ಈ […]" /> ಈ […]"> Uppinangadi-ಉಪ್ಪಿನಂಗಡಿ: ಹೋರಿ ಹಾಯ್ದು ಗಾಯಗೊಂಡಿದ್ದ ಮಹಮ್ಮದ್ ಶರೀಫ್ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣವಲ್ಲ : ಪ್ರಕರಣದ ಕುರಿತು ಚಿಕಿತ್ಸೆ ನೀಡಿದ ಆಸ್ಫತ್ರೆಯ ಆಡಳಿತ ವೈದ್ಯಾಧಿಕಾರಿಯಿಂದ ಸಂಪೂರ್ಣ ಮಾಹಿತಿ - Nikhara News | Kannada News Website
Connect with us

ಬಿಗ್ ನ್ಯೂಸ್

Uppinangadi-ಉಪ್ಪಿನಂಗಡಿ: ಹೋರಿ ಹಾಯ್ದು ಗಾಯಗೊಂಡಿದ್ದ ಮಹಮ್ಮದ್ ಶರೀಫ್ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣವಲ್ಲ : ಪ್ರಕರಣದ ಕುರಿತು ಚಿಕಿತ್ಸೆ ನೀಡಿದ ಆಸ್ಫತ್ರೆಯ ಆಡಳಿತ ವೈದ್ಯಾಧಿಕಾರಿಯಿಂದ ಸಂಪೂರ್ಣ ಮಾಹಿತಿ

Published

on

Ad Widget

Ad Widget

Ad Widget

Ad Widget

ಮಹಮ್ಮದ್ ಶರೀಫ್ ಸಾವಿಗೆ ಉಪ್ಪಿನಂಗಡಿ ಸೂರ್ಯ ಆಸ್ಫತ್ರೆಯ ವೈದ್ಯರ ನಿರ್ಲಕ್ಷ್ಯ ಕಾರಣ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಇದು ವೈದ್ಯರ ನಿರ್ಲಕ್ಷ್ಯದಿಂದ ಆಗಿರುವುದು ಅಲ್ಲ ಎಂದು ಸೂರ್ಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಾಜೇಶ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮಹಮ್ಮದ್ ಶರೀಫ್ ಸಾವಿಗೆ ಉಪ್ಪಿನಂಗಡಿ ಸೂರ್ಯ ಆಸ್ಫತ್ರೆಯ ವೈದ್ಯರ ನಿರ್ಲಕ್ಷ್ಯ ಕಾರಣ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಇದು ವೈದ್ಯರ ನಿರ್ಲಕ್ಷ್ಯದಿಂದ ಆಗಿರುವುದು ಅಲ್ಲ ಎಂದು ಸೂರ್ಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಾಜೇಶ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ಆರೋಪದ ಬಗ್ಗೆಅವರಲ್ಲಿ ಪ್ರಶ್ನಿಸಿದಾಗ ಅವರು ಘಟನೆಯ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದ್ದು, ಮಹಮ್ಮದ್ ಶರೀಫ್ ಅವರನ್ನು ಮೇ 14ರ ರಾತ್ರಿ ನಮ್ಮ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಮೊದಲಿಗೆ ಕರು ಗುದ್ದಿದೆ. ಆದ್ದರಿಂದ ಹೊಟ್ಟೆನೋವು ಇದೆ ಅಂದರು. ಬಳಿಕ ಹೋರಿ ಅಂದರು. ಹೊಟ್ಟೆನೋವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ , ಹೊಟ್ಟೆಯ ಸ್ಕ್ಯಾನಿಂಗ್ ಮಾಡುವಂತೆ ಸೂಚಿಸಿದ್ದೇನೆ. ರಾತ್ರಿ 1 ಗಂಟೆ ಬಳಿಕ ಉಪ್ಪಿನಂಗಡಿ ಹಾಗೂ ಪುತ್ತೂರಿನಲ್ಲಿ ಸ್ಕ್ಯಾನಿಂಗ್ ಸೌಲಭ್ಯಗಳಿಲ್ಲ. ಅದಕ್ಕೆ ಅವರನ್ನು ಮಂಗಳೂರಿಗೆ ತೆರಳಲು ಹೇಳಿದ್ದೆ. ಅವರು ರಾತ್ರಿ 2:30ರ ಸುಮಾರಿಗೆ ಮಂಗಳೂರಿಗೆ ತೆರಳಿ ಅಲ್ಲಿ ಸ್ಕ್ಯಾನಿಂಗ್ ಮಾಡಿಸಿದ್ದಾರೆ.

Ad Widget

Ad Widget <> Ad Widget

ಅಲ್ಲಿನ ಆಸ್ಪತ್ರೆಯವರು ರೋಗಿಯನ್ನು ಅಡ್ಮಿಷನ್‌ ಆಗಲು ಹೇಳಿದ್ದಾರಂತೆ. ಆದರೆ ಅವರು ಅಲ್ಲಿ ಅಡ್ಮಿಷನ್ ಆಗದೇ ನೇರವಾಗಿ ಮನೆಗೆ ತೆರಳಿದ್ದಾರೆ. ಅಲ್ಲಿಯೂ ಕೂಡಾ ಅವರು ಸ್ಥಳೀಯ ವೈದ್ಯರಲ್ಲಿ ಹೊಟ್ಟೆನೋವಿಗೆ, ಗ್ಯಾಸ್ಟ್ರೀಕ್‌ ಹಾಗೂ ಮಲಬದ್ದತೆಗೆ ಔಷಧಿ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿಯಿದೆ. ಮತ್ತೆ ಮೇ 15ರ ರಾತ್ರಿ ನಮ್ಮ ಸೂರ್ಯ ಆಸ್ಪತ್ರೆಗೆ ಬಂದಿದ್ದಾರೆ. ಅವರ ಸ್ಕ್ಯಾನಿಂಗ್ ರಿಪೋರ್ಟ್ ಪರಿಶೀಲಿಸಿದಾಗ ಅದರಲ್ಲಿ ಕಿಡ್ನಿ ಸ್ಟೋನ್ ಅಂತ ಇತ್ತು. ಅವರು ಕೂಡಾ ಹೊಟ್ಟೆ ಉಬ್ಬರನೂ ಇದೆ. ನಾಲ್ಕು ದಿನದಿಂದಲೂ ಮಲವಿಸರ್ಜನೆ ಆಗಿಲ್ಲ. ಎರಡು ಡ್ರಿಪ್ ಇಟ್ಟುಕೊಂಡು ಹೋಗುತ್ತೇವೆ ಎಂದಿದ್ದಾರೆ.

ರೋಗಿಗೆ ಡ್ರಿಪ್ ಹಾಗೂ ಎನಿಮಾ ಹಾಕಲಾಗಿದೆ. ಬಳಿಕ ನಾನು ರಕ್ತ ಪರೀಕ್ಷೆ ಮಾಡಬೇಕು ಎಂದಿದ್ದೆ. ರಕ್ತ ಪರೀಕ್ಷೆ ಮಾಡಿಸಿ ಅವರು ಈಗ ಹೊಟ್ಟೆ ನೋವು ಕಡಿಮೆ ಆಗಿದೆ. ಮಲ ವಿಸರ್ಜನೆಯೂ ಆಗಿದೆ. ನಾವು ಮನೆಗೆ ಹೋಗುತ್ತೇವೆ ಎಂದಿದ್ದಾರೆ. ಆಗ ಒಂದು ಡ್ರಿಪ್ ಮಾತ್ರ ಮುಗಿದಿತ್ತು. ಇನ್ನೊಂದು ಡ್ರಿಪ್ ಮುಗಿದ ಮೇಲೆ ಹೋಗುತ್ತೇನೆ ಎಂದಿದ್ದರು. ರಾತ್ರಿ ನಾನು ರೌಂಡ್ಸ್ ಗೆ ತೆರಳಿದಾಗ ಅವರಿಗೆ ಸ್ವಲ್ಪ ಹೊಟ್ಟೆ ನೋವು ಇತ್ತು. ಆಗ ರಕ್ತ ಪರೀಕ್ಷೆಯ ವರದಿನೂ ಬಂದಿತ್ತು. ಅದನ್ನು ನೋಡುವಾಗ ರೋಗಿಗೆ ಸೀರಿಯಸ್ ಸೋಂಕು ಇರುವುದು, 16 ಸಾವಿರ ಕೌಂಟ್ ಇರುವುದು ಕಂಡು ಬಂತು.

Ad Widget

Ad Widget

ಆಗ ನಾನು ಅವರಿಗೆ ಹೇಳಿದೆ ನೀವು ತಕ್ಷಣ ಸಿಟಿಸ್ಕ್ಯಾನ್ ಮಾಡಿಸಬೇಕು ಅಂತ. ರೋಗಿಗೆ ಕಿಡ್ನಿಯಲ್ಲಿ ಅಥವಾ ದೊಡ್ಡಕರುಳು ಅಥವಾ ಸಣ್ಣಕರುಳಿನಲ್ಲಿ ಸೋಂಕು ಆಗಿರಬಹುದು ಎಂದಿದ್ದೆ. ಒಮ್ಮೆ ಸ್ಕ್ಯಾನಿಂಗ್ ಮಾಡಿಸಿದ ನಂತರ ಮತ್ತೊಂದು ಸ್ಕ್ಯಾನಿಂಗ್ ಯಾಕೆ? ಈಗ ನೋವು ಸ್ವಲ್ಪ ಕಮ್ಮಿ ಉಂಟು. ಒಂದು ಡ್ರಿಪ್ ಹಾಕಿ ಹೋಗುತ್ತೇವೆ ಅಂದರು. ಆಗ ನಾನು ಇಲ್ಲ ರೋಗಿಯನ್ನು ಅಡ್ಡಿಷನ್ ಮಾಡಿಸಬೇಕು. ಅವರು ವೈದ್ಯರ observation ನಲ್ಲಿರಬೇಕು. ಸಿಟಿ ಸ್ಕ್ಯಾನಿಂಗ್ ಮಾಡಿಸಲೇ ಬೇಕು ಎಂದೆ. ಆದರೆ ಅವರು ಅದಕ್ಕೆ ಒಪ್ಪಲಿಲ್ಲ.

ಆ ದಿನ ರಾತ್ರಿ 10:30ಯಿಂದ 11 ಗಂಟೆಯ ನಡುವೆ ನನಗೆ ಕಾಲ್ ಬಂತು. ನಾವು ಹೋಗುತ್ತೇವೆ ಅಂತ. ಅದಕ್ಕೆ ನಾನು ನಾವು ಯಾರನ್ನು ಇಲ್ಲಿ ಒತ್ತಾಯದಲ್ಲಿ ನಿಲ್ಲಿಸುವುದಿಲ್ಲ. ಹೋಗುವುದಾದರೆ ಹೋಗಿ ಅಂದಿದ್ದೆ. ಆದರೆ ರೋಗಿಯ ಪಾರ್ಟಿಯವರು ಯಾರೋ ಹೇಳಿದ್ದಕ್ಕೆ ಆ ದಿನ ಅವರು ಆಸ್ಪತ್ರೆಯಲ್ಲಿ ನಿಂತಿದ್ದಾರೆ.

ಯಾವಾಗಲೂ ಆಸ್ಪತ್ರೆಗೆ 9 ಗಂಟೆಗೆ ಬರುವ ನಾನು ಇನ್ನೊಬ್ಬ ರೋಗಿಯ ತುರ್ತು ಚಿಕಿತ್ಸೆಗಾಗಿ ಅಂದು ಆರೂವರೆಗೆ ಆಸತ್ರೆಗೆ ಬಂದಿದೆ. ಅವರಿಗೆ ಚಿಕಿತ್ಸೆ ನೀಡಿ ಸುಮಾರು 6:45ಕ್ಕೆ ಇವರ ಬಳಿ ಹೋಗಿ, ನೀವು ತುರ್ತಾಗಿ ಸಿಟಿ ಸ್ನಾನ್ ಮಾಡಿಸಲೇಬೇಕು ಎಂದು ಹೇಳಿದ್ದೆ. ಆದರೂ ಅವರು ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ.

ಮತ್ತೆ ಮನೆಗೆ ಹೋದ ನಾನು 9:30ಕ್ಕೆ ವಾಪಸ್ ಆಸ್ಪತ್ರೆಗೆ ಬಂದಾಗ ನರ್ಸ್ ಹೇಳಿದರು, ಅವರಿಗೆ ಸ್ವಲ್ಪ ಸ್ವಲ್ಪ ಜ್ವರ ಬಂದ ಹಾಗೆ ಉಂಟು ಅಂತ. ಹೋಗಿ ನೋಡಿದಾಗ ಸ್ವಲ್ಪ ಜ್ವರನೂ ಇತ್ತು. ಉಸಿರಾಟದಲ್ಲಿ ತೀವ್ರತೆ ಇತ್ತು. ಹೊಟ್ಟೆ ಉಬ್ಬರಿಸಿತ್ತು. ರೋಗಿಯ ವಿಷಮ ಪರಿಸ್ಥಿತಿಯನ್ನು ಅವರೊಂದಿಗಿದ್ದವರಲ್ಲಿ ಹೇಳಿದಾಗ ಆಗ ಗಂಭೀರತೆಯನ್ನು ಅರಿತ ಅವರು ಈಗ ಪುತ್ತೂರಿಗೆ ಕರೆದುಕೊಂಡು ಹೋಗಿ ಸಿಟಿ ಸ್ಕ್ಯಾನ್ ಮಾಡಿಸಿಕೊಂಡು ಬರಬೇಕಾ ಎಂದು ಕೇಳಿದರು.

ಆಗ ನಾನಂದೆ, ಇನ್ನು ಪುತ್ತೂರಿಗೆ ಹೋಗಿ ಸಿಟಿ ಸ್ಕ್ಯಾನ್ ಅಲ್ಲ. ಮಂಗಳೂರಿನ ಆಸ್ಪತ್ರೆಗೆ ಹೋಗಿ ದಾಖಲಾಗಬೇಕು ಅಂತ. ಯಾಕೆಂದರೆ ರೋಗಿಯ ಸ್ಥಿತಿ ಉಲ್ಬಣವಾದಾಗ ಅದಕ್ಕೆ ಆಧುನಿಕ ಐಸಿಯು ವ್ಯವಸ್ಥೆ ಬೇಕಾಗುತ್ತದೆ. ಇದು ನಿಜವಾಗಿ ನಡೆದ ವಿಷಯ. ಅವರು ಆರೋಪಿಸುವ ಹಾಗೆ ಎನೀಮಾದಿಂದ ತೂತಾಗಲು ಸಾಧ್ಯವಿಲ್ಲ. ಎನೀಮಾ ಎಷ್ಟಾದರೂ 2-3 ಸೆಂ.ಮೀ. ಇರುವುದು. ಆದರೆ ದೊಡ್ಡ ಕರುಳು ತೂತಾದ ಜಾಗ 12 ಸೆಂ.ಮೀ. ಗಿಂತಲೂ ಮೇಲೆ ಇದೆ. ಮಂಗಳೂರಿನಲ್ಲಿ ಅವರು ಸಿಟಿ ಸ್ಕ್ಯಾನ್ ಮಾಡಿಸಿದ್ದು, ಅದರಲ್ಲಿ ಶ್ವಾಸಕೋಶ, ಸಣ್ಣಕರುಳು ಹಾಗೂ ದೊಡ್ಡ ಕರುಳು ಜಜ್ಜಿ ಹೋಗಿದೆ ಎಂಬ ರಿಪೋರ್ಟ್ ಬಂದಿದೆ. ಇಲ್ಲಿ ಆ ರೋಗಿಯ ಸಾವಿಗೆ ಸೂರ್ಯ ಆಸ್ಪತ್ರೆಯಾಗಲೀ, ಅಲ್ಲಿನ ವೈದ್ಯರ ಚಿಕಿತ್ಸೆಯಲ್ಲಾದ ನಿರ್ಲಕ್ಷ್ಯವಾಗಲಿ ಕಾರಣವಲ್ಲ ಎಂದು ತಿಳಿಸಿದ್ದಾರೆ.

ಏನಿದು ಪ್ರಕರಣ ?

ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಪರಪ್ಪು ನಿವಾಸಿ ಮಹಮದ್ ಶರೀಫ್ (35) ಅವರು ಮೇ 14 ರಂದು ರಾತ್ರಿ ಮನೆಯಲಿದ್ದ ಹೋರಿ ಹಾಯ್ದು ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿತ್ತು.

ಗೇರುಕಟ್ಟೆಯಲ್ಲಿ ರಸ್ತೆ ಬದಿ ತರಕಾರಿ ವ್ಯಾಪಾರ ನಡೆಸುತ್ತಿದ್ದ ಶರೀಫ್ ರವರು ಮೇ 20ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರುಳೆದಿದ್ದರು. ಇವರ ಸಾವಿಗೆ ಉಪ್ಪಿನಂಗಡಿಯಲ್ಲಿ ಚಿಕಿತ್ಸೆ ನೀಡಿದ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತರ ಕುಟುಂಬ ಸದಸ್ಯರು ಆರೋಪಿಸಿ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!