Connect with us

ಬೆಂಗಳೂರು

Disciplinary action-ಕರ್ನಾಟಕ ಯುವ ಕಾಂಗ್ರೆಸ್‌ ಪದಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ದೀಪಿಕಾ ರೆಡ್ಡಿ ಬಿಂದು ಗೌಡ ಸೇರಿ 15 ಮಂದಿಗೆ ಗೇಟ್‌ ಪಾಸ್‌

Published

on



Ad Widget

Ad Widget

Ad Widget

Ad Widget

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ (KPYCC) ಸಮಿತಿಯಲ್ಲಿ ಸಂಘಟನಾತ್ಮಕ ಶಿಸ್ತು ತರಲು ಭಾರತೀಯ ಯುವ ಕಾಂಗ್ರೆಸ್ ಮುಂದಾಗಿದ್ದು, ನಿಷ್ಕ್ರಿಯವಾಗಿರುವ ಪದಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳದ ಮತ್ತು ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ರಾಜ್ಯ ಘಟಕದ ಒಟ್ಟು 15 ಪದಾಧಿಕಾರಿಗಳನ್ನು ಅವರ ಸ್ಥಾನಗಳಿಂದ ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕವಾಗಿ ಮುಕ್ತಗೊಳಿಸಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ (KPYCC) ಸಮಿತಿಯಲ್ಲಿ ಸಂಘಟನಾತ್ಮಕ ಶಿಸ್ತು ತರಲು ಭಾರತೀಯ ಯುವ ಕಾಂಗ್ರೆಸ್ ಮುಂದಾಗಿದ್ದು, ನಿಷ್ಕ್ರಿಯವಾಗಿರುವ ಪದಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳದ ಮತ್ತು ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ರಾಜ್ಯ ಘಟಕದ ಒಟ್ಟು 15 ಪದಾಧಿಕಾರಿಗಳನ್ನು ಅವರ ಸ್ಥಾನಗಳಿಂದ ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕವಾಗಿ ಮುಕ್ತಗೊಳಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕ್ರಮಕ್ಕೆ ಕಾರಣವೇನು?
ಯುವ ಕಾಂಗ್ರೆಸ್ ಪದಾಧಿಕಾರಿಗಳು ಕಡ್ಡಾಯವಾಗಿ ಸಭೆಗಳಲ್ಲಿ ಭಾಗವಹಿಸಬೇಕು, ನಾಯಕತ್ವ ಗುಣ ಪ್ರದರ್ಶಿಸಬೇಕು ಮತ್ತು ಪಕ್ಷದ ಸಂಘಟನಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂಬ ನಿಯಮವಿದೆ. ಆದರೆ, ಕಳೆದ ಕೆಲವು ಸಮಯದಿಂದ ಈ 15 ಪದಾಧಿಕಾರಿಗಳು ಯಾವುದೇ ಚಟುವಟಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಿದ ನಂತರ, ಸಂಘಟನೆಯ ಹಿತದೃಷ್ಟಿಯಿಂದ ಇವರನ್ನು ಹುದ್ದೆಯಿಂದ ಕೆಳಗಿಳಿಸಲು ನಿರ್ಧರಿಸಲಾಗಿದೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

Ad Widget

Ad Widget <> Ad Widget

ಜವಾಬ್ದಾರಿಯಿಂದ ಮುಕ್ತಗೊಂಡವರ ವಿವರ:
ಈ ಪಟ್ಟಿಯಲ್ಲಿ ಒಬ್ಬ ರಾಜ್ಯ ಉಪಾಧ್ಯಕ್ಷರು, ಏಳು ಪ್ರಧಾನ ಕಾರ್ಯದರ್ಶಿಗಳು ಮತ್ತು ಏಳು ಕಾರ್ಯದರ್ಶಿಗಳು ಸೇರಿದ್ದಾರೆ.



Ad Widget

ರಾಜ್ಯ ಉಪಾಧ್ಯಕ್ಷರು: ದೀಪಿಕಾ ರೆಡ್ಡಿ.
ರಾಜ್ಯ ಪ್ರಧಾನ ಕಾರ್ಯದರ್ಶಿಗಳು: ಸಿ.ಎಸ್. ಫ್ರಾನ್ಸಿಸ್ ಬೆನಿಟೊ, ಬಿಂದು ಗೌಡ, ಸುಮನ್ ಸೋಮಶೇಖರ್, ಅಫ್ನಾನಖಾನಂ, ಲಕ್ಷ್ಮಿ ಕೆ, ವಾಣಿ ಕಾಂಬ್ಳೆ, ದಕ್ಷಿಣಮೂರ್ತಿ ಎಸ್.
ರಾಜ್ಯ ಕಾರ್ಯದರ್ಶಿಗಳು: ಅಬ್ದುಲ್ ರವೂಫ್ ಬಿ.ಎಂ., ಸೈಯದ್ ಹುಸೇನ್ ಖಾದ್ರಿ, ಮೊಹಮ್ಮದ್ ಆಸಿಫ್ ಹುಸೇನ್, ಎಸ್.ಆರ್.ಎಸ್ ಚಂದ್ ಬಾಷಾ, ಗೋವರ್ಧನ್ ಜಿ.ಸಿ., ಪವನ್ ಸಾಲಿಯಾನ್, ನವೀನ್ ಕುಮಾರ್ ಎಸ್.

Ad Widget

Ad Widget

ಭಾರತೀಯ ಯುವ ಕಾಂಗ್ರೆಸ್‌ನ ಪ್ರಮುಖ ನಾಯಕರಾದ ನಿಗಮ್ ಭಂಡಾರಿ, ಶ್ರೀನಿವಾಸ್ ರಾಥೋಡ್, ತಾರಿಖ್ ಬಾಗ್ವಾನ್ ಮತ್ತು ಮಂಜುನಾಥ್ ಎಚ್.ಎಸ್. ಅವರು ಈ ಜಂಟಿ ಆದೇಶಕ್ಕೆ ಸಹಿ ಹಾಕಿದ್ದಾರೆ. ಮುಂದಿನ ಪರಾಮರ್ಶೆಯವರೆಗೆ ಈ ನಾಯಕರನ್ನು ಪಕ್ಷದ ಯಾವುದೇ ಜವಾಬ್ದಾರಿಗಳಿಂದ ದೂರವಿಡಲಾಗಿದೆ.

ಯುವ ಕಾಂಗ್ರೆಸ್ ಹೈಕಮಾಂಡ್‌ನ ಈ ದಿಢೀರ್ ಕ್ರಮವು ರಾಜ್ಯ ಘಟಕದಲ್ಲಿ ಸಂಚಲನ ಮೂಡಿಸಿದ್ದು, ಸಂಘಟನೆಯಲ್ಲಿ ನಿಷ್ಕ್ರಿಯವಾಗಿರುವ ಇತರ ನಾಯಕರಿಗೂ ಇದೊಂದು ನೇರ ಎಚ್ಚರಿಕೆಯ ಸಂದೇಶವೆಂದು ವಿಶ್ಲೇಷಿಸಲಾಗುತ್ತಿದೆ.

Ad Widget
Click to comment

Leave a Reply

ರಾಜಕೀಯ

Sting operation case-ಸ್ಟಿಂಗ್ ಆಪರೇಷನ್ ಕೇಸ್‌ : ಎಸ್‌ಐಟಿ ಅಥವಾ ಸಿಐಡಿ? ಸಚಿವ ಸಂಪುಟದಲ್ಲಿ ಏನು ನಿರ್ಧಾರ ಆಯಿತು ?

Published

on



Ad Widget

Ad Widget

Ad Widget

Ad Widget

ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ನಡೆಸಬೇಕೇ? ನಡೆಸುವುದಾದರೆ ಯಾವ ತನಿಖಾ ಸಂಸ್ಥೆಗೆ ವಹಿಸಬೇಕು? ಎಂಬ ವಿಚಾರ ಸಂಪುಟ ಸಭೆಯಲ್ಲಿ ಮತ್ತೆ ಪ್ರಸ್ತಾಪವಾಗಿದೆ. ಆದರೆ, ತನಿಖೆಯ ಸ್ವರೂಪದ ಕುರಿತು ಸಚಿವರ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಡಲಾಗಿದೆ ಎಂದು ವರದಿಯಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ಅ. 15: ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ನಡೆಸಬೇಕೇ? ನಡೆಸುವುದಾದರೆ ಯಾವ ತನಿಖಾ ಸಂಸ್ಥೆಗೆ ವಹಿಸಬೇಕು? ಎಂಬ ವಿಚಾರ ಸಂಪುಟ ಸಭೆಯಲ್ಲಿ ಮತ್ತೆ ಪ್ರಸ್ತಾಪವಾಗಿದೆ. ಆದರೆ, ತನಿಖೆಯ ಸ್ವರೂಪದ ಕುರಿತು ಸಚಿವರ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಡಲಾಗಿದೆ ಎಂದು ವರದಿಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸಭೆಯ ಆರಂಭದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಕರಣಕ್ಕೆ ಸಂಬಂಧಿಸಿದ ಬೆಳವಣಿಗೆಗಳನ್ನು ಸಂಪುಟದ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. ಈ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವುದು ಸೂಕ್ತ ಎಂದು ಕೆಲವು ಸಚಿವರು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಇನ್ನು ಕೆಲವು ಸಚಿವರು ಯಾವುದೇ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿಲ್ಲ ಎನ್ನಲಾಗಿದೆ.

Ad Widget

Ad Widget <> Ad Widget

ಎಸ್‌ಐಟಿ ರಚನೆಯಾಗುತ್ತಾ? ಸಿಐಡಿ ತನಿಖೆಯಾಗುತ್ತಾ?
ಪ್ರಕರಣದ ತನಿಖೆಗೆ ಹಿರಿಯ ಹಾಗೂ ಸಮರ್ಥ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕೇ ಅಥವಾ ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ವಹಿಸಬೇಕೇ ಎಂಬ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. ಆದರೆ, ತನಿಖೆ ನಡೆಸುವ ಅಗತ್ಯ ಮತ್ತು ಅದರ ಸ್ವರೂಪದ ಬಗ್ಗೆ ಸ್ಪಷ್ಟ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ.



Ad Widget

ಸಚಿವರ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಮುಖ್ಯಮಂತ್ರಿ ಅವರಿಗೆ ಬಿಡಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

ಸಂಪುಟ ಸಭೆಯ ಬಳಿಕ ಮಾತನಾಡಿದ ಕೆಲವು ಸಚಿವರು, ಈ ವಿಷಯ ಚರ್ಚೆಯಾಗಿಲ್ಲ ಎಂದು ಹೇಳಿದರೆ, ಇನ್ನು ಕೆಲವರು ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡಲಾಗಿದೆ ಎಂದು ತಿಳಿಸಿದ್ದಾರೆ.

ಮುಕ್ತ ಮತ್ತು ಪಾರದರ್ಶಕ ತನಿಖೆಗೆ ಒತ್ತು
ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಅಗತ್ಯವಿದ್ದರೆ ಪ್ರಕರಣದ ಬಗ್ಗೆ ಪ್ರತ್ಯೇಕ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

“ಪ್ರಕರಣ ನಡೆದು ಈಗಷ್ಟೇ ಎರಡು ದಿನಗಳಾಗಿವೆ. 48 ಗಂಟೆಗಳಲ್ಲಿ ಮಾಡಬೇಕಾದ ಕೆಲಸಗಳನ್ನೆಲ್ಲ ಮಾಡಿದ್ದೇವೆ. ತನಿಖೆ ಮುಕ್ತ ಮತ್ತು ಪಾರದರ್ಶಕವಾಗಿರಬೇಕು ಎಂಬುದು ನಮ್ಮ ಆಶಯ. ಸಿದ್ದರಾಮಯ್ಯ ಅವರ ಘನತೆಗಿಂತ ಹೆಚ್ಚಿನದು ಯಾವುದೂ ಇಲ್ಲ” ಎಂದು ಅವರು ತಿಳಿಸಿದ್ದಾರೆ.

ಒಟ್ಟಿನಲ್ಲಿ, ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗುತ್ತದೆಯೇ ಅಥವಾ ಸಿಐಡಿಗೆ ಒಪ್ಪಿಸಲಾಗುತ್ತದೆಯೇ ಎಂಬ ಕುತೂಹಲ ಮುಂದುವರಿದಿದ್ದು, ಮುಖ್ಯಮಂತ್ರಿ ಅವರ ಮುಂದಿನ ನಿರ್ಧಾರದತ್ತ ರಾಜಕೀಯ ವಲಯ ಗಮನ ಹರಿಸಿದೆ.

Ad Widget
Continue Reading

ರಾಜಕೀಯ

H.D. Kumaraswamy-ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ : ಬಾಂಬ್ ಸಿಡಿಸಿದ ಎಚ್.ಡಿ. ಕುಮಾರಸ್ವಾಮಿ – ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಷಡ್ಯಂತ್ರದಲ್ಲಿ ಕೃಪಾ ಆಳ್ವ..! ಗಂಭೀರ ಆರೋಪ

Published

on



Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಷಡ್ಯಂತ್ರದಲ್ಲಿ ಕರಾವಳಿ ಭಾಗದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಷಡ್ಯಂತ್ರದಲ್ಲಿ ಕರಾವಳಿ ಭಾಗದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಮೊದಲ ಆಡಳಿತಾವಧಿಯಲ್ಲಿ ಕೃಪಾ ಆಳ್ವ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು ಎಂದು ಹೇಳಿದರು. ಸಿದ್ದರಾಮಯ್ಯ ವಿರುದ್ಧ ನಡೆದ ಸ್ಟಿಂಗ್ ಆಪರೇಷನ್‌ನಲ್ಲಿ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

Ad Widget

Ad Widget <> Ad Widget

ಗೃಹ ಸಚಿವರ ವಿರುದ್ಧವೂ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಅಧಿಕಾರ ಇದೆ ಎಂಬ ಕಾರಣಕ್ಕೆ ಏನು ಬೇಕಾದರೂ ಮಾಡಬಹುದೇ ಎಂದು ಪ್ರಶ್ನಿಸಿದರು. “ಗೃಹ ಇಲಾಖೆ ನಿಮ್ಮಪ್ಪನದ್ದಾ? ನನ್ನ ಕಾರ್ಯಕರ್ತರನ್ನು ಬಂಧಿಸುತ್ತೀರಾ? ನಾನೇ ನಿಮ್ಮ ಕಚೇರಿಗೆ ಬರುತ್ತೇನೆ. ತಾಕತ್ತಿದ್ದರೆ ನನ್ನನ್ನೇ ಬಂಧಿಸಿ ನೋಡೋಣ” ಎಂದು ಸವಾಲು ಹಾಕಿದರು.



Ad Widget

ತಮ್ಮ ಮೇಲೆ ಅನುಮಾನ ಬಂದರೆ ಬಂಧಿಸುವುದಾಗಿ ಹೇಳುವವರು, ಮುಖ್ಯಮಂತ್ರಿ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯ ಬಗ್ಗೆ ಏಕೆ ಅನುಮಾನ ವ್ಯಕ್ತಪಡಿಸಿಲ್ಲ ಎಂದು ಪ್ರಶ್ನಿಸಿದ ಅವರು, ಮುಖ್ಯಮಂತ್ರಿಯನ್ನು ಉದ್ದೇಶಪೂರ್ವಕವಾಗಿ ಸಿಲುಕಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.

Ad Widget

Ad Widget

ತಮ್ಮ ಪುತ್ರನ ಪೋಸ್ಟರ್ ಅಂಟಿಸಿದ ಘಟನೆ ಉಲ್ಲೇಖಿಸಿದ ಕುಮಾರಸ್ವಾಮಿ, ಈ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದರು. ಹೆದರಿಕೆ, ಬೆದರಿಕೆಗಳಿಗೆ ತಾವು ಬಗ್ಗುವುದಿಲ್ಲ. ಬೇಕಾದರೆ ಕಮಿಷನರ್ ಕಚೇರಿಗೆ ಬರುತ್ತೇನೆ, ಬಂಧಿಸಿ ಎಂದು ಸವಾಲು ಹಾಕಿದರು.

ಜೆ.ಪಿ. ನಗರದ ಮನೆಯಲ್ಲಿ ತಾವು ಎಲೆಕ್ಟ್ರಾನಿಕ್ ಉಪಕರಣಗಳನ್ನು ಇಟ್ಟುಕೊಂಡಿದ್ದೇವೆಯೇ ಎಂದು ಪ್ರಶ್ನಿಸಿದ ಅವರು, ಅಧಿಕಾರವನ್ನು ನ್ಯಾಯಯುತವಾಗಿ ಬಳಸಬೇಕು ಎಂದರು. ಸ್ಟಿಂಗ್ ಆಪರೇಷನ್ ನಡೆಸಿದವರನ್ನು ಏಕೆ ಬಂಧಿಸಿಲ್ಲ? ಪೊಲೀಸ್ ಅಧಿಕಾರಿಯನ್ನು ಕೊಲೆ ಮಾಡುವುದಾಗಿ ಹೇಳಿದ ವ್ಯಕ್ತಿಯ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

ಇದೇ ವೇಳೆ, ತಾವು ಬಳಸಿದ ಪದಗಳ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ತಾವು ಈ ಮಟ್ಟದ ಪದಗಳನ್ನು ಬಳಸಿರಲಿಲ್ಲ. ಆದರೆ, ಮತ್ತೊಬ್ಬರು ಬಳಸಿದ ಪದಗಳಿಂದ ಆಕ್ರೋಶಗೊಂಡು ಪ್ರತಿಕ್ರಿಯಿಸಿದ್ದೇನೆ. ಇದಕ್ಕಾಗಿ ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.

Ad Widget
Continue Reading

ಬಿಗ್ ನ್ಯೂಸ್

Renukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು: ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ಎ10 ವಿನಯ್

Published

on



Ad Widget

Ad Widget

Ad Widget

Ad Widget

ನಟ ದರ್ಶನ್‌ ಸೇರಿದಂತೆ ಹಲವರು ಆರೋಪಿಗಳಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 10ನೇ ಆರೋಪಿ ವಿನಯ್, ಮಾಫಿ ಸಾಕ್ಷಿಯಾಗಲು ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ನಟ ದರ್ಶನ್‌ ಸೇರಿದಂತೆ ಹಲವರು ಆರೋಪಿಗಳಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 10ನೇ ಆರೋಪಿ ವಿನಯ್, ಮಾಫಿ ಸಾಕ್ಷಿಯಾಗಲು ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಈಗಾಗಲೇ ಪ್ರಕರಣದ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗುವ ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ, ವಿನಯ್ ಕೂಡ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿರುವ ಅವರು, ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಈ ಬೆಳವಣಿಗೆ ಪ್ರಕರಣದ ಮುಂದಿನ ವಿಚಾರಣೆಯ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.

Ad Widget

Ad Widget <> Ad Widget

ಇನ್ನೊಂದೆಡೆ, ಪ್ರಕರಣದ ಆರೋಪಿಗಳಾದ ಅನುಕುಮಾರ್ ಮತ್ತು ಜಗದೀಶ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆದಿದೆ. ಜಾಮೀನು ಅರ್ಜಿಗಳ ಕುರಿತ ಆದೇಶವನ್ನು ನ್ಯಾಯಾಲಯ ಅಕ್ಟೋಬರ್ 17ಕ್ಕೆ ಕಾಯ್ದಿರಿಸಿದೆ.



Ad Widget

ವಿನಯ್ ಮಾಫಿ ಸಾಕ್ಷಿಯಾಗುವ ಅರ್ಜಿಯನ್ನು ವಾಪಸ್ ಪಡೆದಿರುವುದು ಪ್ರಕರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಆದರೆ, ಈ ಬೆಳವಣಿಗೆಯಿಂದ ಪ್ರಕರಣದ ಇತರ ಆರೋಪಿಗಳ ಮೇಲೆ ಯಾವ ರೀತಿಯ ಪರಿಣಾಮ ಉಂಟಾಗಲಿದೆ ಎಂಬುದು ಮುಂದಿನ ಕಾನೂನು ಪ್ರಕ್ರಿಯೆಯಿಂದ ಸ್ಪಷ್ಟವಾಗಬೇಕಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading