Connect with us

ಅಂತರ ರಾಜ್ಯ

NEET Scam-ನೀಟ್ ಹಗರಣ: ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ : ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯ

Published

on

Ad Widget

Ad Widget

Ad Widget

Ad Widget

ನೀಟ್-ಯುಜಿ (NEET-UG) ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪರೀಕ್ಷೆಯನ್ನು ರದ್ದುಗೊಳಿಸಿದೆ. ಈ ಪ್ರಕರಣದ ಸಮಗ್ರ ವಿಚಾರಣೆಗಾಗಿ ಕೇಂದ್ರ ತನಿಖಾ ಸಂಸ್ಥೆ (CBI)ಗೆ ಆದೇಶಿಸಲಾಗಿದ್ದು, ಇತ್ತ ರಾಜಧಾನಿ ದೆಹಲಿಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶದ ಪ್ರತಿಭಟನೆಗಳು ತೀವ್ರಗೊಂಡಿವೆ.

Ad Widget

Ad Widget

Ad Widget

Ad Widget

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪರೀಕ್ಷೆಯನ್ನು ರದ್ದುಗೊಳಿಸಿದೆ. ಈ ಪ್ರಕರಣದ ಸಮಗ್ರ ವಿಚಾರಣೆಗಾಗಿ ಕೇಂದ್ರ ತನಿಖಾ ಸಂಸ್ಥೆ (CBI)ಗೆ ಆದೇಶಿಸಲಾಗಿದ್ದು, ಇತ್ತ ರಾಜಧಾನಿ ದೆಹಲಿಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶದ ಪ್ರತಿಭಟನೆಗಳು ತೀವ್ರಗೊಂಡಿವೆ.

Ad Widget

Ad Widget alt="Ad Widget"/>

Ad Widget

ಪರೀಕ್ಷೆ ರದ್ದು ಮತ್ತು ಸಿಬಿಐ ತನಿಖೆ:
ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪಗಳ ಕುರಿತು ಕೇಂದ್ರ ತನಿಖಾ ಸಂಸ್ಥೆಗಳು ನೀಡಿದ ವರದಿಯ ಆಧಾರದ ಮೇಲೆ ಪಾರದರ್ಶಕತೆಯನ್ನು ಕಾಪಾಡುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತಿಳಿಸಿದೆ. ಪ್ರಕರಣದ ಸಂಪೂರ್ಣ ತನಿಖೆಯನ್ನು ಸಿಬಿಐಗೆ ವಹಿಸಲಾಗಿದ್ದು, ತನಿಖೆಗೆ ಪೂರ್ಣ ಸಹಕಾರ ನೀಡುವುದಾಗಿ ಎನ್‌ಟಿಎ ಹೇಳಿದೆ.

Ad Widget

Ad Widget <> Ad Widget

ವಿದ್ಯಾರ್ಥಿಗಳಿಗೆ ಮರುಪರೀಕ್ಷೆಯ ಮಾಹಿತಿ:
ರದ್ದಾಗಿರುವ ಪರೀಕ್ಷೆಯ ಬದಲಿಗೆ ಶೀಘ್ರದಲ್ಲೇ ಮರುಪರೀಕ್ಷೆ ನಡೆಸಲಾಗುವುದು. ಮರುಪರೀಕ್ಷೆಗೆ ವಿದ್ಯಾರ್ಥಿಗಳು ಮತ್ತೆ ಹೊಸದಾಗಿ ನೋಂದಣಿ ಮಾಡಿಕೊಳ್ಳುವ ಅಥವಾ ಹೆಚ್ಚುವರಿ ಶುಲ್ಕ ಪಾವತಿಸುವ ಅಗತ್ಯವಿಲ್ಲ ಎಂದು ಎನ್‌ಟಿಎ ಸ್ಪಷ್ಟಪಡಿಸಿದೆ. ಈಗಾಗಲೇ ಪಾವತಿಸಿರುವ ಶುಲ್ಕವನ್ನು ಹಿಂದಿರುಗಿಸಲಾಗುವುದು ಅಥವಾ ಮರುಪರೀಕ್ಷೆಗೆ ಹೊಂದಾಣಿಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ವೀಕ್ಷಿಸಲು ಸೂಚಿಸಲಾಗಿದೆ.

ದೆಹಲಿಯಲ್ಲಿ ಪ್ರತಿಭಟನೆಯ ಬಿಸಿ:
ನೀಟ್ ಪರೀಕ್ಷಾ ಅಕ್ರಮವನ್ನು ಖಂಡಿಸಿ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ (NSUI) ದೆಹಲಿಯ ಶಾಸ್ತ್ರಿ ಭವನದ ಮುಂದೆ ಬೃಹತ್ ಪ್ರತಿಭಟನೆ ನಡೆಸಿತು. “ಪೇಪರ್ ಲೀಕ್, ಮೋದಿ ಸರ್ಕಾರ ವೀಕ್” ಮತ್ತು “ವೈದ್ಯ ಪದವಿ ಮಾರಾಟಕ್ಕಿದೆ” ಎಂಬ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವೈಫಲ್ಯವನ್ನು ತರಾಟೆಗೆ ತೆಗೆದುಕೊಂಡರು.

Ad Widget

Ad Widget

ಶಿಕ್ಷಣ ಸಚಿವರ ರಾಜೀನಾಮೆಗೆ ಪಟ್ಟು:
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎನ್‌ಎಸ್‌ಯುಐ ರಾಷ್ಟ್ರೀಯ ಅಧ್ಯಕ್ಷ ವಿನೋದ್ ಜಾಖರ್ ಮಾತನಾಡಿ, “ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಆಟವಾಡುತ್ತಿದೆ. ಪರೀಕ್ಷಾ ಅಕ್ರಮದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು ಮತ್ತು ವಿಶ್ವಾಸಾರ್ಹತೆ ಕಳೆದುಕೊಂಡಿರುವ ಎನ್‌ಟಿಎ ಸಂಸ್ಥೆಯನ್ನು ನಿಷೇಧಿಸಬೇಕು” ಎಂದು ಒತ್ತಾಯಿಸಿದರು.

ಪರೀಕ್ಷಾ ವ್ಯವಸ್ಥೆಯ ಮೇಲೆ ವಿದ್ಯಾರ್ಥಿಗಳಿಗೆ ನಂಬಿಕೆ ಮರುಕಳಿಸುವವರೆಗೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ವಿದ್ಯಾರ್ಥಿ ಸಂಘಟನೆಗಳು ಎಚ್ಚರಿಸಿವೆ.

Ad Widget
Click to comment

Leave a Reply

ಸಿನೆಮಾ

Dawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?

Published

on

Ad Widget

Ad Widget

Ad Widget

Ad Widget

‘ಧುರಂಧರ್’ ಸಿನಿಮಾದಲ್ಲಿ ತೀವ್ರ ಅನಾರೋಗ್ಯದಿಂದ ಬಳಲುತ್ತಾ ಹಾಸಿಗೆ ಹಿಡಿದಿರುವ ವೃದ್ಧನಂತೆ ಚಿತ್ರಿಸಲಾಗಿರುವ ದಾವೂದ್, ವಾಸ್ತವದಲ್ಲಿ ಇನ್ನೂ ಸಕ್ರಿಯನಾಗಿದ್ದು ತನ್ನ ಅಪರಾಧ ಜಾಲವನ್ನು ಮುನ್ನಡೆಸುತ್ತಿದ್ದಾನೆ ಎಂದು ಅಮೆರಿಕದ ಮಾಜಿ ಎಫ್‌ಬಿಐ ಅಧಿಕಾರಿ ಕಮ್ರಾನ್ ಫರೀದಿ ಇಂಡಿಯಾ ಟುಡೇಗೆ ನೀಡಿದ ಪಾಡ್‌ಕಾಸ್ಟ್ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟಗಳ ಬಳಿಕ ಭಾರತದಿಂದ ಪರಾರಿಯಾಗಿ ಪಾಕಿಸ್ತಾನದಲ್ಲಿ ನೆಲೆಸಿದ್ದಾನೆ ಎನ್ನಲಾದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಬದುಕು ಇಂದಿಗೂ ನಿಗೂಢವಾಗಿದೆ. ಕಳೆದ ಹಲವು ವರ್ಷಗಳಿಂದ ಆತನ ಯಾವುದೇ ಅಧಿಕೃತ ಛಾಯಾಚಿತ್ರ ಸಾರ್ವಜನಿಕವಾಗಿ ಲಭ್ಯವಾಗಿಲ್ಲ. ಇದೀಗ ದಾವೂದ್‌ನ ಡಿ-ಕಂಪನಿಯೊಳಗೆ ರಹಸ್ಯವಾಗಿ ಕಾರ್ಯನಿರ್ವಹಿಸಿದ್ದಾಗಿ ಹೇಳಿಕೊಂಡಿರುವ ಅಮೆರಿಕದ ಮಾಜಿ ಎಫ್‌ಬಿಐ ಅಧಿಕಾರಿ ಕಮ್ರಾನ್ ಫರೀದಿ, ಡಾನ್‌ನ ವೈಯಕ್ತಿಕ ಜೀವನ, ಭದ್ರತಾ ವ್ಯವಸ್ಥೆ ಹಾಗೂ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಜೊತೆಗಿನ ಸಂಪರ್ಕದ ಕುರಿತು ಹಲವು ಅಚ್ಚರಿಯ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

‘ಧುರಂಧರ್’ ಸಿನಿಮಾದಲ್ಲಿ ತೀವ್ರ ಅನಾರೋಗ್ಯದಿಂದ ಬಳಲುತ್ತಾ ಹಾಸಿಗೆ ಹಿಡಿದಿರುವ ವೃದ್ಧನಂತೆ ಚಿತ್ರಿಸಲಾಗಿರುವ ದಾವೂದ್, ವಾಸ್ತವದಲ್ಲಿ ಇನ್ನೂ ಸಕ್ರಿಯನಾಗಿದ್ದು ತನ್ನ ಅಪರಾಧ ಜಾಲವನ್ನು ಮುನ್ನಡೆಸುತ್ತಿದ್ದಾನೆ ಎಂಬುದು ಫರೀದಿ ಅವರ ಪ್ರಮುಖ ಹೇಳಿಕೆ. ಇಂಡಿಯಾ ಟುಡೇಗೆ ನೀಡಿದ ಪಾಡ್‌ಕಾಸ್ಟ್ ಸಂದರ್ಶನದಲ್ಲಿ ಅವರು ಈ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

Ad Widget

Ad Widget <> Ad Widget

ಧುರಂಧರ್ ಸಿನಿಮಾದ ದಾವೂದ್‌ಗೂ ನೈಜ ವ್ಯಕ್ತಿಗೂ ವ್ಯತ್ಯಾಸ!
‘ಧುರಂಧರ್’ ಚಿತ್ರದಲ್ಲಿ ‘ಬಡೇ ಸಾಹಬ್’ ಎಂದು ಉಲ್ಲೇಖಿಸಲಾಗಿರುವ ದಾವೂದ್ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾನೆ. ಆದರೆ, ದಾವೂದ್ ಜೊತೆ ಹಲವು ಪಾರ್ಟಿ ಹಾಗೂ ವ್ಯವಹಾರಿಕ ಸಭೆಗಳಲ್ಲಿ ಭಾಗವಹಿಸಿದ್ದೇನೆ ಎಂದು ಹೇಳಿಕೊಂಡಿರುವ ಫರೀದಿ, ಆತ ಇಂದಿಗೂ ತನ್ನ ಅಪರಾಧ ಜಾಲದ ಕಾರ್ಯಾಚರಣೆಗಳನ್ನು ನಿಯಂತ್ರಿಸುತ್ತಿದ್ದಾನೆ ಎಂದು ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನದಲ್ಲಿ ನಡೆಯುತ್ತಿರುವ ಮಾದಕವಸ್ತು ವ್ಯಾಪಾರದ ಮೇಲೂ ದಾವೂದ್ ನಿಗಾ ಇರಿಸಿದ್ದಾನೆ ಎಂದು ಅವರು ಆರೋಪಿಸಿದ್ದಾರೆ. ಪಾಕಿಸ್ತಾನದ ಭದ್ರತಾ ವಲಯದಲ್ಲಿ ಆತನನ್ನು ‘ಬಡೇ ಸಾಹಬ್’ ಅಥವಾ ‘ಬಡೆ ವಾಲೆ’ ಎಂದು ಕರೆಯಲಾಗುತ್ತದೆ ಎಂದಿದ್ದಾರೆ.

Ad Widget

Ad Widget

ಕರಾಚಿಯ ಕ್ಲಿಫ್ಟನ್‌ನಲ್ಲೇ ಡಾನ್ ವಾಸ!
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾದರೂ ದಾವೂದ್ ತನ್ನ ವಾಸಸ್ಥಳವನ್ನು ಬದಲಿಸಿಲ್ಲ. ಕರಾಚಿಯ ಅತ್ಯಂತ ಬಿಗಿ ಭದ್ರತೆಯ ಕ್ಲಿಫ್ಟನ್ ಪ್ರದೇಶದಲ್ಲಿ ಕುಟುಂಬದ ಸದಸ್ಯರೊಂದಿಗೆ ವಾಸಿಸುತ್ತಿದ್ದಾನೆ ಎಂದು ಫರೀದಿ ಹೇಳಿಕೊಂಡಿದ್ದಾರೆ.

ಆದರೆ, ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾದ ಸಂದರ್ಭಗಳಲ್ಲಿ ಆತ ಇಸ್ಲಾಮಾಬಾದ್ ಸೇರಿದಂತೆ ಮೂರು ಸುರಕ್ಷಿತ ಅಡಗುತಾಣಗಳಿಗೆ ಸ್ಥಳಾಂತರಗೊಳ್ಳುತ್ತಾನೆ ಎಂದು ತಿಳಿಸಿದ್ದಾರೆ.

ದಾವೂದ್ ನಿವಾಸದ ಕೆಳಗೆ ರಹಸ್ಯ ಸುರಂಗವಿದೆ ಎಂಬ ವದಂತಿಯನ್ನು ತಳ್ಳಿಹಾಕಿರುವ ಅವರು, ಮನೆಯ ಹಿಂಭಾಗದಿಂದ ಜನಸಂದಣಿ ಹೆಚ್ಚಿರುವ ದರ್ಗಾವೊಂದಕ್ಕೆ ಸಂಪರ್ಕ ಕಲ್ಪಿಸುವ ಪರ್ಯಾಯ ನಿರ್ಗಮನ ಮಾರ್ಗವಿದೆ ಎಂದು ಹೇಳಿದ್ದಾರೆ.

ಡಿ-ಕಂಪನಿಯೊಳಗೆ ನುಸುಳಿದ್ದೇಗೆ?
ದಾವೂದ್‌ನ ಅಪರಾಧ ಜಾಲದೊಳಗೆ ತಾನು ಹೇಗೆ ಪ್ರವೇಶಿಸಿದೆ ಎಂಬುದನ್ನೂ ಫರೀದಿ ವಿವರಿಸಿದ್ದಾರೆ. 1995ರಲ್ಲಿ ಎಫ್‌ಬಿಐಗೆ ಸೇರ್ಪಡೆಯಾಗಿದ್ದ ತಮಗೆ 2009ರಲ್ಲಿ ದಾವೂದ್ ಗ್ಯಾಂಗ್‌ನೊಳಗೆ ರಹಸ್ಯವಾಗಿ ನುಸುಳುವ ಜವಾಬ್ದಾರಿ ನೀಡಲಾಗಿತ್ತು ಎಂದು ಹೇಳಿದ್ದಾರೆ.

ಈ ಕಾರ್ಯಾಚರಣೆಗಾಗಿ ರಷ್ಯಾದ ಮಾಫಿಯಾ ಸದಸ್ಯನಂತೆ ಗುರುತಿಸಿಕೊಂಡು, ತಮ್ಮ ಪಾಕಿಸ್ತಾನಿ ಮೂಲವನ್ನು ಮರೆಮಾಚಿದ್ದಾಗಿ ತಿಳಿಸಿದ್ದಾರೆ. ದಾವೂದ್‌ನ ಆಪ್ತ ಸಹಚರ ಜಬೀರ್ ಮೊತಿವಾಲಾ ಮೂಲಕ ಆತನಿಗೆ ಪರಿಚಯವಾಗಿತ್ತು ಎಂದಿದ್ದಾರೆ.

2018ರಲ್ಲಿ ಲಂಡನ್‌ನಲ್ಲಿ ಜಬೀರ್ ಮೊತಿವಾಲಾ ಬಂಧನಕ್ಕೂ ತಾನೇ ಕಾರಣ ಎಂದು ಫರೀದಿ ಹೇಳಿಕೊಂಡಿದ್ದಾರೆ. ಕರಾಚಿಯಲ್ಲಿ ಡಿ-ಕಂಪನಿಗಾಗಿ ಹವಾಲಾ ಹಣಕಾಸು ವ್ಯವಹಾರಗಳನ್ನು ಸ್ಥಾಪಿಸಲು ಸಹಾಯ ಮಾಡಿದ್ದಾಗಿಯೂ ತಿಳಿಸಿದ್ದಾರೆ. ದಾವೂದ್‌ನ ಸಹೋದರ ಅನೀಸ್ ಇಬ್ರಾಹಿಂ ಪುತ್ರ ಅಲಿ ಕಾಸ್ಕರ್ ತಮ್ಮ ಮಾಹಿತಿಯ ಪ್ರಮುಖ ಮೂಲವಾಗಿದ್ದ ಎಂದು ಹೇಳಿದ್ದಾರೆ.

ರಾತ್ರಿ 10ರ ಬಳಿಕವೇ ಹೊರಗೆ ಬರುವ ಡಾನ್!
ದಾವೂದ್‌ನ ದಿನಚರಿಯ ಕುರಿತು ಮಾತನಾಡಿರುವ ಫರೀದಿ, ಆತ ಹಗಲು ಹೊತ್ತಿನಲ್ಲಿ ಮನೆಯಿಂದ ಹೊರಬರುವುದಿಲ್ಲ ಎಂದು ತಿಳಿಸಿದ್ದಾರೆ. ರಾತ್ರಿ 10 ಗಂಟೆಯ ಬಳಿಕ ಹೊರಗೆ ಬಂದು, ಮುಂಜಾನೆ ಫಜರ್ ಪ್ರಾರ್ಥನೆಗೂ ಮುನ್ನ ಮನೆಗೆ ಮರಳುತ್ತಾನೆ. ಈ ಕಾರಣದಿಂದ ಆತನನ್ನು ‘ರಾತ್ ಕಾ ಬಾದ್‌ಶಾ’ ಎಂದು ಕರೆಯಲಾಗುತ್ತದೆ ಎಂದಿದ್ದಾರೆ.

ದಾವೂದ್‌ಗೆ ದಿನದ 24 ಗಂಟೆಯೂ ಬಿಗಿ ಭದ್ರತೆ ಇರುತ್ತದೆ. ಸುಮಾರು 35ರಿಂದ 45 ಮಂದಿ ಭದ್ರತಾ ಸಿಬ್ಬಂದಿ ಆತನ ಸುತ್ತಲೂ ಕಾವಲು ಕಾಯುತ್ತಾರೆ. ಅವರ ಬಳಿ ಎಕೆ-47 ಸೇರಿದಂತೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿರುತ್ತವೆ ಎಂದು ಫರೀದಿ ಆರೋಪಿಸಿದ್ದಾರೆ.

ದಾವೂದ್‌ನ ಭದ್ರತಾ ವ್ಯವಸ್ಥೆಯನ್ನು ಛೋಟಾ ಶಕೀಲ್ ನಿರ್ವಹಿಸುತ್ತಾನೆ. ಆತ ಪಾಕಿಸ್ತಾನದ ಐಎಸ್‌ಐ ಜೊತೆ ಸಂಪರ್ಕ ಹೊಂದಿದ್ದು, ಪ್ರತಿ ಶುಕ್ರವಾರ ಆ ಸಂಸ್ಥೆಯ ಕೇಂದ್ರ ಕಚೇರಿಗೆ ತೆರಳಿ ಭದ್ರತಾ ವರದಿಗಳನ್ನು ಪಡೆಯುತ್ತಾನೆ ಎಂದು ಫರೀದಿ ಹೇಳಿದ್ದಾರೆ.

ದಾವೂದ್ ಮತ್ತು ಛೋಟಾ ಶಕೀಲ್ ದುಬೈನಿಂದ ತರಿಸಿಕೊಂಡಿರುವ ಗುಂಡು ನಿರೋಧಕ ವಾಹನಗಳಲ್ಲಿ ಸಂಚರಿಸುತ್ತಾರೆ. ಬಾಂಬ್, ರಾಕೆಟ್ ಹಾಗೂ ಸ್ನೈಪರ್ ದಾಳಿಗಳನ್ನು ತಡೆದುಕೊಳ್ಳುವ ಸಾಮರ್ಥ್ಯ ಈ ವಾಹನಗಳಿಗಿದೆ ಎಂದು ತಿಳಿಸಿದ್ದಾರೆ.

ಐಎಸ್‌ಐ, ಲಷ್ಕರ್ ಜೊತೆ ನಂಟಿನ ಆರೋಪ
ದಾವೂದ್ ಪಾಕಿಸ್ತಾನದ ಐಎಸ್‌ಐ ಆಶ್ರಯದಲ್ಲಿದ್ದಾನೆ ಎಂದು ಫರೀದಿ ನೇರ ಆರೋಪ ಮಾಡಿದ್ದಾರೆ. ಲಷ್ಕರ್-ಎ-ತೊಯ್ಬಾ ಸಂಘಟನೆ ಹಾಗೂ 26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರ ಹಫೀಜ್ ಸಯೀದ್ ಜೊತೆ ದಾವೂದ್‌ಗೆ ನಿಕಟ ವ್ಯವಹಾರಿಕ ಸಂಪರ್ಕವಿದೆ ಎಂದೂ ಹೇಳಿದ್ದಾರೆ.

1993ರ ಮುಂಬೈ ಸ್ಫೋಟ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಟೈಗರ್ ಮೆಮನ್ ಬಗ್ಗೆಯೂ ಮಾತನಾಡಿರುವ ಅವರು, ಮೆಮನ್ ಹೆಚ್ಚು ಹೊರಗೆ ಸಂಚರಿಸುವುದಿಲ್ಲ ಎಂದಿದ್ದಾರೆ. ಇದೇ ವೇಳೆ, ಅನೀಸ್ ಇಬ್ರಾಹಿಂ ಮತ್ತು ಛೋಟಾ ಶಕೀಲ್ ನಡುವೆ ಗ್ಯಾಂಗ್‌ನ ನಿಯಂತ್ರಣ ಹಾಗೂ ಉತ್ತರಾಧಿಕಾರದ ವಿಚಾರದಲ್ಲಿ ಭಿನ್ನಾಭಿಪ್ರಾಯವಿದೆ ಎಂದು ಆರೋಪಿಸಿದ್ದಾರೆ.

ಐಷಾರಾಮಿ ಜೀವನ, ಕೊಕೇನ್ ಸೇವನೆ, ಎರಡನೇ ಮದುವೆ!
ಧಾರ್ಮಿಕ ವ್ಯಕ್ತಿಯಂತೆ ತನ್ನನ್ನು ಬಿಂಬಿಸಿಕೊಳ್ಳುವ ದಾವೂದ್ ಖಾಸಗಿ ಬದುಕಿನಲ್ಲಿ ಐಷಾರಾಮಿ ಜೀವನ ನಡೆಸುತ್ತಾನೆ ಎಂದು ಫರೀದಿ ಆರೋಪಿಸಿದ್ದಾರೆ. ಮುಜ್ರಾ ನೃತ್ಯ ಕಾರ್ಯಕ್ರಮಗಳನ್ನು ವೀಕ್ಷಿಸುವ ಆಸಕ್ತಿ ಹೊಂದಿದ್ದಾನೆ. ಹಿಂದೆ ಮದ್ಯ ಸೇವಿಸುತ್ತಿದ್ದ ಆತ ಇದೀಗ ಕೊಕೇನ್ ಸೇವನೆಗೆ ಹೆಚ್ಚು ಒಲವು ತೋರಿದ್ದಾನೆ ಎಂದು ಹೇಳಿದ್ದಾರೆ.

ದಾವೂದ್‌ಗಾಗಿ ತಾನೇ ಮದ್ಯ ಖರೀದಿಸಿದ್ದಾಗಿ ಹಾಗೂ ಸುಮಾರು 1.78 ಲಕ್ಷ ರೂಪಾಯಿ ಮೌಲ್ಯದ ದುಬಾರಿ ಮದ್ಯದ ಬಾಟಲಿಯನ್ನು ಆತ ತರಿಸಿಕೊಂಡಿದ್ದಾಗಿ ಸಂದರ್ಶನದಲ್ಲಿ ವಿವರಿಸಿದ್ದಾರೆ.

ಕರಾಚಿಯ ’22 ಜಮ್ಮಮಾ’ ಎಂಬ ಅತ್ಯಂತ ಬಿಗಿ ಭದ್ರತೆಯ, ಶಬ್ದ ನಿರೋಧಕ ಕಟ್ಟಡದಲ್ಲಿ ದಾವೂದ್ ಪಾಕಿಸ್ತಾನದ ಅಧಿಕಾರಿಗಳು ಮತ್ತು ಉದ್ಯಮಿಗಳೊಂದಿಗೆ ಸಭೆ ನಡೆಸುತ್ತಾನೆ ಎಂದಿದ್ದಾರೆ.

ಒಂದು ಸಂದರ್ಭದಲ್ಲಿ ತನ್ನ ಸಹಾಯಕನಿಗೆ ಪಾಕಿಸ್ತಾನ ಇಂಟರ್‌ನ್ಯಾಷನಲ್ ಏರ್‌ಲೈನ್ಸ್‌ನಲ್ಲಿ ಉದ್ಯೋಗ ಕೊಡಿಸುವ ಸಲುವಾಗಿ ದಾವೂದ್ ಮಧ್ಯರಾತ್ರಿಯಲ್ಲಿ ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರಿಗೆ ಕರೆ ಮಾಡಿದ್ದನ್ನು ನೋಡಿದ್ದೇನೆ ಎಂದೂ ಫರೀದಿ ಹೇಳಿಕೊಂಡಿದ್ದಾರೆ.

ಇದಲ್ಲದೆ, ದಾವೂದ್ ಪಾಕಿಸ್ತಾನದಲ್ಲಿ ಎರಡನೇ ಮದುವೆಯಾಗಿದ್ದಾನೆ ಎಂಬ ಮಾಹಿತಿಯನ್ನೂ ಅವರು ಬಹಿರಂಗಪಡಿಸಿದ್ದಾರೆ. ಆಯೇಷಾ ಭಾಭಿ ಎಂದು ಕರೆಯಲಾಗುವ ಈ ಮಹಿಳೆ ದಾವೂದ್‌ಗಿಂತ ಸುಮಾರು 20 ವರ್ಷ ಚಿಕ್ಕವಳು. ಆಕೆ ಕರಾಚಿಯಲ್ಲಿ ಕಪ್ಪು ಬಣ್ಣದ ಮರ್ಸಿಡಿಸ್ ಕಾರಿನಲ್ಲಿ ಸಂಚರಿಸುತ್ತಾಳೆ ಎಂದು ತಿಳಿಸಿದ್ದಾರೆ.

2023ರಲ್ಲಿ ದಾವೂದ್‌ನ ಸಹೋದರಿ ಹಸೀನಾ ಪಾರ್ಕರ್ ಪುತ್ರ ಅಲಿಶಾ ಪಾರ್ಕರ್ ಕೂಡ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮುಂದೆ ಇದೇ ರೀತಿಯ ಮಾಹಿತಿ ನೀಡಿದ್ದ ಎನ್ನಲಾಗಿದೆ. ಮೊದಲ ಪತ್ನಿ ಮೆಹಜಬೀನ್ ಜೊತೆಗಿನ ವಿವಾಹ ಸಂಬಂಧ ಮುಂದುವರಿದಿರುವಾಗಲೇ ದಾವೂದ್ ಪಾಕಿಸ್ತಾನದ ಪಠಾಣ್ ಸಮುದಾಯದ ಮಹಿಳೆಯನ್ನು ಎರಡನೇ ಮದುವೆಯಾಗಿದ್ದಾನೆ ಎಂದು ಅಲಿಶಾ ಹೇಳಿದ್ದ.

ದಾವೂದ್ ಜೊತೆಗಿದ್ದ ಮುಂಬೈನ ಫಕೀರ!
ದಾವೂದ್ ಪಾಕಿಸ್ತಾನಕ್ಕೆ ತೆರಳುವಾಗ ಮುಂಬೈ ಮೂಲದ ‘ಇಸ್ಲಾಂ ಬಾಬಾ’ ಎಂಬ ಫಕೀರನನ್ನೂ ತನ್ನೊಂದಿಗೆ ಕರೆದೊಯ್ದಿದ್ದ ಎಂದು ಫರೀದಿ ತಿಳಿಸಿದ್ದಾರೆ. ಡಿ-ಕಂಪನಿಯ ಯಾವುದೇ ಕಾರ್ಯಾಚರಣೆ ಆರಂಭಿಸುವ ಮೊದಲು ಈ ಫಕೀರನ ಅನುಮತಿ ಪಡೆಯಲಾಗುತ್ತದೆ ಎಂಬ ಕುತೂಹಲಕಾರಿ ವಿಚಾರವನ್ನೂ ಅವರು ಹಂಚಿಕೊಂಡಿದ್ದಾರೆ.

ಒಟ್ಟಿನಲ್ಲಿ, ದಶಕಗಳಿಂದ ನಿಗೂಢವಾಗಿರುವ ದಾವೂದ್ ಇಬ್ರಾಹಿಂನ ವೈಯಕ್ತಿಕ ಬದುಕು, ಭದ್ರತಾ ವ್ಯವಸ್ಥೆ ಹಾಗೂ ಅಪರಾಧ ಜಾಲದ ಕುರಿತು ಕಮ್ರಾನ್ ಫರೀದಿ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಆದರೆ, ಸಂದರ್ಶನದಲ್ಲಿ ಅವರು ನೀಡಿರುವ ಮಾಹಿತಿಗಳಿಗೆ ಸ್ವತಂತ್ರ ದೃಢೀಕರಣ ಲಭ್ಯವಾಗಿರುವ ಬಗ್ಗೆ ಸ್ಪಷ್ಟತೆ ಇಲ್ಲ. ಹೀಗಾಗಿ ಈ ಹೇಳಿಕೆಗಳನ್ನು ದೃಢಪಟ್ಟ ಅಧಿಕೃತ ಮಾಹಿತಿಯೆಂದು ಪರಿಗಣಿಸಲಾಗದು.

Ad Widget
Continue Reading

ನಿಧನ ವಾರ್ತೆ

One-sided love-ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಮೇಲಿನ ಒನ್‌ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು

Published

on

Ad Widget

Ad Widget

Ad Widget

Ad Widget

ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.

Ad Widget

Ad Widget alt="Ad Widget"/>

Ad Widget

ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.

Ad Widget

Ad Widget <> Ad Widget

ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್‌ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್‌ಐಆರ್‌ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.

ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್‌ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

Ad Widget

ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.

ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.

ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

Ad Widget
Continue Reading

ನಿಧನ ವಾರ್ತೆ

Savitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ

Published

on

Ad Widget

Ad Widget

Ad Widget

Ad Widget

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

Ad Widget

Ad Widget

Ad Widget

ಡೆಹ್ರಾಡೂನ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

Ad Widget alt="Ad Widget"/>

Ad Widget

ಸಾವಿತ್ರಿ ದೇವಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಅತ್ಯಂತ ದುಃಖದಾಯಕ ಹಾಗೂ ಹೃದಯವಿದ್ರಾವಕವಾಗಿದೆ ಎಂದು ಅವರು ತಿಳಿಸಿದ್ದಾರೆ.

Ad Widget

Ad Widget <> Ad Widget

ತಾಯಿಯ ವಾತ್ಸಲ್ಯ, ಆಶೀರ್ವಾದ ಮತ್ತು ಪ್ರೀತಿ ಜೀವನದ ಅತ್ಯಮೂಲ್ಯ ಸಂಪತ್ತು. ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಧಾಮಿ ಸಂತಾಪ ಸೂಚಿಸಿದ್ದಾರೆ.

ಅಗಲಿದ ಆತ್ಮಕ್ಕೆ ಭಗವಾನ್ ಕೇದಾರನಾಥರು ಶಾಂತಿ ಕರುಣಿಸಲಿ. ತಾಯಿ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Ad Widget

Ad Widget

ಯೋಗಿ ಆದಿತ್ಯನಾಥ್ ಅವರು ತಾಯಿಯ ಅಂತಿಮ ದರ್ಶನಕ್ಕೆ ತೆರಳುವ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!