ಆರೋಗ್ಯ
Keyyuru-ಮೇ 27: ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಕೆಯ್ಯೂರು ಶಾಖೆಯಲ್ಲಿ ‘ಉಚಿತ ಥೈರಾಯ್ಡ್ ಹಾಗೂ ಮಧುಮೇಹ ತಪಾಸಣಾ ಶಿಬಿರ’
ಆರೋಗ್ಯ ಕ್ಷೇತ್ರದಲ್ಲಿ ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸುತ್ತಿರುವ ಪುತ್ತೂರಿನ ಪ್ರಸಿದ್ಧ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’ಯ ವತಿಯಿಂದ ಮೇ 27, ಬುಧವಾರದಂದು ಕೆಯ್ಯೂರಿನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಆರೋಗ್ಯ ಕ್ಷೇತ್ರದಲ್ಲಿ ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸುತ್ತಿರುವ ಪುತ್ತೂರಿನ ಪ್ರಸಿದ್ಧ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’ಯ ವತಿಯಿಂದ ಮೇ 27, ಬುಧವಾರದಂದು ಕೆಯ್ಯೂರಿನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಕೆಯ್ಯೂರಿನ ದೇವಿನಗರದ ಶ್ರೀದೇವಿ ಸಂಕೀರ್ಣದಲ್ಲಿರುವ ಧನ್ವಂತರಿ ಶಾಖೆಯಲ್ಲಿ ಮೇ 27ರಂದು ಬೆಳಗ್ಗೆ 8:30 ರಿಂದ ಸಂಜೆ 7:00 ರವರೆಗೆ ಸಾರ್ವಜನಿಕರಿಗೆ ಉಚಿತವಾಗಿ ಥೈರಾಯ್ಡ್ (TSH) ಮತ್ತು ಮಧುಮೇಹ (Diabetes) ತಪಾಸಣೆಯನ್ನು ಮಾಡಲಾಗುವುದು.
ವಿಶೇಷ ರಿಯಾಯಿತಿ:
ಶಿಬಿರದ ಅಂಗವಾಗಿ ಎಲ್ಲಾ ರೀತಿಯ ರಕ್ತ ಪರೀಕ್ಷಾ ಪ್ಯಾಕೇಜ್‌ಗಳ ಮೇಲೆ ಶೇ. 10 ರಿಂದ ಶೇ. 20 ರಷ್ಟು ವಿಶೇಷ ರಿಯಾಯಿತಿಯನ್ನು ಘೋಷಿಸಲಾಗಿದೆ. ಮೆಟ್ರೋ ನಗರಗಳಲ್ಲಿ ಮಾತ್ರ ಲಭ್ಯವಿರುವ ಅತ್ಯಾಧುನಿಕ ರಕ್ತ ತಪಾಸಣೆಗಳು ಈಗ ಪುತ್ತೂರಿನಲ್ಲಿಯೂ ಲಭ್ಯವಿದ್ದು, ಕ್ಯಾನ್ಸರ್ ಸ್ಕ್ರೀನಿಂಗ್ (CA-15.3, HPV, PSA ಇತ್ಯಾದಿ) ಸೌಲಭ್ಯವೂ ಇಲ್ಲಿದೆ.
ಅಲರ್ಜಿ ಪತ್ತೆಗೆ ಹೊಸ ತಂತ್ರಜ್ಞಾನ:
ಬಹಳ ಸಮಯದಿಂದ ಅಲರ್ಜಿ ಸಮಸ್ಯೆಯಿಂದ ಬಳಲುತ್ತಿರುವವರಿಗಾಗಿ ದಕ್ಷಿಣ ಕರ್ನಾಟಕದ ಮೊದಲ ‘ಅಲರ್ಜಿ ಲ್ಯಾಬ್’ ಪುತ್ತೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವಿಶ್ವಪ್ರಸಿದ್ಧ ALEX2 ಮತ್ತು FOX ತಂತ್ರಜ್ಞಾನದ ಮೂಲಕ ಆಹಾರ ಮತ್ತು ಇತರೆ ಅಲರ್ಜಿಗಳನ್ನು ನಿಖರವಾಗಿ ಪತ್ತೆಹಚ್ಚಲಾಗುತ್ತಿದೆ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
Uncategorized20 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized12 hours ago
ಚಿನ್ನಾಭರಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ
-
Uncategorized20 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ
-
ದಕ್ಷಿಣ ಕನ್ನಡ14 hours ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು
-
ಅಪರಾಧ36 minutes agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಬಿಗ್ ನ್ಯೂಸ್17 minutes agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಸ್ಥಳೀಯ5 minutes agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ52 seconds agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ


















