Connect with us

ಬಿಗ್ ನ್ಯೂಸ್

Voter list revision-ಮತದಾರರ ಪಟ್ಟಿ ಪರಿಷ್ಕರಣೆ: ಜೂನ್ 20ರಿಂದ ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಚುನಾವಣಾ ಅಧಿಕಾರಿಗಳು..!

Published

on

Ad Widget

Ad Widget

Ad Widget

Ad Widget

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕದಲ್ಲಿ ಜೂನ್ 20 ರಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SSR) ಕಾರ್ಯ ಆರಂಭವಾಗಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ. ಅ. 1ಕ್ಕೆ 18 ವರ್ಷ ಪೂರ್ಣಗೊಳ್ಳುವ ಪ್ರತಿಯೊಬ್ಬರೂ ಈ ಅಭಿಯಾನದ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅರ್ಹರಾಗಿರುತ್ತಾರೆ.

Ad Widget

Ad Widget

Ad Widget

Ad Widget

ಬೆಂಗಳೂರು : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕದಲ್ಲಿ ಜೂನ್ 20 ರಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SSR) ಕಾರ್ಯ ಆರಂಭವಾಗಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ. ಅ. 1ಕ್ಕೆ 18 ವರ್ಷ ಪೂರ್ಣಗೊಳ್ಳುವ ಪ್ರತಿಯೊಬ್ಬರೂ ಈ ಅಭಿಯಾನದ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅರ್ಹರಾಗಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಶುಕ್ರವಾರ ನಗರದ ಶೇಷಾದ್ರಿ ರಸ್ತೆಯಲ್ಲಿರುವ ನಿರ್ವಾಚನ ನಿಲಯ(ಮುಖ್ಯ ಚುನಾವಣಾಧಿಕಾರಿ ಕಚೇರಿ)ದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಸಕ್ತ ಸಾಲಿನ ಅ. 1 ಅನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ ರಾಜ್ಯದಲ್ಲಿ ಎಸ್‌ಐಆ‌ರ್ ಪ್ರಕ್ರಿಯೆ ಕೈಗೊಳ್ಳಲಾಗುವುದು. ಜೂ.20 ರಿಂದ 29ರವರೆಗೆ ಸಿದ್ಧತೆ, ತರಬೇತಿ ಹಾಗೂ ಮುದ್ರಣ ಕಾರ್ಯ, ಜೂ.30ರಿಂದ ಜು.29ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿ(ಬಿಎಲ್‌ಒ)ಗಳಿಂದ ಮನೆ ಮನೆ ಭೇಟಿ, ಜು.29ರೊಳಗೆ ಮತಗಟ್ಟೆಗಳ ತಾರ್ಕಿಕ ಮರು ಹೊಂದಾಣಿಕೆ ಕಾರ್ಯ ನಡೆಯಲಿದೆ ಎಂದು ಹೇಳಿದರು.

Ad Widget

Ad Widget <> Ad Widget

ಕರಡು ಮತದಾರರ ಪಟ್ಟಿಯನ್ನು ಆ.5ರಂದು ಪ್ರಕಟಿಸಲಾಗುವುದು, ಆ.5 ರಿಂದ ಸೆ.4ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು, ಆ.5 ರಿಂದ ಅ.3ರವರೆಗೆ ನೋಟಿಸ್ ಹಂತ ಹಾಗೂ ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಮಾಡಲಾಗುವುದು. ಅ.7ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ವಿ. ಅನ್ಬುಕುಮಾರ್ ತಿಳಿಸಿದರು.

ರಾಜ್ಯದಲ್ಲಿ 59,050 ಮತಗಟ್ಟೆ ಮಟ್ಟದ ಅಧಿಕಾರಿಗಳು ಪರಿಷ್ಕರಣೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಒಟ್ಟು 5,55,74,064 ಮತದಾರರಿದ್ದಾರೆ. ಅದರಲ್ಲಿ 4,80,39,560 ಮತದಾರರನ್ನು ಮ್ಯಾಪಿಂಗ್ ಮಾಡಿದ್ದೇವೆ. ಎಸ್‌ಐಆರ್ ಪ್ರಕ್ರಿಯೆ ವೇಳೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆ(ಎನುಮೆರೇಷನ್ ಫಾರ್ಮ್)ಗಳನ್ನು ವಿತರಣೆ ಹಾಗೂ ಸಂಗ್ರಹಣೆ ಮಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

Ad Widget

Ad Widget

ರಾಜಕೀಯ ಪಕ್ಷಗಳಿಂದ ಈಗಾಗಲೆ 25,284 ಬೂತ್ ಮಟ್ಟದ ಏಜೆಂಟ್‌(ಬಿಎಲ್‌ಎ)ಗಳನ್ನು ನೇಮಕ ಮಾಡಲಾಗಿದೆ. ಪ್ರತಿಯೊಂದು ಮತಗಟ್ಟೆಗೆ ಬೂತ್ ಮಟ್ಟದ ಏಜೆಂಟ್‌ಗಳನ್ನು ನೇಮಕ ಮಾಡುವಂತೆ ರಾಜಕಿಯ ಪಕ್ಷಗಳಿಗೆ ಪತ್ರ ಬರೆದು ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.

ಪರಿಷ್ಕರಣೆಯ ಪ್ರಕ್ರಿಯೆ, ನಮೂನೆಗಳು ಹಾಗೂ ವೇಳಾಪಟ್ಟಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳ ಅಧಿಕೃತ ಜಾಲತಾಣಗಳು, ಮುಖ್ಯ ಚುನಾವಣಾಧಿಕಾರಿ ಹಾಗೂ ಭಾರತದ ಚುನಾವಣಾ ಆಯೋಗದ ಅಧಿಕೃತ ಜಾಲತಾಣಗಳಲ್ಲಿ ಪ್ರಕಟಿಸಲಾಗುವುದು ಎಂದು ಅನ್ನುಕುಮಾರ್ ಮಾಹಿತಿ ನೀಡಿದರು.

ಎನುಮೆರೇಷನ್‌ ಫಾರ್ಮ್:
ಎಸ್‌ಐಆ‌ರ್ ಪ್ರಕ್ರಿಯೆಯಲ್ಲಿ ಗಣತಿ ನಮೂನೆ(ಎನುಮೆರೇಷನ್ ಫಾರ್ಮ್)ಗಳನ್ನು ಪ್ರತಿಯೊಬ್ಬ ಮತದಾರರಿಗೂ ದ್ವಿಪತ್ರಿಯಲ್ಲಿ ಬಿಎಲ್‌ಒಗಳು ಮನೆ ಮನೆಗೆ ತಲುಪಿಸಲಿದ್ದಾರೆ. ಬಿಎಲ್‌ಒ ಹಸ್ತಾಕ್ಷರ ಇರುವಂತಹ ಒಂದು ಪ್ರತಿಯನ್ನು ಮತದಾರರು ತಮ್ಮ ಬಳಿ ಇಟ್ಟುಕೊಂಡು, ಮತ್ತೊಂದು ಪ್ರತಿಯಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಬಿಎಲ್‌ಒಗಳಿಗೆ ಹಸ್ತಾಂತರಿಸಬೇಕು ಎಂದು ಅವರು ತಿಳಿಸಿದರು.

ಮತದಾರರ ಪಟ್ಟಿಯಲ್ಲಿರುವಂತೆ ಭಾವಚಿತ್ರ, ಹೆಸರು, ಮತಗಟ್ಟೆ ಸಂಖ್ಯೆ ವಿಧಾನಸಭಾ ಕ್ಷೇತ್ರದ ಹೆಸರು ಆ ಅರ್ಜಿಯಲ್ಲಿ ಮುದ್ರಣವಾಗಿರುತ್ತದೆ. ಪ್ರತಿಯೊಬ್ಬ ಮತದಾರರಿಗೂ ನೀಡುವಂತಹ ಅರ್ಜಿಯಲ್ಲಿ ಕ್ಯೂರ್ ಕೋಡ್ ವಿಭಿನ್ನವಾಗಿರುತ್ತದೆ. ಬಿಎಲ್‌ಒ ಆ್ಯಪ್ ಮೂಲಕ ಕ್ಯೂರ್ ಕೋಡ್ ಸ್ಕ್ಯಾನ್ ಮಾಡಿದರೆ ಮತದಾರನ ಮಾಹಿತಿ ಲಭ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಒಂದು ವೇಳೆ ಮತದಾರರ ಭಾವಚಿತ್ರ ಹಳೆಯದಾಗಿದ್ದರೆ ಎನುಮರೇಷನ್ ಅರ್ಜಿಯೊಂದಿಗೆ ಹೊಸ ಭಾವಚಿತ್ರ ನೀಡಬಹುದು. ಇಲ್ಲದಿದ್ದರೆ ಬಿಎಲ್‌ಒಗಳೆ ಆ್ಯಪ್ ಮೂಲಕ ಭಾವಚಿತ್ರ ಪಡೆದುಕೊಳ್ಳುತ್ತಾರೆ. 2002ರ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದ್ದರೆ ಅದರ ವಿವರವನ್ನು ನೀಡಬೇಕು. ಇಲ್ಲದಿದ್ದರೆ ತಮ್ಮ ಸಂಬಂಧಿ(ತಂದೆ, ತಾತ ಇತ್ಯಾದಿ)ಯ ಮಾಹಿತಿ ಒದಗಿಸಬೇಕು ಎಂದು ವಿ. ಅನ್ಬುಕುಮಾರ್ ಹೇಳಿದರು.

ಅರ್ಜಿಯಲ್ಲಿ ಮತದಾರರು ಸಹಿ ಅಥವಾ ಎಡಗೈ ಹೆಬ್ಬೆರಳಿನ ಗುರುತು ಹಾಕಬಹುದು. ಒಂದು ವೇಳೆ ಮತದಾರರು ಆ ಸಂದರ್ಭದಲ್ಲಿ ಲಭ್ಯವಿಲ್ಲದಿದ್ದರೆ ಕುಟುಂಬದಲ್ಲಿನ ವಯಸ್ಕ ಸದಸ್ಯರು ಸಹಿ ಮಾಡಿ ಬಿಎಲ್‌ಒಗಳಿಗೆ ಅರ್ಜಿ ಹಸ್ತಾಂತರಿಸಬಹುದು. 2002ರ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಅಥವಾ ಡೇಟಾ ಹೊಂದಾಣಿಕೆ ಆಗದಿದ್ದರೆ ಚುನಾವನಾಧಿಕಾರಿ ನೋಟಿಸ್‌ ನೀಡಿ ಅಗತ್ಯ ದಾಖಲೆಗಳನ್ನು ಕೇಳುತ್ತಾರೆ ಎಂದು ಅವರು ನುಡಿದರು.

ದಾಖಲೆಗಳು:
ಕೇಂದ್ರ ಅಥವಾ ರಾಜ್ಯ ಸರಕಾರ ನೀಡಿರುವ ಪಿಂಚಣಿಗೆ ಸಂಬಂಧಿಸಿದ ಗುರುತಿನ ಚೀಟಿ, ಬ್ಯಾಂಕ್, ಅಂಚೆ ಕಚೇರಿ, ಎಲ್‌ಐಸಿಯ ದಾಖಲೆಗಳು, ಜನನ ಪ್ರಮಾಣ ಪತ್ರ, ಪಾಸ್‌ಪೋರ್ಟ್, ಶೈಕ್ಷಣಿಕ ದಾಖಲೆಗಳು, ಸರಕಾರ ನೀಡಿರುವ ಖಾಯಂ ನಿವಾಸದ ದಾಖಲೆ, ಅರಣ್ಯ ಹಕ್ಕು ಪ್ರಮಾಣ ಪತ್ರ, ಹಿಂದುಳಿದ, ಎಸ್.ಸಿ, ಎಸ್.ಟಿ ಅಥವಾ ಯಾವುದಾದರೂ ಜಾತಿ ಪ್ರಮಾಣ ಪತ್ರ, ಭೂಮಿ, ಮನೆ ಹಂಚಿಕೆ ಮಾಡಿರುವ ಪ್ರಮಾಣ ಪತ್ರ, ಆಧಾರ್ ಅನ್ನು ಸಲ್ಲಿಸಬಹುದು ಎಂದು ಅವರು ಹೇಳಿದರು.

ಮತದಾರರಿಗೆ ಅನುಕೂಲ ಕಲ್ಪಿಸಲು ಗ್ರಾಮ ಪಂಚಾಯತಿ ಹಾಗೂ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ವಾರ್ಡ್ ಮಟ್ಟದಲ್ಲಿ ಮತದಾರರ ಸಹಾಯ ಕೇಂದ್ರವನ್ನು ಸ್ಥಾಪನೆ ಮಾಡಲಾಗುವುದು. ಯಾವುದೆ ಅರ್ಹ ಮತದಾರರು ಕೈ ಬಿಟ್ಟು ಹೋಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ನುಡಿದರು.

ಏನಿದು ಅರ್ಹತಾ ದಿನಾಂಕ?
1950ನೆ ಸಾಲಿನ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 14(ಬಿ) ಪ್ರಕಾರ ನಾಲ್ಕು ಅರ್ಹತಾ ದಿನಾಂಕ(ಜನವರಿ 1, ಎಪ್ರಿಲ್ 1, ಜುಲೈ 1 ಹಾಗೂ ಅಕ್ಟೋಬರ್ 1)ಗಳಿವೆ. ಕರ್ನಾಟಕದಲ್ಲಿ ಅರ್ಹತಾ ದಿನಾಂಕ ಅಕ್ಟೋಬರ್ 1 ಆಗಿದೆ. ಈ ಅವಧಿಯಲ್ಲಿ ಮತದಾರರ ಪಟ್ಟಿಯ ಸಿದ್ಧತೆ, ಪರಿಷ್ಕರಣೆ ಮಾಡುವುದಾಗಿದೆ. ಈ ದಿನಾಂಕದಂದು 18 ವರ್ಷ ಪೂರ್ಣಗೊಂಡಿರುವವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬಹುದಾಗಿದೆ.

ಮ್ಯಾಪಿಂಗ್‌ನಲ್ಲಿ ಕೊಡಗು ಪ್ರಥಮ:
ರಾಜ್ಯದಲ್ಲಿ ಶೇ.86.46ರಷ್ಟು ಮತದಾರರ ಮ್ಯಾಪಿಂಗ್ ಕಾರ್ಯ ಆಗಿದೆ. ಕೊಡಗು ಜಿಲ್ಲೆ-ಶೇ.96, ಮಂಡ್ಯ-ಶೇ.95.48, ಬಳ್ಳಾರಿ-ಶೇ.95.40, ಬಿಬಿಎಂಪಿ ದಕ್ಷಿಣ-ಶೇ.64, ಬಿಬಿಎಂಪಿ ಕೇಂದ್ರ-64, ಬಿಬಿಎಂಪಿ ಉತ್ತರ- ಶೇ.67, ಬೆಂಗಳೂರು ನಗರ-ಶೇ.75ರಷ್ಟು ಮ್ಯಾಪಿಂಗ್ ಆಗಿದೆ. ಅದೇ ರೀತಿ, ವಿಧಾನಸಭಾ ಕ್ಷೇತ್ರವಾರು ಗಮನಿಸಿದರೆ ಚಿತ್ತಾಪುರ-ಶೇ.99, ನವಲಗುಂದ-ಶೇ.99, ಚಿಂಚೋಳ್ಳಿ-ಶೇ.99, ಕುಂದಗೋಳ-ಶೇ.99ರಷ್ಟು ಮ್ಯಾಪಿಂಗ್ ಆಗಿದೆ. 130 ವಿಧಾನಸಭಾ ಕ್ಷೇತ್ರಗಳಲ್ಲಿ ಶೇ.90ಕ್ಕಿಂತ ಹೆಚ್ಚು ಮ್ಯಾಪಿಂಗ್ ಆಗಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಗರಿಷ್ಠ ಪ್ರಮಾಣದಲ್ಲಿ ಮ್ಯಾಪಿಂಗ್ ಮಾಡುವ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಸರೆನ್ಸ್ ಮಾಡಲಾಗುವುದು.

ಎಸ್‌ಐಆ‌ರ್ ಪ್ರಕ್ರಿಯೆಯಲ್ಲಿ 31 ಜಿಲ್ಲಾಧಿಕಾರಿಗಳು, 35 ಸಹಾಯಕ ಜಿಲ್ಲಾ ಚುನಾವಣಾಧಿಕಾರಿಗಳು (ಎಡಿಇಒ), 224 ಚುನಾವಣಾ ನೋಂದಣಿ ಅಧಿಕಾರಿಗಳು(ಇಆರ್‌ಒ), 336 ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳು(ಎಇಆರ್‌ಒ), 5905, ಮತಗಟ್ಟೆ ಮಟ್ಟದ ಅಧಿಕಾರಿಗಳ ಮೇಲ್ವಿಚಾರಕರು (ಬಿಎಲ್‌ಒ ಸೂಪರ್ ವೈಸರ್), 59,050 ಮತಗಟ್ಟೆ ಮಟ್ಟದ ಅಧಿಕಾರಿಗಳು(ಬಿಎಲ್‌ಒ), ಜಿಲ್ಲಾ ಪಂಚಾಯಿತಿ ಸಿಇಒಗಳು ಭಾಗವಹಿಸಲಿದ್ದಾರೆ. ಅಲ್ಲದೆ, ಸ್ವಯಂ ಸೇವಕರನ್ನು ನೇಮಕ ಮಾಡಿಕೊಳ್ಳಲಿದ್ದೇವೆ ಎಂದು ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ.

Ad Widget
Click to comment

Leave a Reply

ಬಿಗ್ ನ್ಯೂಸ್

Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಎಫ್‌ಐಆರ್ ರದ್ದುಪಡಿಸಲು ನಿರಾಕರಣೆ

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಎಸ್‌ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.

Ad Widget

Ad Widget <> Ad Widget

ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ವೇಳೆ, ಗಿರೀಶ್‌ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್‌ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.

Ad Widget

Ad Widget

ಮತ್ತೊಂದೆಡೆ, ಎಸ್‌ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್‌ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.

ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್‌ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್‌ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್‌ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.

Ad Widget
Continue Reading

ಮಂಗಳೂರು

Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.

ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

High Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ

Published

on

Ad Widget

Ad Widget

Ad Widget

Ad Widget

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ಏಪ್ರಿಲ್ 24, 2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ತನುಷ್ ಎಂ. ಶೆಟ್ಟಿ (24 ವರ್ಷ) ಎಂಬುವವರು ನೀಡಿದ ದೂರುಗಳ ಆಧಾರದ ಮೇಲೆ ಶುಭಾ ರೈ ಮತ್ತು ಮೋಹನ್ ಬೋಳಂಗಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಅದರಲ್ಲಿ, ದೂರುದಾರರು ಆಸ್ಪತ್ರೆಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಬಳಸಿಕೊಂಡು ಅಸಭ್ಯ ಮತ್ತು ಬೆದರಿಕೆಯ ಸಂದೇಶಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಮಾರ್ಫ್ ಮಾಡಿದ (ತಿರುಚಿದ) ಫೋಟೋಗಳನ್ನು ಹಂಚಿಕೊಂಡು, ದೂರುದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಪ್ರಚಾರ ಮಾಡಿ ಕೋಮು ದ್ವೇಷ ಹರಡಲು ಯತ್ನಿಸಲಾಗಿದೆ; ಜೊತೆಗೆ ದೂರುದಾರರು ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಅಪರಾಧ, ಹಿಂದೂ ದೇವಾಲಯಗಳಿಗೆ ಅವಮಾನ ಮತ್ತು ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳ್ಳು ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬೆನ್ನಲ್ಲೇ, ಆರೋಪಿಗಳು ತಮ್ಮ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿದ್ದರು.

Ad Widget

Ad Widget <> Ad Widget

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ:
ಕರ್ನಾಟಕ ಹೈಕೋರ್ಟ್ ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, “ಮೇಲ್ನೋಟಕ್ಕೆ ದೂರುದಾರರ ಆರೋಪಗಳು ಸುಳ್ಳಲ್ಲ ಎಂಬುದು ಕಂಡುಬರುತ್ತಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯಿಂದಾಗಿ ಪೊಲೀಸ್ ತನಿಖೆ ಸ್ಥಗಿತಗೊಂಡಿತ್ತು. ಆರೋಪಗಳು ಗಂಭೀರವಾಗಿದ್ದು, ಅವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆಯ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಜೊತೆಗೆ, “ಸಾಮಾಜಿಕ ಜಾಲತಾಣದಲ್ಲಿ ಖಾತೆ ಇದೆ ಎಂಬ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು ಮುಕ್ತ ಪರವಾನಗಿ (Free Licence) ಅಲ್ಲ. ವಾಕ್ ಸ್ವಾತಂತ್ರ್ಯಕ್ಕೆ ಸಂವಿಧಾನದ ಮಿತಿಗಳಿವೆ” ಎಂದು ಸ್ಪಷ್ಟಪಡಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!