ಉಡುಪಿ
Udupi-ಉಡುಪಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‘ಸೌಹಾರ್ದತೆ’ ಪಾಠಕ್ಕೆ ಶಾಸಕ ಯಶಪಾಲ್ ಸುವರ್ಣ ತಿರುಗೇಟು; ಬುರ್ಖಾಧಾರಿ ಮಹಿಳೆಯರ ಅಸಲಿಯತ್ತು ಬಿಚ್ಚಿಟ್ಟ ಬಿಜೆಪಿ..!
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಾರ್ವಜನಿಕ ಅಹವಾಲು ಸ್ವೀಕರಿಸುವ ವೇಳೆ ನಡೆದ ಘಟನೆಯೊಂದು ಈಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಮುಸ್ಲಿಂ ಮಹಿಳೆಯರು ಹಿಂದೂ ಮಹಿಳೆಯ ಪರವಾಗಿ ಅಹವಾಲು ಸಲ್ಲಿಸಿದ್ದನ್ನು ‘ಸೌಹಾರ್ದತೆ’ ಎಂದು ಬಣ್ಣಿಸಿದ್ದ ಸಚಿವರಿಗೆ, ಬಿಜೆಪಿ ಶಾಸಕ ಯಶಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ.
ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಾರ್ವಜನಿಕ ಅಹವಾಲು ಸ್ವೀಕರಿಸುವ ವೇಳೆ ನಡೆದ ಘಟನೆಯೊಂದು ಈಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಮುಸ್ಲಿಂ ಮಹಿಳೆಯರು ಹಿಂದೂ ಮಹಿಳೆಯ ಪರವಾಗಿ ಅಹವಾಲು ಸಲ್ಲಿಸಿದ್ದನ್ನು ‘ಸೌಹಾರ್ದತೆ’ ಎಂದು ಬಣ್ಣಿಸಿದ್ದ ಸಚಿವರಿಗೆ, ಬಿಜೆಪಿ ಶಾಸಕ ಯಶಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ.
ಘಟನೆಯ ಹಿನ್ನೆಲೆ:
ಉಡುಪಿಯಲ್ಲಿ ಇತ್ತೀಚೆಗೆ ನಡೆದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಇಬ್ಬರು ಬುರ್ಖಾಧಾರಿ ಮಹಿಳೆಯರು ವೃದ್ಧ ಹಿಂದೂ ಮಹಿಳೆಯೊಬ್ಬರ ಪರವಾಗಿ ಮನವಿ ಸಲ್ಲಿಸಿದ್ದರು. ಉಡುಪಿಯ 80 ಬಡಗುಬೆಟ್ಟು ಗ್ರಾಮದ ಆ ವೃದ್ಧೆಗೆ 5 ಸೆಂಟ್ಸ್ ಜಾಗದ ದಾಖಲೆ ಸಮಸ್ಯೆಯಿದ್ದು, ಮನೆ ಕಟ್ಟಲು ಸಾಧ್ಯವಾಗುತ್ತಿಲ್ಲ ಎಂದು ಕಣ್ಣೀರಿಟ್ಟು ವಿವರಿಸಿದ್ದರು. “ನಾವು ಈ ವೃದ್ಧೆಯ ಪಕ್ಕದ ಮನೆಯವರು” ಎಂದು ಅವರು ಸಚಿವರಿಗೆ ಪರಿಚಯಿಸಿಕೊಂಡಿದ್ದರು.
ಇದರಿಂದ ಪ್ರಭಾವಿತರಾಗಿದ್ದ ಲಕ್ಷ್ಮೀ ಹೆಬ್ಬಾಳ್ಕರ್, “ಇದು ಭಾರತದ ನಿಜವಾದ ಸೌಹಾರ್ದತೆ. ಉಡುಪಿ ಬಿಜೆಪಿಯವರು ಇವರಿಂದ ಸೌಹಾರ್ದತೆಯನ್ನು ನೋಡಿ ಕಲಿಯಲಿ” ಎಂದು ಹೇಳಿಕೆ ನೀಡಿದ್ದರು.
ಬಿಜೆಪಿ ನೀಡಿದ ಬಿಗ್ ಟ್ವಿಸ್ಟ್:
ಈ ಕುರಿತು ಸುದ್ಧಿಗೋಷ್ಠಿ ನಡೆಸಿದ ಉಡುಪಿ ಶಾಸಕ ಯಶಪಾಲ್ ಸುವರ್ಣ, ಸಚಿವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. “ಬುರ್ಖಾ ಧರಿಸಿ ಬಂದಿದ್ದ ಮಹಿಳೆಯರು ಆ ವೃದ್ಧೆಯ ಪಕ್ಕದ ಮನೆಯವರಲ್ಲ, ಬದಲಾಗಿ ಅವರು ಆಕೆಯ ಸ್ವಂತ ಮಗಳೇ ಆಗಿದ್ದಾರೆ. ಸುಮಾರು ಎರಡು ದಶಕಗಳ ಹಿಂದೆ ಮತಾಂತರಗೊಂಡಿದ್ದ ಮಗಳು ಈಗ ಬುರ್ಖಾ ಧರಿಸಿ ಬಂದು ತನ್ನ ತಾಯಿಯನ್ನೇ ಪಕ್ಕದ ಮನೆಯವರೆಂದು ಸುಳ್ಳು ಹೇಳಿ ಸಚಿವರ ದಾರಿ ತಪ್ಪಿಸಿದ್ದಾರೆ” ಎಂದು ಹೊಸ ಅಂಶವನ್ನು ಬಹಿರಂಗಪಡಿಸಿದ್ದಾರೆ.
ಸಚಿವರ ವಿರುದ್ಧ ಆಕ್ರೋಶ:
“ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ಸತ್ಯಾಸತ್ಯತೆ ಅರಿಯದೆ ಬಿಜೆಪಿಗೆ ಪಾಠ ಮಾಡಲು ಬಂದಿರುವುದು ಹಾಸ್ಯಾಸ್ಪದ. ತನ್ನ ಸ್ವಂತ ತಾಯಿಯನ್ನೇ ಅಮ್ಮ ಎಂದು ಪರಿಚಯಿಸಿಕೊಳ್ಳದೆ ಸಚಿವರನ್ನು ಯಾಮಾರಿಸಿರುವುದು ಅಪರಾಧವಲ್ಲವೇ? ಇಂತಹವರಿಂದ ನಾವು ಪಾಠ ಕಲಿಯಬೇಕಿಲ್ಲ. ಸಚಿವರು ಮೊದಲು ಸತ್ಯ ಏನೆಂದು ತಿಳಿದುಕೊಳ್ಳಲಿ” ಎಂದು ಯಶಪಾಲ್ ಸುವರ್ಣ ಕಿಡಿಕಾರಿದ್ದಾರೆ.
ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜಿಲ್ಲೆಯಲ್ಲಿ ಪರ-ವಿರೋಧದ ಚರ್ಚೆಗಳು ಶುರುವಾಗಿವೆ.
ಅಪರಾಧ
Udupi-ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿ ಸಹಚರನ ಬಂಧನ
ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯ ಸಹಚರನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೂಲತಃ ಕಾರ್ಕಳದವನಾಗಿದ್ದು, ಪ್ರಸ್ತುತ ಸುರತ್ಕಲ್ನಲ್ಲಿ ವಾಸಿಸುತ್ತಿರುವ ಅಬ್ದುಲ್ ರಾಹೀಸ್ (29) ಎಂದು ಗುರುತಿಸಲಾಗಿದೆ.
ಉಡುಪಿ, ಅ.15: ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯ ಸಹಚರನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮೂಲತಃ ಕಾರ್ಕಳದವನಾಗಿದ್ದು, ಪ್ರಸ್ತುತ ಸುರತ್ಕಲ್ನಲ್ಲಿ ವಾಸಿಸುತ್ತಿರುವ ಅಬ್ದುಲ್ ರಾಹೀಸ್ (29) ಎಂದು ಗುರುತಿಸಲಾಗಿದೆ.
ಈಗಾಗಲೇ ಮಂಗಳೂರು ಪೊಲೀಸರಿಂದ ಬಂಧಿತನಾಗಿರುವ ಬಾಂಬೆ ಫೈಸಲ್ನ ಸೂಚನೆಯಂತೆ ಅಬ್ದುಲ್ ರಾಹೀಸ್ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ. ಭೂಗತ ಪಾತಕಿ ಹೇಮಂತ್ ಪೂಜಾರಿಯ ಹಣಕಾಸಿನ ವ್ಯವಹಾರಗಳನ್ನು ಈತ ನಿರ್ವಹಿಸುತ್ತಿದ್ದ ಎಂದು ಪೊಲೀಸರು ಶಂಕಿಸಿದ್ದಾರೆ. ಉದ್ಯಮಿಗಳಿಗೆ ಜೀವ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಪ್ರಕರಣಗಳಲ್ಲಿ ಸಂಗ್ರಹವಾಗುವ ಹಣವನ್ನು ಈತ ವಸೂಲಿ ಮಾಡುತ್ತಿದ್ದ ಎನ್ನಲಾಗಿದೆ.
ಬಂಧಿತನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಹೇಮಂತ್ ಪೂಜಾರಿ ಹೆಸರಿನಲ್ಲಿ ಮತ್ತೊಬ್ಬ ಉದ್ಯಮಿಗೆ ಬೆದರಿಕೆ
ಇನ್ನೊಂದೆಡೆ, ಭೂಗತ ಪಾತಕಿ ಹೇಮಂತ್ ಪೂಜಾರಿಯ ಹೆಸರಿನಲ್ಲಿ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಮತ್ತೊಬ್ಬ ಉದ್ಯಮಿಗೆ ಬೆದರಿಕೆ ಕರೆ ಬಂದಿರುವುದಾಗಿ ವರದಿಯಾಗಿದೆ. ಕರೆ ಮಾಡಿದವರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಅಪರಾಧ
Udupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
ಮುದರಂಗಡಿಯ ಗುತ್ತಿಗೆದಾರ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯನ್ನು ಬಂಧಿಸಲು ಉಡುಪಿ ಜಿಲ್ಲಾ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿರುವ ಪೊಲೀಸರು, ಬೆದರಿಕೆ ಕರೆಗಳ ಹಿಂದೆ ಹೇಮಂತ್ ಪೂಜಾರಿಯ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಉಡುಪಿ, ಅ.11: ಮುದರಂಗಡಿಯ ಗುತ್ತಿಗೆದಾರ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯನ್ನು ಬಂಧಿಸಲು ಉಡುಪಿ ಜಿಲ್ಲಾ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿರುವ ಪೊಲೀಸರು, ಬೆದರಿಕೆ ಕರೆಗಳ ಹಿಂದೆ ಹೇಮಂತ್ ಪೂಜಾರಿಯ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಕರೆ ಮಾಡಿ ಹಣಕ್ಕಾಗಿ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಎರಡು, ಕಾಪು, ಶಿರ್ವ ಹಾಗೂ ಮಣಿಪಾಲ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದ್ದು, ಇನ್ನೂ ಎರಡು-ಮೂರು ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ದೂರುಗಳು ಲಭಿಸಿವೆ ಎಂದು ತಿಳಿದುಬಂದಿದೆ.
ಈ ಪ್ರಕರಣಗಳ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಸಂಬಂಧಪಟ್ಟ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ತನಿಖೆಯ ಪ್ರಗತಿ ಕುರಿತು ಉನ್ನತ ಪೊಲೀಸ್ ಅಧಿಕಾರಿಗಳಿಗೆ ವರದಿಗಳನ್ನು ಸಲ್ಲಿಸಲಾಗುತ್ತಿದೆ.
ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ತನಿಖೆಯ ಭಾಗವಾಗಿ ಈ ಹಿಂದೆ ಉಡುಪಿ ಜಿಲ್ಲಾ ಪೊಲೀಸರು ಹೇಮಂತ್ ಪೂಜಾರಿಗಾಗಿ ಬಾಂಗ್ಲಾದೇಶದ ಗಡಿಯವರೆಗೂ ಶೋಧ ನಡೆಸಿದ್ದರು. ಆದರೆ, ಆ ಕಾರ್ಯಾಚರಣೆಯಲ್ಲಿ ಆತನ ಪತ್ತೆಯಾಗಿರಲಿಲ್ಲ. ಇದೀಗ ಬೆದರಿಕೆ ಕರೆಗಳ ಪ್ರಕರಣಗಳಲ್ಲಿನ ಸಾಕ್ಷ್ಯಗಳನ್ನು ಆಧರಿಸಿ ತನಿಖೆ ಮುಂದುವರಿಸಲಾಗಿದೆ.
ಕಾಪು ಪೊಲೀಸರ ವಶಕ್ಕೆ ಅನುಜ್ ಪಾಟೀಲ್
ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಶಾರ್ಪ್ ಶೂಟರ್ಗಳನ್ನು ಕಳುಹಿಸಿದ್ದ ಆರೋಪ ಎದುರಿಸುತ್ತಿರುವ ಮುಂಬೈ ಮೂಲದ ಗ್ಯಾಂಗ್ಸ್ಟರ್, ಬಿಹಾರದ ನಳಂದ ಜಿಲ್ಲೆಯ ಅನುಜ್ ಪಾಟೀಲ್ (35)ನನ್ನು ಕಾಪು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
ಈ ಹಿಂದೆ ಬೈಂದೂರು ಹಾಗೂ ಹೆಬ್ರಿ ಪೊಲೀಸರು ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು. ಇದೀಗ ಕಾಪು ಪೊಲೀಸರು ವಶಕ್ಕೆ ಪಡೆದು, ಹೇಮಂತ್ ಪೂಜಾರಿಯೊಂದಿಗಿನ ಆತನ ಸಂಪರ್ಕ ಹಾಗೂ ಅಪರಾಧ ಚಟುವಟಿಕೆಗಳ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.
ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಬಂದಿರುವ ಬೆದರಿಕೆ ಕರೆಗಳ ಆಡಿಯೋಗಳನ್ನು ಪರಿಶೀಲಿಸಲಾಗುತ್ತಿದೆ. ಈ ಕರೆಗಳನ್ನು ಹೇಮಂತ್ ಪೂಜಾರಿಯೇ ಮಾಡುತ್ತಿದ್ದಾನೆಯೇ ಅಥವಾ ಆತನ ಹೆಸರಿನಲ್ಲಿ ಬೇರೆ ಯಾರಾದರೂ ಬೆದರಿಕೆ ಹಾಕುತ್ತಿದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.
ಪೊಲೀಸ್ ಆಯುಧ ಕಸಿದು ಗುಂಡು ಹಾರಿಸಲು ಯತ್ನಿಸಿದ್ದ ಆರೋಪ
2017ರಿಂದ ತಲೆಮರೆಸಿಕೊಂಡಿದ್ದ ಅನುಜ್ ಪಾಟೀಲ್ ಮುಂಬೈ ಕೇಂದ್ರವಾಗಿಸಿಕೊಂಡು ಕಾರ್ಯಾಚರಿಸುತ್ತಿದ್ದ ಎನ್ನಲಾಗಿದೆ. ಆತನ ವಿರುದ್ಧ ಮಹಾರಾಷ್ಟ್ರದಲ್ಲಿ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಒಟ್ಟು 11 ಕ್ರಿಮಿನಲ್ ಪ್ರಕರಣಗಳು ಆತನ ವಿರುದ್ಧ ದಾಖಲಾಗಿದ್ದು, ಅವುಗಳಲ್ಲಿ 10 ಪ್ರಕರಣಗಳು ಶಸ್ತ್ರಾಸ್ತ್ರ ಕಾಯ್ದೆಗೆ ಸಂಬಂಧಿಸಿದ್ದಾಗಿವೆ ಎಂದು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ನಾಲ್ಕು, ಗುಜರಾತ್ನಲ್ಲಿ ಐದು, ದಮನ್ ಮತ್ತು ದಿಯುನಲ್ಲಿ ಒಂದು ಹಾಗೂ ಕರ್ನಾಟಕದಲ್ಲಿ ಒಂದು ಪ್ರಕರಣ ದಾಖಲಾಗಿತ್ತು.
ಉಡುಪಿ ಜಿಲ್ಲಾ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿ ಕರೆತರುತ್ತಿದ್ದಾಗ, ಹೆಬ್ರಿ ತಾಲೂಕಿನ ಸೋಮೇಶ್ವರದಲ್ಲಿ ಮೂತ್ರ ವಿಸರ್ಜನೆಗೆಂದು ಪೊಲೀಸ್ ವಾಹನದಿಂದ ಕೆಳಗಿಳಿದಿದ್ದ ಅನುಜ್ ಪಾಟೀಲ್, ಕೊಲ್ಲೂರು ಪೊಲೀಸ್ ಠಾಣೆಯ ಪಿಎಸ್ಐ ವಿನಯ್ ಅವರ ಸೇವಾ ಆಯುಧವನ್ನು ಕಸಿದು ಗುಂಡು ಹಾರಿಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಈ ವೇಳೆ ಆತ್ಮರಕ್ಷಣೆಗಾಗಿ ಪಿಎಸ್ಐ ನಂಜ ನಾಯಕ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದರು. ಗಾಯಗೊಂಡ ಆತನನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಚಿಕಿತ್ಸೆಯ ಬಳಿಕ ತನಿಖೆ ಮುಂದುವರಿಸಿರುವ ಪೊಲೀಸರು, ಬೈಂದೂರು ಮತ್ತು ಹೆಬ್ರಿ ಠಾಣೆಗಳ ನಂತರ ಇದೀಗ ಕಾಪು ಪೊಲೀಸರ ವಶದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಅನುಜ್ ಪಾಟೀಲ್ನ ಅಪರಾಧ ಚಟುವಟಿಕೆಗಳು, ಹೇಮಂತ್ ಪೂಜಾರಿಯೊಂದಿಗಿನ ಸಂಪರ್ಕ ಹಾಗೂ ಬೆದರಿಕೆ ಕರೆಗಳ ಹಿಂದಿನ ಜಾಲದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ಅಪರಾಧ
Udupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉಡುಪಿ, ಅ.8: ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೊಲೆಯಾದ ಉದ್ಯಮಿ ಡೇವಿಡ್ ಡಿಸೋಜಾ ಅವರ ಪುತ್ರನಿಗೆ ವಾಟ್ಸಾಪ್ ಕರೆ ಮಾಡಿರುವ ಅಪರಿಚಿತ ವ್ಯಕ್ತಿಯೊಬ್ಬ, ₹5 ಕೋಟಿ ನೀಡುವಂತೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
“ನಿನ್ನ ತಂದೆಯಿಂದ ನನ್ನ ಸಹೋದರನಿಗೆ ಸಾಕಷ್ಟು ನಷ್ಟವಾಗಿತ್ತು. ಆ ಕಾರಣಕ್ಕೆ ನಾನೇ ಕೊಲೆ ಮಾಡಿಸಿದ್ದೆ. ನಮಗಾಗಿರುವ ನಷ್ಟವನ್ನು ತುಂಬಿಕೊಡಲು ₹5 ಕೋಟಿ ನೀಡಬೇಕು” ಎಂದು ಕರೆ ಮಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಬ್ಬ ಉದ್ಯಮಿ ಹಾಗೂ ಖಾಸಗಿ ಸಂಸ್ಥೆಯ ವ್ಯಕ್ತಿಗೂ ಹೇಮಂತ್ ಪೂಜಾರಿ ಹೆಸರಿನಲ್ಲಿ ವಾಟ್ಸಾಪ್ ಕರೆಗಳು ಬಂದಿದ್ದು, ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿವೆ.
25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಆರೋಪಿ
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಹೇಮಂತ್ ಪೂಜಾರಿ ಪ್ರಮುಖ ಆರೋಪಿಯಾಗಿದ್ದಾನೆ. ಆತನ ಸಹೋದರ ಹಾಗೂ ಇತರ ಸಹಚರರ ನೆರವಿನಿಂದ ಹೊರರಾಜ್ಯದ ಶೂಟರ್ಗಳನ್ನು ಕರೆಸಿ ಕೊಲೆ ಮಾಡಿಸಲಾಗಿದೆ ಎಂಬ ಆರೋಪ ಪ್ರಕರಣದಲ್ಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಪೂಜಾರಿಯನ್ನು ಹೊರತುಪಡಿಸಿ ಉಳಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಕಳೆದ 25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಹೇಮಂತ್ ಪೂಜಾರಿ ಬಗ್ಗೆ ಇದುವರೆಗೂ ಸ್ಪಷ್ಟ ಸುಳಿವು ಲಭ್ಯವಾಗಿಲ್ಲ. ಈ ನಡುವೆ ಆತನ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬಂದಿರುವುದು ಪೊಲೀಸರ ಗಮನ ಸೆಳೆದಿದೆ.
ಕರೆ ಮಾಡುತ್ತಿರುವವರು ಯಾರು?
ಹೇಮಂತ್ ಪೂಜಾರಿಯೇ ಕರೆ ಮಾಡುತ್ತಿದ್ದಾನೆಯೇ ಅಥವಾ ಆತನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಬೇರೆಯವರು ಬೆದರಿಕೆ ಹಾಕುತ್ತಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕರೆಗಳ ಮೂಲ, ಹಣದ ಬೇಡಿಕೆಯ ಹಿಂದಿನ ಉದ್ದೇಶ ಹಾಗೂ ಪ್ರಕರಣಗಳ ನಡುವಿನ ಸಂಬಂಧದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
ಬಿಗ್ ನ್ಯೂಸ್12 hours agoPuttur-ಪುತ್ತೂರು: ಓವರ್ ಟೆಕ್ ಬರದಲ್ಲಿ ಲಾರಿ-ಕಾರು ಅಪಘಾತ; ಪಲ್ಟಿಯಾದ ಲಾರಿ
-
ನಿಧನ ವಾರ್ತೆ15 hours agoಪುತ್ತೂರು: ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕ ಶಿವಪ್ರಸಾದ್ ಜಿ.ಎಸ್. ನಿಧನ
-
ಸ್ಥಳೀಯ9 hours agoKadaba-ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಕಡಬ ನಿವಾಸಿ ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹50 ಸಾವಿರ ದಂಡ..!
-
ಅಂತರ ರಾಜ್ಯ15 hours agoBJP minister-ಪತಿ ಎರಡು ಮದುವೆಯಾಗಿದ್ದರೆಂದು ದೂರು ದಾಖಲಿಸಿದ ಬಿಜೆಪಿ ಸಚಿವೆ..!
-
ಅಂತರ ರಾಜ್ಯ13 hours agoRamleela-ನವದೆಹಲಿ: ರಾಮಲೀಲಾದಲ್ಲಿ ಈ ಬಾರಿ ಅಸುರರ ಜತೆಗೆ ʻಜಿರಳೆʼಯೂ ದಹನ..!
-
ಕಾರ್ಯಕ್ರಮಗಳು13 hours agoMangalore-ಮಂಗಳೂರಿಗೆ ಲಗ್ಗೆ ಇಟ್ಟ ಅಲರ್ಜಿ ಪರೀಕ್ಷೆಯ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ರಾಜ್ಯದ ಪ್ರತಿಷ್ಠಿತ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’ : ಅ.19ರಂದು 11ನೇ ಶಾಖೆ ಉದ್ಘಾಟನೆ
-
ಅಪರಾಧ14 hours agoUdupi-ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿ ಸಹಚರನ ಬಂಧನ
-
ಅಂತರ ರಾಜ್ಯ14 hours agoTruecaller service-ಟೆಲಿಕಾಂ ಸಂಸ್ಥೆಗಳೇ ಒದಗಿಸಲಿವೆ ಟ್ರೂ ಕಾಲರ್ ಸೇವೆ; ಅಪರಿಚಿತ ನಂಬರ್ನಿಂದ ಕರೆ ಬಂದರೂ ಹೆಸರು ಪ್ರದರ್ಶನ ಕಡ್ಡಾಯ?


















