Connect with us

ನಿಧನ ವಾರ್ತೆ

Mittur-ಮಿತ್ತೂರು ರಸ್ತೆ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಸಲೀಂ ಸಾವು

Published

on



Ad Widget

Ad Widget

Ad Widget

Ad Widget

ಪುತ್ತೂರು-ಮಾಣಿ ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ರವಿವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಸಲೀಂ (52) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು-ಮಾಣಿ ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ರವಿವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಸಲೀಂ (52) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಘಟನೆಯ ವಿವರ:
ಮೂಲತಃ ಮುಕೈ ಮಣಿಯ ನಿವಾಸಿಯಾಗಿದ್ದು, ಪ್ರಸ್ತುತ ಕಬಕದಲ್ಲಿ ವಾಸವಾಗಿದ್ದ ಸಲೀಂ ಅವರು ಸೋಫಾ ಹಾಗೂ ವಾಹನಗಳ ಕುಶನ್ ಕೆಲಸ ಮಾಡುತ್ತಿದ್ದರು. ಮಿತ್ತೂರಿನ ದಾರುಲ್ ಇಸ್ಲಾಂ ಶಿಕ್ಷಣ ಸಂಸ್ಥೆಯಲ್ಲಿ ವಾಹನದ ಕುಶನ್ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಕಬಕ ಕಡೆಯಿಂದ ಮಿತ್ತೂರು ಕಡೆಗೆ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಬಂದ ಮಹಿಂದ್ರಾ ಪಿಕಪ್ ವಾಹನವು ಸಲೀಂ ಅವರ ಆಕ್ಟಿವಾ ಸ್ಕೂಟರ್‌ಗೆ ಪ್ರಬಲವಾಗಿ ಡಿಕ್ಕಿ ಹೊಡೆದಿದೆ.

Ad Widget

Ad Widget <> Ad Widget

ಅತಿವೇಗಕ್ಕೆ ಬಲಿಯಾದ ಜೀವ:
ಡಿಕ್ಕಿಯ ತೀವ್ರತೆಗೆ ಸಲೀಂ ಅವರು ರಸ್ತೆಗೆ ಎಸೆಯಲ್ಪಟ್ಟಿದ್ದು, ಹೆಲ್ಮೆಟ್ ಧರಿಸಿದ್ದರೂ ತಲೆ, ಕೈ ಮತ್ತು ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಕೂಡಲೇ ಅವರನ್ನು ಪುತ್ತೂರು ಹಾಗೂ ನಂತರ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಬದುಕುಳಿಯಲಿಲ್ಲ. ಅಪಘಾತದ ಬಳಿಕ ನಿಯಂತ್ರಣ ತಪ್ಪಿದ ಪಿಕಪ್ ವಾಹನವು ರಸ್ತೆ ಬದಿಯ ಗುಡ್ಡಕ್ಕೆ ನುಗ್ಗಿ ಪಲ್ಟಿಯಾಗಿದೆ.



Ad Widget

ಸಾರ್ವಜನಿಕರಲ್ಲಿ ಮೂಡಿದ ಅನುಮಾನ:
ಅಪಘಾತ ಸಂಭವಿಸಿದ ಬಳಿಕ ಪಿಕಪ್ ವಾಹನದ ನಂಬರ್ ಪ್ಲೇಟ್‌ಗೆ ಯಾರೋ ಕಪ್ಪು ಬಣ್ಣ ಬಳಿದಿರುವುದು ಕಂಡುಬಂದಿದೆ. ಇದು ಸಾರ್ವಜನಿಕರಲ್ಲಿ ತೀವ್ರ ಅನುಮಾನಕ್ಕೆ ಕಾರಣವಾಗಿದ್ದು, ಪೊಲೀಸರು ಈ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದಾರೆ. ಚಾಲಕನ ಬೇಜವಾಬ್ದಾರಿತನವೇ ಈ ಸಾವಿಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ad Widget

Ad Widget

ಮೃತ ಸಲೀಂ ಅವರು ಪತ್ನಿ, ಒಬ್ಬ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪುತ್ತೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Ad Widget

ನಿಧನ ವಾರ್ತೆ

Accident-ಮೂಡುಬಿದಿರೆ: ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು

Published

on



Ad Widget

Ad Widget

Ad Widget

Ad Widget

ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ. ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ಅ.8: ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ (17) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಪ್ರಶ್ವಿತ್ ಹೆಗ್ಡೆ ಹಾಗೂ ದೀಕ್ಷಿತ್ ಹೆಗ್ಡೆ ಒಂದೇ ಸ್ಕೂಟರ್‌ನಲ್ಲಿ ಶಿರ್ತಾಡಿ ಕಡೆಯಿಂದ ಕೋಟೆಬಾಗಿಲು ಕಡೆಗೆ ತೆರಳುತ್ತಿದ್ದರು. ಕೋಟೆಬಾಗಿಲಿನ ವೀರ ಮಾರುತಿ ದೇವಸ್ಥಾನದ ಬಳಿಯ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ ಎನ್ನಲಾಗಿದೆ.



Ad Widget

ಅಪಘಾತದ ಪರಿಣಾಮ ಪ್ರಶ್ವಿತ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಜೊತೆಯಲ್ಲಿದ್ದ ದೀಕ್ಷಿತ್ ಅವರ ತಲೆಗೂ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಇಬ್ಬರನ್ನೂ ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

Ad Widget

ಆದರೆ ಪ್ರಶ್ವಿತ್ ಅವರ ತಲೆಗೆ ಗಂಭೀರ ಆಂತರಿಕ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ತಂದೆಯ ಹೋಟೆಲ್‌ನಲ್ಲಿ ತಿಂಡಿ ಸೇವಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Beltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು

Published

on



Ad Widget

Ad Widget

Ad Widget

Ad Widget

ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅ.4ರಂದು ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ, ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ದೋಟಿ ತಾಗಿದೆ ಎನ್ನಲಾಗಿದೆ. ಪರಿಣಾಮ ನಝರ್ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು.



Ad Widget

ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Continue Reading

ನಿಧನ ವಾರ್ತೆ

Nana Patekar-ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ

Published

on



Ad Widget

Ad Widget

Ad Widget

Ad Widget

ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ದಿಗ್ಗಜ ಕಲಾವಿದ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.

Ad Widget

Ad Widget

Ad Widget

Ad Widget

ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ದಿಗ್ಗಜ ಕಲಾವಿದ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಗೋವಾದ ಡೊನಾ ಪೌಲಾದಲ್ಲಿರುವ ನಿವಾಸದಲ್ಲಿ ನಾನಾ ಪಾಟೇಕರ್ ಅವರು ಬೆಳಗಿನ ಜಾವ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಸುಮಾರು 45 ನಿಮಿಷಗಳ ಕಾಲ ಸತತ ಸಿಪಿಆರ್ ನೀಡಿ ಜೀವ ಉಳಿಸಲು ಪ್ರಯತ್ನಿಸಿದರೂ ಯಾವುದೇ ಸ್ಪಂದನೆ ದೊರೆಯಲಿಲ್ಲ. ಬಳಿಕ ಬೆಳಗ್ಗೆ ಸುಮಾರು 5.20ಕ್ಕೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

Ad Widget

Ad Widget <> Ad Widget

ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ. ಶೇಖರ್ ಸಾಳ್ಕರ್ ಅವರು ನಾನಾ ಪಾಟೇಕರ್ ಅವರನ್ನು ಉಳಿಸಲು ವೈದ್ಯಕೀಯ ತಂಡ ಸತತ ಪ್ರಯತ್ನ ನಡೆಸಿತ್ತು ಎಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೆಡಿಕೋ-ಲೀಗಲ್ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಸಾವಿನ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗುವ ನಿರೀಕ್ಷೆಯಿದೆ.



Ad Widget

ನಾನಾ ಪಾಟೇಕರ್ ಅವರು ಹಿಂದಿ ಹಾಗೂ ಮರಾಠಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯ, ಗಂಭೀರ ಸಂಭಾಷಣೆ ಶೈಲಿ ಮತ್ತು ವಿಭಿನ್ನ ಪಾತ್ರಗಳ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದರು. ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ಭಾರತೀಯ ಸಿನಿಮಾರಂಗಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.

Ad Widget

Ad Widget

‘ಪರಿಂದಾ’, ‘ಕ್ರಾಂತಿವೀರ’, ‘ಅಬ್ ತಕ್ ಛಪ್ಪನ್’ ಸೇರಿದಂತೆ ಹಲವು ಸಿನಿಮಾಗಳಲ್ಲಿನ ಅವರ ಅಭಿನಯ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ‘ವೆಲ್‌ಕಮ್’ ಚಿತ್ರದ ಉದಯ್ ಶೆಟ್ಟಿ ಪಾತ್ರದ ಮೂಲಕ ಹಾಸ್ಯಪ್ರಧಾನ ಅಭಿನಯದಲ್ಲೂ ಅವರು ಪ್ರೇಕ್ಷಕರ ಮನ ಗೆದ್ದಿದ್ದರು. ಕನ್ನಡದಲ್ಲಿಯೂ ಅವರು ‘ಯಕ್ಷ’ ಸಿನಿಮಾದಲ್ಲಿ ನಟಿಸಿದ್ದರು.

ಬಹುಮುಖ ಪ್ರತಿಭೆಯ ನಾನಾ ಪಾಟೇಕರ್ ಅವರ ಅಗಲಿಕೆಯಿಂದ ಭಾರತೀಯ ಚಿತ್ರರಂಗದ ಪ್ರಮುಖ ಕಲಾವಿದರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading