ಸ್ಥಳೀಯ
Dharamshala-ಧರ್ಮಸ್ಥಳ : ಮತ್ತೆ ಬಂಗ್ಲೆಗುಡ್ಡೆ ಏರಿದ ಎಸ್ಐಟಿ – ಬೆಂಗಳೂರಿನ ಎಫ್ಎಸ್ಎಲ್ ತಜ್ಞರ ತಂಡ ಸಾಥ್..!
ಧರ್ಮಸ್ಥಳ ಗ್ರಾಮದ ಬಂಗ್ಲಗುಡ್ಡೆ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಮನುಷ್ಯನ ಬುರುಡೆ ಮತ್ತು ಅಸ್ಥಿಪಂಜರದ ಅವಶೇಷಗಳ ನಿಗೂಢ ಪ್ರಕರಣದ ತನಿಖೆ ಈಗ ನಿರ್ಣಾಯಕ ಘಟ್ಟ ತಲುಪಿದೆ. ಈ ರಹಸ್ಯವನ್ನು ಭೇದಿಸಲು ಬೆಂಗಳೂರಿನಿಂದ ಆಗಮಿಸಿದ ಮೂವರು ವಿಧಿವಿಜ್ಞಾನ ತಜ್ಞರ (FSL) ತಂಡವು ಎಸ್‌ಐಟಿ (SIT) ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಮಹತ್ವದ ಪರಿಶೀಲನೆ ನಡೆಸಿದೆ.
ಮಂಗಳೂರು/ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಬಂಗ್ಲಗುಡ್ಡೆ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಮನುಷ್ಯನ ಬುರುಡೆ ಮತ್ತು ಅಸ್ಥಿಪಂಜರದ ಅವಶೇಷಗಳ ನಿಗೂಢ ಪ್ರಕರಣದ ತನಿಖೆ ಈಗ ನಿರ್ಣಾಯಕ ಘಟ್ಟ ತಲುಪಿದೆ. ಈ ರಹಸ್ಯವನ್ನು ಭೇದಿಸಲು ಬೆಂಗಳೂರಿನಿಂದ ಆಗಮಿಸಿದ ಮೂವರು ವಿಧಿವಿಜ್ಞಾನ ತಜ್ಞರ (FSL) ತಂಡವು ಎಸ್‌ಐಟಿ (SIT) ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಮಹತ್ವದ ಪರಿಶೀಲನೆ ನಡೆಸಿದೆ.
ಅಪರಾಧ ದೃಶ್ಯ ಮರುಸೃಷ್ಟಿ (Crime Scene Recreation):
ಬೆಂಗಳೂರಿನ ಎಫ್‌ಎಸ್‌ಎಲ್ ತಜ್ಞರು ಮತ್ತು ಎಸ್‌ಐಟಿ ತಂಡವು ಕ್ಯಾಮರಾಮೆನ್‌ಗಳು, ವಿಡಿಯೋಗ್ರಾಫರ್‌ಗಳು ಹಾಗೂ ಅಗತ್ಯ ತಾಂತ್ರಿಕ ಸಲಕರಣೆಗಳೊಂದಿಗೆ ಬಂಗ್ಲಗುಡ್ಡೆ ಬೆಟ್ಟವನ್ನೇರಿ ತಪಾಸಣೆ ನಡೆಸಿದರು. ಬುರುಡೆಗಳು ಸಿಕ್ಕ ಜಾಗದಲ್ಲಿ ಅಪರಾಧ ದೃಶ್ಯದ ಮರುಸೃಷ್ಟಿ (Recreation) ಮಾಡಲಾಗಿದ್ದು, ಇದು ತನಿಖೆಯ ಪ್ರಮುಖ ಕಾನೂನಾತ್ಮಕ ಪ್ರಕ್ರಿಯೆಯಾಗಿದೆ. ಕಾಡಿನಲ್ಲಿ ಬುರುಡೆಗಳನ್ನು ಹೂತಿಟ್ಟಿದ್ದ ಮತ್ತು ಹೊರತೆಗೆಯಲಾದ ಜಾಗಗಳನ್ನು ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಿ ಸಾಕ್ಷ್ಯ ಸಂಗ್ರಹಿಸಿದ್ದಾರೆ.
ಸಾಕ್ಷಿ ಪ್ರದೀಪ್ ಕುಲಾಲ್ ಸಮ್ಮುಖದಲ್ಲಿ ತನಿಖೆ:
ವಿಠಲ್ ಗೌಡ ತಲೆ ಬುರುಡೆ ತಂದ ಪ್ರಕರಣದಲ್ಲಿ ಸಾಕ್ಷಿಯಾಗಿರುವ ಪ್ರದೀಪ್ ಕುಲಾಲ್‌ನನ್ನು ಅಧಿಕಾರಿಗಳು ಸ್ಥಳಕ್ಕೆ ಕರೆದೊಯ್ದಿದ್ದರು. ರಾತ್ರಿ ವೇಳೆ ಕಾಡಿನಲ್ಲಿ ಬುರುಡೆಗಳನ್ನು ಹೊರತೆಗೆಯುವ ವಿಡಿಯೋದಲ್ಲಿ ಈತ ಕಾಣಿಸಿಕೊಂಡಿದ್ದ ಎನ್ನಲಾಗಿದ್ದು, ಈಗಾಗಲೇ BNSS ಸೆಕ್ಷನ್ 183 ರ ಅಡಿಯಲ್ಲಿ ನ್ಯಾಯಾಧೀಶರ ಮುಂದೆ ತನ್ನ ತಪ್ಪೊಪ್ಪಿಗೆ ಹೇಳಿಕೆಯನ್ನು ದಾಖಲಿಸಿದ್ದಾನೆ. ಪ್ರದೀಪ್ ನೀಡಿದ ಮಾಹಿತಿಯ ಆಧಾರದ ಮೇಲೆ ಅಧಿಕಾರಿಗಳು ಸ್ಥಳ ಮಹಜರು ಪ್ರಕ್ರಿಯೆ ಪೂರೈಸಿದ್ದಾರೆ.
ನ್ಯಾಯಾಲಯಕ್ಕೆ ವರದಿ ಸಲ್ಲಿಕೆ:
ಎಸ್‌ಐಟಿ ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದ ತನ್ನ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಶೀಘ್ರದಲ್ಲೇ ಬೆಳ್ತಂಗಡಿ ನ್ಯಾಯಾಲಯಕ್ಕೂ ಸಲ್ಲಿಸಲಿದೆ ಎಂದು ತಿಳಿದುಬಂದಿದೆ. ಇದರ ನಡುವೆ, ಅಸಹಜ ಸಾವುಗಳ ಕುರಿತು ಪ್ರತ್ಯೇಕ ಎಫ್‌ಐಆರ್ ದಾಖಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೂಚನೆಯಂತೆ ಜುಲೈ ತಿಂಗಳಿನಲ್ಲಿ ವಿಚಾರಣೆ ನಡೆಯಲಿದೆ.
ಸ್ಥಳೀಯ
Dharmasthala-ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನ ಸಂಭ್ರಮ; ಧರ್ಮಸ್ಥಳದ ಮ್ಯೂಸಿಯಂಗೆ ಕಲಾಂ ಕಾರು, ಸಚಿತ್ರ ಅಂಚೆಚೀಟಿಗಳು, ಬಗ್ಗಿ ವಾಹನ ಕೊಡುಗೆ
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನವನ್ನು ನ. 26ರಂದು ಧರ್ಮಸ್ಥಳದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಗಣ್ಯರು, ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಹಾಗೂ ಅಭಿಮಾನಿಗಳು ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಿದರು.
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನವನ್ನು ನ. 26ರಂದು ಧರ್ಮಸ್ಥಳದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಗಣ್ಯರು, ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಹಾಗೂ ಅಭಿಮಾನಿಗಳು ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಿದರು.

ಪೆರಿಂಜೆ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಆನುವಂಶಿಕ ಆಡಳಿತ ಮೊಕ್ತಸರ ಎ. ಜೀವಂಧರ ಕುಮಾರ್, ಎಸ್.ಡಿ. ಸಂಪತ್ ಸಾಮ್ರಾಜ್ಯ ಶಿರ್ತಾಡಿ, ಡಾ. ಪ್ರಭಾಚಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಕೆ. ಅಭಯಚಂದ್ರ ಜೈನ್ ಮೂಡುಬಿದಿರೆ, ಸುದರ್ಶನ ಜೈನ್ ಬಂಟ್ವಾಳ, ನೋಟರಿ ಶ್ವೇತಾ ಜೈನ್, ಉದ್ಯಮಿ ಪ್ರಭಾತ್ ಮೂಡುಬಿದಿರೆ, ಮಾಳ ಹರ್ಷೇಂದ್ರ ಜೈನ್, ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಆಡಳಿತಾಧಿಕಾರಿ ಬಿ.ಪಿ. ಸಂಪತ್ ಕುಮಾರ್ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್ ಸೇರಿದಂತೆ ಹಲವರು ಹೆಗ್ಗಡೆಯವರಿಗೆ ಗೌರವಪೂರ್ವಕವಾಗಿ ಶುಭಾಶಯಗಳನ್ನು ಅರ್ಪಿಸಿದರು.

ಕಲಾಂ ಬಳಸಿದ ಟಾಟಾ ನ್ಯಾನೋ ಕಾರು, ಪೆನ್ನು ಕೊಡುಗೆ
ರಾಮೇಶ್ವರಂನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅಂತಾರಾಷ್ಟ್ರೀಯ ಪ್ರತಿಷ್ಠಾನದ ವತಿಯಿಂದ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರು ಬಳಸಿದ್ದ ಟಾಟಾ ನ್ಯಾನೋ ಕಾರು, ಅದರ ದಾಖಲೆ ಪತ್ರಗಳು ಹಾಗೂ ಪೆನ್ನನ್ನು ಧರ್ಮಸ್ಥಳದ ಮಂಜೂಷಾ ವಾಹನಗಳ ಮ್ಯೂಸಿಯಂನಲ್ಲಿ ಪ್ರದರ್ಶನಕ್ಕೆ ಇಡಲು ಕೊಡುಗೆಯಾಗಿ ಹಸ್ತಾಂತರಿಸಲಾಯಿತು.

ಡಾ. ಅಬ್ದುಲ್ ಕಲಾಂ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಸಂದರ್ಭವನ್ನು ಸ್ಮರಿಸಿದ ಹೆಗ್ಗಡೆಯವರು, ಅವರ ಸರಳ ವ್ಯಕ್ತಿತ್ವ, ಸರ್ವಧರ್ಮ ಸಮನ್ವಯದ ನಿಲುವು, ದೇವರ ಮೇಲಿನ ದೃಢಭಕ್ತಿ ಮತ್ತು ವಿಶ್ವಾಸವನ್ನು ನೆನಪಿಸಿಕೊಂಡರು. ಮಕ್ಕಳೊಂದಿಗೆ ಮಗುವಿನಂತೆ ಮುಕ್ತವಾಗಿ ಬೆರೆಯುತ್ತಿದ್ದ ಅವರ ಗುಣ ಹಾಗೂ ಸರಳತೆ ಅವಿಸ್ಮರಣೀಯ ಎಂದು ಹೇಳಿದರು. ಕಲಾಂ ಅವರ ಸ್ಮರಣಾರ್ಥ ಅಮೂಲ್ಯ ವಸ್ತುಗಳಾದ ಕಾರು ಮತ್ತು ಪೆನ್ನನ್ನು ಕೊಡುಗೆಯಾಗಿ ನೀಡಿದ ಪ್ರತಿಷ್ಠಾನದವರಿಗೆ ಕೃತಜ್ಞತೆ ಸಲ್ಲಿಸಿದರು.
ಡಾ. ಎ.ಪಿ.ಜೆ.ಎಂ. ನಝೀಮಾ ಮರೈಕಾಯಲ್, ಪ್ರತಿಷ್ಠಾನದ ಕಾರ್ಯದರ್ಶಿ ಎ.ಪಿ.ಜೆ.ಎಂ. ಜೈನೀಲಾಭಿ ಡೀಮ್ ಹಾಗೂ ಸಹ ಸಂಸ್ಥಾಪಕ ಎ.ಪಿ.ಜೆ.ಎಂ. ಶೇಖ್ ಸಲೀಂ ಉಪಸ್ಥಿತರಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ಸಿಇಒ ಅನಿಲ್ ಕುಮಾರ್ ಸ್ವಾಗತಿಸಿದರು.
ವೀರವನಿತೆಯರ ಸಚಿತ್ರ ಅಂಚೆಚೀಟಿ ಬಿಡುಗಡೆ
ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನದ ಸವಿ ನೆನಪಿಗಾಗಿ ವಂದೇ ಭಾರತಂ ಪರಿಕಲ್ಪನೆಯಡಿ ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ, ಭಾರತೀಯ ಅಂಚೆ ಇಲಾಖೆಯ ಪುತ್ತೂರು ವಿಭಾಗದ ಸಹಯೋಗದೊಂದಿಗೆ ವೀರವನಿತೆಯರ ಸಂಕ್ಷಿಪ್ತ ಮಾಹಿತಿಯನ್ನು ಒಳಗೊಂಡ ಸಚಿತ್ರ ಅಂಚೆಚೀಟಿಗಳನ್ನು ಬೀಡಿನಲ್ಲಿ ಸರಳ ಸಮಾರಂಭದಲ್ಲಿ ಬಿಡುಗಡೆಗೊಳಿಸಲಾಯಿತು.

ದಾನಚಿಂತಾಮಣಿ ಅತ್ತಿಮಬ್ಬೆ, ರಣಭೈರವಿ, ಅಕ್ಕಾದೇವಿ, ಕಾಳಲಾ ದೇವಿ, ಕಂತಿ, ಚೌಟರ ರಾಣಿ ಅಬ್ಬಕ್ಕ ದೇವಿ, ನಾಟ್ಯರಾಣಿ ಶಾಂತಲಾದೇವಿ ಹಾಗೂ ಚಂದನಬಾಲೆಯ ಕುರಿತ ಸಚಿತ್ರ ಅಂಚೆಚೀಟಿಗಳನ್ನು ಬಿಡುಗಡೆ ಮಾಡಲಾಯಿತು.
ವಂದೇ ಮಾತರಂ ಗೀತೆಯ 150ನೇ ವರ್ಷದ ಸ್ಮರಣಾರ್ಥ ಹಾಗೂ 2026ರ ಜಿನಸಮ್ಮಿಲನ ನಡೆಯುವ ಸಮ್ಮೇದ ಶಿಖರ್ಜಿಗೆ ಸಂಬಂಧಿಸಿದ ವಿಷಯಗಳನ್ನೊಳಗೊಂಡ ಅಂಚೆಪತ್ರಗಳೂ ಸೇರಿದಂತೆ ಒಟ್ಟು ಹತ್ತು ಅಂಚೆಪತ್ರಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಚಿತ್ರ ಅಂಚೆಚೀಟಿಗಳನ್ನು ಬಿಡುಗಡೆಗೊಳಿಸಿ, ಈ ಕಾರ್ಯದಲ್ಲಿ ಕೈಜೋಡಿಸಿದ ಅಂಚೆ ಇಲಾಖೆ ಹಾಗೂ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯನ್ನು ಅಭಿನಂದಿಸಿದರು.
ಅಂಚೆ ಇಲಾಖೆಯ ನಿರ್ದೇಶಕ ಶ್ರೀಹರ್ಷ ಎನ್. ಹಾಗೂ ಪುತ್ತೂರು ಅಂಚೆ ವಿಭಾಗದ ಅಧೀಕ್ಷಕ ರವೀಂದ್ರ ನಾಯ್ಕ ಉಪಸ್ಥಿತರಿದ್ದರು. ಹುಬ್ಬಳ್ಳಿಯ ಮಹಾವೀರ ಕುಂದೂರ, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್ ಹಾಗೂ ಆಡಳಿತ ನಿರ್ದೇಶಕ ಬಿ.ಪಿ. ಸಂಪತ್ ಕುಮಾರ್ ಸಹಕರಿಸಿದರು.
ವಿಶೇಷಚೇತನರ ಸೇವೆಗೆ 10 ಆಸನಗಳ ಬಗ್ಗಿ ಕಾರು ಕೊಡುಗೆ
ಉದ್ಯಮಿ ಬಸವರಾಜ್ ಆರ್. ಅವರು ಹತ್ತು ಆಸನಗಳ ಇಲೆಕ್ಟ್ರಿಕ್ ಬಗ್ಗಿ ಕಾರನ್ನು ಧರ್ಮಸ್ಥಳಕ್ಕೆ ಕೊಡುಗೆಯಾಗಿ ಅರ್ಪಿಸಿದರು. ಈ ವಾಹನವನ್ನು ವಿಶೇಷಚೇತನರು ವಸತಿಗೃಹಕ್ಕೆ ತೆರಳಲು ಉಚಿತ ಸೇವೆಗಾಗಿ ಬಳಸಲಾಗುವುದು ಎಂದು ಡಾ. ಹೆಗ್ಗಡೆಯವರು ತಿಳಿಸಿದರು.
ರಾಷ್ಟ್ರಪತಿ, ಪ್ರಧಾನಿಯಿಂದ ಶುಭಾಶಯ
ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತ್ಯೇಕ ಶುಭಾಶಯ ಪತ್ರಗಳ ಮೂಲಕ ಹೆಗ್ಗಡೆಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿದ್ದಾರೆ.
ಕಾರ್ಯಕ್ರಮಗಳು
Medland Cup-2026-ಮೆಡ್‌ಲ್ಯಾಂಡ್ ಆಸ್ಪತ್ರೆಯ ವಾರ್ಷಿಕ ಸಂಭ್ರಮ: ನ.29ರಂದು ‘ಮೆಡ್‌ಲ್ಯಾಂಡ್ ಕಪ್-2026’ ಕ್ರಿಕೆಟ್ ಪಂದ್ಯಾಟ
ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಥಮ ವರ್ಷದ ಸೇವಾ ಸಂಭ್ರಮದ ಅಂಗವಾಗಿ ವಿವಿಧ ಇಲಾಖೆಗಳ ಎಂಟು ತಂಡಗಳ ನಡುವಿನ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ‘ಮೆಡ್‌ಲ್ಯಾಂಡ್ ಕಪ್-2026’ ನ.29ರಂದು ಪುತ್ತೂರಿನ ಸಂಪ್ಯ ಕಮ್ಮಾಡಿ ಮೈದಾನದಲ್ಲಿ ನಡೆಯಲಿದೆ.
ಪುತ್ತೂರು: ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಥಮ ವರ್ಷದ ಸೇವಾ ಸಂಭ್ರಮದ ಅಂಗವಾಗಿ ವಿವಿಧ ಇಲಾಖೆಗಳ ಎಂಟು ತಂಡಗಳ ನಡುವಿನ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ‘ಮೆಡ್‌ಲ್ಯಾಂಡ್ ಕಪ್-2026’ ನ.29ರಂದು ಪುತ್ತೂರಿನ ಸಂಪ್ಯ ಕಮ್ಮಾಡಿ ಮೈದಾನದಲ್ಲಿ ನಡೆಯಲಿದೆ.

ಪುತ್ತೂರಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಂಸ್ಥೆಗಳ ಪ್ರತಿನಿಧಿಗಳನ್ನು ಒಳಗೊಂಡ ಎಂಟು ತಂಡಗಳು ಈ ಕ್ರೀಡಾಕೂಟದಲ್ಲಿ ಸೆಣಸಾಡಲಿವೆ. ಪುತ್ತೂರು ಪೊಲೀಸ್ ಎಲೆವೆನ್, ಫಾರೆಸ್ಟ್ ಎಲೆವೆನ್, ಮೆಡ್ಲ್ಯಾಂಡ್ ಫಾಲ್ಕನ್ಸ್, ಪುತ್ತೂರು ಬಾರ್ ಅಸೋಸಿಯೇಷನ್, ಮೆಸ್ಕಾಂ ಪುತ್ತೂರು ಪರ್ಲ್ಸ್, ಕ್ಯಾಂಪ್ಕೋ ಪುತ್ತೂರು, ಕೆಎಸ್‌ಆರ್‌ಟಿಸಿ ಪುತ್ತೂರು ಹಾಗೂ ಸಿಎಂಸಿ ಎಲೆವೆನ್ ಪುತ್ತೂರು ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಲಿವೆ.
ಆಸ್ಪತ್ರೆಯ ಒಂದು ವರ್ಷದ ವೈದ್ಯಕೀಯ ಸೇವೆಯ ಸಂಭ್ರಮವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ವಿವಿಧ ಇಲಾಖೆಗಳ ನಡುವೆ ಪರಸ್ಪರ ಬಾಂಧವ್ಯ ವೃದ್ಧಿಸುವುದರ ಜತೆಗೆ ಕ್ರೀಡಾಸ್ಫೂರ್ತಿ, ತಂಡದ ಒಗ್ಗಟ್ಟು ಹಾಗೂ ಸ್ನೇಹಭಾವವನ್ನು ಉತ್ತೇಜಿಸುವುದು ಪಂದ್ಯಾಟದ ಆಶಯವಾಗಿದೆ.
ಈ ಕುರಿತು ಮಾಹಿತಿ ನೀಡಿದ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯ ಡಾ. ವಿಶಾಲ್ ಅವರು, ಆಸ್ಪತ್ರೆಯ ಪ್ರಥಮ ವರ್ಷದ ಸಂಭ್ರಮವನ್ನು ಕ್ರೀಡಾಕೂಟದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಬಿಗ್ ನ್ಯೂಸ್
Rain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
ಕರಾವಳಿಯ ದ.ಕ ಕಾಸರಗೋಡು ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ನಿನ್ನೆ ಸಂಜೆ ಮೋಡದ ವಾತಾವರಣದಿಂದ ಕೂಡಿದ್ದು ಪುತ್ತೂರು , ಕಡಬ, ಸುಳ್ಯದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ನ.25ರ ರಾತ್ರಿ ಕಡಬ ತಾಲೂಕಿನ ಕಾಣಿಯೂರು , ಪಂಜ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಪುತ್ತೂರಿನ ಹಲವು ಕಡೆ ಸಾಧಾರಣ ಮಳೆಯಾಗಿದೆ.
ಪುತ್ತೂರು : ಕರಾವಳಿಯ ದ.ಕ ಕಾಸರಗೋಡು ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ನಿನ್ನೆ ಸಂಜೆ ಮೋಡದ ವಾತಾವರಣದಿಂದ ಕೂಡಿದ್ದು ಪುತ್ತೂರು , ಕಡಬ, ಸುಳ್ಯದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.
ನ.25ರ ರಾತ್ರಿ ಕಡಬ ತಾಲೂಕಿನ ಕಾಣಿಯೂರು , ಪಂಜ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಪುತ್ತೂರಿನ ಹಲವು ಕಡೆ ಸಾಧಾರಣ ಮಳೆಯಾಗಿದೆ.
ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ ಕೋಲಾರ ರಾಮನಗರ ಬೆಂಗಳೂರು ತುಮಕೂರು ಜಿಲ್ಲೆಗಳ ಹಲವೆಡೆ ಮಳೆಯಾಗಿದೆ.
ಇವತ್ತಿನ ಮುನ್ಸೂಚನೆ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು ದ.ಕ. ಉಡುಪಿ ಉ.ಕ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮಳೆ ಬರುವ ಸಾಧ್ಯತೆ ಇದೆ. ರಾತ್ರಿ ಗುಡುಗು ಮಳೆಯ ಮುನ್ಸೂಚನೆ ಇದ್ದರೂ ವಾತಾವರಣದ ಹ್ಯುಮಿಡಿಟಿ ಕಡಿಮೆ ಆದರೇ ಮಳೆ ಪ್ರಮಾಣ ಕಡಿಮೆ ಆಗಿ ಮೋಡದ ವಾತಾವರಣ ಮುಂದುವರೆಯಬಹುದು ಎನ್ನಲಾಗಿದೆ. ನವೆಂಬರ್ 28 ತನಕ ಸಂಜೆ ಮೋಡ – ಮಳೆಯ ಸಾಧ್ಯತೆ ಮುಂದುವರೆಯಬಹುದು ಎಂದು ಹವಮಾನ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಮಲೆನಾಡಿನಲ್ಲಿ ಸಂಜೆಯ ಮೋಡ ಬರಲಿದ್ದು ಕೊಡಗು ಹಾಸನ ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ತುಂತುರು – ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 27 ತನಕ ಸಂಜೆ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಕೋಲಾರ ಚಿಕ್ಕಬಳ್ಳಾಪುರ ಬೆಂಗಳೂರು – ಗ್ರಾಮಾಂತರ ರಾಮನಗರ ಚಾಮರಾಜನಗರ ಮೈಸೂರು ಮಂಡ್ಯ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ತುಮಕೂರು ಚಿತ್ರದುರ್ಗ ದಾವಣಗೆರೆ ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯಾಗಬಹುದು. ನ 28 ರಿಂದ ಮಳೆ ಪೂರ್ತಿ ಕಡಿಮೆ ಆಗಬಹುದು.
ಉತ್ತರ ಒಳನಾಡಿನಲ್ಲಿ ಮೋಡದ ವಾತಾವರಣ ಬರಬಹುದು.ಬಳ್ಳಾರಿ ರಾಯಚೂರು ಹಾವೇರಿ ಗದಗ ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ತುಂತುರು/ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೋಡ ಮಧ್ಯ ಕರ್ನಾಟಕ ಚಲಿಸುವ ಕಾರಣ ಒಂದೆರಡು ದಿನ ಸಣ್ಣ ಮಳೆಯಾಗಲಿದ್ದು ನಂತರ ಚಳಿ ಮುಂದುವರೆಯಬಹುದು.
ಬಂಗಾಳಕೊಲ್ಲಿಯಿಂದ ಬೀಸುವ ಪೂರ್ವದ ಮಾರುತಗಳಿಂದ ತಮಿಳುನಾಡು ಕೇರಳ ಕರ್ನಾಟಕದಲ್ಲಿ ಮಳೆಯಾಗುತ್ತಿದ್ದು ಮುಂದಿನ 3-4 ದಿನ ಮಳೆ ಮುಂದುವರೆಯುವ ಮುನ್ಸೂಚನೆ ಇದೆ. ಡಿಸೆಂಬರ್ ಮೊದಲ ವಾರ ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಇನ್ನೊಂದು ವಾಯುಭಾರ ಕುಸಿತವಾಗಿ ದಕ್ಷಿಣ ಶ್ರೀಲಂಕಾ ಮೂಲಕ ಅರಬ್ಬೀಸಮುದ್ರದತ್ತ ಚಲಿಸುವ ಸಾಧ್ಯತೆಯೂ ಇದೆ.
-
ಕ್ರೈಂ24 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ಸ್ಥಳೀಯ17 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ನಿಧನ ವಾರ್ತೆ24 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು23 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ22 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಅಪರಾಧ18 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಬಿಗ್ ನ್ಯೂಸ್24 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಕ್ರೀಡೆ22 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















