ಮಂಗಳೂರು
ಮೂಡುಬಿದಿರೆ : ಖಾಸಗಿ ಬಸ್ ಪಲ್ಟಿ – ದ್ವಿಚಕ್ರ ವಾಹನಕ್ಕೂ ಡಿಕ್ಕಿ : ಹಲವರಿಗೆ ಗಾಯ – ಓರ್ವ ಗಂಭೀರ
ಮೂಡುಬಿದರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಮೂಡುಬಿದರೆಯ ಬನ್ನಡ್ಕ ಸಮೀಪ ಶನಿವಾರ ಸಂಜೆ ನಡೆದಿದೆ.
ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಇದಾಗಿದ್ದು, ರಸ್ತೆ ಬದಿಗೆ ಪಲ್ಟಿಯಾಗಿದೆ. ಬಸ್ ನಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಲ್ಟಿ ಹೊಡೆದ ಬಸ್ ಹತ್ತಿರದಲ್ಲಿದ್ದ ದ್ವಿಚಕ್ರ ವಾಹನಕ್ಕೂ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಜಿತೇಶ್ ಎಂಬವರಿಗೆ ಗಂಭೀರ ಗಾಯವಾಗಿದೆ. ಇನ್ನು ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ಮತ್ತು ಸರಿಯಾದ ಸೂಚನಾ ಫಲಕಗಳನ್ನು ಅಳವಡಿಸದೆ ಇರುವುದು ಈ ಪ್ರದೇಶದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪರಾಧ
Mangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಇಬ್ಬರು ಸಿಬ್ಬಂದಿಯಲ್ಲಿ ಒಬ್ಬರು ಮಂಗಳೂರು ಮೂಲದವರಾಗಿದ್ದು, ಮತ್ತೊಬ್ಬರು ಕಾಸರಗೋಡು ಮೂಲದವರು ಎಂದು ತಿಳಿದುಬಂದಿದೆ. ದುಬೈ ಹಾಗೂ ಕೇರಳ ಮೂಲದ ಚಿನ್ನ ಕಳ್ಳಸಾಗಣೆ ಜಾಲದೊಂದಿಗೆ ಸಂಪರ್ಕ ಹೊಂದಿ ಅಕ್ರಮ ಚಿನ್ನ ಸಾಗಾಟಕ್ಕೆ ನೆರವಾಗುತ್ತಿದ್ದ ಆರೋಪ ಇವರ ಮೇಲಿದೆ.
ವ್ಯವಸ್ಥಿತವಾಗಿ ನಡೆಯುತ್ತಿದ್ದ ಕಳ್ಳಸಾಗಣೆ
ದುಬೈ ಸೇರಿದಂತೆ ವಿದೇಶಗಳಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರು, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಲ್ಲಿ ಚಿನ್ನವನ್ನು ಅಡಗಿಸಿಟ್ಟು ತೆರಳುತ್ತಿದ್ದರು ಎನ್ನಲಾಗಿದೆ. ಬಳಿಕ ಈ ಮಾಹಿತಿಯನ್ನು ಜಾಲದ ಸಂಪರ್ಕದಲ್ಲಿದ್ದ ವಿಮಾನ ನಿಲ್ದಾಣದ ಸಿಬ್ಬಂದಿಗೆ ತಲುಪಿಸಲಾಗುತ್ತಿತ್ತು. ವಿಮಾನಗಳ ನಿರ್ವಹಣಾ ಕಾರ್ಯ ಮುಗಿದ ಬಳಿಕ ಸಿಬ್ಬಂದಿ ಶೌಚಾಲಯಕ್ಕೆ ತೆರಳಿ, ಅಲ್ಲಿ ಅಡಗಿಸಿಟ್ಟ ಚಿನ್ನವನ್ನು ಹೊರತೆಗೆದು ತಮ್ಮ ಸಂಪರ್ಕದಲ್ಲಿದ್ದ ಕಳ್ಳಸಾಗಣೆದಾರರಿಗೆ ಹಸ್ತಾಂತರಿಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಖಚಿತ ಮಾಹಿತಿಯ ಮೇರೆಗೆ ಡಿಆರ್ಐ ಅಧಿಕಾರಿಗಳು ಆರೋಪಿಗಳ ಮೇಲೆ ನಿಗಾ ಇರಿಸಿದ್ದರು. ಅದರಂತೆ ನ. 23ರಂದು ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಿಂದ ಚಿನ್ನದ ಪೇಸ್ಟ್ ರೂಪದ ಎರಡು ಪ್ಯಾಕ್ಗಳನ್ನು ಹೊರತೆಗೆಯುತ್ತಿದ್ದ ಮಂಗಳೂರು ಮೂಲದ ಸಿಬ್ಬಂದಿಯನ್ನು ಅಧಿಕಾರಿಗಳು ಹಿಡಿದಿದ್ದಾರೆ.
ಈ ಚಿನ್ನವನ್ನು ಆತ ಕಾಸರಗೋಡು ಮೂಲದ ಮತ್ತೊಬ್ಬ ಸಿಬ್ಬಂದಿಗೆ ಹಸ್ತಾಂತರಿಸಬೇಕಿತ್ತು. ಬಳಿಕ ಆ ಸಿಬ್ಬಂದಿ ವಿಮಾನ ನಿಲ್ದಾಣದಿಂದ ಸುಮಾರು ಎರಡು ಕಿ.ಮೀ. ದೂರದಲ್ಲಿರುವ ಸ್ಥಳಕ್ಕೆ ಚಿನ್ನವನ್ನು ಕೊಂಡೊಯ್ದು ಜಾಲದ ಮೂರನೇ ವ್ಯಕ್ತಿಗೆ ತಲುಪಿಸಲು ಯೋಜಿಸಿದ್ದ ಎನ್ನಲಾಗಿದೆ. ಅಧಿಕಾರಿಗಳು ತ್ವರಿತ ಕಾರ್ಯಾಚರಣೆ ನಡೆಸಿ ಉಳಿದ ಇಬ್ಬರನ್ನೂ ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ, 73 ಲಕ್ಷ ರೂ. ನಗದು, ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಡಿ. 7ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.
ಇದಕ್ಕೂ ಮೊದಲು 1.77 ಕೋಟಿ ರೂ. ಮೌಲ್ಯದ ಚಿನ್ನ ವಶ
ಇದಕ್ಕೂ ಮುನ್ನ ನ. 14ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಕಾಸರಗೋಡು ಮೂಲದ ಇಬ್ಬರು ಪ್ರಯಾಣಿಕರು ದೇಹದೊಳಗೆ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದ ವೇಳೆ ಡಿಆರ್ಐ ಅಧಿಕಾರಿಗಳ ವಶಕ್ಕೆ ಸಿಕ್ಕಿದ್ದರು. ಅವರಿಂದ ಸುಮಾರು 1.77 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತನಿಖೆಯ ಹಿತದೃಷ್ಟಿಯಿಂದ ಬಂಧಿತ ಆರೋಪಿಗಳ ಹೆಸರುಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.
ನಿಧನ ವಾರ್ತೆ
ಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
ರಾಷ್ಟ್ರೀಯ ಹೆದ್ದಾರಿ-66ರ ಪಂಪ್ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಪಂಪ್ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನ. 14ರಂದು ಬೆಳಗ್ಗೆ ಜ್ಯೋತಿ ಹಾಗೂ ಅವರ ಸಂಬಂಧಿ ನಂದಿನಿ (19) ಗೋರಿಗುಡ್ಡ ಬಳಿ ರಸ್ತೆ ವಿಭಜಕ ದಾಟಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತೊಕ್ಕೊಟ್ಟು ಕಡೆಯಿಂದ ನಂತೂರು ಕಡೆಗೆ ಸಂಚರಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಇಬ್ಬರೂ ಗಾಯಗೊಂಡಿದ್ದು, ಬೈಕ್ನಲ್ಲಿದ್ದವರಿಗೂ ಗಾಯಗಳಾಗಿದ್ದವು. ಗಂಭೀರ ಗಾಯಗೊಂಡಿದ್ದ ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜ್ಯೋತಿ ನಗರದ ಖಾಸಗಿ ಕಾಲೇಜೊಂದರಲ್ಲಿ ಜಿಎನ್ಎಂ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.
ಮೂಲತಃ ಚಿಕ್ಕಮಗಳೂರಿನ ಶಿಳ್ಳೆಕ್ಯಾತ ಅಲೆಮಾರಿ ಸಮುದಾಯಕ್ಕೆ ಸೇರಿದ ಜ್ಯೋತಿಯ ಕುಟುಂಬ ಹಲವು ವರ್ಷಗಳಿಂದ ಮಂಗಳೂರಿನ ಕಣ್ಣೂರಿನಲ್ಲಿ ವಾಸವಾಗಿತ್ತು. ನೇತ್ರಾವತಿ ನದಿಯಲ್ಲಿ ತೆಪ್ಪದ ಮೂಲಕ ಮೀನು ಹಿಡಿಯುವ ವೃತ್ತಿಯನ್ನು ಕುಟುಂಬ ನಡೆಸುತ್ತಿತ್ತು. ಕುಟುಂಬದ ಹಿರಿಯ ಮಗಳಾಗಿದ್ದ ಜ್ಯೋತಿ ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಮಂಗಳೂರು
Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣದ ಸೂಕ್ಷ್ಮತೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖಾಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿವೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರ ಅಗತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪತ್ರ ಬರೆದು ಕೆಲವು ವಿಚಾರಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಆ ಮಾಹಿತಿಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.
ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್ಗಳು ಪ್ರಕರಣದ ಕುರಿತು ತಾವೇ ತೀರ್ಮಾನಗಳನ್ನು ಪ್ರಕಟಿಸುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಬರುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್ಗಳು ಸುದ್ದಿಗಳಿಗೆ ಮಿರ್ಚಿ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ ಎಂದು ಅವರು ಟೀಕಿಸಿದರು.
-
ಮಂಗಳೂರು23 hours agoSoujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
-
ಬಿಗ್ ನ್ಯೂಸ್7 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ದಕ್ಷಿಣ ಕನ್ನಡ21 hours ago
ಡಿ. 8ರ ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು: ಕಾರ್ಯಾಲಯ ಉದ್ಘಾಟನೆ -ಅದ್ದೂರಿ ದೀಪೋತ್ಸವಕ್ಕೆ ಭಕ್ತರ ಸಹಕಾರ ಅಗತ್ಯ: ಎಸ್. ರವೀಂದ್ರ ಶೆಟ್ಟಿ
-
ಅಪರಾಧ6 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ನಿಧನ ವಾರ್ತೆ6 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ನಿಧನ ವಾರ್ತೆ6 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
-
ಸ್ಥಳೀಯ7 hours agoDharmasthala-ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನ ಸಂಭ್ರಮ; ಧರ್ಮಸ್ಥಳದ ಮ್ಯೂಸಿಯಂಗೆ ಕಲಾಂ ಕಾರು, ಸಚಿತ್ರ ಅಂಚೆಚೀಟಿಗಳು, ಬಗ್ಗಿ ವಾಹನ ಕೊಡುಗೆ
-
ಅಂತರ ರಾಜ್ಯ4 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?















