ಸ್ಥಳೀಯ
Excel Techno School-ಎಕ್ಸೆಲ್ ಟೆಕ್ನೋ ಸ್ಕೂಲ್‌ನಲ್ಲಿ ‘ಸೂಪರ್ 30’ ಪರೀಕ್ಷೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಸುವರ್ಣಾವಕಾಶ..!
ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ನ ವಿದ್ಯಾ ಸಾಗರ ಕ್ಯಾಂಪಸ್‌ನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ‘ಸೂಪರ್ 30’ ಪ್ರವೇಶ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ. ಮೇ 6ರಂದು ಬೆಳಿಗ್ಗೆ 10 ಗಂಟೆಗೆ ಈ ಪರೀಕ್ಷೆಯು ನಡೆಯಲಿದ್ದು, ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಬಾಗಿಲು ತೆರೆಯಲಿದೆ.
ಗುರುವಾಯನಕೆರೆ: ಇಲ್ಲಿನ ಪ್ರತಿಷ್ಠಿತ ಎಕ್ಸೆಲ್ ಟೆಕ್ನೋ ಸ್ಕೂಲ್‌ನ ವಿದ್ಯಾ ಸಾಗರ ಕ್ಯಾಂಪಸ್‌ನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ‘ಸೂಪರ್ 30’ ಪ್ರವೇಶ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ. ಮೇ 6ರಂದು ಬೆಳಿಗ್ಗೆ 10 ಗಂಟೆಗೆ ಈ ಪರೀಕ್ಷೆಯು ನಡೆಯಲಿದ್ದು, ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಬಾಗಿಲು ತೆರೆಯಲಿದೆ.
ಯಾರು ಭಾಗವಹಿಸಬಹುದು?
6ನೇ ತರಗತಿ ಪ್ರವೇಶಕ್ಕೆ: 5ನೇ ತರಗತಿ ಉತ್ತೀರ್ಣರಾದವರು.
7ನೇ ತರಗತಿ ಪ್ರವೇಶಕ್ಕೆ: 6ನೇ ತರಗತಿ ಉತ್ತೀರ್ಣರಾದವರು.
8ನೇ ತರಗತಿ ಪ್ರವೇಶಕ್ಕೆ: 7ನೇ ತರಗತಿ ಉತ್ತೀರ್ಣರಾದವರು.
ಪರೀಕ್ಷೆಯ ವಿವರ:
ಈ ಪರೀಕ್ಷೆಯು ಇಂಗ್ಲಿಷ್, ಗಣಿತ (Maths) ಮತ್ತು ವಿಜ್ಞಾನ (Science) ವಿಷಯಗಳನ್ನು ಒಳಗೊಂಡಿರುತ್ತದೆ. ಸಂಪೂರ್ಣವಾಗಿ ಬಹು ಆಯ್ಕೆಯ ಪ್ರಶ್ನೆಗಳನ್ನೊಳಗೊಂಡ (Multiple Choice Questions) ಈ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಗ್ರಾಮೀಣ ವಲಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
ಉಚಿತ ಶಿಕ್ಷಣದ ಸೌಲಭ್ಯಗಳು:
‘ಸೂಪರ್ 30’ ಪರೀಕ್ಷೆಯ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಎಕ್ಸೆಲ್ ಟೆಕ್ನೋ ಸ್ಕೂಲ್‌ನಲ್ಲಿ ಸಿಬಿಎಸ್‌ಇ (CBSE) ಪಠ್ಯಕ್ರಮದಡಿ ಉಚಿತ ಶಿಕ್ಷಣ ನೀಡಲಾಗುವುದು. ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್ (NEET) ಮತ್ತು ಜೆಇಇ (JEE) ಪರೀಕ್ಷೆಗಳಿಗೆ ಉಚಿತ ಕೋಚಿಂಗ್ ಕೂಡ ಲಭ್ಯವಿರುತ್ತದೆ. ಎಕ್ಸೆಲ್ ಬೆಳಕು ಫೌಂಡೇಶನ್ ತನ್ನ ಉಚಿತ ಶಿಕ್ಷಣ ಯೋಜನೆಯ ಭಾಗವಾಗಿ ಈ ಮಹತ್ವದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಬಿಗ್ ನ್ಯೂಸ್
Rakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ, ಇದೀಗ ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ, ಇದೀಗ ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ.
ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ರಾಕೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ನವೆಂಬರ್ 20ರಂದು ಬೆಂಗಳೂರಿನ 66ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿತ್ತು. ಇದರಿಂದ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ವಿರುದ್ಧ ದಾಖಲಾಗಿರುವುದು ಜಾಮೀನು ಪಡೆಯಬಹುದಾದ ಅಪರಾಧಗಳಾಗಿವೆ. ಒಂದು ವೇಳೆ ಬಂಧನಕ್ಕೊಳಗಾದರೂ ವಿಚಾರಣಾ ನ್ಯಾಯಾಲಯದಲ್ಲಿಯೇ ಜಾಮೀನು ಪಡೆಯಲು ಅವಕಾಶವಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಊರ್ಜಿತವಲ್ಲ ಎಂದು ಅಭಿಪ್ರಾಯಪಟ್ಟಿತು.
ಇದಕ್ಕೂ ಮುನ್ನ ರಾಕೇಶ್ ಶೆಟ್ಟಿ ಪರ ವಕೀಲರು ವಾದ ಮಂಡಿಸಿ, ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾದ ಅಪರಾಧಗಳ ಆರೋಪ ಹೊರಿಸಲಾಗಿದೆ. ಆದ್ದರಿಂದ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ನ್ಯಾಯಪೀಠವನ್ನು ಕೋರಿದ್ದರು.
ಆದರೆ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್, ಪ್ರಕರಣದಲ್ಲಿ ಜಾಮೀನು ಪಡೆಯಬಹುದಾದ ಅಪರಾಧಗಳು ದಾಖಲಾಗಿರುವುದರಿಂದ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವುದು ಕಾನೂನುಬದ್ಧವಾಗಿ ಊರ್ಜಿತವಲ್ಲ ಎಂದು ವಾದಿಸಿದರು.
ನ್ಯಾಯಪೀಠದ ಅಭಿಪ್ರಾಯದ ಬೆನ್ನಲ್ಲೇ ರಾಕೇಶ್ ಶೆಟ್ಟಿ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆದುಕೊಂಡರು.
ಕ್ರೈಂ
Murder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
ಸಹೋದರನ ಮಗಳೇ ಚಿಕ್ಕಪ್ಪನನ್ನು ಹರಿತವಾದ ಆಯುಧದಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಚೆನ್ನಯ್ಯ ಪೂಜಾರಿ (52) ಮೃತಪಟ್ಟಿದ್ದಾರೆ. ಅವರ ಸಹೋದರ ಕೋಟಿ ಪೂಜಾರಿಯವರ ಪುತ್ರಿ ಕೃತ್ತಿಕಾ (26) ಕೊಲೆ ಆರೋಪಿತೆಯಾಗಿದ್ದಾರೆ.
ಪುತ್ತೂರು: ಸಹೋದರನ ಮಗಳೇ ಚಿಕ್ಕಪ್ಪನನ್ನು ಹರಿತವಾದ ಆಯುಧದಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದಲ್ಲಿ ನಡೆದಿದೆ.
ಕನ್ಯಾನ ಗ್ರಾಮದ ಶಿರಂಕಲ್ಲು ನಂದರಬೆಟ್ಟು ಎಂಬಲ್ಲಿ ನ.24ರ ರಾತ್ರಿ ನಡೆದ ಘಟನೆಯಲ್ಲಿ ಚೆನ್ನಯ್ಯ ಪೂಜಾರಿ (52) ಮೃತಪಟ್ಟಿದ್ದಾರೆ. ಅವರ ಸಹೋದರ ಕೋಟಿ ಪೂಜಾರಿಯವರ ಪುತ್ರಿ ಕೃತ್ತಿಕಾ (26) ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ವಿವರ
ಶಿರಂಕಲ್ಲು ನಂದರಬೆಟ್ಟು ದಾಸರಕೋಡಿ ಎಂಬಲ್ಲಿ ಕೋಟಿ ಪೂಜಾರಿ ಹಾಗೂ ಚೆನ್ನಯ್ಯ ಪೂಜಾರಿ ಎಂಬ ಅವಳಿ ಸಹೋದರರು ವಾಸವಾಗಿದ್ದರು. ಕೋಟಿ ಪೂಜಾರಿಯವರ ವಿವಾಹಿತ ಪುತ್ರಿ ಕೃತ್ತಿಕಾ ಇತ್ತೀಚೆಗೆ ತವರು ಮನೆಗೆ ಬಂದಿದ್ದರು.
ನ.24ರಂದು ರಾತ್ರಿ ಸುಮಾರು 7 ಗಂಟೆಯ ವೇಳೆಗೆ ಚೆನ್ನಯ್ಯ ಪೂಜಾರಿ ಅವರು ಕೃತ್ತಿಕಾ ವಾಸವಿದ್ದ ಮನೆಯ ಬಳಿ ಗಲಾಟೆ ನಡೆಸಿದ್ದು, ಈ ವೇಳೆ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಮಾತಿನ ಚಕಮಕಿ ತೀವ್ರಗೊಂಡಾಗ ಆಕ್ರೋಶಗೊಂಡ ಕೃತ್ತಿಕಾ ಮನೆಯಲ್ಲಿದ್ದ ಹರಿತವಾದ ಕತ್ತಿಯಿಂದ ತನ್ನ ಚಿಕ್ಕಪ್ಪ ಚೆನ್ನಯ್ಯ ಪೂಜಾರಿ ಅವರ ಎದೆಗೆ ಬಲವಾಗಿ ಚುಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.
ಕತ್ತಿಯೇಟಿನಿಂದ ಎದೆಗೆ ಗಂಭೀರ ಗಾಯಗೊಂಡ ಚೆನ್ನಯ್ಯ ಪೂಜಾರಿ ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದ ಅವರನ್ನು ಸ್ಥಳೀಯರು ತಕ್ಷಣ ವಿಟ್ಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು. ಆದರೆ, ಪುತ್ತೂರಿಗೆ ಕರೆತರುತ್ತಿದ್ದ ವೇಳೆ ತೀವ್ರ ರಕ್ತಸ್ರಾವದಿಂದ ಚೆನ್ನಯ್ಯ ಪೂಜಾರಿ ಅವರು ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಇನ್‌ಸ್ಪೆಕ್ಟರ್ ಪ್ರಕಾಶ್ ದೇವಾಡಿಗ, ಉಪನಿರೀಕ್ಷಕರು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಕೃತ್ತಿಕಾಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಶಿಕ್ಷಣ
Vivekananda-ಪುತ್ತೂರು: ನಾಳೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ 7ನೇ ವಾರ್ಷಿಕೋತ್ಸವ
ಶಿಕ್ಷಣದ ಜೊತೆಗೆ ಸಂಸ್ಕೃತಿ, ಸಂಸ್ಕಾರ ಹಾಗೂ ಮೌಲ್ಯಗಳಿಗೆ ಆದ್ಯತೆ ನೀಡುತ್ತಾ ಬಂದಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ವಿವೇಕಾನಂದ ಸೆಂಟ್ರಲ್ ಸ್ಕೂಲ್, ತನ್ನ 7ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಕ್ಕೆ ಸಜ್ಜಾಗಿದೆ.
ಪುತ್ತೂರು: ಶಿಕ್ಷಣದ ಜೊತೆಗೆ ಸಂಸ್ಕೃತಿ, ಸಂಸ್ಕಾರ ಹಾಗೂ ಮೌಲ್ಯಗಳಿಗೆ ಆದ್ಯತೆ ನೀಡುತ್ತಾ ಬಂದಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ವಿವೇಕಾನಂದ ಸೆಂಟ್ರಲ್ ಸ್ಕೂಲ್, ತನ್ನ 7ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಕ್ಕೆ ಸಜ್ಜಾಗಿದೆ.

2026-27ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಮಾರಂಭವು ನ.26ರಂದು ಗುರುವಾರ ಮಧ್ಯಾಹ್ನ 2.30ರಿಂದ ಶಾಲಾ ಆವರಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಪುಟಾಣಿಗಳ ಮುಗ್ಧ ನೃತ್ಯ ಪ್ರದರ್ಶನದಿಂದ ಹಿಡಿದು ಹಿರಿಯ ವಿದ್ಯಾರ್ಥಿಗಳ ಅರ್ಥಪೂರ್ಣ ಸಾಂಸ್ಕೃತಿಕ ಪ್ರಸ್ತುತಿಗಳವರೆಗೆ ಕಾರ್ಯಕ್ರಮದಲ್ಲಿ ವಿವಿಧ ಮನರಂಜನಾ ಚಟುವಟಿಕೆಗಳು ನಡೆಯಲಿದ್ದು, ಶಾಲಾ ಆವರಣದಲ್ಲಿ ಸಂಭ್ರಮದ ವಾತಾವರಣ ಮೂಡಲಿದೆ.

ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ರವೀಂದ್ರ ಪಿ. ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ತೆಂಕಿಲದ ನರೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಸಾದ ಶಾನುಭೋಗ್ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಹರೀಶ್ ಶಾಸ್ತಿ ಬಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಲಿದ್ದಾರೆ.

ಗೌರವ ಅತಿಥಿಯಾಗಿ FirstByteFast ಸಂಸ್ಥೆಯ ಸಹ-ಸಂಸ್ಥಾಪಕ ಹಾಗೂ ಸಿಇಒ ಸ್ವಸ್ತಿಕ್ ಪದ್ಮ ಉಪಸ್ಥಿತರಿದ್ದು, ತಮ್ಮ ಅನುಭವ ಹಾಗೂ ಸಂದೇಶದ ಮೂಲಕ ವಿದ್ಯಾರ್ಥಿಗಳಲ್ಲಿ ಹೊಸ ಕನಸು ಮತ್ತು ಹುಮ್ಮಸ್ಸು ತುಂಬಲಿದ್ದಾರೆ.
ದಿನವಿಡೀ ಸಾಂಸ್ಕೃತಿಕ ವೈಭವ
ಕಾರ್ಯಕ್ರಮವು ಮಧ್ಯಾಹ್ನ 2.30ಕ್ಕೆ ಧಾರ್ಮಿಕ ಶಿಕ್ಷಣದ ಪ್ರದರ್ಶನದೊಂದಿಗೆ ಆರಂಭವಾಗಲಿದೆ. ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಭಕ್ತಿ, ಶಿಸ್ತು ಮತ್ತು ಸಂಸ್ಕಾರ ಬೆಳೆಸುವ ಉದ್ದೇಶದಿಂದ ಶಾಲೆಯಲ್ಲಿ ನೀಡಲಾಗುತ್ತಿರುವ ಧಾರ್ಮಿಕ ಶಿಕ್ಷಣದ ಪರಿಚಯ ಈ ಪ್ರದರ್ಶನದ ಮೂಲಕ ದೊರೆಯಲಿದೆ.
ಮಧ್ಯಾಹ್ನ 3ರಿಂದ 4ರವರೆಗೆ ಪೂರ್ವ ಪ್ರಾಥಮಿಕದಿಂದ 2ನೇ ತರಗತಿವರೆಗಿನ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮುದ್ದಾದ ವೇಷಭೂಷಣ, ಮುಗ್ಧ ಅಭಿನಯ ಹಾಗೂ ಲಯಬದ್ಧ ನೃತ್ಯಗಳ ಮೂಲಕ ಪುಟಾಣಿಗಳು ಸಭಿಕರನ್ನು ರಂಜಿಸಲಿದ್ದಾರೆ.

ಸಂಜೆ 4ರಿಂದ 5.30ರವರೆಗೆ ಸಭಾ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ನಡೆಯಲಿದೆ. ಬಳಿಕ ಸಂಜೆ 5.30ರಿಂದ 3ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಲಿದ್ದು, ನೃತ್ಯ, ನಾಟಕ, ಸಂಗೀತ ಹಾಗೂ ರೂಪಕಗಳ ಮೂಲಕ ಹಿರಿಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಶಾಲಾ ಸಂಚಾಲಕ ರವಿನಾರಾಯಣ ಎಂ. ತಿಳಿಸಿದ್ದಾರೆ.
ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಈಗಾಗಲೇ ವಾರ್ಷಿಕೋತ್ಸವದ ಸಿದ್ಧತೆಯಲ್ಲಿ ತೊಡಗಿದ್ದಾರೆ. ವಾರ್ಷಿಕೋತ್ಸವವು ಕೇವಲ ಸಂಭ್ರಮದ ಕಾರ್ಯಕ್ರಮವಲ್ಲ; ಮಕ್ಕಳ ವರ್ಷವಿಡೀ ನಡೆದ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಪೋಷಕರ ಸಹಕಾರದ ಪ್ರತಿಫಲವಾಗಿದೆ. ಪ್ರತಿಯೊಂದು ಮಗುವಿನಲ್ಲಿರುವ ಪ್ರತಿಭೆಯನ್ನು ವೇದಿಕೆಯ ಮೇಲೆ ಅನಾವರಣಗೊಳಿಸುವ ಪ್ರಯತ್ನವೇ ಈ ವಾರ್ಷಿಕೋತ್ಸವದ ವಿಶೇಷವಾಗಿದೆ.
-
ಬಿಗ್ ನ್ಯೂಸ್22 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ22 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
Uncategorized13 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ಮಂಗಳೂರು23 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ನಿಧನ ವಾರ್ತೆ19 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ23 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಸ್ಥಳೀಯ23 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು
-
ಅಂತರ ರಾಜ್ಯ23 hours agoWhatsApp Web: WhatsApp Web ಬಳಕೆದಾರರೇ ಎಚ್ಚರ..! ಟ್ಯಾಬ್ ಮುಚ್ಚಿದರೆ ಸಾಲದು, ಲಾಗೌಟ್ ಆಗದಿದ್ದರೆ ನಿಮ್ಮ ಖಾಸಗಿ ಚಾಟ್ ಬೇರೆಯವರ ಪಾಲು; ಕೇಂದ್ರ ಸರಕಾರದಿಂದ ಮಹತ್ವದ ಎಚ್ಚರಿಕೆ















