ಸ್ಥಳೀಯ
Savanuru-ಸವಣೂರು: ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಸವಾರ ಸಾವು : ಮೂವರಿಗೆ ಗಾಯ
ಸುಬ್ರಹ್ಮಣ್ಯ – ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.
ಕಡಬ: ಸುಬ್ರಹ್ಮಣ್ಯ – ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಗೊಳ್ತಮಜಲು ನಿವಾಸಿ ಮೃತಪಟ್ಟ ಸವಾರ ಎಂದು ಗುರುತಿಸಲಾಗಿದೆ. ಅವರೊಂದಿಗೆ ಸ್ಕೂಟರ್‌ನಲ್ಲಿದ್ದ ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ವಿವರ:
ಗೊಳ್ತಮಜಲು ನಿವಾಸಿಗಳು ತಮ್ಮ ಸ್ಕೂಟರ್‌ನಲ್ಲಿ ಕಡಬ ತಾಲೂಕಿನ ಆಲಂಗಾರಿಗೆ ಕೆಲಸದ ನಿಮಿತ್ತ ತೆರಳಿದ್ದರು. ಸಂಜೆ 5 ಗಂಟೆ ಸುಮಾರಿಗೆ ವಾಪಸ್ಸು ಮನೆಗೆ ಮರಳುತ್ತಿದ್ದಾಗ, ಚಾಪಳ್ಳ ತಿರುವಿನಲ್ಲಿ ಎದುರಿನಿಂದ ಬಂದ ಮುಗೆರೋಡಿ ಕನ್ಸ್ಟ್ರಕ್ಷನ್‌ಗೆ ಸೇರಿದ ನೀರಿನ ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದೆ.
ಅಲಂಕಾರಿನಲ್ಲಿ ನಡೆಯುತ್ತಿದ್ದ ಕಾಮಗಾರಿಗೆ ಸವಣೂರು ಕಡೆಯಿಂದ ನೀರು ಪೂರೈಸುತ್ತಿದ್ದ ಟ್ಯಾಂಕರ್ ಚಾಲಕ, ಸ್ಕೂಟರ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ವಾಹನವನ್ನು ಎಡಕ್ಕೆ ತಿರುಗಿಸಿದ್ದಾನೆ. ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಟ್ಯಾಂಕರ್ 90 ಡಿಗ್ರಿ ತಿರುಗಿ ರಸ್ತೆ ಪಕ್ಕದ ಕಂದಕಕ್ಕೆ ಉರುಳಿದೆ.
ದುರದೃಷ್ಟವಶಾತ್, ಸ್ಕೂಟರ್ ಟ್ಯಾಂಕರ್‌ನ ಚಕ್ರದ ಅಡಿಗೆ ಸಿಲುಕಿದ ಪರಿಣಾಮ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಇನ್ನೊಂದು ಬೈಕ್ ಸ್ಕಿಡ್:
ಅಪಘಾತದ ಭೀಕರತೆ ಎಷ್ಟಿತ್ತೆಂದರೆ, ಅದೇ ಹಾದಿಯಲ್ಲಿ ಬರುತ್ತಿದ್ದ ಮತ್ತೊಂದು ಬೈಕ್ ಸವಾರರು ಅಪಘಾತವನ್ನು ಕಂಡು ಗಾಬರಿಯಿಂದ ಬ್ರೇಕ್ ಹಾಕಿದಾಗ ಬೈಕ್ ಸ್ಕಿಡ್ ಆಗಿದೆ. ಈ ಘಟನೆಯಲ್ಲಿ ಬೈಕ್‌ನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಪಘಾತದಿಂದಾಗಿ ಸ್ಥಳದಲ್ಲಿ ವಾಹನ ಸಂಚಾರವನ್ನು ವ್ಯತ್ಯಯ ಉಂಟಾಗಿದ್ದು.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
ಶಿಕ್ಷಣ
Vivekananda-ಪುತ್ತೂರು: ನಾಳೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ 7ನೇ ವಾರ್ಷಿಕೋತ್ಸವ
ಶಿಕ್ಷಣದ ಜೊತೆಗೆ ಸಂಸ್ಕೃತಿ, ಸಂಸ್ಕಾರ ಹಾಗೂ ಮೌಲ್ಯಗಳಿಗೆ ಆದ್ಯತೆ ನೀಡುತ್ತಾ ಬಂದಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ವಿವೇಕಾನಂದ ಸೆಂಟ್ರಲ್ ಸ್ಕೂಲ್, ತನ್ನ 7ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಕ್ಕೆ ಸಜ್ಜಾಗಿದೆ.
ಪುತ್ತೂರು: ಶಿಕ್ಷಣದ ಜೊತೆಗೆ ಸಂಸ್ಕೃತಿ, ಸಂಸ್ಕಾರ ಹಾಗೂ ಮೌಲ್ಯಗಳಿಗೆ ಆದ್ಯತೆ ನೀಡುತ್ತಾ ಬಂದಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ವಿವೇಕಾನಂದ ಸೆಂಟ್ರಲ್ ಸ್ಕೂಲ್, ತನ್ನ 7ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಕ್ಕೆ ಸಜ್ಜಾಗಿದೆ.

2026-27ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಮಾರಂಭವು ನ.26ರಂದು ಗುರುವಾರ ಮಧ್ಯಾಹ್ನ 2.30ರಿಂದ ಶಾಲಾ ಆವರಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಪುಟಾಣಿಗಳ ಮುಗ್ಧ ನೃತ್ಯ ಪ್ರದರ್ಶನದಿಂದ ಹಿಡಿದು ಹಿರಿಯ ವಿದ್ಯಾರ್ಥಿಗಳ ಅರ್ಥಪೂರ್ಣ ಸಾಂಸ್ಕೃತಿಕ ಪ್ರಸ್ತುತಿಗಳವರೆಗೆ ಕಾರ್ಯಕ್ರಮದಲ್ಲಿ ವಿವಿಧ ಮನರಂಜನಾ ಚಟುವಟಿಕೆಗಳು ನಡೆಯಲಿದ್ದು, ಶಾಲಾ ಆವರಣದಲ್ಲಿ ಸಂಭ್ರಮದ ವಾತಾವರಣ ಮೂಡಲಿದೆ.

ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ರವೀಂದ್ರ ಪಿ. ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ತೆಂಕಿಲದ ನರೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಸಾದ ಶಾನುಭೋಗ್ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಹರೀಶ್ ಶಾಸ್ತಿ ಬಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಲಿದ್ದಾರೆ.

ಗೌರವ ಅತಿಥಿಯಾಗಿ FirstByteFast ಸಂಸ್ಥೆಯ ಸಹ-ಸಂಸ್ಥಾಪಕ ಹಾಗೂ ಸಿಇಒ ಸ್ವಸ್ತಿಕ್ ಪದ್ಮ ಉಪಸ್ಥಿತರಿದ್ದು, ತಮ್ಮ ಅನುಭವ ಹಾಗೂ ಸಂದೇಶದ ಮೂಲಕ ವಿದ್ಯಾರ್ಥಿಗಳಲ್ಲಿ ಹೊಸ ಕನಸು ಮತ್ತು ಹುಮ್ಮಸ್ಸು ತುಂಬಲಿದ್ದಾರೆ.
ದಿನವಿಡೀ ಸಾಂಸ್ಕೃತಿಕ ವೈಭವ
ಕಾರ್ಯಕ್ರಮವು ಮಧ್ಯಾಹ್ನ 2.30ಕ್ಕೆ ಧಾರ್ಮಿಕ ಶಿಕ್ಷಣದ ಪ್ರದರ್ಶನದೊಂದಿಗೆ ಆರಂಭವಾಗಲಿದೆ. ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಭಕ್ತಿ, ಶಿಸ್ತು ಮತ್ತು ಸಂಸ್ಕಾರ ಬೆಳೆಸುವ ಉದ್ದೇಶದಿಂದ ಶಾಲೆಯಲ್ಲಿ ನೀಡಲಾಗುತ್ತಿರುವ ಧಾರ್ಮಿಕ ಶಿಕ್ಷಣದ ಪರಿಚಯ ಈ ಪ್ರದರ್ಶನದ ಮೂಲಕ ದೊರೆಯಲಿದೆ.
ಮಧ್ಯಾಹ್ನ 3ರಿಂದ 4ರವರೆಗೆ ಪೂರ್ವ ಪ್ರಾಥಮಿಕದಿಂದ 2ನೇ ತರಗತಿವರೆಗಿನ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮುದ್ದಾದ ವೇಷಭೂಷಣ, ಮುಗ್ಧ ಅಭಿನಯ ಹಾಗೂ ಲಯಬದ್ಧ ನೃತ್ಯಗಳ ಮೂಲಕ ಪುಟಾಣಿಗಳು ಸಭಿಕರನ್ನು ರಂಜಿಸಲಿದ್ದಾರೆ.

ಸಂಜೆ 4ರಿಂದ 5.30ರವರೆಗೆ ಸಭಾ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ನಡೆಯಲಿದೆ. ಬಳಿಕ ಸಂಜೆ 5.30ರಿಂದ 3ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಲಿದ್ದು, ನೃತ್ಯ, ನಾಟಕ, ಸಂಗೀತ ಹಾಗೂ ರೂಪಕಗಳ ಮೂಲಕ ಹಿರಿಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಶಾಲಾ ಸಂಚಾಲಕ ರವಿನಾರಾಯಣ ಎಂ. ತಿಳಿಸಿದ್ದಾರೆ.
ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಈಗಾಗಲೇ ವಾರ್ಷಿಕೋತ್ಸವದ ಸಿದ್ಧತೆಯಲ್ಲಿ ತೊಡಗಿದ್ದಾರೆ. ವಾರ್ಷಿಕೋತ್ಸವವು ಕೇವಲ ಸಂಭ್ರಮದ ಕಾರ್ಯಕ್ರಮವಲ್ಲ; ಮಕ್ಕಳ ವರ್ಷವಿಡೀ ನಡೆದ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಪೋಷಕರ ಸಹಕಾರದ ಪ್ರತಿಫಲವಾಗಿದೆ. ಪ್ರತಿಯೊಂದು ಮಗುವಿನಲ್ಲಿರುವ ಪ್ರತಿಭೆಯನ್ನು ವೇದಿಕೆಯ ಮೇಲೆ ಅನಾವರಣಗೊಳಿಸುವ ಪ್ರಯತ್ನವೇ ಈ ವಾರ್ಷಿಕೋತ್ಸವದ ವಿಶೇಷವಾಗಿದೆ.
ಶಿಕ್ಷಣ
Narendra-ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಇಚ್ಚಿಕ ಜೈನ್ ಇವರು ಕರಾಟೆ ಸ್ಪರ್ಧೆಯಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI)ಗೆ ಆಯ್ಕೆ
ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.
ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಇವರು ಜಪಾನ್ ಶೊಟೊಕಾನ್ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಸಂಸ್ಥೆಯ ತರಬೇತುದಾರರಾದ ಶಿವಪ್ರಸಾದ್ ಡಿ. ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ರಕ್ಷಕ-ಶಿಕ್ಷಕ ಸಂಘ, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಯ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.
ಶಿಕ್ಷಣ
Vivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.
ಪೌಢ ಶಾಲಾ ವಿಭಾಗದಲ್ಲಿ ಚಿಂತನ. ಎಂ (ದಿ.ಸೀತಾರಾಮ ಮೇಲ್ಪಾಡಿ ಹಾಗೂ ಸರೋಜ ಮೇಲ್ಪಾಡಿಯವರ ಪುತ್ರಿ)ಚಿತ್ರಕಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದ ಸ್ಪರ್ಧೆಗಳು ಮುಂಬರುವ ಜನವರಿ ತಿಂಗಳಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.
-
ಬಿಗ್ ನ್ಯೂಸ್22 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ22 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು23 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
Uncategorized13 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ನಿಧನ ವಾರ್ತೆ18 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ23 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಮಂಗಳೂರು24 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಸ್ಥಳೀಯ23 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು















