ಬಿಗ್ ನ್ಯೂಸ್
Governor-ರಾಜ್ಯಪಾಲರಿಂದ ‘ಗೆದ್ದವರ ಸಿದ್ದಸೂತ್ರ’ ಕೃತಿ ಲೋಕಾರ್ಪಣೆ : ಯುವ ಪೀಳಿಗೆಗೆ ಸ್ಫೂರ್ತಿಯಾಗಲಿ ಪುತ್ತೂರಿನ ‘ಬಿಂದು’ ಸತ್ಯಶಂಕರ್ ಭಟ್, ರಿಷಬ್ ಶೆಟ್ಟಿ ಸೇರಿದಂತೆ 26 ಸಾಧಕರ ಸತ್ಯಕಥೆ – ರಾಜ್ಯಪಾಲ ಥಾವರಚಂದ್ ಗೆಹ್ಲೋಟ್
ಶೂನ್ಯದಿಂದ ಸಾಧನೆಯ ಶಿಖರಕ್ಕೇರಿದ 26 ಸಾಧಕರ ಜೀವನಗಾಥೆಯನ್ನು ಒಳಗೊಂಡಿರುವ, ಕನ್ನಡಪ್ರಭ ದಿನಪತ್ರಿಕೆಯ ಚೊಚ್ಚಲ ಪ್ರಕಟಣೆ ‘ಗೆದ್ದವರ ಸಿದ್ದಸೂತ್ರ-A Text Book of Success’ ಕೃತಿಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋಥ್ ಅವರು ಲೋಕಾರ್ಪಣೆ ಮಾಡಿದರು.
ಬೆಂಗಳೂರು: ಶೂನ್ಯದಿಂದ ಸಾಧನೆಯ ಶಿಖರಕ್ಕೇರಿದ 26 ಸಾಧಕರ ಜೀವನಗಾಥೆಯನ್ನು ಒಳಗೊಂಡಿರುವ, ಕನ್ನಡಪ್ರಭ ದಿನಪತ್ರಿಕೆಯ ಚೊಚ್ಚಲ ಪ್ರಕಟಣೆ ‘ಗೆದ್ದವರ ಸಿದ್ದಸೂತ್ರ-A Text Book of Success’ ಕೃತಿಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋಥ್ ಅವರು ಲೋಕಾರ್ಪಣೆ ಮಾಡಿದರು.
ಶುಕ್ರವಾರ ಲೋಕಭವನದ ಬ್ಯಾಂಕ್ವೆಂಟ್ ಹಾಲ್ನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, “ಈ ಕೃತಿಯು ಪ್ರಧಾನಿ ನರೇಂದ್ರ ಮೋದಿ ಅವರ ‘ನವಭಾರತ’ದ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತಿದೆ. ವಿವಿಧ ಕ್ಷೇತ್ರಗಳಲ್ಲಿ ಅಸಾಮಾನ್ಯ ಸಾಧನೆ ಮಾಡಿದವರ ಸತ್ಯಕಥೆಗಳನ್ನು ಸಂಗ್ರಹಿಸಿ ಪ್ರಕಟಿಸಿರುವ ಕನ್ನಡಪ್ರಭದ ಕಾರ್ಯ ಶ್ಲಾಘನೀಯ, ಈ ಕೃತಿ ಯುವ ಜನಾಂಗಕ್ಕೆ ಸ್ಫೂರ್ತಿ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜೀವಂತ ಉದಾಹರಣೆಗಳು:
“ಈ ಪುಸ್ತಕದಲ್ಲಿರುವ 26 ಸಾಧಕರು ಯಶಸ್ಸಿನ ಜೀವಂತ ಉದಾಹರಣೆಗಳಾಗಿದ್ದಾರೆ. ಇವರ ಹೋರಾಟದ ಹಾದಿ ‘ಆತ್ಮನಿರ್ಭರ ಭಾರತ’ಕ್ಕೆ ನೀಡಿದ ದೊಡ್ಡ ಕೊಡುಗೆಯಾಗಿದೆ. ಬಡತನ, ಸಾಮಾಜಿಕ ಅಡೆತಡೆ ಮತ್ತು ಕಷ್ಟಗಳ ನಡುವೆಯೂ ದೃಢ ಸಂಕಲ್ಪದಿಂದ ಕನಸನ್ನು ನನಸು ಮಾಡಿಕೊಂಡ ಇವರ ಕಥೆಗಳು ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಲಿವೆ,” ಎಂದು ರಾಜ್ಯಪಾಲರು ಆಶಯ ವ್ಯಕ್ತಪಡಿಸಿದರು.
ಸಾಧಕರ ಸ್ಫೂರ್ತಿ ಪಯಣ:
ಪುಸ್ತಕದಲ್ಲಿ ದಾಖಲಾಗಿರುವ ಕೆಲವು ಪ್ರಮುಖ ಸಾಧಕರನ್ನು ಉದಾಹರಿಸಿದ ರಾಜ್ಯಪಾಲರು, “ಕಾಂತಾರ ಚಿತ್ರದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ರಿಷಬ್ ಶೆಟ್ಟಿ, ಆಟೋ ಚಾಲಕನಿಂದ ಅಂತರಾಷ್ಟ್ರೀಯ ಗುಣಮಟ್ಟದ ಪಾನೀಯ ಬ್ರಾಂಡ್ ಸೃಷ್ಟಿಸಿದ ಸತ್ಯಶಂಕರ್ ಭಟ್, ಮತ್ತು ಸಮಾಜ ಸೇವೆಗೆ ಜೀವನ ಮುಡುಪಾಗಿಟ್ಟ ವಿಶ್ವನಾಥ್ ಶೆಣೈ ನಮಗೆಲ್ಲ ಮಾದರಿ. ಅಷ್ಟೇ ಅಲ್ಲದೆ, ಕೊಳಗೇರಿಯಿಂದ ಬೆಳೆದು ವಿಧಾನ ಪರಿಷತ್ ಸದಸ್ಯರಾದ ಕೆ.ಪಿ.ನಂಜುಂಡಿ ಹಾಗೂ ಅತಿ ಕಿರಿಯ ವಯಸ್ಸಿನಲ್ಲೇ ಉದ್ಯಮಿಯಾಗಿ ಬೆಳೆದ ದಿವ್ಯಾ ರಂಗೇನಹಳ್ಳಿ ಅವರ ಜೀವನವು, ಸಾಧನೆಗೆ ವಯಸ್ಸು ಅಥವಾ ಹಿನ್ನೆಲೆ ಅಡ್ಡಿಯಾಗುವುದಿಲ್ಲ ಎಂಬುದನ್ನು ನಿರೂಪಿಸಿದೆ,” ಎಂದರು.
ಅಚ್ಚುಕಟ್ಟಾದ ಸಮಾರಂಭ:
ಗೆದ್ದವರ ಸಿದ್ಧಸೂತ್ರ ಕೃತಿ ಕುರಿತಂತೆ ರಾಜ್ಯಪಾಲ ಥಾವರಚಂದ್ ಗೆಹಲೋಥ್ ಅವರಿಗೆ ವಿವರಿಸುತ್ತಿದ್ದಂತೆ ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ಕಾರ್ಯವನ್ನು ಶ್ಲಾಘಿಸಿದರು. ಜತೆಗೆ ಲೋಕಭವನದಲ್ಲಿಯೇ ಕೃತಿ ಲೋಕಾರ್ಪಣೆ ಕಾರ್ಯಕ್ರಮ ಏರ್ಪಡಿಸುವಂತೆ ಸೂಚಿಸಿದರು. ಅದರಂತೆ ಶುಕ್ರವಾರ ನಡೆದ ಕಾರ್ಯಕ್ರಮವು ಅಚ್ಚುಕಟ್ಟಾಗಿ ನಡೆಯಿತು. ನಿಗದಿಯಂತೆ ಬೆಳಗ್ಗೆ 11 ಗಂಟೆಗೆ ಬ್ಯಾಕ್ವೆಂಟ್ ಹಾಲ್ಗೆ ಆಗಮಿಸಿದ ರಾಜ್ಯಪಾಲರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು, ಸಾಧಕರಿಗೆ ಮತ್ತು ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ಗೆ ಬೆನ್ನು ತಟ್ಟಿದರಲ್ಲದೆ, ಈ ರೀತಿಯ ಕಾರ್ಯ ಮತ್ತಷ್ಟು ನೆರವೇರಲಿ ಎಂದು ಆಶಿಸಿದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಅಂತರ ರಾಜ್ಯ
Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.
ಸಿಬಿಐ ಇನ್ಸ್ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.
ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.
ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.
ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.
ಬಿಗ್ ನ್ಯೂಸ್
Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.
ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.
ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.
-
ಮಂಗಳೂರು18 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ23 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಅಂತರ ರಾಜ್ಯ18 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಸಿನೆಮಾ23 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ24 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
-
ಕಾರ್ಯಕ್ರಮಗಳು19 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ13 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಶಿಕ್ಷಣ17 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ















