿತರು.

Ad Widget

Ad Widget

Ad Widget

Ad Widget

ಪುತ್ತೂರು: ಪೂಜಾ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಪುರೋಹಿತರೊಬ್ಬರ ಕಾರನ್ನು ತಡೆದು ಅಪರಿಚಿತ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿರುವ ಘಟನೆ ಮೇ 4ರಂದು ರಾತ್ರಿ ಕಬಕ ಗ್ರಾಮದ ವಿದ್ಯಾಪುರದಲ್ಲಿ ಸಂಭವಿಸಿದೆ.

Ad Widget

Ad Widget alt="Ad Widget"/>

Ad Widget

ಕಬಕ ವಿದ್ಯಾಪುರ ನಿವಾಸಿ ಬಾಲಕೃಷ್ಣ ಜೋಯಿಸ ಎಂಬವರ ಪುತ್ರ ಗಣೇಶ್ ವಿ. (39) ಹಲ್ಲೆಗೊಳಗಾದ ಪುರೋಹಿತರು.

Ad Widget

Ad Widget <> Ad Widget

ಘಟನೆಯ ವಿವರ:
ಗಣೇಶ್ ಅವರು ಪೂಜಾ ಕಾರ್ಯಕ್ರಮ ಮುಗಿಸಿ ತಮ್ಮ ಕಾರಿನಲ್ಲಿ ಮನೆಗೆ ತೆರಳುತ್ತಿದ್ದರು. ವಿದ್ಯಾಪುರ ತಲುಪಿದಾಗ ರಸ್ತೆ ಬದಿಯ ಮನೆಯೊಂದರಲ್ಲಿ ಶುಭಕಾರ್ಯ ನಡೆಯುತ್ತಿದ್ದ ಕಾರಣ ವಾಹನಗಳ ದಟ್ಟಣೆ ಹಾಗೂ ಜನರ ಓಡಾಟ ಹೆಚ್ಚಿತ್ತು. ಹೀಗಾಗಿ ಅವರು ಕಾರನ್ನು ಅತ್ಯಂತ ನಿಧಾನವಾಗಿ ಚಲಾಯಿಸುತ್ತಿದ್ದರು. ಈ ಸಂದರ್ಭದಲ್ಲಿ ಮಗುವೊಂದು ಹಠಾತ್ತನೆ ಕಾರಿಗೆ ಅಡ್ಡ ಬಂದಿದೆ.

ತಕ್ಷಣ ಗಣೇಶ್ ಅವರು ಕಾರು ನಿಲ್ಲಿಸಿ ಏನಾಯಿತು ಎಂದು ನೋಡುತ್ತಿದ್ದಂತೆಯೇ, ಅಲ್ಲಿದ್ದ ಅಪರಿಚಿತ ವ್ಯಕ್ತಿಯೊಬ್ಬರು “ಮಗುವಿಗೆ ಕಾರು ತಾಗಿಸಿದ್ದೀಯಾ” ಎಂದು ವಿನಾಕಾರಣ ತಕರಾರು ತೆಗೆದಿದ್ದಾರೆ. ಅಷ್ಟಕ್ಕೇ ನಿಲ್ಲಿಸದೆ, ಗಣೇಶ್ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಮೈಮೇಲೆ ಕೈಮಾಡಿ ಹಲ್ಲೆ ನಡೆಸಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

Ad Widget

Ad Widget

ಈ ಕುರಿತು ಸಂತ್ರಸ್ತ ಗಣೇಶ್ ಭಟ್ ಅವರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Ad Widget
Click to comment

Leave a Reply

ಅಪರಾಧ

Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ

Published

on

Ad Widget

Ad Widget

Ad Widget

Ad Widget

ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.

Ad Widget

Ad Widget <> Ad Widget

ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.

Ad Widget

Ad Widget

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.

ಆರೋಪಿಗೆ ವಿಧಿಸಿದ ಶಿಕ್ಷೆ:

  • ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
  • ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
  • ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.

ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.

Ad Widget
Continue Reading

ಅಪರಾಧ

Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.

ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 236/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಕಿರು ಖನಿಜ ರಿಯಾಯಿತಿ ನಿಯಮಗಳು, MMDR ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ.

Ad Widget
Continue Reading

ಅಪರಾಧ

Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ

Published

on

Ad Widget

Ad Widget

Ad Widget

Ad Widget

ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.

Ad Widget

Ad Widget <> Ad Widget

ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget

ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2), MMDR ಕಾಯ್ದೆ 1957ರ ಕಲಂ 4(1), 21 ಹಾಗೂ ಕರ್ನಾಟಕ ಕಿರು ಖನಿಜ ನಿಯಮಾವಳಿ 1994ರ ಕಲಂ 3, 44ರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!