Connect with us

ಮಂಗಳೂರು

Gruhalakshmi-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತಪಟ್ಟವರ ಖಾತೆಗೆ ಜಮೆಯಾಯ್ತು ಗೃಹಲಕ್ಷ್ಮಿ ಯೋಜನೆಯ 22 ಕೋಟಿ ರೂ.!

Published

on



Ad Widget

Ad Widget

Ad Widget

Ad Widget

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೂಡ್ಡ ಮಟ್ಟದ ಲೋಪದೋಷಗಳು ಕಂಡುಬಂದಿವೆ. ಜಿಲ್ಲೆಯಲ್ಲಿ ಈಗಾಗಲೇ ಮೃತಪಟ್ಟಿರುವ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಅಂದಾಜು 22 ಕೋಟಿ ರೂಪಾಯಿ ಹಣ ಜಮೆಯಾಗಿರುವುದು ಬೆಳಕಿಗೆ ಬಂದಿದ್ದು, ಜಿಲ್ಲಾಡಳಿತ ತೀವ್ರ ಆತಂಕ ವ್ಯಕ್ತಪಡಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೂಡ್ಡ ಮಟ್ಟದ ಲೋಪದೋಷಗಳು ಕಂಡುಬಂದಿವೆ. ಜಿಲ್ಲೆಯಲ್ಲಿ ಈಗಾಗಲೇ ಮೃತಪಟ್ಟಿರುವ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಅಂದಾಜು 22 ಕೋಟಿ ರೂಪಾಯಿ ಹಣ ಜಮೆಯಾಗಿರುವುದು ಬೆಳಕಿಗೆ ಬಂದಿದ್ದು, ಜಿಲ್ಲಾಡಳಿತ ತೀವ್ರ ಆತಂಕ ವ್ಯಕ್ತಪಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಸಭೆಯಲ್ಲಿ ಬಯಲಾದ ಸತ್ಯ:
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪರಿಶೀಲನಾ ಸಮಿತಿ ಸಭೆಯಲ್ಲಿ ಈ ಶಾಕಿಂಗ್ ವಿಚಾರ ಹೊರಬಿದ್ದಿದೆ. ಸಭೆಯ ಅಧ್ಯಕ್ಷತೆ ವಹಿಸಿದ್ದ ಭರತ್ ಮುಂಡೋಡಿ ಅವರು, ಮೃತ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿರುವ ಹಣವನ್ನು ತಕ್ಷಣವೇ ಸರ್ಕಾರಕ್ಕೆ ಮರಳಿ ಪಡೆಯಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Ad Widget

Ad Widget <> Ad Widget

ದಾಖಲೆಗಳಲ್ಲಿದೆ ದೊಡ್ಡ ವ್ಯತ್ಯಾಸ:
ಬಳಕೆಯಲ್ಲಿಲ್ಲದ ಮತ್ತು ಮೃತರ ಖಾತೆಗಳಿಗೆ ಹಣ ವರ್ಗಾವಣೆಯಾಗುತ್ತಿರುವುದು ಒಂದೆಡೆಯಾದರೆ, ಜಿಲ್ಲೆಯಲ್ಲಿ ಮತ್ತೊಂದು ಗಂಭೀರ ಲೋಪ ಕಂಡುಬಂದಿದೆ. ಹಲವು ಜೀವಂತ ಫಲಾನುಭವಿಗಳನ್ನು ಇಲಾಖೆಯ ದಾಖಲೆಗಳಲ್ಲಿ ‘ಮೃತಪಟ್ಟವರು’ ಎಂದು ತಪ್ಪಾಗಿ ಗುರುತಿಸಲಾಗಿದೆ. ಇದರಿಂದಾಗಿ ಅರ್ಹ ಮಹಿಳೆಯರಿಗೆ ಸಕಾಲದಲ್ಲಿ ಹಣ ತಲುಪುತ್ತಿಲ್ಲ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಮುಂದಿನ ಪರಿಶೀಲನಾ ಸಭೆಯೊಳಗೆ ವಿವರವಾದ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಆದೇಶಿಸಲಾಗಿದೆ.



Ad Widget

ಜಿಲ್ಲೆಯ ಅಂಕಿಅಂಶ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾಹಿತಿ ಪ್ರಕಾರ:
ಜಿಲ್ಲೆಯಲ್ಲಿರುವ ಒಟ್ಟು ರೇಷನ್ ಕಾರ್ಡ್‌ಗಳು: 4,25,759
ನೋಂದಾಯಿತ ಫಲಾನುಭವಿಗಳು: 3,82,178

Ad Widget

Ad Widget

ಮುಂದಿನ ಕ್ರಮಗಳೇನು?
ಮೃತ ಫಲಾನುಭವಿಗಳ ಹೆಸರು ಮತ್ತು ಬ್ಯಾಂಕ್ ವಿವರಗಳನ್ನು ಪರಿಶೀಲಿಸಿ ಆ ಖಾತೆಗಳನ್ನು ತಕ್ಷಣವೇ ಸ್ಥಗಿತಗೊಳಿಸಲು (Freeze) ಕ್ರಮ ವಹಿಸಲಾಗುವುದು. ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಯಲ್ಲಿರುವ ಮರಣ ದಾಖಲೆಗಳನ್ನು ಬ್ಯಾಂಕ್ ಖಾತೆಗಳೊಂದಿಗೆ ತಾಳೆ ಮಾಡಿ, ಇನ್ನು ಮುಂದೆ ಮೃತಪಟ್ಟವರ ಖಾತೆಗೆ ಹಣ ಬಿಡುಗಡೆಯಾಗದಂತೆ ತಡೆಯಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

Ad Widget
Click to comment

Leave a Reply

ಅಪರಾಧ

Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget <> Ad Widget

ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.



Ad Widget

ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.

ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.

ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.

Ad Widget
Continue Reading

ಮಂಗಳೂರು

CM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?

Published

on



Ad Widget

Ad Widget

Ad Widget

Ad Widget

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು, ಅ.03: ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ತನ್ನದೇ ತಂಡದ ಬೇರೆ ಕ್ರೀಡಾಪಟುಗಳಿಗೆ ಅಲ್ಲಿನ ಸಿಎಂ ಹಾಗೂ ಇತರ ಮಂತ್ರಿಗಳು ಫೋನ್ ಮೂಲಕ ಅಭಿನಂದಿಸಿದ್ದಾರೆ ಹಾಗೂ ಕರ್ನಾಟಕದಲ್ಲಿ ಕೇವಲ 30 ಲಕ್ಷ ಬಹುಮಾನ ನೀಡಲಾಗುತ್ತಿದೆ ಬೇರೆ ರಾಜ್ಯದಲ್ಲಿ 1 ಕೋಟಿ ಬಹುಮಾನ ನೀಡುತ್ತಾರೆ ಎಂದು ಸಾಧಕಿ ಪೂವಮ್ಮ ನಿನ್ನೆ ಬೇಸರ ವ್ಯಕ್ತಪಡಿಸಿದ್ದರು.

Ad Widget

Ad Widget <> Ad Widget

ಅದ್ಧೂರಿ ಸ್ವಾಗತ:
ಜಪಾನ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 4×400 ಮೀಟರ್ ಮಹಿಳೆಯರ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಪೂವಮ್ಮ, ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೂಮಳೆಗರೆದು ಅದ್ಧೂರಿ ಸ್ವಾಗತ ಕೋರಿದರು. ಇದು ಪೂವಮ್ಮ ಭಾಗವಹಿಸಿದ 3ನೇ ಏಷ್ಯನ್ ಗೇಮ್ಸ್ ಆಗಿದ್ದು, ಒಟ್ಟಾರೆಯಾಗಿ ಅವರ 6ನೇ ಪದಕವಾಗಿದೆ. ಕ್ರೀಡಾಂಗಣದಲ್ಲಿ ಭಾರತದ ರಾಷ್ಟ್ರಗೀತೆ ಮೊಳಗಿದ್ದು ಅತ್ಯಂತ ಹೆಮ್ಮೆಯ ಕ್ಷಣ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.



Ad Widget

ಹಲವು ಗಣ್ಯರಿಂದ ಅಭಿನಂದನೆ
ಆರಂಭದಲ್ಲಿ ತಮಗೆ ಸೂಕ್ತ ಗೌರವ ಹಾಗೂ ಶುಭಾಶಯಗಳು ದೊರೆಯದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದ ಪೂವಮ್ಮ, ಬಳಿಕ ಡಿಸಿಎಂ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರಿಂದ ಅಭಿನಂದನೆಗಳನ್ನು ಸ್ವೀಕರಿಸಿದರು.

Ad Widget

Ad Widget

ಇದೇ ವೇಳೆ ಕ್ರೀಡಾಪಟುಗಳ ಪ್ರೋತ್ಸಾಹಧನ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ ಪೂವಮ್ಮ, “ಹರಿಯಾಣ ಸೇರಿದಂತೆ ಇತರ ರಾಜ್ಯಗಳಲ್ಲಿ ಚಿನ್ನ ಗೆದ್ದವರಿಗೆ 3 ಕೋಟಿ ರೂ. ನಗದು ಬಹುಮಾನ ನೀಡಲಾಗುತ್ತಿದೆ. ಆದರೆ ನಮ್ಮ ಕರ್ನಾಟಕದಲ್ಲಿ ಕೇವಲ 35 ಲಕ್ಷ ರೂ. ಮಾತ್ರ ನೀಡಲಾಗುತ್ತಿದೆ. ಯುವ ಅಥ್ಲೀಟ್‌ಗಳನ್ನು ಪ್ರೋತ್ಸಾಹಿಸಲು ಈ ಬಹುಮಾನದ ಮೊತ್ತವನ್ನು ಹೆಚ್ಚಿಸಬೇಕು,” ಎಂದು ಒತ್ತಾಯಿಸಿದ್ದಾರೆ.

Ad Widget
Continue Reading

ಮಂಗಳೂರು

Puvamma-ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮಂಗಳೂರಿನ ಪೂವಮ್ಮ; ಕನಿಷ್ಠ ಅಭಿನಂದನೆ ಕೂಡ ಸಲ್ಲಿಸದ ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ಕುಟುಂಬ ಬೇಸರ

Published

on



Ad Widget

Ad Widget

Ad Widget

Ad Widget

2026ರ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಸದಸ್ಯೆಯಾಗಿರುವ ಮಂಗಳೂರಿನ ಎಂ.ಆರ್. ಪೂವಮ್ಮ ಅವರ ಸಾಧನೆಗೆ ಅಭಿನಂದನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅವರ ತಾಯಿ ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು, ಅ.1: 2026ರ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಸದಸ್ಯೆಯಾಗಿರುವ ಮಂಗಳೂರಿನ ಎಂ.ಆರ್. ಪೂವಮ್ಮ ಅವರ ಸಾಧನೆಗೆ ಅಭಿನಂದನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅವರ ತಾಯಿ ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕಿರಣ್ ಪಹಲ್, ಪ್ರಾಚಿ ಚೌಧರಿ, ಎಂ.ಆರ್. ಪೂವಮ್ಮ ಹಾಗೂ ವಿಥ್ಯಾ ರಾಮರಾಜ್ ಒಳಗೊಂಡ ಭಾರತ ತಂಡ 3:29.69 ನಿಮಿಷಗಳಲ್ಲಿ ಗುರಿ ತಲುಪಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನ ಗೆದ್ದಿದೆ. ಇದು ಈ ಬಾರಿಯ ಏಷ್ಯನ್ ಗೇಮ್ಸ್‌ನಲ್ಲಿ ಅಥ್ಲೆಟಿಕ್ಸ್ ವಿಭಾಗದಲ್ಲಿ ಭಾರತಕ್ಕೆ ದೊರೆತ ಚಿನ್ನದ ಪದಕವಾಗಿದೆ.

Ad Widget

Ad Widget <> Ad Widget

ಆದರೆ, ಈ ಸಾಧನೆ ಮಾಡಿದ ಪೂವಮ್ಮ ಅವರನ್ನು ರಾಜ್ಯ ಸರ್ಕಾರ ಈವರೆಗೆ ಗುರುತಿಸಿಲ್ಲ ಎಂಬುದು ಕುಟುಂಬದ ಬೇಸರಕ್ಕೆ ಕಾರಣವಾಗಿದೆ. ಪೂವಮ್ಮ ಅವರ ತಾಯಿ ಜಾಜಿ ಮಾಧ್ಯಮಗಳೊಂದಿಗೆ ಮಾತನಾಡಿ, 20 ವರ್ಷಗಳಿಂದ ಅಥ್ಲೆಟಿಕ್ಸ್‌ನಲ್ಲಿ ಶ್ರಮಿಸುತ್ತಿರುವ ಮಗಳಿಗೆ ರಾಜ್ಯ ಸರ್ಕಾರದಿಂದ ಸೂಕ್ತ ಪ್ರೋತ್ಸಾಹ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.



Ad Widget

“ನನ್ನ ಮಗಳು 36 ವರ್ಷದವಳಾಗಿದ್ದು, ಕಳೆದ 20 ವರ್ಷಗಳಿಂದ ಅಥ್ಲೆಟಿಕ್ಸ್‌ಗಾಗಿ ಶ್ರಮಿಸುತ್ತಿದ್ದಾಳೆ. ಬೇರೆ ರಾಜ್ಯಗಳಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಆದರೆ ಪೂವಮ್ಮ ಸಾಧನೆ ಮಾಡಿದ ಬಳಿಕವೂ ರಾಜ್ಯ ಸರ್ಕಾರದಿಂದ ಕನಿಷ್ಠ ಒಂದು ಕರೆ ಕೂಡ ಬಂದಿಲ್ಲ” ಎಂದು ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.

Ad Widget

Ad Widget

“ಕ್ಯಾಶ್ ಪ್ರೈಸ್ ನೀಡುವುದು ಒಂದು ವಿಚಾರ. ಈ ಬಾರಿ ದೇಶಕ್ಕೆ ಅಥ್ಲೆಟಿಕ್ಸ್‌ನಲ್ಲಿ ಚಿನ್ನ ತಂದುಕೊಟ್ಟ ತಂಡದಲ್ಲಿ ಪೂವಮ್ಮ ಇದ್ದಾರೆ. ಆದರೆ ರಾಜ್ಯ ಸರ್ಕಾರದಿಂದ ಕನಿಷ್ಠ ಶುಭಾಶಯದ ಸಂದೇಶವೂ ಬಂದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮಂಗಳೂರಿನವರೇ ಆಗಿದ್ದರೂ ಕರೆ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶ ಮತ್ತು ಕೇರಳದಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ದೊಡ್ಡ ಮೊತ್ತದ ಬಹುಮಾನಗಳನ್ನು ಘೋಷಿಸಲಾಗುತ್ತಿದೆ. ಆದರೆ ಕರ್ನಾಟಕದಲ್ಲಿ ಕನಿಷ್ಠ ಗುರುತಿಸುವಿಕೆಯೂ ಸಿಗದಿರುವುದು ಬೇಸರ ತಂದಿದೆ ಎಂದು ಜಾಜಿ ತಿಳಿಸಿದ್ದಾರೆ.

ಪೂವಮ್ಮ ಕಠಿಣ ತರಬೇತಿ ಮತ್ತು ಹಲವು ವರ್ಷಗಳ ಪರಿಶ್ರಮದಿಂದ ಈ ಸಾಧನೆ ಮಾಡಿದ್ದಾರೆ. ಕಳೆದ ಮೂರು-ನಾಲ್ಕು ವರ್ಷಗಳ ಶ್ರಮಕ್ಕೆ ಇದೀಗ ಫಲ ಸಿಕ್ಕಿದೆ. ಅಥ್ಲೆಟಿಕ್ಸ್‌ ಆಕೆಯ ಜೀವನದ ಅವಿಭಾಜ್ಯ ಭಾಗವಾಗಿದೆ. ನಾವು ಮಧ್ಯಮ ವರ್ಗದ ಕುಟುಂಬವಾಗಿದ್ದು, ತರಬೇತಿಗಾಗಿ ಸಾಕಷ್ಟು ವೆಚ್ಚ ಮಾಡಬೇಕಾಗುತ್ತದೆ. ಸರ್ಕಾರದಿಂದ ಬೆಂಬಲ ದೊರೆತರೆ ಅದು ಕ್ರೀಡಾಪಟುಗಳಿಗೆ ಇನ್ನಷ್ಟು ಸ್ಫೂರ್ತಿ ನೀಡುತ್ತದೆ ಎಂದು ಜಾಜಿ ಹೇಳಿದ್ದಾರೆ.

ಪೂವಮ್ಮ ಅವರ ಈ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಅಭಿನಂದಿಸಿದ್ದು, 4×400 ಮೀಟರ್ ರಿಲೇ ತಂಡದ ವೇಗ ಮತ್ತು ದೃಢಸಂಕಲ್ಪ ಭಾರತವನ್ನು ಅಗ್ರಸ್ಥಾನಕ್ಕೆ ಕೊಂಡೊಯ್ದಿದೆ ಎಂದು ಶ್ಲಾಘಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading