Uncategorized
ಬೆಳ್ತಂಗಡಿ : ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ: ಪ್ರಸಿದ್ಧ ನರ್ಸರಿಯ ಮಾಲೀಕರ ಪತ್ನಿ ದುರ್ಮರಣ..!
ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ.17 ರಂದು ರಾತ್ರಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ನರ್ಸರಿ ಮಾಲೀಕ ಅನಿಲ್ ಭಟ್(45) ಅವರ ಪತ್ನಿ ಶೈಲಜಾ (35) ಅಪಘಾತದಲ್ಲಿ ಸಾವೀಗೀಡಾಗಿದ್ದಾರೆ. ಅನಿಲ್ ಭಟ್ ಗೆ ಗಾಯವಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅನಿಲ್ ಭಟ್ ಮತ್ತು ಪತ್ನಿ ಶೈಲಜಾ ಅವರು ತಮ್ಮ ಪಾರ್ಮ್ ನ ಕೆಲಸ ಮುಗಿಸಿ ಅವರ ಸೈಟ್ ಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕನ್ನಡಿಕಟ್ಟೆ ಬಳಿ ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದೆ.
ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Uncategorized
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ

ಮಂಗಳೂರು, ಅ.4: ಸಣ್ಣ ವಿಚಾರಕ್ಕೆ ಸಹಪಾಠಿಗಳ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿಯೊಬ್ಬನ ಮೇಲೆ ಸಹಪಾಠಿ ಸೇರಿದಂತೆ ಆರು ಮಂದಿ ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಮಹಮ್ಮದ್ ಉನೈಸ್ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಮಂಗಳೂರು ನಗರದ ಸರ್ಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಅ.3ರಂದು ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿರುವ ಉನೈಸ್ ಅವರು ಬೆಳಿಗ್ಗೆ 11.30ರ ಸುಮಾರಿಗೆ ಕಾಲೇಜಿನ ಸಮೀಪದ ಟರ್ಫ್‌ಗೆ ಕಬಡ್ಡಿ ಆಡಲು ತೆರಳಿದ್ದರು. ಈ ವೇಳೆ ಟರ್ಫ್ ಎದುರಿನ ರಸ್ತೆಯಲ್ಲಿ ಅವರ ಸ್ನೇಹಿತ ಹಾಗೂ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ ರಾಯಿಝ್ ಮತ್ತು ಅದೇ ಕಾಲೇಜಿನ ಬಿಕಾಂ ವಿದ್ಯಾರ್ಥಿ, ಕಾಟಿಪಳ್ಳ ನಿವಾಸಿ ರಿಯಾನ್ ನಡುವೆ ಸಣ್ಣ ವಿಚಾರಕ್ಕೆ ಜಗಳ ನಡೆದಿದೆ ಎನ್ನಲಾಗಿದೆ.
ಜಗಳ ಬಿಡಿಸಲು ಉನೈಸ್ ಸೇರಿದಂತೆ ಕೆಲ ವಿದ್ಯಾರ್ಥಿಗಳು ಮಧ್ಯಪ್ರವೇಶಿಸಿದಾಗ ರಿಯಾನ್ ಉನೈಸ್‌ಗೆ ಕೈಯಿಂದ ಹೊಡೆದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಳಿಕ ಉನೈಸ್ ಹಾಗೂ ಇತರ ವಿದ್ಯಾರ್ಥಿಗಳು ಕಾಲೇಜಿಗೆ ವಾಪಸಾಗಿದ್ದರು.
ಮಧ್ಯಾಹ್ನ 1.45ರ ಸುಮಾರಿಗೆ ಉನೈಸ್ ಕಾಲೇಜಿನ ಕ್ಯಾಂಟೀನ್ ಬಳಿ ನಿಂತಿದ್ದಾಗ ರಿಯಾನ್ ಹಾಗೂ ಐವರು ಸಹಚರರು ಎರಡು ದ್ವಿಚಕ್ರ ವಾಹನಗಳಲ್ಲಿ ಅಲ್ಲಿಗೆ ಬಂದಿದ್ದಾರೆ ಎನ್ನಲಾಗಿದೆ. ಆರೋಪಿಗಳು ಉನೈಸ್ ಅವರನ್ನು ಸುತ್ತುವರಿದು ಹಲ್ಲೆ ನಡೆಸಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ.
ಈ ವೇಳೆ ಚೂರಿಯಿಂದ ಉನೈಸ್ ಅವರ ತಲೆ, ಬೆನ್ನು, ಎಡ ಕಿವಿ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಇರಿದು ಗಾಯಗೊಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು.
ಗಾಯಗೊಂಡ ಉನೈಸ್ ಅವರನ್ನು ತಕ್ಷಣ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದು, ಉಳಿದ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.
Uncategorized
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ

ಪುತ್ತೂರು: ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣದಲ್ಲಿ ನ್ಯಾಯಕ್ಕಾಗಿ ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಹೈಕೋರ್ಟ್ ವಕೀಲ ಮೊಹಿತ್ ಕುಮಾರ್ ಅವರ ತಾಯಿ, ಕೊಳ್ತಿಗೆ ಗ್ರಾಮದ ಕುಂಡಡ್ಕ ನಿವಾಸಿ ಪಾರ್ವತಿ ಕುಂಡಡ್ಕ ಅವರು ಅಲ್ಪಕಾಲದ ಅಸ್ವಸ್ಥತೆಯಿಂದ ಅ.3ರಂದು ಸ್ವಗೃಹದಲ್ಲಿ ನಿಧನರಾದರು.
ಪಾರ್ವತಿ ಅವರು ಚಾರ್ವಕ ಕಪಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷ ಹಾಗೂ ಪುತ್ತೂರಿನ ಪಶುವೈದ್ಯ ಧರ್ಮಪಾಲ ಕರಂದ್ಲಾಜೆ ಅವರ ಸಹೋದರಿ.
ಮೃತರು ಪುತ್ರರಾದ ತೀರ್ಥಪ್ರಸಾದ್ ಕೆ., ಚಿತ್ರಶೇಖರ್, ಮೋಹಿತ್ ಕುಮಾರ್ ಹಾಗೂ ಚಿರಣ್ ಕುಮಾರ್ ಅವರನ್ನು ಅಗಲಿದ್ದಾರೆ.
ವಕೀಲ ಮೋಹಿತ್ ಕುಮಾರ್ ಅವರು ಸೌಜನ್ಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ ಪರ ಸಿಬಿಐ ವಿಶೇಷ ನ್ಯಾಯಾಲಯ, ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು. ಸೌಜನ್ಯ ಪ್ರಕರಣದ ನ್ಯಾಯಾಂಗ ಹೋರಾಟದಲ್ಲಿ ಅವರು ಪ್ರಮುಖವಾಗಿ ಗುರುತಿಸಿಕೊಂಡಿದ್ದರು.
ಸೌಜನ್ಯ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಹಲವು ನಾಯಕರು ಅಂತಿಮ ನಮನ ಸಲ್ಲಿಸಿದರು.
Uncategorized
Dharmasthala-28ನೇ ವರ್ಷದ ಭಜನಾ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ಸಾಮರಸ್ಯದ ಸಂಕೇತವೇ ಈ ಭಜನೆ : ಪ್ರೊ. ಪವನ್ ಕಿರಣಕೆರೆ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಅ.02, ಶುಕ್ರವಾರದಂದು ನಡೆದ 28ನೇ ವರ್ಷದ ಭಜನಾ ಕಮ್ಮಟದ ಐದನೇ ದಿನ ಶಿಬಿರದ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕ ನೆಲೆಯಲ್ಲಿ ಆಸೆಮ್ಸ್ ಶಿಕ್ಷಣ ಸಂಸ್ಥೆ ಕಲ್ಮಾಡಿ, ಉಡುಪಿ ಇಲ್ಲಿನ ಪ್ರಾಂಶುಪಾಲ ಪ್ರೊ. ಪವನ್ ಕಿರಣಕೆರೆ ಮಾತನಾಡಿದರು.

ಧರ್ಮಸ್ಥಳ, ಅ.02 : ಯಾವುದೇ ಮತ ಪಂಥಗಳ ತಾರತಮ್ಯವಿಲ್ಲದೆ ಸಾಮರಸ್ಯದಿಂದ ದೇವರನ್ನು ಸ್ಮರಿಸುವ ಏಕೈಕ ಮಾರ್ಗವೇ ಭಜನೆಯಾಗಿದ್ದು, ಇಡೀ ಸಮಾಜಕ್ಕೆ ಸಾಮರಸ್ಯವನ್ನು ಸಾರುವ ಕಾರ್ಯವನ್ನು ಈ ಭಜನಾ ಕಮ್ಮಟ ಮಾಡುತ್ತಿದೆ ಎಂದು ಪ್ರಸಂಗಕರ್ತರು, ಅರ್ಥಧಾರಿಗಳು ಹಾಗೂ ಆಸೆಮ್ಸ್ ಶಿಕ್ಷಣ ಸಂಸ್ಥೆ ಕಲ್ಮಾಡಿ, ಉಡುಪಿ ಇಲ್ಲಿನ ಪ್ರಾಂಶುಪಾಲ ಪ್ರೊ. ಪವನ್ ಕಿರಣಕೆರೆ ಅಭಿಪ್ರಾಯಪಟ್ಟರು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಅ.02, ಶುಕ್ರವಾರದಂದು ನಡೆದ 28ನೇ ವರ್ಷದ ಭಜನಾ ಕಮ್ಮಟದ ಐದನೇ ದಿನ ಶಿಬಿರದ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕ ನೆಲೆಯಲ್ಲಿ ಮಾತನಾಡಿದರು.
ಮನುಷ್ಯನ ಮನಸ್ಸಿನಲ್ಲಿರುವ ಅಸೂಯೆ, ಮತ್ಸರಗಳೇ ದುಃಖದ ಮೂಲವಾಗಿದ್ದು, ಅವೆಲ್ಲವನ್ನೂ ಕಳೆಯಲು ಭಜನೆ ಹಾಗೂ ಆಧ್ಯಾತ್ಮದಿಂದ ಮಾತ್ರ ಸಾಧ್ಯ. ಸುಖದಲ್ಲಿ ಹಿಗ್ಗದೆ, ಕಷ್ಟ ಬಂದಾಗ ಕುಗ್ಗದೆ ಎಲ್ಲವನ್ನೂ ಸಮಚಿತ್ತವಾಗಿ ಸ್ವೀಕರಿಸುವ ಮೂಲಕ ಸಾಮರಸ್ಯದ ಬದುಕನ್ನು ಭಜನೆಯಿಂದ ಕಂಡುಕೊಳ್ಳಬಹುದಾಗಿದೆ. ಭಗವಂತನ ದೃಷ್ಟಿಯಲ್ಲಿ ಭಕ್ತಿಗೆ ಪ್ರಾಧಾನ್ಯತೆಯೇ ಹೊರತು ಯಾವುದೇ ಆಡಂಬರದ ಆಚರಣೆಗಳಿಗಲ್ಲ. ಭಗವಂತನನ್ನು ಒಲಿಸಿಕೊಳ್ಳಲು ಶ್ರದ್ಧೆಯೇ ಅತ್ಯಂತ ಉತ್ತಮ ಹಾದಿಯಾಗಿದೆ ಎಂದು ಎಲ್ಲಾ ಶಿಬಿರಾರ್ಥಿಗಳಿಗೆ ಭೋದಿಸಿದರು.
ರಾಜ್ಯಾದ್ಯಂತ ಎಲ್ಲಾ ಭಕ್ತರನ್ನು ಒಗ್ಗೂಡಿಸಿ ಎಲ್ಲರ ಮಾನಸಿಕ ಶುದ್ಧತೆಯನ್ನು ಕಾಪಾಡುವ ಮೂಲಕ ಭಜನಾ ಕಮ್ಮಟವು ಅತಿ ಮುಖ್ಯ ಪಾತ್ರ ವಹಿಸಿದ್ದು, ಈ ಕಮ್ಮಟವನ್ನು ಪರ್ವವಾಗಿಸುವಲ್ಲಿ ಕಾರಣಿಭೂತರಾದ ಹೆಗ್ಗಡೆ ದಂಪತಿಗಳ ಪರಿಶ್ರಮ ಬಲು ದೊಡ್ಡದು ಎಂದು ಶ್ಲಾಘಿಸಿದರು.


















