Connect with us

ಸ್ಥಳೀಯ

Beltangadi-ಬೆಳ್ತಂಗಡಿ : ಶ್ರೀಧರ ಕೊಲೆ ಪ್ರಕರಣ SIT ತನಿಖೆ ಚುರುಕು : ಮಂಪರು ಪರೀಕ್ಷೆಗೆ ಒಪ್ಪದ ಆರೋಪಿಗಳು..!

Published

on

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದ್ದ ಶ್ರೀಧರ ಕೊಲೆ ಪ್ರಕರಣದ ತನಿಖೆ ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಪ್ರಕರಣದ ಸತ್ಯಾಸತ್ಯತೆ ಹೊರತರಲು ಮುಂದಾಗಿರುವ ವಿಶೇಷ ತನಿಖಾ ದಳಕ್ಕೆ (SIT) ಆರೋಪಿಗಳು ಈಗ ಅಸಹಕಾರ ತೋರುತ್ತಿದ್ದಾರೆ.

Ad Widget

Ad Widget

Ad Widget

Ad Widget

ಕೊಕ್ಕಡ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದ್ದ ಶ್ರೀಧರ ಕೊಲೆ ಪ್ರಕರಣದ ತನಿಖೆ ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಪ್ರಕರಣದ ಸತ್ಯಾಸತ್ಯತೆ ಹೊರತರಲು ಮುಂದಾಗಿರುವ ವಿಶೇಷ ತನಿಖಾ ದಳಕ್ಕೆ (SIT) ಆರೋಪಿಗಳು ಈಗ ಅಸಹಕಾರ ತೋರುತ್ತಿದ್ದಾರೆ.

Ad Widget

Ad Widget alt="Ad Widget"/>

Ad Widget

ಏನಿದು ಘಟನೆ?
2022ರ ಡಿಸೆಂಬರ್ 18ರಂದು ಶಿಬಾಜೆಯ ಎ.ಸಿ. ಕುರಿಯನ್ ಅವರ ತೋಟದ ಮೇಲ್ವಿಚಾರಕರಾಗಿದ್ದ ಶ್ರೀಧರ ಅವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಡಿಸೆಂಬರ್ 17ರಂದು ಅವರ ಮೇಲೆ ಹಲ್ಲೆ ನಡೆದಿದ್ದು, ಮರುದಿನ ಅವರ ಮೃತದೇಹ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

Ad Widget

Ad Widget <> Ad Widget

ತನಿಖೆಯ ಹಾದಿ:
ಆರಂಭದಲ್ಲಿ ಈ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ (CID), ಆರೋಪಿಗಳು ನಿರ್ದೋಷಿಗಳು ಎಂಬ ವರದಿಯನ್ನು ಸಲ್ಲಿಸಿತ್ತು. ಆದರೆ, ತನಿಖೆಯ ಬಗ್ಗೆ ಸಾರ್ವಜನಿಕವಾಗಿ ಮತ್ತು ಮೃತರ ಕುಟುಂಬಸ್ಥರಲ್ಲಿ ಹಲವು ಅನುಮಾನಗಳು ಮೂಡಿದ್ದವು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸಿ ಮರುತನಿಖೆಗೆ ಸೂಚಿಸಿತ್ತು. ಅದರಂತೆ ರಾಜ್ಯ ಸರ್ಕಾರವು 2024ರ ಫೆಬ್ರವರಿಯಲ್ಲಿ ವಿಶೇಷ ತನಿಖಾ ದಳವನ್ನು (SIT) ರಚಿಸಿ ಆದೇಶ ಹೊರಡಿಸಿತ್ತು.

ಆರೋಪಿಗಳ ಯೂ-ಟರ್ನ್:
ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಆರೋಪಿಗಳಾದ ತಿಮ್ಮಪ್ಪ ಪೂಜಾರಿ, ಲಕ್ಷ್ಮಣ ಪೂಜಾರಿ, ಕೆ.ಎಲ್. ಆನಂದ್ ಗೌಡ ಮತ್ತು ಮಹೇಶ್ ಅವರನ್ನು ಮಂಪರು ಪರೀಕ್ಷೆ (Narco Analysis) ಹಾಗೂ ಬ್ರೇನ್ ಮ್ಯಾಪಿಂಗ್ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದ್ದರು. ಆರಂಭದಲ್ಲಿ ಎಸ್‌ಐಟಿ ಅಧಿಕಾರಿಗಳ ಮುಂದೆ ಪರೀಕ್ಷೆಗೆ ಒಪ್ಪಿಗೆ ನೀಡಿದ್ದ ಈ ನಾಲ್ವರು ಆರೋಪಿಗಳು, ಈಗ ನ್ಯಾಯಾಲಯದ ಮುಂದೆ ತಮ್ಮ ನಿಲುವು ಬದಲಿಸಿದ್ದಾರೆ. ತಾವು ಯಾವುದೇ ಪರೀಕ್ಷೆಗೆ ಒಳಗಾಗುವುದಿಲ್ಲ ಎಂದು ನಕಾರ ವ್ಯಕ್ತಪಡಿಸಿರುವುದು ತನಿಖಾ ತಂಡಕ್ಕೆ ಸವಾಲಾಗಿ ಪರಿಣಮಿಸಿದೆ.

Ad Widget

Ad Widget

ತನಿಖಾ ತಂಡ:
ಪ್ರಸ್ತುತ ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಬೂರಾಮ್, ಉಡುಪಿ ಎಸ್‌ಪಿ ಹರಿರಾಮ್ ಶಂಕರ್ ಹಾಗೂ ಡಿವೈಎಸ್‌ಪಿ ಹರೀಶ್ ಅವರ ನೇತೃತ್ವದ ತಂಡ ಈ ಹೈಪ್ರೊಫೈಲ್ ಕೊಲೆ ಪ್ರಕರಣದ ತನಿಖೆಯನ್ನು ಮುನ್ನಡೆಸುತ್ತಿದೆ. ಆರೋಪಿಗಳ ಈ ದಿಢೀರ್ ನಿಲುವು ಬದಲಾವಣೆಯು ಪ್ರಕರಣದಲ್ಲಿ ಯಾವುದೋ ರಹಸ್ಯ ಅಡಗಿದೆಯೇ ಎಂಬ ಸಂಶಯವನ್ನು ಮತ್ತಷ್ಟು ಬಲಪಡಿಸಿದೆ.

Ad Widget
Click to comment

Leave a Reply

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಶಿಕ್ಷಣ

RTE-ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ

Published

on

Ad Widget

Ad Widget

Ad Widget

Ad Widget

ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget alt="Ad Widget"/>

Ad Widget

ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್‌ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್‌ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.

ಆರ್‌ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.

Ad Widget

Ad Widget

ಆದಾಯ ಮಿತಿ ಹೆಚ್ಚಳದಿಂದ ಹೆಚ್ಚಿನ ಕುಟುಂಬಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶ ಸಿಗುವ ನಿರೀಕ್ಷೆಯಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!