ಪುತ್ತೂರು
ಸತತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ : ತೀರ ಆರ್ಥಿಕ ದುಸ್ಥಿತಿ – ಬೆಲೆ ಏರಿಕೆ – ‘ಖರೀದಿಸಬೇಡಿ’ ಎಂಬ ಸಲಹೆ : ಮೇ.18ರಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಮೋದಿ ಸರಕಾರದ ವಿರುದ್ದ ಬೃಹತ್ ಪ್ರತಿಭಟನೆ
ಪುತ್ತೂರು: ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಮತ್ತು ಆಡಳಿತ ವೈಫಲ್ಯವನ್ನು ಖಂಡಿಸಿ ಮೇ.18 ಸೋಮವಾರದಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರು ಬಸ್ ನಿಲ್ದಾಣದ ಬಳಿ ಇರುವ ಗಾಂಧಿಕಟ್ಟೆಯ ಎದುರು ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಇಂದು ಪುತ್ತೂರು ಪ್ರವಾಸಿ ಮಂದಿರದಲ್ಲಿ ನಡೆದ ಪುತ್ತೂರು,ವಿಟ್ಲ,ಮತ್ತು ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಮುಖರ ಜೊತೆ ಶಾಸಕರು ಪ್ರತಿಭಟನೆ ವಿಚಾರವಾಗಿ ಪೂರ್ವಭಾವಿ ಸಭೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ವಿಪರೀತ ಬೆಲೆ ಏರಿಕೆ ಜನಸಾಮಾನ್ಯರನ್ನು ಆತಂಕಕ್ಕಿಡುಮಾಡಿದ್ದು, ದಿನೇ ದಿನೇ ಪೆಟ್ರೋಲ್ ,ಡಿಸೆಲ್, ಅಡುಗೆ ಅನಿಲದ ಬೆಲೆ ಏರಿಕೆಯಾಗುತ್ತಿದೆ ಇದನ್ನು ನಿಯಂತ್ರಣ ಮಾಡುವಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ವಿಫಲವಾಗಿದೆ.
ದೇಶದ ಆರ್ಥಿಕ ಸ್ಥಿತಿ ದುಸ್ತರವಾಗಿದೆ. ನಿಯಂತ್ರಿಸುವಲ್ಲಿ ವಿಫಲವಾದ ಸರಕಾರ ದೇಶದ ಜನರಲ್ಲಿ ಚಿನ್ನ ಖರೀದಿಸಬೇಡಿ, ರಸಗೊಬ್ಬರ ಖರೀದಿಸಬೇಡಿ, ಇಂಧನ ಬಳಸಬೇಡಿ ಎಂದು ಆದೇಶ ಮಾಡುತ್ತದೆ. ಸರಕಾರದ ವೈಫಲ್ಯವನ್ನು ಜನರ ತಲೆ ಮೇಲೇ ಹೊರಿಸುವುದು ಸರಿಯಲ್ಲ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ತೂಗುಯ್ಯಾಲೆಯಲ್ಲಿದೆ. ಸತತವಾಗಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಲೇ ಇದೆ ಇದು ಯುವ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರಕಾರದ ಚೆಲ್ಲಾಟವಾಗಿದೆ ಇದೆಲ್ಲವನ್ನೂ ಖಂಡಿಸಿ ಮತ್ತು ಜನತೆಗೆ ಕೇಂದ್ರದ ವೈಫಲ್ಯವನ್ನು ತಿಳಿಸುವ ಉದ್ದೇಶದಿಂದ ಈ ಪ್ರತಿಭಟನೆ ಆಯೋಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಬ್ಲಾಕ್ ಅಧ್ಯಕ್ಷರುಗಳಾದ ಕೃಷ್ಣಪ್ರಸಾದ್ ಆಳ್ವ, ಪದ್ಮನಾಭ ಪೂಜಾರಿ, ಯು ಟಿ ತೌಸೀಫ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀದರ್ ರೈ ಮಟಂತಬೆಟ್ಟು, ಪ್ರಚಾರ ಸಮಿತಿ ಅಧ್ಯಕ್ಷ ಡಾ.ರಾಜರಾಂ, ಪಕ್ಷದ ಪ್ರಮುಖರಾದ ಕುಂಬ್ರ ದುರ್ಗಾಪ್ರಸಾದ್ ರೈ, ಜೋಕಿಂಡಿಸೋಜಾ,ರಮನಾಥ ವಿಟ್ಲ, ಯಾಕೂಬ್ ಮುಲಾರ್,ಅಸ್ಗರ್ ಅಲಿ ನೆಕ್ಕಿಲಾಡಿ,ಮಹಾಲಿಂಗ ನಾಯ್ಕ,ಜಯಪ್ರಕಾಶ್ ಬದಿನಾರ್, ಹೊನಪ್ಪ ಕೈಂದಾಡಿ, ಚಂದ್ರಪ್ರಭಾ,ಸನತ್ ಕುಮಾರ್ ರೈ ಒಳತ್ತಡ್ಕ, ,ವಿಕ್ರಂ ಶೆಟ್ಟಿ ಕೋಡಿಂಬಾಡಿ ,ಸುಶಾಂತ್, ಸುಮಿತ್ ಶೆಟ್ಟಿ, ರವಿಪ್ರಸಾದ್ ಶೆಟ್ಟಿ ಬನ್ನೂರು ಮತ್ತಿತರರು ಇದ್ದರು.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಶಿಕ್ಷಣ
Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.
ಕಾರ್ಯಕ್ರಮಗಳು
Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.
-
ಬಿಗ್ ನ್ಯೂಸ್14 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ12 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಮಂಗಳೂರು7 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಸಿನೆಮಾ12 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ13 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ13 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ13 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
-
ಅಂತರ ರಾಜ್ಯ6 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!















