Uncategorized
Dating-ನಟಿ ಶ್ರೀಲೀಲಾ ಮತ್ತು ಕ್ರಿಕೆಟಿಗ ತಿಲಕ್ ವರ್ಮಾ ಡೇಟಿಂಗ್? ಸೋಷಿಯಲ್ ಮೀಡಿಯಾ ಸುದ್ದಿಯ ಅಸಲಿ ಸತ್ಯವೇನು?
ಸ್ಯಾಂಡಲ್ವುಡ್ನಿಂದ ಟಾಲಿವುಡ್ವರೆಗೆ ಮಿಂಚುತ್ತಿರುವ ಬಹುಭಾಷಾ ನಟಿ ಶ್ರೀಲೀಲಾ ಅವರ ವೈಯಕ್ತಿಕ ಜೀವನದ ಬಗ್ಗೆ ಈಗ ಹೊಸದೊಂದು ಗಾಸಿಪ್ ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿ ಸದ್ದು ಮಾಡುತ್ತಿದೆ. ಯುವ ಕ್ರಿಕೆಟಿಗ ತಿಲಕ್ ವರ್ಮಾ ಹಾಗೂ ಶ್ರೀಲೀಲಾ ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ನೆಟ್ಟಿಗರ ನಡುವೆ ಭಾರಿ ಚರ್ಚೆಗೆ ಕಾರಣವಾಗಿದೆ.
ಬೆಂಗಳೂರು: ಸ್ಯಾಂಡಲ್ವುಡ್ನಿಂದ ಟಾಲಿವುಡ್ವರೆಗೆ ಮಿಂಚುತ್ತಿರುವ ಬಹುಭಾಷಾ ನಟಿ ಶ್ರೀಲೀಲಾ ಅವರ ವೈಯಕ್ತಿಕ ಜೀವನದ ಬಗ್ಗೆ ಈಗ ಹೊಸದೊಂದು ಗಾಸಿಪ್ ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿ ಸದ್ದು ಮಾಡುತ್ತಿದೆ. ಯುವ ಕ್ರಿಕೆಟಿಗ ತಿಲಕ್ ವರ್ಮಾ ಹಾಗೂ ಶ್ರೀಲೀಲಾ ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ನೆಟ್ಟಿಗರ ನಡುವೆ ಭಾರಿ ಚರ್ಚೆಗೆ ಕಾರಣವಾಗಿದೆ.
ಸುದ್ದಿ ಶುರುವಾಗಿದ್ದು ಎಲ್ಲಿ?
ಇತ್ತೀಚೆಗೆ ನಡೆದ ಐಪಿಎಲ್ ಪಂದ್ಯವೊಂದರ ವೇಳೆ ಶ್ರೀಲೀಲಾ ಅವರು ‘ತಿಲಕ್’ ಎಂಬ ಹೆಸರಿರುವ ಟೀ-ಶರ್ಟ್ ಧರಿಸಿದ್ದರು ಎನ್ನಲಾದ ವಿಚಾರ ಈ ವದಂತಿಗೆ ಮುಖ್ಯ ಕಾರಣ. ಇದರ ಬೆನ್ನಲ್ಲೇ, ಟೀಮ್ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ಅವರು ತಿಲಕ್ ವರ್ಮಾ ಅವರನ್ನು ಪ್ರೇಮದ ವಿಚಾರವಾಗಿ ಕಾಲೆಳೆದಿದ್ದ ವಿಡಿಯೋ ಕೂಡ ವೈರಲ್ ಆಗಿತ್ತು. ಇವೆರಡನ್ನೂ ತಳಕು ಹಾಕಿದ ಅಭಿಮಾನಿಗಳು, ಇವರಿಬ್ಬರ ನಡುವೆ ಪ್ರೇಮಾಂಕುರವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯನ್ನು ಹಬ್ಬಿಸಿದ್ದಾರೆ.
ಆಪ್ತ ಮೂಲಗಳು ಹೇಳುವುದೇನು?
ಈ ಸುದ್ದಿಯಿಂದ ಶ್ರೀಲೀಲಾ ಅಭಿಮಾನಿಗಳಿಗೆ ಬೇಸರವಾಗಿದ್ದರೂ, ನಟಿಯ ಆಪ್ತ ಮೂಲಗಳು ಈ ವದಂತಿಯನ್ನು ಸಂಪೂರ್ಣವಾಗಿ ತಳ್ಳಿಹಾಕಿವೆ. “ಶ್ರೀಲೀಲಾ ಮತ್ತು ತಿಲಕ್ ವರ್ಮಾ ಪರಸ್ಪರ ಭೇಟಿಯೇ ಆಗಿಲ್ಲ. ಇವೆಲ್ಲವೂ ಕೇವಲ ತಲೆಬುಡವಿಲ್ಲದ ಕಲ್ಪಿತ ಸುದ್ದಿಗಳು,” ಎಂದು ಸ್ಪಷ್ಟನೆ ನೀಡಿವೆ.
ವೃತ್ತಿ ಜೀವನದಲ್ಲಿ ಬ್ಯುಸಿ:
ಸದ್ಯ ಶ್ರೀಲೀಲಾ ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿದ್ದಾರೆ. ಈಗಾಗಲೇ ಮಹೇಶ್ ಬಾಬು, ಪವನ್ ಕಲ್ಯಾಣ್ ಮತ್ತು ಬಾಲಕೃಷ್ಣ ಅವರಂತಹ ಸ್ಟಾರ್ ನಟರ ಜೊತೆ ನಟಿಸಿರುವ ಅವರು, ಮುಂದಿನ ದಿನಗಳಲ್ಲಿ ಧನುಷ್ ಹಾಗೂ ಕಾರ್ತಿಕ್ ಆರ್ಯನ್ ಅವರಂತಹ ದಕ್ಷಿಣ ಮತ್ತು ಉತ್ತರ ಭಾರತದ ದೊಡ್ಡ ನಟರ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.
Uncategorized
Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.
ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.
ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.
ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.
ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.
ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
-
ಸ್ಥಳೀಯ22 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಶಿಕ್ಷಣ15 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು15 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್21 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಬಿಗ್ ನ್ಯೂಸ್17 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು16 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ15 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ23 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ















