Connect with us

ನಿಧನ ವಾರ್ತೆ

Puttur-ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

Published

on



Ad Widget

Ad Widget

Ad Widget

Ad Widget

ನೆಲ್ಲಿಕಟ್ಟೆ ನಿವಾಸಿ, ಅನಿವಾಸಿ ಭಾರತೀಯ ಶ್ರೀಕಾಂತ್ ಹೆಗ್ಡೆ (39) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಮೇ 20ರಂದು ಸೋಮವಾರ ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾದರು. ಶ್ರೀಕಾಂತ್ ಹೆಗ್ಡೆ ಅವರು ಕಳೆದ 11 ವರ್ಷಗಳಿಂದ ದುಬೈನಲ್ಲಿ ಉದ್ಯೋಗದಲ್ಲಿದ್ದರು.

Ad Widget

Ad Widget

Ad Widget

Ad Widget

ಪುತ್ತೂರು: ಇಲ್ಲಿನ ನೆಲ್ಲಿಕಟ್ಟೆ ನಿವಾಸಿ, ಅನಿವಾಸಿ ಭಾರತೀಯ ಶ್ರೀಕಾಂತ್ ಹೆಗ್ಡೆ (39) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಮೇ 20ರಂದು ಸೋಮವಾರ ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾದರು.

Ad Widget

Ad Widget

Ad Widget alt="Ad Widget"/>

Ad Widget

ಕಾಯಿಲೆ ವಿರುದ್ಧದ ಹೋರಾಟ:
ಮೂಲತಃ ಉರ್ಲಾಂಡಿಯವರಾದ ಶ್ರೀಕಾಂತ್ ಹೆಗ್ಡೆ ಅವರು ಕಳೆದ 11 ವರ್ಷಗಳಿಂದ ದುಬೈನಲ್ಲಿ ಉದ್ಯೋಗದಲ್ಲಿದ್ದರು. ಕೆಲವು ಸಮಯದ ಹಿಂದೆ ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿದ್ದ ಅವರು, ಊರಿಗೆ ಆಗಮಿಸಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಕಾಯಿಲೆಯಿಂದ ಚೇತರಿಸಿಕೊಂಡ ಬಳಿಕ ಅವರು ಪುನಃ ಉದ್ಯೋಗಕ್ಕಾಗಿ ದುಬೈಗೆ ತೆರಳಿದ್ದರು.

Ad Widget

Ad Widget <> Ad Widget

ಆದರೆ, ವಿಧಿಯಾಟ ಬೇರೆಯೇ ಇತ್ತು. ಇತ್ತೀಚೆಗೆ ಕಾಯಿಲೆ ಮತ್ತೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಅವರು ಮರಳಿ ಊರಿಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.



Ad Widget

ಮೃತರು ತಂದೆ ಉಮೇಶ್, ತಾಯಿ ವನಿತಾ, ಪತ್ನಿ ಶ್ರೀಮಾ, ಪುತ್ರಿ ನಿಧಿಮಾ, ಸಹೋದರರಾದ ಅವಿನಾಶ್, ಸಂದೀಪ್, ಸಹೋದರಿ ಕವಿತಾ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತರ ಅಕಾಲಿಕ ನಿಧನಕ್ಕೆ ಸ್ಥಳೀಯರು ಮತ್ತು ಅವರ ಸ್ನೇಹಬಳಗ ತೀವ್ರ ಸಂತಾಪ ಸೂಚಿಸಿದೆ.

Click to comment

Leave a Reply

ನಿಧನ ವಾರ್ತೆ

Boat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು

Published

on



Ad Widget

Ad Widget

Ad Widget

Ad Widget

ಬಿಹಾರದ ವೈಶಾಲಿ ಜಿಲ್ಲೆಯ ಹಾಜಿಪುರ ಸಮೀಪ ಗಂಗಾ ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟಿದ್ದಾರೆ. ಐವರನ್ನು ರಕ್ಷಿಸಲಾಗಿದೆ ಎಂದು ವೈಶಾಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಹಾಜಿಪುರ: ಬಿಹಾರದ ವೈಶಾಲಿ ಜಿಲ್ಲೆಯ ಹಾಜಿಪುರ ಸಮೀಪ ಗಂಗಾ ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟಿದ್ದಾರೆ. ಐವರನ್ನು ರಕ್ಷಿಸಲಾಗಿದೆ ಎಂದು ವೈಶಾಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ರಘೋಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಮ್‌ಪುರ್ ಶ್ಯಾಮ್‌ಚಂದ್ ಗ್ರಾಮದ ಸಮೀಪ ಈ ದುರಂತ ಸಂಭವಿಸಿದೆ. ಸುಮಾರು 15ರಿಂದ 20 ಮಂದಿಯನ್ನು ಹೊತ್ತೊಯ್ಯುತ್ತಿದ್ದ ದೋಣಿಯಲ್ಲಿದ್ದವರು ಔತಣಕೂಟವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ದೋಣಿ ನದಿಯಲ್ಲಿ ಮಗುಚಿ ಬಿದ್ದಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

Ad Widget

Ad Widget <> Ad Widget

ಆರಂಭದಲ್ಲಿ ಐದರಿಂದ ಎಂಟು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿತ್ತು. ಬಳಿಕ ಸಾವಿನ ಸಂಖ್ಯೆ 11ಕ್ಕೆ ಏರಿರುವುದು ದೃಢಪಟ್ಟಿದೆ. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ವರದಿಯಾಗಿದೆ.



Ad Widget

ದೋಣಿ ಮಗುಚಿ ಬೀಳಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಮೃತಪಟ್ಟವರ ಗುರುತು ಹಾಗೂ ದೋಣಿಯಲ್ಲಿದ್ದವರ ನಿಖರ ಸಂಖ್ಯೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Ad Widget

Ad Widget

ದೋಣಿ ದುರಂತಕ್ಕೆ ತೇಜಸ್ವಿ ಯಾದವ್ ಸಂತಾಪ
ಈ ದುರಂತದ ಬಗ್ಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ರಘೋಪುರ್ ದಿಯಾರಾ ಪ್ರದೇಶದಲ್ಲಿ ದೋಣಿ ಮಗುಚಿ ಬಿದ್ದಿರುವ ಆತಂಕಕಾರಿ ಸುದ್ದಿ ಬಂದಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಮಕ್ಕಳು ಎಂದು ಅವರು ತಮ್ಮ ‘ಎಕ್ಸ್‌’ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಸ್ಥಳೀಯ ನಿವಾಸಿಗಳು, ಆಡಳಿತ ಮಂಡಳಿ ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ಚುರುಕುಗೊಳಿಸುವುದರ ಜೊತೆಗೆ ಗಾಯಾಳುಗಳಿಗೆ ತ್ವರಿತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Subramanya-ಸರ್ಪಸಂಸ್ಕಾರ ಸೇವೆಗೆ ಬಂದ ಯಾತ್ರಾರ್ಥಿಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಸೇವೆಗಾಗಿ ಆಗಮಿಸಿದ್ದ ತುಮಕೂರು ಜಿಲ್ಲೆಯ ಯಾತ್ರಾರ್ಥಿಯೊಬ್ಬರ ಮೃತದೇಹ ಮಂಗಳವಾರ ಬೆಳಗ್ಗೆ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ. ಮೃತರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ನಿವಾಸಿ ದೇವೇಗೌಡ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಸೇವೆಗಾಗಿ ಆಗಮಿಸಿದ್ದ ತುಮಕೂರು ಜಿಲ್ಲೆಯ ಯಾತ್ರಾರ್ಥಿಯೊಬ್ಬರ ಮೃತದೇಹ ಮಂಗಳವಾರ ಬೆಳಗ್ಗೆ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ನಿವಾಸಿ ದೇವೇಗೌಡ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅನಾರೋಗ್ಯದಿಂದ ವಸತಿಗೃಹದಲ್ಲೇ ವಿಶ್ರಾಂತಿ
ದೇವೇಗೌಡ ಅವರು ತುರುವೇಕೆರೆಯಿಂದ ಇತರ ಯಾತ್ರಾರ್ಥಿಗಳೊಂದಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಬಂದಿದ್ದರು ಎನ್ನಲಾಗಿದೆ. ದೂರದ ಪ್ರಯಾಣದ ಬಳಿಕ ಅನಾರೋಗ್ಯಕ್ಕೆ ಒಳಗಾದ ಅವರು, ಪೂಜಾ ಸ್ಥಳಕ್ಕೆ ತೆರಳದೆ ತಾವು ತಂಗಿದ್ದ ವಸತಿಗೃಹದಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.



Ad Widget

ನದಿಯಲ್ಲಿ ತೇಲುತ್ತಿದ್ದ ಮೃತದೇಹ ಪತ್ತೆ
ಮಂಗಳವಾರ ಮುಂಜಾನೆ ಸುಬ್ರಹ್ಮಣ್ಯದ ಕುಲ್ಕುಂದ ಕಾಲನಿ ರಸ್ತೆಯಿಂದ ಕುಮಾರಧಾರ ನದಿಗೆ ಸಂಪರ್ಕ ಕಲ್ಪಿಸುವ ಸ್ಥಳದ ಸಮೀಪ ನದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ತೇಲುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ.

Ad Widget

Ad Widget

ಇದೇ ವೇಳೆ, ವಸತಿಗೃಹದಲ್ಲಿದ್ದ ದೇವೇಗೌಡ ಅವರು ಕಾಣೆಯಾಗಿರುವುದನ್ನು ಗಮನಿಸಿದ ಕುಟುಂಬಸ್ಥರು ಹಾಗೂ ಅವರೊಂದಿಗೆ ಬಂದಿದ್ದವರು ಹುಡುಕಾಟ ನಡೆಸಿದ್ದಾರೆ. ಬಳಿಕ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನಾಪತ್ತೆ ದೂರು ನೀಡಲು ತೆರಳಿದಾಗ ನದಿಯಲ್ಲಿ ಮೃತದೇಹ ಪತ್ತೆಯಾಗಿರುವ ಮಾಹಿತಿ ಲಭಿಸಿದೆ. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಮೃತದೇಹ ದೇವೇಗೌಡ ಅವರದ್ದೇ ಎಂಬುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಸಾವಿನ ಸುತ್ತ ಹಲವು ಅನುಮಾನ
ಅನಾರೋಗ್ಯದಿಂದ ವಸತಿಗೃಹದಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ದೇವೇಗೌಡ ಅವರು ನದಿಯ ಬಳಿಗೆ ತೆರಳಿದ್ದು ಹೇಗೆ? ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದಿದ್ದಾರೆಯೇ ಅಥವಾ ಬೇರೆ ಯಾವುದಾದರೂ ಕಾರಣದಿಂದ ಮೃತಪಟ್ಟಿದ್ದಾರೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Kalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು

Published

on



Ad Widget

Ad Widget

Ad Widget

Ad Widget

ಮೀನು ಹಿಡಿಯಲು ತೆರಳಿದ್ದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅ.12ರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಬಾವ–ಬಾಮೈದ ಸಂಬಂಧಿಗಳಾಗಿದ್ದು, ಅವರೊಂದಿಗೆ ತೆರಳಿದ್ದ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಕಲ್ಮಡ್ಕ: ಮೀನು ಹಿಡಿಯಲು ತೆರಳಿದ್ದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅ.12ರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಬಾವ–ಬಾಮೈದ ಸಂಬಂಧಿಗಳಾಗಿದ್ದು, ಅವರೊಂದಿಗೆ ತೆರಳಿದ್ದ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕಲ್ಮಡ್ಕದ ಬೊಮ್ಮೆಟ್ಟಿ ನಿವಾಸಿಗಳಾದ ಬಾಬು–ಸೀತಾ ದಂಪತಿಯ ಪುತ್ರ ಭರತ್ (28) ಹಾಗೂ ಭರತ್ ಅವರ ಸಹೋದರಿ ಭವ್ಯಾ ಅವರ ಪತಿ, ಬೆಳ್ತಂಗಡಿ ತಾಲೂಕಿನ ಮುಂಗೆಲು ನಿವಾಸಿಗಳಾದ ವೀರಪ್ಪ–ಸೀತಮ್ಮ ದಂಪತಿಯ ಪುತ್ರ ರಮೇಶ್ (34) ಮೃತಪಟ್ಟವರು. ಗಾಯಗೊಂಡ ಯುವಕನನ್ನು ಅವರ ಸಂಬಂಧಿ ಸಿಂಚನ್ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅ.12ರಂದು ರಾತ್ರಿ ಸುಮಾರು 10.30ರ ವೇಳೆಗೆ ಭರತ್, ರಮೇಶ್ ಹಾಗೂ ಸಿಂಚನ್ ಅವರು ಮನೆಯಿಂದ ಸುಮಾರು ಒಂದೂವರೆ ಕಿ.ಮೀ. ದೂರದಲ್ಲಿರುವ ತೋಡಿಗೆ ಮೀನು ಹಿಡಿಯಲು ತೆರಳಿದ್ದರು ಎನ್ನಲಾಗಿದೆ. ತೋಡಿನ ಮೇಲ್ಭಾಗದಲ್ಲಿ ತಂತಿ ಅಳವಡಿಸಿ ಅದಕ್ಕೆ ವಿದ್ಯುತ್ ಸಂಪರ್ಕ ನೀಡಲಾಗಿತ್ತು ಎಂದು ತಿಳಿದುಬಂದಿದೆ.



Ad Widget

ಈ ತಂತಿಯನ್ನು ದಾಟುವ ವೇಳೆ ಭರತ್ ಮತ್ತು ರಮೇಶ್ ಅವರಿಗೆ ವಿದ್ಯುತ್ ಸ್ಪರ್ಶಿಸಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವರೊಂದಿಗೆ ಇದ್ದ ಸಿಂಚನ್ ಅವರಿಗೂ ವಿದ್ಯುತ್ ತಗುಲಿ ಎಸೆಯಲ್ಪಟ್ಟಿದ್ದು, ಕೈ, ಎದೆ ಹಾಗೂ ಕಾಲುಗಳಿಗೆ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Ad Widget

Ad Widget

ಘಟನೆಯ ಬಳಿಕ ತಂತಿ ಅಳವಡಿಸಿದ್ದ ಮನೆಯವರಿಗೆ ವಿಷಯ ತಿಳಿದು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ ಎನ್ನಲಾಗಿದೆ. ಗಾಯಗೊಂಡ ಸಿಂಚನ್ ಅವರನ್ನು ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಷಯ ತಿಳಿದು ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading