ಈ ಸಂದರ್ಭದಲ್ಲಿ ಮಾತನಾಡಿದ ಗುರುವಂದನಾ ಸಮಿತಿಯ ಅಧ್ಯಕ್ಷ ಚಿದಾನಂದ ಬೈಲಾಡಿ […]" /> ಈ ಸಂದರ್ಭದಲ್ಲಿ ಮಾತನಾಡಿದ ಗುರುವಂದನಾ ಸಮಿತಿಯ ಅಧ್ಯಕ್ಷ ಚಿದಾನಂದ ಬೈಲಾಡಿ […]"> Ambika-ಶೃಂಗೇರಿ ಜಗದ್ಗುರುಗಳ ಗುರುವಂದನೆ – ಅಂಬಿಕಾದಲ್ಲಿ ಕೃತಜ್ಞತಾ ಸಭೆ; ಎಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿದೆ : ಚಿದಾನಂದ ಬೈಲಾಡಿ - Nikhara News | Kannada News Website
Connect with us

ಶಿಕ್ಷಣ

Ambika-ಶೃಂಗೇರಿ ಜಗದ್ಗುರುಗಳ ಗುರುವಂದನೆ – ಅಂಬಿಕಾದಲ್ಲಿ ಕೃತಜ್ಞತಾ ಸಭೆ; ಎಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿದೆ : ಚಿದಾನಂದ ಬೈಲಾಡಿ

Published

on

Ad Widget

Ad Widget

Ad Widget

Ad Widget

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ರಜತ ಮಹೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿನ ಹಿನ್ನೆಲೆಯಲ್ಲಿ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಮಂಗಳವಾರ ಕೃತಜ್ಞತಾ ಸಭೆ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಇತ್ತೀಚೆಗೆ ಜರಗಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ರಜತ ಮಹೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿನ ಹಿನ್ನೆಲೆಯಲ್ಲಿ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಮಂಗಳವಾರ ಕೃತಜ್ಞತಾ ಸಭೆ ನಡೆಯಿತು.

Ad Widget

Ad Widget alt="Ad Widget"/>

Ad Widget

ಈ ಸಂದರ್ಭದಲ್ಲಿ ಮಾತನಾಡಿದ ಗುರುವಂದನಾ ಸಮಿತಿಯ ಅಧ್ಯಕ್ಷ ಚಿದಾನಂದ ಬೈಲಾಡಿ ಮಾತನಾಡಿ ಎಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಜಗದ್ಗುರುಗಳು ಹರ್ಷಚಿತ್ತರಾಗಿದ್ದಾರೆ ಎಂದು ನುಡಿದರು.

Ad Widget

Ad Widget <> Ad Widget

ಪ್ರಧಾನ ಕಾರ್ಯದರ್ಶಿ ಆರ್.ಸಿ.ನಾರಾಯಣ ಮಾತನಾಡಿ ಪ್ರತಿಯೊಬ್ಬರೂ ತಮ್ಮ ತಮ್ಮ ಜವಾಬ್ದಾರಿಗಳನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ವಿವಿಧ ಸಮಿತಿಗಳ ನಡುವಣ ಹೊಂದಾಣಿಕೆ, ಪರಸ್ಪರ ಸಲಹೆ ಸೂಚನೆಗಳು, ಏಕೋದ್ದೇಶದೊಂದಿಗೆ ಕಾರ್ಯನಿರ್ವಹಣೆಯೇ ಮೊದಲಾದ ಸಂಗತಿಗಳು ಯಶಸ್ಸಿನ ತಳಹದಿಗಳೆನಿಸಿವೆ. ಶೃಂಗೇರಿ ಜಗದ್ಗುರುಗಳನ್ನು ನಾಲ್ಕನೆಯ ಬಾರಿಗೆ ಪುತ್ತೂರಿನ ಮಣ್ಣಿಗೆ ಕರೆತಂದ ಅಂಬಿಕಾ ಸಂಸ್ಥೆಗಳು ಅಭಿನಂದನೆಗೆ ಅರ್ಹ ಎಂದು ಅಭಿಪ್ರಾಯಪಟ್ಟರು.

ತಾಲೂಕು ಧರ್ಮ ಶಿಕ್ಷಣ ಸಮಿತಿ – ಧರ್ಮಾಭ್ಯುದಯದ ಅಧ್ಯಕ್ಷ ದಂಬೆಕಾನ ಸದಾಶಿವ ರೈ ಮಾತನಾಡಿ ಎದುರಿಗೆ ಕಾಣಿಸದೆ ಸಾಕಷ್ಟು ಪರಿಶ್ರಮಪಟ್ಟ ಹಲವು ವ್ಯಕ್ತಿಗಳಿದ್ದಾರೆ. ಅತ್ಯುತ್ತಮ ಕಾರ್ಯಕ್ರಮ ಸಂಘಟನೆಗೆ ಇಂತಹ ವ್ಯಕ್ತಿಗಳು ಅನಿವಾರ್ಯ. ಅಂಬಿಕಾ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ಉದ್ಯೋಗಿಗಳ ಸಮರ್ಪಣಾಭಾವ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದೆ. ಸಮಾಜದ ವಿವಿಧ ಸಮುದಾಯಗಳಿಂದಲೂ ಪ್ರತಿನಿಧಿಗಳು ಜವಾಬ್ದಾರಿ ವಹಿಸಿಕೊಂಡು ಕಾರ್ಯಕ್ರಮವನ್ನು ದಾಖಲೆಯಾಗಿ ಮಾರ್ಪಡಿಸಿದ್ದಾರೆ ಎಂದರು.

Ad Widget

Ad Widget

ಗುರುವAದನಾ ಸಮಿತಿಯ ಸಮಘಟನಾ ಕಾರ್ಯದರ್ಶಿ ದಿನೇಶ್ ಜೈನ್ ಮಾತನಾಡಿ ಧರ್ಮಾಭ್ಯುದಯವ ವಿದ್ಯಾಥಿಗಳು ಪ್ರಸ್ತುತಪಡಿಸಿದ ಸಮರ್ಪಣಮ್ ಕಾರ್ಯಕ್ರಮ ಜಗದ್ಗುರುಗಳ ಮನಸ್ಸನ್ನು ಗೆದ್ದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವ್ಯಾಪಕವಾಗಿ ಧರ್ಮ ಶಿಕ್ಷಣವನ್ನು ಪ್ರಸಾರ ಮಾಡುವ ಅಗತ್ಯವಿದೆ. ಸಾಧ್ಯವಾದಲ್ಲಿ ಪ್ರತಿವರ್ಷವೂ ಧರ್ಮಾಭ್ಯುದಯದ ವಾರ್ಷಿಕೋತ್ಸವಕ್ಕೆ ಶೃಂಗೇರಿ ಜಗದ್ಗುರುಗಳನ್ನು ಆಮಂತ್ರಿಸಿ ಕಾರ್ಯಕ್ರಮ ಆಯೋಜಿಸುವ ಬಗೆಗೆ ಯೋಚನೆ ನಡೆಸಬೇಕು ಎಂದರು.

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಜಗದ್ಗುರುಗಳ ಅನುಗ್ರಹದಿಂದ ಎಲ್ಲವೂ ಅತ್ಯಂತ ಸಮರ್ಪಕವಾಗಿ ನಡೆದಿದೆ. ಇದೇ ಮೊದಲಬಾರಿಗೆ ಶೃಂಗೇರಿ ಜಗದ್ಗುರುಗಳು ಬಲ್ನಾಡು ಉಳ್ಳಾಲ್ತಿಯ ಮೂಲಸ್ಥಾನವಾದ ತೊಟ್ಟಿಲಕಯಕ್ಕೆ ಆಗಮಿಸಿ, ಚಂಡಿಕಾಹೋಮದ ಪೂರ್ಣಾಹುತಿಯನ್ನು ನಡೆಸಿಕೊಟ್ಟಿರುವುದು ಚರಿತ್ರಾರ್ಹ ವಿಚಾರವಾಗಿ ಮೂಡಿಬಂದಿದೆ. ಜಗದ್ಗುರುಗಳ ದರ್ಶನದಿಂದ ಎಲ್ಲರೂ ಪಾವನರಾಗಿದ್ದೇವೆ ಎಂದು ಹೇಳಿದರು.
ಗುರುವಂದನಾ ಕಾರ್ಯಕ್ರಮಕ್ಕೆ ಸಂಬಂಧಿಸಿದ ದಾಖಲೆಗಳನ್ನು ಚಿದಾನಂದ ಬೈಲಾಡಿಯವರು ಸುಬ್ರಮಣ್ಯ ನಟ್ಟೋಜ ಅವರಿಗೆ ಹಸ್ತಾಂತರಿಸಿದರು. ಗುರುವಂದನಾ ಸಮಿತಿಯ ಗೌರವಾಧ್ಯಕ್ಷ ಮೊಗೆರೋಡಿ ಬಾಲಕೃಷ್ಣ ರೈ, ಕಾರ್ಯಾಧ್ಯಕ್ಷ ಶಿವರಾಮ ಆಳ್ವ, ಗುರುವಂದನಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಧರ್ಮಾಭ್ಯುದಯದ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Ad Widget
Click to comment

Leave a Reply

ಶಿಕ್ಷಣ

Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

Published

on

Ad Widget

Ad Widget

Ad Widget

Ad Widget

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ಶಿಕ್ಷಣ

Ambika-ಅಂಬಿಕಾ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ

Published

on

Ad Widget

Ad Widget

Ad Widget

Ad Widget

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Ad Widget

Ad Widget <> Ad Widget

ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು
ನೀಡಿದ್ದು, ದೇಶದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ನವೆಂಬರ್ 20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ,
ರೆ. ಫಾ. ಪತ್ರವೋ ಇವರ ದೂರದರ್ಶಿ ಚಿಂತನೆಯ ಫಲವಾಗಿ ಈ ಕಾಲೇಜು ಜನ್ಮತಾಳಿದ್ದು, ಇಂದು ಮತ್ತಷ್ಟು ಮೂಲ ಸೌಕರ್ಯಗಳ ವಿಸ್ತರಣೆಯೊಂದಿಗೆ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಅಣಿಯಾಗಿದೆ. ಸುಸಜ್ಜಿತ ಮೂಲ ಸೌಕರ್ಯಗಳ ವಿಸ್ತರಣೆಗೆ ಕಾರಣೀಕರ್ತರಾದ ಎಲ್ಲರನ್ನೂ ಅಭಿನಂದಿಸಿ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಮುಖ್ಯ ಅತಿಥಿಗಳಾದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಕಾರ್ಯದರ್ಶಿಗಳಾದ ರೆ. ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಹಲವಾರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂದು ಬದಲಾದ ಪರಿಸ್ಥಿತಿಯಲ್ಲಿ ಮೂಲ ಸೌಕರ್ಯಗಳ ವಿಸ್ತರಣೆಯನ್ನು ಮನಗಂಡು ದಾನಿಗಳ ಸಹಾಯದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಉತ್ತಮ ಸೌಕರ್ಯಗಳನ್ನು ನಿರ್ಮಿಸಿದ್ದೇವೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಉಪಾಧ್ಯಕ್ಷರಾದ ಮೊನ್ಸಿಂಜೋರ್ ಮ್ಯಾಕ್ಸಿಮ್ ಎಲ್ ನೋರೋನ್ಹ ಮಾತನಾಡಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳವಣಿಗೆಗಳು ತುಂಬಾ ಸಂತೋಷವನ್ನು ನೀಡುತ್ತಿದ್ದು, ಇಂದು ವಿದ್ಯಾರ್ಥಿಗಳಿಗೆ ನೀಡಿದ ಹೆಚ್ಚುವರಿ ಸೌಲಭ್ಯಗಳು ಸಂಸ್ಥೆಯ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಕಾಲೇಜು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲಿ ಎಂದು ಆಶಿಸಿದರು.

Ad Widget

Ad Widget

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಮೇಲ್ವಿಚಾರಣೆಯನ್ನು ನಿರ್ವಹಿಸಿದ ಓಸ್ವಾಡ್ಡ್ ಲೂಯಿಸ್ ಹಾಗೂ ಜೋಸೆಫ್ ಸೆರವೋರನ್ನು ಸನ್ಮಾನಿಸಲಾಯಿತು.

ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಅ್ಯಂಟೋನಿ ಒಲಿವೆರಾ, ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ರೆ. ಫಾ. ಮ್ಯಾಕ್ಸಿಮ್ ಡಿ’ ಸೋಜಾ, ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಪ್ಯಾರಿಸ್ ಧರ್ಮ ಗುರುಗಳಾದ ರೆ.ಫಾ ಮಾರ್ವಿನ್ ಪ್ರವೀಣ್ ಲೋಬೋ ಹಾಗೂ ಚ್ಯಾರಿಟಿ ಟೀಮ್ ನ ಸದಸ್ಯರಾದ ಸ್ಟೀಫನ್ ಪಿಂಟೋ, ಓಸ್ವಾಲ್ಡ್ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ದಾನಿಗಳು, ಗಣ್ಯರು, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ನೂತನ ಕಟ್ಟಡದಲ್ಲಿ ವಿಸ್ತೃತ ಸಭಾಂಗಣ, ವಿಜ್ಞಾನ ಪ್ರಯೋಗಾಲಯಗಳು, ಉಪನ್ಯಾಸಕರ ಕೊಠಡಿಗಳು, ತರಗತಿ ಕೋಣೆಗಳು ಹಾಗೂ ಸುಸಜ್ಜಿತ ಶೌಚಾಲಯಗಳು ವಿಧ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಿದೆ.

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕರಾದ ಸುಮಾ ಡಿ ವಂದಿಸಿ, ಡಾ. ಆಶಾ ಸಾವಿತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!