ಅಂತರ ರಾಜ್ಯ
Bengal Clash-ಬಂಗಾಳ ಸಂಘರ್ಷ: ಟಿಎಂಸಿ ಕಚೇರಿಗಳ ಮೇಲೆ ಬಿಜೆಪಿ ಕಾರ್ಯಕರ್ತರಿಂದ ದಾಳಿ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಗೆಲುವಿನ ಸಂಭ್ರಮಾಚರಣೆಯು ವಿಕೋಪಕ್ಕೆ ತಿರುಗಿದ್ದು, ರಾಜ್ಯದಾದ್ಯಂತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಚೇರಿಗಳ ಮೇಲೆ ದಾಳಿ ನಡೆಸಿ, ಬೆಂಕಿ ಹಚ್ಚಿರುವ ಘಟನೆಗಳು ವರದಿಯಾಗಿವೆ.
ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಗೆಲುವಿನ ಸಂಭ್ರಮಾಚರಣೆಯು ವಿಕೋಪಕ್ಕೆ ತಿರುಗಿದ್ದು, ರಾಜ್ಯದಾದ್ಯಂತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಚೇರಿಗಳ ಮೇಲೆ ದಾಳಿ ನಡೆಸಿ, ಬೆಂಕಿ ಹಚ್ಚಿರುವ ಘಟನೆಗಳು ವರದಿಯಾಗಿವೆ.
ಸೋಮವಾರ ಮಧ್ಯಾಹ್ನದ ನಂತರ ಕೋಲ್ಕತ್ತಾದ ಟಾಲಿಗಂಜ್ ಮತ್ತು ಕಸ್ಬಾ ಪ್ರದೇಶಗಳಲ್ಲಿ ಉದ್ವಿಗ್ನತೆ ಉಂಟಾಗಿದೆ. ಅಲ್ಲದೆ, ನಗರದ ಹೊರವಲಯದ ಬರುಯ್‌ಪುರ, ಕಮರ್‌ಹಾಟಿ, ಬಾರಾನಗರ್ ಸೇರಿದಂತೆ ಹೌರಾ ಮತ್ತು ಬರಾಮ್‌ಪುರಗಳಲ್ಲಿಯೂ ಟಿಎಂಸಿ ಕಚೇರಿಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ವಿಧ್ವಂಸಕ ಕೃತ್ಯಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗವು, ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರಿಂದ ಸಮಗ್ರ ವರದಿ ಕೇಳಿದೆ. ಕಚೇರಿಗಳ ಮೇಲೆ ದಾಳಿ ನಡೆಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಯೋಗದ ಹಿರಿಯ ಅಧಿಕಾರಿಯೊಬ್ಬರು ಎಚ್ಚರಿಸಿದ್ದಾರೆ.
ಬಿಜೆಪಿ ಸ್ಪಷ್ಟನೆ:
ತಮ್ಮ ಪಕ್ಷದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂಬ ಆರೋಪವನ್ನು ಬಿಜೆಪಿ ನಾಯಕ ರಾಹುಲ್ ಸಿನ್ಹಾ ತಳ್ಳಿಹಾಕಿದ್ದಾರೆ. “ಚುನಾವಣಾ ಫಲಿತಾಂಶದಿಂದ ಹತಾಶರಾಗಿರುವ ಟಿಎಂಸಿ ಕಾರ್ಯಕರ್ತರೇ ತಮ್ಮ ನಾಯಕರ ವಿರುದ್ಧದ ಆಕ್ರೋಶದಿಂದ ಈ ಕೃತ್ಯ ಎಸಗಿರಬಹುದು,” ಎಂದು ಅವರು ಪ್ರತ್ಯಾರೋಪ ಮಾಡಿದ್ದಾರೆ.
ಅಂತರ ರಾಜ್ಯ
Kerala government-ಪೋಷಕರ ಆಸ್ತಿ ಬರೆಸಿಕೊಂಡು ನಿರ್ಲಕ್ಷಿಸಿದರೆ ಮಕ್ಕಳಿಗೆ 3 ವರ್ಷ ಜೈಲು: ಕೇರಳ ಸರ್ಕಾರದ ಮಹತ್ವದ ನಿರ್ಧಾರ..!
ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ: ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ ಜಿಲ್ಲೆಯ ಪಟ್ಟಣಪುರಂನ ಗಾಂಧಿ ಭವನದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ವೃದ್ಧ ಪುರುಷರಿಗಾಗಿ ಅತ್ಯಾಧುನಿಕ ವಸತಿ ಸೌಲಭ್ಯವಾದ ‘ಪಿತೃಮಂದಿರಂ’ ಉದ್ಘಾಟಿಸಿ ಅವರು ಮಾತನಾಡಿದರು.
ಅಕ್ಟೋಬರ್‌ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿರುವ ಹಿರಿಯ ನಾಗರಿಕರ ಕಾಳಜಿ ಮತ್ತು ರಕ್ಷಣೆಗೆ ಸಂಬಂಧಿಸಿದ ಮಸೂದೆಯ ಪ್ರಮುಖ ಅಂಶಗಳನ್ನು ವಿವರಿಸಿದ ಅವರು, ಪೋಷಕರ ಆಸ್ತಿಯನ್ನು ಸಂಪೂರ್ಣವಾಗಿ ತಮ್ಮ ಹೆಸರಿಗೆ ಬರೆಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಮಕ್ಕಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ನಿಬಂಧನೆಯನ್ನು ಉದ್ದೇಶಪೂರ್ವಕವಾಗಿಯೇ ಕಾಯ್ದೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.
ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಂಡ ಮೊದಲ ನಿರ್ಧಾರವೇ ಹಿರಿಯ ನಾಗರಿಕರಿಗಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿತ್ತು. ಹಿರಿಯ ನಾಗರಿಕರಿಗೆ ಹಲವು ಹಕ್ಕುಗಳನ್ನು ಒದಗಿಸುವ ವಿಶೇಷ ಕಾನೂನನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.
ಈ ಮಸೂದೆಗೆ ರಾಜ್ಯಪಾಲರ ಅಂಕಿತ ದೊರೆತ ಬಳಿಕ ಕಾನೂನಾಗಿ ಜಾರಿಗೆ ಬರಲಿದೆ. ಪೋಷಕರ ಆಸ್ತಿಯನ್ನು ಪಡೆದುಕೊಂಡು ಅವರನ್ನು ಬೀದಿಗೆ ತಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.
ಮಕ್ಕಳನ್ನು ಬೆಳೆಸಲು ಪೋಷಕರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅಪಾರ ತ್ಯಾಗ ಮಾಡುತ್ತಾರೆ. ಆದರೆ ಮಕ್ಕಳು ದೊಡ್ಡವರಾದ ಬಳಿಕ ಅದೇ ಪೋಷಕರನ್ನು ನಿರ್ಲಕ್ಷಿಸುವ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಸಂಸ್ಕೃತಿ ಕೇರಳದಲ್ಲಿ ಬೆಳೆಯಬಾರದು ಎಂದು ಅವರು ಹೇಳಿದರು.
ಪೋಷಕರನ್ನು ತಮ್ಮೊಂದಿಗೆ ಇರಿಸಿಕೊಂಡು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಕೇರಳದಲ್ಲಿ ಯಾವೊಬ್ಬ ಹಿರಿಯ ನಾಗರಿಕರೂ ಏಕಾಂಗಿಯಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದೇ ತಮ್ಮ ದೊಡ್ಡ ಕನಸು ಎಂದು ಮುಖ್ಯಮಂತ್ರಿ ತಿಳಿಸಿದರು.
ಅಂತರ ರಾಜ್ಯ
Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.
ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.
ಅಂತರ ರಾಜ್ಯ
Sreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.
ತ್ರಿಶೂರ್: ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.
2022ರಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್‌ನ ಫಾಸ್ಟ್‌ಟ್ರ್ಯಾಕ್ ವಿಶೇಷ ನ್ಯಾಯಾಲಯ-11ರ ನ್ಯಾಯಾಧೀಶೆ ರಮ್ಯಾ ಮೆನನ್ ಅವರು, ಪೋಕ್ಸೋ ಕಾಯ್ದೆಯ ಸೆಕ್ಷನ್ 12 ಹಾಗೂ ಭಾರತೀಯ ದಂಡ ಸಂಹಿತೆ (IPC) 1860ರ ಸೆಕ್ಷನ್ 509ರ ಅಡಿಯಲ್ಲಿ ಶ್ರೀಜಿತ್ ರವಿ ಅವರನ್ನು ದೋಷಿ ಎಂದು ಘೋಷಿಸಿದ್ದಾರೆ.
2022ರ ಜುಲೈ 4ರಂದು ಇಬ್ಬರು ಅಪ್ರಾಪ್ತ ಬಾಲಕಿಯರು ಶಾಲೆಯಿಂದ ತ್ರಿಶೂರ್‌ನ ಅರನಟ್ಟುಕರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ಗೆ ಮರಳುತ್ತಿದ್ದ ವೇಳೆ ಘಟನೆ ನಡೆದಿತ್ತು. ಪ್ರಾಸಿಕ್ಯೂಷನ್ ಪ್ರಕಾರ, ಶ್ರೀಜಿತ್ ರವಿ ಕಾರಿನಲ್ಲಿ ಬಾಲಕಿಯರನ್ನು ಹಿಂಬಾಲಿಸಿ, ಅಪಾರ್ಟ್‌ಮೆಂಟ್‌ನ ಕಾರು ನಿಲುಗಡೆ ಪ್ರದೇಶದಲ್ಲಿ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದರು.
ವಿಚಾರಣೆ ವೇಳೆ ಬಾಲಕಿಯರು ನ್ಯಾಯಾಲಯದಲ್ಲಿ ಶ್ರೀಜಿತ್ ರವಿಯನ್ನು ಗುರುತಿಸಿದ್ದರು. ಆದರೆ, ಚಲನಚಿತ್ರ ನಟನಾಗಿದ್ದರೂ ಬಾಲಕಿಯರು ಆತನ ಹೆಸರನ್ನು ಗುರುತಿಸಲು ವಿಫಲರಾಗಿದ್ದಾರೆ ಎಂಬ ಅಂಶವನ್ನು ಮುಂದಿಟ್ಟುಕೊಂಡು ನಟನ ಪರ ವಕೀಲರು ಗುರುತಿಸುವಿಕೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದರು.
ಈ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ, ಬಾಲಕಿಯರು ಆರೋಪಿಯನ್ನು ಗುರುತಿಸಿದ್ದು, ಅವರ ದೈಹಿಕ ಚಹರೆಯ ಬಗ್ಗೆಯೂ ಸ್ಪಷ್ಟವಾಗಿ ವಿವರಿಸಿದ್ದಾರೆ ಎಂದು ತಿಳಿಸಿದೆ.
ಪೊಲೀಸ್ ತನಿಖೆಯಲ್ಲಿನ ಕೆಲವು ಲೋಪಗಳ ಬಗ್ಗೆಯೂ ನ್ಯಾಯಾಲಯ ಗಮನ ಸೆಳೆದಿದೆ. ವಿಶೇಷವಾಗಿ, ಘಟನೆ ನಡೆದ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸದಿರುವುದನ್ನು ಉಲ್ಲೇಖಿಸಿದೆ. ಆದರೆ, ತನಿಖೆಯಲ್ಲಿನ ಇಂತಹ ಲೋಪಗಳು ಬಾಲಕಿಯರು ನೀಡಿದ ಸಾಕ್ಷ್ಯಗಳ ವಿಶ್ವಾಸಾರ್ಹತೆಯನ್ನು ಕುಗ್ಗಿಸುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
-
Uncategorized14 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ಬಿಗ್ ನ್ಯೂಸ್23 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ23 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ನಿಧನ ವಾರ್ತೆ20 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ20 hours agoPunjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
-
ಅಂತರ ರಾಜ್ಯ24 hours agoTrisha-ವಿಜಯ್ ಸಿಎಂ ಬೆನ್ನಲ್ಲೇ ತ್ರಿಷಾ ರಾಜಕೀಯ ಎಂಟ್ರಿಗೆ ಸಿದ್ಧತೆ? ‘ಜಯಲಲಿತಾ ಉತ್ತರಾಧಿಕಾರಿ’ ಎಂದ ಅಭಿಮಾನಿಗಳು..!
-
ರಾಜಕೀಯ20 hours agoRural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!
-
ಅಂತರ ರಾಜ್ಯ20 hours agoSreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು















