ಸುಳ್ಯ
Sullia-ಮೇ 21ರಂದು ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ ಸುಳ್ಯ ಶಾಖೆಯಲ್ಲಿ ಉಚಿತ ಥೈರಾಯ್ಡ್, ಮಧುಮೇಹ ತಪಾಸಣೆ; ರಕ್ತಪರೀಕ್ಷೆಗಳ ಮೇಲೆ ಶೇ. 20ರಷ್ಟು ರಿಯಾಯಿತಿ..!
ಕರಾವಳಿ ಭಾಗದ ಪ್ರಸಿದ್ಧ ರೋಗನಿರ್ಣಯ ಕೇಂದ್ರವಾದ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ’ ವತಿಯಿಂದ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಸುಳ್ಯ ಶಾಖೆಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಮತ್ತು ವಿಶೇಷ ರಿಯಾಯಿತಿ ಸೌಲಭ್ಯಗಳನ್ನು ಘೋಷಿಸಲಾಗಿದೆ. ಮೇ 21, ಗುರುವಾರದಂದು ಸುಳ್ಯದ ಶುಭ ಕಾಂಪ್ಲೆಕ್ಸ್ನಲ್ಲಿರುವ ಧನ್ವಂತರಿ ಶಾಖೆಯಲ್ಲಿ ಉಚಿತವಾಗಿ ಥೈರಾಯ್ಡ್ (TSH), ರಕ್ತದೊತ್ತಡ (BP) ಹಾಗೂ ಮಧುಮೇಹ (Diabetes) ತಪಾಸಣಾ ಶಿಬಿರ ನಡೆಯಲಿದೆ.
ಸುಳ್ಯ/ಪುತ್ತೂರು: ಕರಾವಳಿ ಭಾಗದ ಪ್ರಸಿದ್ಧ ರೋಗನಿರ್ಣಯ ಕೇಂದ್ರವಾದ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ’ ವತಿಯಿಂದ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಸುಳ್ಯ ಶಾಖೆಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಮತ್ತು ವಿಶೇಷ ರಿಯಾಯಿತಿ ಸೌಲಭ್ಯಗಳನ್ನು ಘೋಷಿಸಲಾಗಿದೆ. ಮೇ 21, ಗುರುವಾರದಂದು ಸುಳ್ಯದ ಶುಭ ಕಾಂಪ್ಲೆಕ್ಸ್ನಲ್ಲಿರುವ ಧನ್ವಂತರಿ ಶಾಖೆಯಲ್ಲಿ ಉಚಿತವಾಗಿ ಥೈರಾಯ್ಡ್ (TSH), ರಕ್ತದೊತ್ತಡ (BP) ಹಾಗೂ ಮಧುಮೇಹ (Diabetes) ತಪಾಸಣಾ ಶಿಬಿರ ನಡೆಯಲಿದೆ. ಸಾರ್ವಜನಿಕರು ಈ ಸದವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ವಿಶೇಷ ರಿಯಾಯಿತಿಗಳು:
ಶಿಬಿರದ ಅಂಗವಾಗಿ ಎಲ್ಲಾ ರೀತಿಯ ರಕ್ತಪರೀಕ್ಷಾ ಪ್ಯಾಕೇಜ್ಗಳ ಮೇಲೆ ಶೇ. 10 ರಿಂದ ಶೇ. 20 ರವರೆಗೆ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ಅಲ್ಲದೆ, ಒಂದೇ ದಿನದಲ್ಲಿ ವರದಿ ನೀಡುವ (Same Day Report) ವ್ಯವಸ್ಥೆಯೂ ಇಲ್ಲಿದೆ.
ಕ್ಯಾನ್ಸರ್ ಮತ್ತು ಸುಧಾರಿತ ತಪಾಸಣೆಗಳು:
ಮೆಟ್ರೋ ನಗರಗಳಲ್ಲಿ ಮಾತ್ರ ಲಭ್ಯವಿದ್ದ ಅತ್ಯಾಧುನಿಕ ಕ್ಯಾನ್ಸರ್ ಸ್ಕ್ರೀನಿಂಗ್ ಪ್ಯಾಕೇಜ್ಗಳು (CA-15.3, HPV, PSA, CEA ಸೇರಿದಂತೆ ವಿವಿಧ ಪರೀಕ್ಷೆಗಳು) ಈಗ ಪುತ್ತೂರಿನ ಧನ್ವಂತರಿ ಲ್ಯಾಬ್ನಲ್ಲಿ ಲಭ್ಯವಿವೆ. ಇದರೊಂದಿಗೆ ಲಿಪಿಡ್ ಪ್ರೊಫೈಲ್, ಐರನ್ ಪ್ರೊಫೈಲ್ ಮತ್ತು ಮೆಟಲ್ಸ್ ಪ್ಯಾನಲ್ ಪರೀಕ್ಷೆಗಳ ಸೌಲಭ್ಯವೂ ಇದೆ.
ದಕ್ಷಿಣ ಕರ್ನಾಟಕದ ಮೊದಲ ಅಲರ್ಜಿ ಲ್ಯಾಬ್:
ಅಲರ್ಜಿ ಸಮಸ್ಯೆಯಿಂದ ಬಳಲುತ್ತಿರುವವರಿಗಾಗಿ ಧನ್ವಂತರಿ ಸಂಸ್ಥೆಯು ದಕ್ಷಿಣ ಕರ್ನಾಟಕದ ಮೊಟ್ಟಮೊದಲ ‘ಅಲರ್ಜಿ ಲ್ಯಾಬ್’ ಅನ್ನು ಪುತ್ತೂರಿನಲ್ಲಿ ಆರಂಭಿಸಿದೆ. ಇಲ್ಲಿ ALEX2 ಮತ್ತು FOX ತಂತ್ರಜ್ಞಾನದ ಮೂಲಕ 300ಕ್ಕೂ ಹೆಚ್ಚು ಆಹಾರ ಮತ್ತು ಇತರ ಅಲರ್ಜಿ ಅಂಶಗಳನ್ನು ನಿಖರವಾಗಿ ಪತ್ತೆಹಚ್ಚಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಸುಳ್ಯ ಶಾಖೆ: 9686705373
ಅಲರ್ಜಿ ಲ್ಯಾಬ್ (ಪುತ್ತೂರು): 8971877075
ಮುಖ್ಯ ಕಚೇರಿ: ಧನ್ವಂತರಿ ಕಾಂಪ್ಲೆಕ್ಸ್, ದರ್ಬೆ, ಪುತ್ತೂರು.
ಸಮಯ: ವಾರದ ದಿನಗಳಲ್ಲಿ ಬೆಳಗ್ಗೆ 7:00 ರಿಂದ ಸಂಜೆ 7:30 ರವರೆಗೆ. ಭಾನುವಾರ ಬೆಳಗ್ಗೆ 7:00 ರಿಂದ ಮಧ್ಯಾಹ್ನ 1:00 ರವರೆಗೆ ಸೌಲಭ್ಯ ಲಭ್ಯವಿರುತ್ತದೆ ಎಂದು ವ್ಯವಸ್ಥಾಪಕ ನಿರ್ದೇಶಕರಾದ ಚೇತನ್ ಪ್ರಕಾಶ್ ಕಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
ಸುಳ್ಯ
Areca nut-ಅಡಿಕೆ ರೇಟ್ ಜಂಪ್ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ
ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.
ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.
ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.
ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.
ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.
-
ರಾಜಕೀಯ20 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ20 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ20 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಅಂತರ ರಾಜ್ಯ24 hours agoBird flu alert-ಕೇರಳದಲ್ಲಿ ಹಕ್ಕಿಜ್ವರ ಆತಂಕ: 26 ಸಾವಿರ ಕೋಳಿ, ಬಾತುಕೋಳಿ ಸೇರಿ ಪಕ್ಷಿಗಳ ಹತ್ಯೆಗೆ ನಿರ್ಧಾರ..!
-
ಬಿಗ್ ನ್ಯೂಸ್3 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕ್ರೀಡೆ24 hours agoIPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
-
ಕಾರ್ಯಕ್ರಮಗಳು20 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ20 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ















