ಅಪರಾಧ
ಲಸಿಕೆ ಹಾಕಿದ್ರು ನಾಯಿ ಕಡಿತಕೆ ಒಳಗಾದ ಕೇರಳದ ವಿದ್ಯಾರ್ಥಿನಿ ರೇಬೀಸ್ನಿಂದ ಬದಕುಳಿಯಲಿಲ್ಲ ಯಾಕೆ ಗೊತ್ತೆ ?

ಪಲಕ್ಕಾಡ್: ಕೇರಳದ ಆರೋಗ್ಯ ಇಲಾಖೆಯಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ನಾಯಿ ಕಡಿತಕ್ಕೆ ಒಳಗಾದ ವಿದ್ಯಾರ್ಥಿನಿ ಲಸಿಕೆ ಪಡೆದರು ಮೃತಪಟ್ಟ ಸಂಗತಿ ಅಸಲಿ ಕಾರಣ ಬಯಲಾಗಿದೆ. ಕೇರಳದ ಪಲಕ್ಕಾಡ್ ಮೂಲದ ಯುವತಿ ಶ್ರೀಲಕ್ಷ್ಮಿ (18) ತಿಂಗಳ ಹಿಂದೆ ನಾಯಿ ಕಡಿತಕ್ಕೆ ಒಳಗಾಗಿದ್ದು ಬಳಿಕ ಅದಕ್ಕೆ ಲಸಿಕೆ ಪಡೆದಿದ್ದರೂ ಮೃತಪಟ್ಟಿದ್ದಳು
ಈ ಘಟನೆ ಬಾರಿ ಚರ್ಚಗೆ ಗ್ರಾಸವಾದ ಬಳಿಕ ಅಲ್ಲಿನ ಆರೋಗ್ಯ ಇಲಾಖೆ ಈ ಬಗ್ಗೆ ತನಿಖೆ ನಡೆಸಿತ್ತು ನಾಯಿ ಜೋರಾಗಿ ಕಡಿದಿದ್ದರಿಂದ ಉಂಟಾದ ಆಳವಾದ ಗಾಯವೇ ರೇಬಿಸ್ಗೆ ಕಾರಣ ಎಂದು ಪಲಕ್ಕಾಡ್ ಡಿಎಂಒ ಕೆ.ಪಿ.ರಿತಾ ಹೇಳಿದ್ದಾರೆ.ಲಸಿಕೆ ನೀಡಿರುವುದರಲ್ಲಿ ಯಾವುದೇ ಎಡವಟ್ಟುಗಳಾಗಿಲ್ಲ, ಮೃತ ಶ್ರೀಲಕ್ಷ್ಮಿಗೆ ಗುಣಮಟ್ಟದ ಲಸಿಕೆಯನ್ನೇ ನೀಡಲಾಗಿದೆ ಎಂದು ರೀತಾ ತಿಳಿಸಿದ್ದಾರೆ.
ಪಲಕ್ಕಾಡ್ ಮೂಲದ ಸುಗುನನ್ ಮತ್ತು ಸಿಂಧು ದಂಪತಿಯ ಪುತ್ರಿಯಾಗಿರುವ ಶ್ರೀ ಲಕ್ಷ್ಮಿ ಮೇ 30ರಂದು ಬೆಳಗ್ಗೆ ಕಾಲೇಜಿಗೆ ಹೋಗುವಾಗ ಅವರ ಪಕ್ಕದ ಮನೆಯ ನಾಯಿ ಆಕೆಯ ಎಡಗೈ ಕೈಬೆರಳುಗಳಿಗೆ ಕಚ್ಚಿತ್ತು. ಇದಾದ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಇಲಾಖೆಯಿಂದ ಎಲ್ಲ ರೀತಿಯ ಲಸಿಕೆಯನ್ನು ಶ್ರೀಲಕ್ಷ್ಮಿ ಪಡೆದುಕೊಂಡಿದ್ದಳು.
ನಾಯಿ ಕಚ್ಚಿ ವಿದ್ಯಾರ್ಥಿನಿ ಮೃತ್ಯು – ರೇಬೀಸ್ ಲಸಿಕೆ ಹಾಕಿಸಿಕೊಂಡರೂ ಫಲಕಾರಿಯಾಗಿಲ್ಲ ಚಿಕಿತ್ಸೆ
ಲಸಿಕೆ ಪಡೆದುಕೊಂಡರೂ ಕೆಲವು ದಿನಗಳ ಬಳಿಕ ಜ್ವರ ಕಾಣಿಸಿಕೊಂಡಿತು. ತಕ್ಷಣ ಶ್ರೀಲಕ್ಷ್ಮಿಯನ್ನು ಖಾಸಗಿ ಆಸ್ಪತ್ರೆಗೆ ಕೊರೆದೊಯ್ಯಲಾಯಿತು. ಈ ವೇಳೆ ಪರೀಕ್ಷಿಸಿದಾಗ ರೇಬೀಸ್ ಕಾಯಿಲೆಯ ಲಕ್ಷಣಗಳು ಕಂಡುಬಂದಿತು. ತಕ್ಷಣ ಆಕೆಯನ್ನು ತ್ರಿಸ್ಸೂರ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ (ಜೂನ್ 30) ಬೆಳಗ್ಗೆ ಕೊನೆಯುಸಿರೆಳೆದಿದ್ದಾಳೆ.
ಆರೋಗ್ಯ ಸಚಿವರ ಸೂಚನೆ ಮೇರೆಗೆ ತನಿಖೆಗಾಗಿ ರಚಿಸಲಾಗಿದ್ದ ಕ್ಷಿಪ್ರ ಪ್ರತಿಕ್ರಿಯೆ ತಂಡ ಶುಕ್ರವಾರ ಸಭೆ ನಡೆಸಿತು. ಸಭೆಯಲ್ಲಿ ಶ್ರೀಲಕ್ಷ್ಮಿಗೆ ನೀಡಿದ ಚಿಕಿತ್ಸೆಯ ವಿವರಗಳನ್ನು ಪರಿಶೀಲಿಸಲಾಯಿತು. ಶ್ರೀಲಕ್ಷ್ಮಿಗೆ ಕಚ್ಚಿದ ಸಾಕು ನಾಯಿಗೆ ಲಸಿಕೆ ಹಾಕಿಲ್ಲ ಎಂಬುದು ಈ ವೇಳೆ ತಿಳಿದುಬಂದಿದೆ. ಅಲ್ಲದೆ, ಅದೇ ನಾಯಿ ಹಿಂದೊಮ್ಮೆ ತನ್ನ ಮಾಲೀಕರಿಗೂ ಕಚ್ಚಿರುವ ಸಂಗತಿ ಬಯಲಾಗಿದೆ. ಮಾಲೀಕ ಲಸಿಕೆ ಪಡೆದುಕೊಂಡಿದ್ದು, ಅದು ಕೆಲಸ ಮಾಡಿದೆ. ಆದರೆ, ಶ್ರೀಲಕ್ಷ್ಮಿಗೆ ಲಸಿಕೆ ಪರಿಣಾಮ ಬೀರಿಲ್ಲ.
ಶ್ರೀಲಕ್ಷ್ಮಿಗೆ ಲಸಿಕ ಯಾಕೆ ಪ್ರಯೋಜನವಾಗಲಿಲ್ಲ ಎಂದು ಪರಿಶೀಲಿಸಿದಾಗ ನಾಯಿಯ ಕಡಿತ ಆಳವಾಗಿದ್ದರಿಂದ ರೇಬಿಸ್ನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ. ಸದ್ಯ ಆರೋಗ್ಯ ಕಾರ್ಯಕರ್ತರು ಶ್ರೀಲಕ್ಷ್ಮಿ ಅವರ ಮನೆಗೆ ಬಂದು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಬಾಲಕಿ ಮತ್ತು ನಾಯಿಯ ಸಂಪರ್ಕಕ್ಕೆ ಬಂದವರಿಗೆ ಲಸಿಕೆ ಹಾಕುತ್ತಿದ್ದಾರೆ. ಚಿಕಿತ್ಸೆ ವೇಳೆ ಸಣ್ಣಪುಟ್ಟ ಗಾಯ ಮಾಡಿಕೊಂಡಿದ್ದ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯರಿಗೂ ಲಸಿಕೆ ನೀಡಲಾಗಿದೆ.
ಅಂತರ ರಾಜ್ಯ
Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಅಗರ್ತಲಾ: ಬರೋಬ್ಬರಿ 14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಬಾಜು ಎಂದು ಗುರುತಿಸಲಾಗಿರುವ ಆರೋಪಿಯನ್ನು ಗುರುವಾರ ಬಂಧಿಸಿ ಅಗರ್ತಲಾಗೆ ಕರೆತರಲಾಗಿದೆ. ಬಳಿಕ ಪಶ್ಚಿಮ ತ್ರಿಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ನಾಲ್ಕು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಏನಿದು 14 ವರ್ಷಗಳ ಹಿಂದಿನ ಪ್ರಕರಣ?
ಅಗರ್ತಲಾದ ಭಾಟಿ ಅಭಯನಗರ ನಿವಾಸಿ ಆಶಿಶ್ ಸೋಮ್ (40) ಎಂಬ ಶಾಲಾ ಶಿಕ್ಷಕರು 2011ರ ಮೇ 28ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಮರದ ವ್ಯಾಪಾರದಲ್ಲಿಯೂ ತೊಡಗಿಸಿಕೊಂಡಿದ್ದ ಅವರು, ವ್ಯವಹಾರದ ನಿಮಿತ್ತ ಕಾಂಚನ್ಪುರಕ್ಕೆ ತೆರಳಿದ ಬಳಿಕ ಮನೆಗೆ ವಾಪಸಾಗಿರಲಿಲ್ಲ.
ಶಿಕ್ಷಕರು ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರನ್ನು ಅಪಹರಿಸಿರುವುದಾಗಿ ಹೇಳಿಕೊಂಡು ಕುಟುಂಬಸ್ಥರಿಗೆ ದೂರವಾಣಿ ಕರೆಗಳು ಬಂದಿದ್ದವು. ಅಪಹರಣಕಾರರು ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಿಧ ಹಂತಗಳಲ್ಲಿ ಸುಮಾರು ₹25 ಲಕ್ಷ ಹಣವನ್ನು ನೀಡಿದ್ದಾರೆ. ಆದರೆ ಹಣ ಪಡೆದ ಬಳಿಕವೂ ಶಿಕ್ಷಕರನ್ನು ಬಿಡುಗಡೆ ಮಾಡಿರಲಿಲ್ಲ. ಹಲವು ವರ್ಷಗಳ ಕಾಲ ಅವರ ಸುಳಿವು ಕೂಡ ಪತ್ತೆಯಾಗಿರಲಿಲ್ಲ.
ಸಮಾಧಿಗಳಲ್ಲಿ ಪತ್ತೆಯಾದ ಅಸ್ಥಿಪಂಜರದಿಂದ ತನಿಖೆಗೆ ವೇಗ
ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ತನಿಖೆಯ ವೇಳೆ ಶಿಕ್ಷಕ ಆಶಿಶ್ ಸೋಮ್ ಅವರ ವ್ಯಾಪಾರ ಪಾಲುದಾರ ಎನ್ನಲಾದ ಹೊಸೈನ್ ಅಹ್ಮದ್ ಕೂಡ ಅಪಹರಣ ಪ್ರಕರಣದ ಶಂಕಿತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಬಂಧಿತ ಬಾಜುವನ್ನು ವಿಚಾರಣೆ ನಡೆಸಲಾಗುತ್ತಿದ್ದು, ಆತ ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.
ಇದೇ ವರ್ಷದ ಸೆಪ್ಟೆಂಬರ್ 16ರಂದು ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಸೋನ್ಸಿಲ್ ಪ್ರದೇಶದ ಸ್ಮಶಾನವೊಂದರ ಮೂರು ಸಮಾಧಿಗಳಿಂದ ಅಪರಿಚಿತ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಈ ಬೆಳವಣಿಗೆ ಪ್ರಕರಣದ ತನಿಖೆಗೆ ಹೊಸ ವೇಗ ನೀಡಿದೆ.
ಪತ್ತೆಯಾದ ಅಸ್ಥಿಪಂಜರದ ಅವಶೇಷಗಳು ನಾಪತ್ತೆಯಾಗಿರುವ ಆಶಿಶ್ ಸೋಮ್ ಅವರದ್ದೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಅವರ ಕುಟುಂಬ ಸದಸ್ಯರ ಡಿಎನ್ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಡಿಎನ್ಎ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಅದರ ಬಳಿಕ ಪ್ರಕರಣದ ಹಲವು ನಿಗೂಢ ಸಂಗತಿಗಳು ಬಯಲಾಗುವ ನಿರೀಕ್ಷೆಯಿದೆ.
ಸ್ಥಳೀಯ
Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು
ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.
ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.
ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.
ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.
-
ಬಿಗ್ ನ್ಯೂಸ್14 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ12 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಮಂಗಳೂರು7 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಸಿನೆಮಾ12 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ13 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ13 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ13 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
-
ಅಂತರ ರಾಜ್ಯ6 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!















